Subscribe to Updates
Get the latest creative news from FooBar about art, design and business.
Author: kannadanewsnow57
ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮನೆಯ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಮುಂಬೈ ಪೊಲೀಸರು ಬಂಧಿಸಿದ್ದು, ಇದೀಗ ಆರೋಪಿಯ ಫೋಟೋ ಬಿಡುಗಡೆ ಮಾಡಲಾಗಿದೆ. ಬಂಧಿತ ಆರೋಪಿ ವಿಜಯ್ ದಾಸ್ ರೆಸ್ಟೋರೆಂಟ್ನಲ್ಲಿ ವೇಟರ್ ಆಗಿದ್ದು, ಈ ಅಪರಾಧವನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದು, ಇದೀಗ ಆರೋಪಿ ವಿಜಯ್ ದಾಸ್ ಫೋಟೋವನ್ನು ಮುಂಬೈ ಪೊಲೀಸರು ರಿಲೀಸ್ ಮಾಡಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಂದು ಬೆಳಿಗ್ಗೆ 9 ಗಂಟೆಗೆ ಡಿಸಿಪಿ ವಲಯ 9 ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಸೈಫ್ ಅಲಿ ಖಾನ್ ಗುರುವಾರ ಮುಂಜಾನೆ ಅನೇಕ ಬಾರಿ ಇರಿತಕ್ಕೊಳಗಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿದ್ದಾರೆ. ಮುಂಬೈನ ಬಾಂದ್ರಾ ಪಶ್ಚಿಮ ಪ್ರದೇಶದ ‘ಸದ್ಗುರು ಶರಣ್’ ಕಟ್ಟಡದ 12 ನೇ ಮಹಡಿಯ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ಎದೆಯ ಬೆನ್ನುಮೂಳೆಗೆ ಇರಿತದ ಗಾಯಗಳು ಸೇರಿದಂತೆ ದೊಡ್ಡ…
ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮನೆಯ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿಜಯ್ ದಾಸ್ ರೆಸ್ಟೋರೆಂಟ್ನಲ್ಲಿ ವೇಟರ್ ಆಗಿದ್ದು, ಈ ಅಪರಾಧವನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ. ಬಾಂದ್ರಾ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಭಾನುವಾರ ಬೆಳಿಗ್ಗೆ 9 ಗಂಟೆಗೆ ಡಿಸಿಪಿ ವಲಯ 9 ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಸೈಫ್ ಅಲಿ ಖಾನ್ ಗುರುವಾರ ಮುಂಜಾನೆ ಅನೇಕ ಬಾರಿ ಇರಿತಕ್ಕೊಳಗಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿದ್ದಾರೆ. ಮುಂಬೈನ ಬಾಂದ್ರಾ ಪಶ್ಚಿಮ ಪ್ರದೇಶದ ‘ಸದ್ಗುರು ಶರಣ್’ ಕಟ್ಟಡದ 12 ನೇ ಮಹಡಿಯ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ಎದೆಯ ಬೆನ್ನುಮೂಳೆಗೆ ಇರಿತದ ಗಾಯಗಳು ಸೇರಿದಂತೆ ದೊಡ್ಡ ಗಾಯಗಳನ್ನು ಅನುಭವಿಸಿದ ನಂತರ ನಟನನ್ನು ತಕ್ಷಣ ಚಿಕಿತ್ಸೆಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರ ಪ್ರಕಾರ, ಸೈಫ್ ಎದೆಯ ಬೆನ್ನುಮೂಳೆಗೆ…
ನಿಮ್ಮ ಸ್ಮಾರ್ಟ್ಫೋನ್ ಬಿಸಿಲಿನಲ್ಲಿ ಬಿಸಿಯಾಗುವುದನ್ನು ನೀವು ಆಗಾಗ್ಗೆ ಗಮನಿಸಿದ್ದೀರಿ. ಆದಾಗ್ಯೂ, ನಿಮ್ಮ ಫೋನ್ ಸ್ವಲ್ಪ ಬಿಸಿಯಾಗಿದ್ದರೆ, ಹೆಚ್ಚಿನ ಸಮಸ್ಯೆಯಿಲ್ಲ, ಆದರೆ ಫೋನ್ ಬಿಸಿಲಿನಲ್ಲಿದ್ದರೆ ಅದು ತುಂಬಾ ವೇಗವಾಗಿ ಬಿಸಿಯಾಗುತ್ತದೆ ಮತ್ತು ಆ ಸಮಯದಲ್ಲಿ ಫೋನ್ನಲ್ಲಿ ಅನೇಕ ಅಪ್ಲಿಕೇಶನ್ಗಳನ್ನು ಬಳಸುತ್ತಿದ್ದರೆ ಫೋನ್ ಅತಿಯಾಗಿ ಬಿಸಿಯಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಫೋನ್ಗಳು ಸಹ ಅನೇಕ ಬಾರಿ ಸ್ಫೋಟಗೊಳ್ಳುತ್ತವೆ. ಫೋನ್ ಶಾಖದಲ್ಲಿ ಸ್ಫೋಟಗೊಳ್ಳಬಹುದು ಹೌದು, ನೀವು ನಿಮ್ಮ ಮೊಬೈಲ್ ಫೋನ್ ಅನ್ನು ಬಲವಾದ ಸೂರ್ಯನ ಬೆಳಕಿನಲ್ಲಿ ಬಳಸಿದರೆ, ಜಾಗರೂಕರಾಗಿರಿ ಏಕೆಂದರೆ ಫೋನ್ ಬಲವಾದ ಸೂರ್ಯನ ಬೆಳಕಿನಲ್ಲಿಯೂ ಸ್ಫೋಟಗೊಳ್ಳಬಹುದು. ನೀವು ಬಳಸುವ ಕೆಲವು ಅಪ್ಲಿಕೇಶನ್ ಗಳು ಬಿಸಿಲಿನಲ್ಲಿ ಬಳಸಿದರೆ ಫೋನ್ ಹೆಚ್ಚು ಬಿಸಿಯಾಗುತ್ತದೆ. ಪರಿಣಾಮ ನಿಮ್ಮ ಫೋನ್ ಕೈಯಲ್ಲಿರುವಾಗಲೇ ಸ್ಪೋಟಗೊಳ್ಳಬಹುದು. ಹೆವಿ ಅಪ್ಲಿಕೇಶನ್ ಗಳಲ್ಲಿ ಗೇಮ್ ಗಳು, ವೀಡಿಯೊ ಎಡಿಟಿಂಗ್, ಫೋಟೋ ಎಡಿಟಿಂಗ್ ಇತ್ಯಾದಿಗಳು ಸೇರಿವೆ. ಇದರೊಂದಿಗೆ, ಕ್ಯಾಮೆರಾ ಹೆಚ್ಚಿನ ರೆಸಲ್ಯೂಶನ್ನಲ್ಲಿ ವೀಡಿಯೊವನ್ನು ರೆಕಾರ್ಡ್ ಮಾಡುತ್ತದೆ, 4 ಕೆ ಅಥವಾ 2 ಕೆ ನಂತಹ ವೀಡಿಯೊ ರೆಕಾರ್ಡಿಂಗ್. ಅವುಗಳನ್ನು…
ಬೆಂಗಳೂರು: ಕೆಲ ದಿನಗಳಿಂದ ಮಳೆರಾಯ ಕೊಂಚ ಬಿಡುವು ಪಡೆದುಕೊಂಡಿತ್ತು. ನಂತರ ನಗರದಲ್ಲಿ ವಿಪರೀತ ಚಳಿ ಶುರುವಾಗಿದ್ದು ಜನರು ನಲುಗಿ ಹೋಗಿದ್ದಾರೆ. ಈ ನಡುವೆ ಇಂದು ಬೆಳ್ಳಂಬೆಳಗ್ಗೆ ನಗರದ ಹಲವಡೆ ತುಂತುರು ಮಳೆಯಾಗುತ್ತಿದೆ. ಬೆಂಗಳೂರಿನ ಶಾಂತಿನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವಡೆ ತುಂತುರು ಮಳೆಯಾಗುತ್ತಿದ್ದು, ಜಿಟಿಜಿಟಿ ಮಳೆಯಿಂದ ವಾಹನ ಸವಾರರಿಗೆ ಕಿರಿಕಿರಿಯಾಗಿದೆ. ಬೆಂಗಳೂರು ವಾತಾವರಣ ಕೂಲ್- ಕೂಲ್ ಆಗಿದ್ದು, ಬೆಳಗೆದ್ದು ಕೆಲಸಕ್ಕೆ ತೆರಳುವ ಮಂದಿಗೆ ಕೊಂಚ ಕಿರಿಕಿರಿ ಉಂಟು ಮಾಡುತ್ತಿದೆ. ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆಯ ಸಿಂಚನವಾಗಿದೆ. ಹೀಗಾಗಿ ವಾಹನ ಸವಾರರಿಗೂ ತೊಂದರೆ ಆಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದ ಹಲವಡೆ ಮಂಜು ಮುಸುಕಿದೆ. ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ಹಾವು ಕಡಿತ ಚಿಕಿತ್ಸಾ ಕೇಂದ್ರಗಳನ್ನು ಗುರುತಿಸುವ ಬಗ್ಗೆ ಹಾಗೂ ಹಾವು ಕಡಿತದ ಪ್ರಕರಣಗಳಿಗೆ ವಿವಿಧ ಹಂತಗಳಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮಾರ್ಗಸೂಚಿಯನ್ನು ರಾಜ್ಯ ಸರ್ಕಾರದಿಂದ ಪ್ರಕಟಿಸಲಾಗಿದೆ. ಪ್ರಕಟಿತ ಮಾರ್ಗಸೂಚಿ ಕ್ರಮಗಳನ್ನು ಹಾವು ಕಡಿತಕ್ಕೆ ಚಿಕಿತ್ಸೆಯನ್ನು ನೀಡುವ ವೇಳೆಯಲ್ಲಿ ಕಡ್ಡಾಯವಾಗಿ ಪಾಲಿಸುವಂತೆಯೂ ಖಡಕ್ ಸೂಚನೆ ನೀಡಿದೆ. ರಾಜ್ಯ ಸರ್ಕಾರದಿಂದ ಕೆಲ ದಿನಗಳ ಹಿಂದಷ್ಟೇ ಹಾವು ಕಡಿತವನ್ನು ಅಧಿಸೂಚಿತ ಖಾಯಿಲೆ, ಘೋಷಿತ ಖಾಯಿಲೆ ಎಂಬುದಾಗಿ ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಹಾವುಗಳ ಕಡಿತಕ್ಕೆ ಚಿಕಿತ್ಸೆ ನೀಡುವ ಸಂಬಂಧ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಮಾರ್ಗಸೂಚಿಯಲ್ಲಿ ಕರ್ನಾಟಕ ಸರ್ಕಾರವು ಹಾವು ಕಡಿತ ಪ್ರಕರಣ ಮತ್ತು ಮರಣವನ್ನು ಅಧಿಸೂಚಿತ ರೋಗವೆಂದು ಅಧಿಸೂಚನೆ ಸಂಖ್ಯೆ ಆಕುಕ 56 ಸಿಜಿಎಂ 2024 ದಿನಾಂಕ 12.02.2024 ರಂದು ಘೋಷಿಸಿದೆ. ರಾಜ್ಯದ ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಎಲ್ಲಾ ಜಿಲ್ಲಾ ಆಸ್ಪತ್ರೆಗಳನ್ನು ಹಾಗೂ ಆಯ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳಾಗಿ ಗುರುತಿಸಲಾಗಿದೆ. ಹಾಗೂ ಹಾವು…
ವಿಜಯಪುರ : ಕಾಂಗ್ರೆಸ್ ನ 60 ಮಂದಿ ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವರಾಣೆ ಮಾಡಿ ಹೇಳುತ್ತೇನೆ. ಈಗಲೂ 60 ಮಂದಿ ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರು ಬರಬೇಕು ಎನ್ನುವ ಇಚ್ಛೆ ನಮಗೆ ಇಲ್ಲ. ಅವರು ಬಂದ್ರೆ ಬಿಜೆಪಿಯ ಸಿದ್ಧಾಂತ ಹಾಳಾಗುತ್ತವೆ. ಹಿಂದೂಗಳ ಮೇಲೆ ಅತ್ಯಾಚಾರವಾಗುತ್ತದೆ. ಲವ್ ಜಿಹಾದ್ ನಡೆಯುತ್ತದೆ. ಹೀಗಾಗಿ ಇದ್ಯಾವುದು ಬೇಡ ಅಂತ ಸುಮ್ಮನಿದ್ದೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಿಂದ ಬಿಜೆಪಿಗೆ ಬರಲು 60 ಶಾಸಕರು ಸಿದ್ದರಿದ್ದಾರೆ. ಆದರೆ. ಕಾಂಗ್ರೆಸ್ ಗೆ ಜನರು ಐದು ವರ್ಷ ಅಧಿಕಾರ ಕೊಟ್ಟಿದ್ದಾರೆ. ನಾವು ಯಾವುದೇ ಆಪರೇಷನ್ ಮಾಡಲು ಮುಂದಾಗಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕುಗೊಂಡ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ, ಮಳೆ ಮಾರುತಗಳು ಚುರುಕಾಗಿರುವುದರಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು, ಕರಾವಳಿ ಭಾಗದ ಕೆಲವು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಂಭವ ಇದೆ. ಉಳಿದ ಸ್ಥಳಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಮಂಗಳವಾರದಿಂದ ಬಹುತೇಕ ಭಾಗದಲ್ಲಿ ಒಣಹವೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ರ ಇಂದು ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆ ನಡೆಯಲಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 277 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಭಾನುವಾರ ರಾಜ್ಯದ 478 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ಸಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಮತ್ತು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ, ಸೂಕ್ತ ನಿರ್ದೇಶನ ಮತ್ತು ಸೂಚನೆಗಳನ್ನು ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋಗ್ರಫಿ ಮಾಡಲಾಗುವುದು. ಎಲ್ಲ ಕೇಂದ್ರಗಳಲ್ಲಿ ಸಿಸಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣದ ಅವಧಿಯನ್ನು ಡಿಸೆಂಬರ್ 31, 2025ರವರೆಗೆ ಸರ್ಕಾರ ವಿಸ್ತರಿಸಿ ಆದೇಶಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪುಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ…
ಬೆಂಗಳೂರು: ರಾಜ್ಯದ ಕೆಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ತಪ್ಪುಗಳಾಗಿರುತ್ತವೆ. ಆ ತಪ್ಪುಗಳನ್ನು ಸರಿ ಪಡಿಸೋದು ಹೇಗೆ ಎಂಬುದು ಅನೇಕ ವಿದ್ಯಾರ್ಥಿಗಳಿಗೆ ತಿಳಿದಿರೋದಿಲ್ಲ. ಅಂತವರಿಗೆ ಇಲಾಖೆಯಿಂದಲೇ ತಿದ್ದುಪಡಿಗೆ ಆದೇಶ ಮಾಡಿದೆ. ಜಸ್ಟ್ ನೀವು ಈ ಕೆಳಕಂಡ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿದರೇ ತಪ್ಪು ತಿದ್ದುಪಡಿಯಾಗಿ, ಹೊಸ ಅಂಕಪಟ್ಟಿ ಲಭ್ಯವಾಗಲಿದೆ. ಶಾಲಾ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಮೂಲಕ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪು ತಿದ್ದುಪಡಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜ್ಞಾಪನ ಪತ್ರವನ್ನು ಹೊರಡಿಸಲಾಗಿದೆ. ಅದರಲ್ಲಿ ಪ್ರಸ್ತುತ ಮತ್ತು ಹಿಂದಿನ ಸಾಲಿನ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಭಾವಚಿತ್ರ, ಲಿಂಗ, ಮಾಧ್ಯಮ ಮತ್ತು ಜನ್ಮ ದಿನಾಂಕ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಿಂದ ಪ್ರಸ್ತಾವನೆಗಳು ಪಿ.ಯು. ಅಂಕಪಟ್ಟಿ ಶಾಖೆಗೆ ಮೂಲ ಅಂಕಪಟ್ಟಿಯೊಂದಿಗೆ…












