Subscribe to Updates
Get the latest creative news from FooBar about art, design and business.
Author: kannadanewsnow57
ಪ್ರಸಕ್ತ 2024-25 ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ 100 ರೂ. ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಕೃಷಿ ಉಪಕರಣಗಳಾದ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ, ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ…
ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಎನ್ನುವಂತೆ ಏಪ್ರಿಲ್ ನಿಂದ ಪ್ರತಿ ತಿಂಗಳು 10,000 ಮುಂಗಡ ಪಾವತಿಗೆ ಸರ್ಕಾರ ನಿರ್ಧರಿಸಿದೆ. ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪುಂಜಾ ವೇದಿಕೆಯ ಮೇಲಿದ್ದ ಸಚಿವ ದಿನೇಶ್ ಗುಂಡೂರಾವ್ ಎದುರು ಎರಡು ಬೇಡಿಕೆಯನ್ನ ಮುಂದಿಟ್ಟರು. ನಾನೊಬ್ಬ ಆಶಾ ಕಾರ್ಯಕರ್ತೆಯರ ಕುಟುಂಬದಿಂದ ಬಂದವನಾಗಿದ್ದು, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು. ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಮ್ಮ ಭಾಷಣದ ವೇಳೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ ತಿಂಗಳಿನಿಂದ 10 ಸಾವಿರ ಮುಂಗಡವಾಗಿ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಸಹಕಾರ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ಗೌರವಧನ ಹೆಚ್ಚಿಸುವ ಕಾರ್ಯ ಮಾಡಬೇಕು. ನೀವು, ನಿಮ್ಮ ಸಂಸದರು ಕೇಂದ್ರದಲ್ಲಿ ಪ್ರಭಾವ ಬಳಸಿ…
ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ. ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ(6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. 2023-24 ನೇ ಸಾಲಿನಲ್ಲಿ ತೇರ್ಗಡೆಯಾದ 527273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್ ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025…
ಬೆಂಗಳೂರು: ನಗರದ ನೇರಳೆ ಮಾರ್ಗದಲ್ಲಿ ಹಳಿಗಳ ನಿರ್ವಹಣೆಯ ಕಾರಣದಿಂದಾಗಿ ಇಂದು ಸಂಚಾರ ಸ್ಥಗಿತಗೊಳ್ಳುತ್ತಿದೆ. ಈ ಮೂಲಕ ಇಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ನಮ್ಮ ಮೆಟ್ರೋ ನೇರಳ ಮಾರ್ಗದಲ್ಲಿ ಹಳಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಂಪೇಗೌಡ ಮೆಜೆಸ್ಟಿಕ್‌ನಿಂದ ಇಂದಿರಾನಗರದವರೆಗೆ ಜನವರಿ 19 ರ ಇಂದು ಬೆಳಗ್ಗೆ 7 ರಿಂದ ಬೆಳಗ್ಗೆ 10ರ ವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ನೇರಳೆ ಮಾರ್ಗದಲ್ಲಿ ಚಲ್ಲಘಟ್ಟ – ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್‌ಫೀಲ್ಡ್ – ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ರಿಂದಲೇ ಮೆಟ್ರೋ ಸಂಚಾರ ಇರಲಿದೆ. https://twitter.com/KarnatakaVarthe/status/1880522362875179208 https://kannadanewsnow.com/kannada/e-khata-mandatory-for-registration-of-immovable-properties-just-register-at-home/ https://kannadanewsnow.com/kannada/bpl-apl-cardholders-note-january-31-is-the-last-date-for-e-kyc-otherwise-the-ration-will-not-come/
ದುಬೈ : ಭಾರತ ಪುರುಷರ ಕ್ರಿಕೆಟ್ ತಂಡವು ಫೆಬ್ರವರಿ 23 ರಂದು ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025 ರ ಟೂರ್ನಿಗೆ ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ. ಹೀಗಿದೆ ಟೀಂ ಇಂಡಿಯಾ ಆಟಗಾರರ ಪಟ್ಟಿ ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ. ಹೀಗಿದೆ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025 ವೇಳಾಪಟ್ಟಿ ಫೆ.19: ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್, ನ್ಯಾಷನಲ್ ಸ್ಟೇಡಿಯಂ, ಕರಾಚಿ ಫೆ.20: ಬಾಂಗ್ಲಾದೇಶ ವಿರುದ್ಧ ಭಾರತ, ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ, ದುಬೈ ಫೆ.21: ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ, ನ್ಯಾಷನಲ್ ಸ್ಟೇಡಿಯಂ,…
ಬೆಂಗಳೂರು : 2024ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಪದಕಕ್ಕೆ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಶಿಫಾರಸ್ಸುಗಳನ್ನು ಸಲ್ಲಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಸುತ್ತೋಲೆ ಹೊರಡಿಸಲಾಗಿದೆ. 1. 2024 ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಪದಕಕ್ಕೆ ತಮ್ಮ ಘಟಕದ ಅರ್ಹ ಪೊಲೀಸ್ ಅಧಿಕಾರಿ/ಸಿಬ್ಬಂದಿಯವರ ಶಿಫಾರಸ್ಸುಗಳನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ಇದರೊಂದಿಗೆ ಲಗತ್ತಿಸಿರುವ ನಿಗದಿತ ನಮೂನೆಯಲ್ಲಿ Soft copy & Hard Copy ಸಿಡಿ/ ಪೆನ್‌ಡ್ರೈವ್‌ನಲ್ಲಿ ದಿನಾಂಕ:05-02-2025ರ ಒಳಗಾಗಿ ಈ ಕಛೇರಿಗೆ ತಲುಪುವಂತೆ ತಪ್ಪದೇ ಕಳುಹಿಸಿಕೊಡಲು ಕೋರಲಾಗಿದೆ. 2. ಈ ಸುತ್ತೋಲೆಯೊಂದಿಗೆ ಲಗತ್ತಿಸಲಾದ ನಮೂನೆಗಳಲ್ಲಿಯೇ ಶಿಫಾರಸ್ಸುಗಳನ್ನು ಕಳುಹಿಸಿಕೊಡುವುದು, ಹಿಂದಿನ ಅವಧಿಯಲ್ಲಿನ ಹಳೆಯ ನಮೂನೆಗಳನ್ನು ಉಪಯೋಗಿಸಬಾರದು. 3. ಈ ಸುತ್ತೋಲೆಯನ್ನು ಎಲ್ಲಾ ಉಪ-ವಿಭಾಗಗಳು ಮತ್ತು ಠಾಣೆಗಳಿಗೆ ಕಳುಹಿಸಿ, ಎಲ್ಲಾ ಅಧೀನಾಧಿಕಾರಿಗಳು ಮತ್ತು ಅಧೀನ ಸಿಬ್ಬಂದಿಗಳ ಗಮನಕ್ಕೆ ತರಲು ಪ್ರಚುರ ಪಡಿಸುವುದು. 4. ಘಟಕಾಧಿಕಾರಿಗಳು ಶಿಫಾರಸ್ಸುಗಳನ್ನು ಕಳುಹಿಸುವ ಮೊದಲು ಅಗತ್ಯ ತಪಾಸಣೆ ನಡೆಸಿ, ಎಲ್ಲಾ ಅರ್ಹತೆ ಹಾಗೂ ನಿಬಂಧನೆಗಳನ್ನು ಪೂರೈಸುವ ಅರ್ಹ ಅಧಿಕಾರಿ/ಸಿಬ್ಬಂದಿಗಳ ಶಿಫಾರಸ್ಸುಗಳನ್ನು ಮಾತ್ರ…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಡಿ ಮಹಿಳೆಯರನ್ನು ಆರ್ಥಿಕ ಸಬಲೀಕರಿಸುವಂತ ಉದ್ಯೋಗಿನಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಎಸ್ಸಿ, ಎಸ್ಟಿ, ಸಾಮಾನ್ಯ ವರ್ಗದ ಮಹಿಳೆಯರಿಗೆ 3 ಲಕ್ಷದವರೆಗೆ ಸಬ್ಸಿಡಿ ಸಹಿತ ಸಾಲಸೌಲಭ್ಯವನ್ನು ನೀಡಲಾಗುತ್ತದೆ. ಆ ಬಗ್ಗೆ ಮುಂದೆ ಓದಿ. ಏನಿದು ಉದ್ಯೋಗಿನಿ ಯೋಜನೆ? ನಿರುದ್ಯೋಗಿಗಳು ಸ್ವಯಂ ಉದ್ಯೋಗಿಗಳಾಗಲು ಮತ್ತು ಸ್ವಾವಲಂಬಿಗಳಾಗಲು ಸಹಾಯ ಮಾಡಲು ಕರ್ನಾಟಕ ಸರ್ಕಾರ ಸಾಕಷ್ಟು ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. 2015-2016 ರಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರಿಗಾಗಿ ವಿಶೇಷವಾಗಿ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಿತು. ಉದ್ಯೋಗಿನಿ ಯೋಜನೆಯು ಕರ್ನಾಟಕದ ಮಹಿಳೆಯರಿಗೆ ಸ್ವಯಂ ಉದ್ಯೋಗ ಸೃಷ್ಟಿ ಚಟುವಟಿಕೆ ಬೆಂಬಲ ಯೋಜನೆಯಾಗಿದೆ. ಕರ್ನಾಟಕದಲ್ಲಿ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸುವ ಹಿಂದಿನ ಮುಖ್ಯ ಉದ್ದೇಶವೆಂದರೆ ಮಹಿಳೆಯರು ತಮ್ಮದೇ ಆದ ವ್ಯವಹಾರ ಅಥವಾ ಆದಾಯ ಉತ್ಪಾದನಾ ಚಟುವಟಿಕೆಯನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವುದು ಮತ್ತು ಅವರು ಲೇವಾದೇವಿಗಾರರಿಂದ ಹೆಚ್ಚಿನ ಬಡ್ಡಿದರದಲ್ಲಿ ಹಣವನ್ನು ಸಾಲ ಪಡೆಯುವುದನ್ನು ತಡೆಯುವುದು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಈ ಯೋಜನೆಯ ಅನುಷ್ಠಾನ ಸಂಸ್ಥೆಯಾಗಿದೆ.…
2024-25 ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯ ತರಕಾರಿ ಬೀಜಗಳ(ಹೈಬ್ರಿಡ್ ಹಾಗೂ ಸುಧಾರಿತ ತಳಿ) ವಿತರಣೆ ಕಾರ್ಯಕ್ರಮದಡಿ ತರಕಾರಿ ಬೀಜಗಳನ್ನು ನೀರಿನ ಸೌಲಭ್ಯವಿರುವ ಶಿವಮೊಗ್ಗ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತರಿಗೆ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್, ಬ್ಯಾಂಕ್ ಪಾಸ್‌ಬುಕ್ ಮತ್ತು ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಶಿವಮೊಗ್ಗ ಇವರಿಗೆ ದಿ: 31-01-2025 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆAದು ಶಿವಮೊಗ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲೂ ಸಿಎಂ ಸಿದ್ದರಾಮಯ್ಯ ಇಡಿಯಿಂದ ನೋಟಿಸ್ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಡಾ ಹಗರಣದ ವಿಚಾರಣೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಯಾವುದೇ ಕ್ಷಣದಲ್ಲೂ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Mysuru Urban Development Authority- MUDA ) ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್.27ರಂದು ಎಫ್ ಐಆರ್ ದಾಖಲಿಸಿದ್ದರು. ಮೈಸೂರಿನ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಸಿದ್ದರಾಮಯ್ಯ ಅವರನ್ನು ಎ1 ಆರೋಪಿ, ಅವರ ಪತ್ನಿ ಬಿ.ಎಂ.ಪಾರ್ವತಿ ಅವರನ್ನು ಎ2, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಎ3 ಮತ್ತು ದೇವರಾಜು ಅವರನ್ನು ಎ4 ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 25…
ಬೆಂಗಳೂರು : ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದಿಂದ ಹೊರಬರುವ ವಿಷಕಾರಿ ಅನಿಲವು ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಯನ್ನು ತಂದೊಡ್ಡಬಹುದು ಎಚ್ಚರವಾಗಿರುವಂತೆ ಸೂಚನೆ ನೀಡಲಾಗಿದೆ. ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದಿಂದ ಹೊರಬರುವ ವಿಷಕಾರಿ ಅನಿಲವು ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಯನ್ನು ತಂದೊಡ್ಡಬಹುದು, ಎಚ್ಚರದಿಂದಿರಿ, ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಡದಿರಿ, ಪ್ಲಾಸ್ಟಿಕ್ ಬಳಕೆ ಸಂಪೂರ್ಣ ತಗ್ಗಿಸಿ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.












