Subscribe to Updates
Get the latest creative news from FooBar about art, design and business.
Author: kannadanewsnow57
ಚಿತ್ರದುರ್ಗ : ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇದೇ ಜ.18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿ.ವಿ ಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು. ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ವಾಣಿವಿಲಾಸ ಸಾಗರ ಜಲಾಶಯದ ಬಾಗಿನ ಅರ್ಪಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 120 ವರ್ಷಗಳಲ್ಲಿ ಮೂರನೇ ಬಾರಿಗೆ ವಾಣಿವಿಲಾಸ ಸಾಗರ ಜಲಾಶಯ ತುಂಬಿದೆ. ಜ.18ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಗಮಿಸಿ, ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದು, ಸುಮಾರು 20 ರಿಂದ 24 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಜಿಲ್ಲೆಯ ಜನರು ಕುತೂಹಲ ಹಾಗೂ ಕಾತುರರಾಗಿದ್ದು, ಜಿಲ್ಲೆಯ ಪಾಲಿಗೆ ಇದೊಂದು ಸಂಭ್ರಮದ ಕ್ಷಣವಾಗಲಿದೆ ಎಂದು ಹೇಳಿದರು. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು…
ಬೆಂಗಳೂರು : ಭಿಕ್ಷೆ ಬೇಡುವ ನೆಪದಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರ ಡೈಮಂಡ್ ರಿಂಗ್ ಎಗರಿಸಿದ್ದ ನಕಲಿ ಬಾಬಾನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಜರಾತ್ ಮೂಲಕ ನಕಲ ಬಾಬಾ ಸಾಲತ್ ದಿಲೀಪ್ ಎಂಬಾತ ಬೆಂಗಳೂರಿನ ಪ್ರತಿಷ್ಠಿತ ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿದ್ದ. ಭಿಕ್ಷೆ ಬೇಡುವ ನೆಪದಲ್ಲಿ ಬ್ಯಾಂಕ್ ಉದ್ಯೋಗ ಉಜ್ವಲ್ ಎಂಬುವವರ ಬಳಿ ಡೈಮೆಂಡ್ ರಿಂಗ್ ಎಗರಿಸಿ ಪರಾರಿಯಾಗಿದ್ದ. ಇದೀಗ ನಕಲ ಬಾಬಾ ಸಾಲತ್ ದಿಲೀಪ್ ನನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 10ರಂದು ಚರ್ಚ್ ಸ್ಟ್ರೀಟ್ ನಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಆರೋಪಿ ಬ್ಯಾಂಕ್ ಉದ್ಯೋಗಿ ಉಜ್ವಲ್ ಬಳಿ ಬಂದು ಭಿಕ್ಷೆ ಕೇಳಿದ್ದಾನೆ. ಅವರು ಕೊಡಲು ನಿರಾಕರಿಸಿದಾಗ ಕೈಯಲ್ಲಿದ್ದ ನಾಲ್ಕೂವರೆ ಲಕ್ಷ ರೂ. ಮೌಲ್ಯದ ಡೈಮಂಡ್ ರಿಂಗ್ ಬಾಯಲ್ಲಿಟ್ಟುಕೊಂಡು ಪರಾರಿಯಾಗಿದ್ದಾನೆ. ಉಜ್ವಲ್ ಘಟನೆ ಸಂಬಂಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಆರೋಪಿ ನಕಲಿ ಬಾಬಾನನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಕಬ್ಬನ್ ಪಾರ್ಕ್…
ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಪತ್ರ ಸಂಖ್ಯೆ ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024 ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ 31.12.2020ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಿ ಆದೇಶಿಸಿದೆ ಎಂದಿದ್ದಾರೆ. ಸದರಿ ಆದೇಶದಲ್ಲಿ ಅನುದಾನಿತ ಶಾಲೆಗಳು ಆನ್‌ಲೈನ್ ಮೂಲಕ ವಿವರಗಳು/ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿವಡಿಸುವುದು ಹಾಗೂ ಈ ತಂತ್ರಾಂಶದ ಮೂಲಕ ವ್ಯವಹರಿಸುವುದು ಎಂದು ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ. ಸರ್ಕಾರದ ಆದೇಶ ದಿನಾಂಕ:07-08-2024 ಹಾಗೂ ಸರ್ಕಾರದ ಪ್ರದಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಟಿಪ್ಪಣಿ ದಿನಾಂಕ:24-10-2024ರಂತೆ ಅನುದಾನಿತ ಶಿಕ್ಷಕರ ಖಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ತಂತ್ರಾಂಶ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. ತಂತ್ರಾಂಶವು…
ಬೆಂಗಳೂರು: ಇಂದು ಸಿಎ ಪರೀಕ್ಷೆಯ ಸಮಯಕ್ಕೆ ಬೆಂಗಳೂರು ನಗರ ವಿವಿಯಿಂದ ಬಿಕಾಂ ಪರೀಕ್ಷೆಯನ್ನು ನಿಗದಿ ಪಡಿಸಿ ಎಡವಟ್ಟು ಮಾಡಿದ್ದರ ಬಗ್ಗೆ ಕನ್ನಡ ನ್ಯೂಸ್ ನೌ ಬೆಂಗಳೂರು ವಿವಿಯಿಂದ ಯಡವಟ್ಟು: ನಾಳೆ ‘CA ಪರೀಕ್ಷೆ’ಯ ಸಮಯಕ್ಕೆ ಬಿಕಾಂ ಪರೀಕ್ಷೆ ನಿಗದಿ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಬೆನ್ನಲ್ಲೇ ನಾಳೆ ನಡೆಸಲು ನಿಗದಿ ಪಡಿಸಿದ್ದಂತ ಎಲ್ಲಾ ಸ್ನಾತಕ ಪದವಿಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಬೆಂಗಳಊರು ನಗರ ವಿವಿಯ ಸೆಂಟ್ರಲ್ ಕ್ಯಾಂಪಸ್ ನ ಮೌಲ್ಯಮಾಪನದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 16-01-2025ರಂದು ಮಧ್ಯಾಹ್ನ 2 ಗಂಟೆಗೆ ನಿಗದಿಯಾಗಿದ್ದ ಬೆಂಗಳೂರು ನಗರ ವಿವಿಯ ಎಸ್ಇಪಿ 1ನೇ ಸೆಮಿಸ್ಟರ್ ಎಲ್ಲಾ ಸ್ನಾತಕ ಪದವಿ ಕೋರ್ಸ್ ಗಳ ಪರೀಕ್ಷೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದಿದ್ದಾರೆ. ಇನ್ನು ಮುಂದೂಡಲಾಗಿರುವ ಪರೀಕ್ಷೆಯ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂಬುದಾಗಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಮತ್ತು ಪ್ರಾಂಶುಪಾಲರುಗಳಿಗೆ ತಿಳಿಸಿದ್ದಾರೆ.
ನವದೆಹಲಿ : ಟ್ರಾಯ್ ಕಳೆದ ತಿಂಗಳು ಟೆಲಿಕಾಂ ಆದೇಶವನ್ನ ತಿದ್ದುಪಡಿ ಮಾಡುವ ಮೂಲಕ ಟೆಲಿಕಾಂ ಕಂಪನಿಗಳಿಗೆ ಹೊಸ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದೆ. ಟೆಲಿಕಾಂ ನಿಯಂತ್ರಕದ ಈ ಮಾರ್ಗಸೂಚಿಯು ದೇಶದ 150 ಮಿಲಿಯನ್ ಅಂದರೆ 15 ಕೋಟಿ 2G ಬಳಕೆದಾರರಿಗೆ ಪ್ರಯೋಜನವನ್ನ ನೀಡುತ್ತದೆ, ಅವರಿಗೆ ಡೇಟಾದೊಂದಿಗೆ ದುಬಾರಿ ರೀಚಾರ್ಜ್ ಯೋಜನೆಗಳ ಅಗತ್ಯವಿಲ್ಲ. TRAI ಅಧಿಕೃತವಾಗಿ ಈ ಮಾರ್ಗಸೂಚಿಯನ್ನ ಡಿಸೆಂಬರ್ 24ರಂದು ಪ್ರಕಟಿಸಿತು. ಈ ನಿಯಮದ ನಂತರವೂ, ಟೆಲಿಕಾಂ ಕಂಪನಿಗಳು ಇನ್ನೂ ಧ್ವನಿ ಮತ್ತು SMS ಒಳಗೊಂಡಿರುವ ರೀಚಾರ್ಜ್ ಯೋಜನೆಗಳನ್ನು ಪ್ರಾರಂಭಿಸಿಲ್ಲ. TRAI ನ ಹೊಸ ಮಾರ್ಗಸೂಚಿ.! TRAIನ ಹೊಸ ಮಾರ್ಗಸೂಚಿ ಪ್ರಕಾರ, ಟೆಲಿಕಾಂ ಕಂಪನಿಗಳು Airtel, BSNL, Jio ಮತ್ತು Vodafone Idea ಕನಿಷ್ಠ 10 ರೂಪಾಯಿಗಳ ಟಾಪ್-ಅಪ್ ವೋಚರ್ ಇರಿಸಬೇಕಾಗುತ್ತದೆ. ಅಲ್ಲದೆ, ಹೊಸ ಆದೇಶದಲ್ಲಿ 10 ರೂಪಾಯಿ ಮುಖಬೆಲೆಯ ಅಗತ್ಯವನ್ನ ತೆಗೆದುಹಾಕಲಾಗಿದೆ. ಈಗ ಟೆಲಿಕಾಂ ಆಪರೇಟರ್’ಗಳು ತಮ್ಮ ಆಯ್ಕೆಯ ಯಾವುದೇ ಮೌಲ್ಯದ ಟಾಪ್-ಅಪ್ ವೋಚರ್’ಗಳನ್ನು ನೀಡಬಹುದು. ಇದಲ್ಲದೆ, ಆನ್‌ಲೈನ್ ರೀಚಾರ್ಜ್‌ನ ಹೆಚ್ಚುತ್ತಿರುವ…
ಬೆಂಗಳೂರು : 2024-25ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಅಧಿಕಾರಿ/ ಶಾಲಾ ಶಿಕ್ಷಕರ ವೇತನಕ್ಕಾಗಿ ನಾಲ್ಕನೇ ತ್ರೈಮಾಸಿಕ ಅನುದಾನ ಬಿಡುಗಡೆ ಮಾಡಿ ರಾಝ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2024-25ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲಾ ಶಿಕ್ಷಕರು, ಡಿವೈಪಿಸಿ ಅಧಿಕಾರಿ / ಗಳ ಕ್ಕಾಗಿ ನಿಗದಿಪಡಿಸಲಾಗಿರುವ ಅನುದಾನದಲ್ಲಿ ನಾಲ್ಕನೆ ಕೈವನಿಸಿಕ ವೇತನ ಅನುದಾನವನ್ನ) ಅನವರಿ 20256ರ ಮಾರ್ಚಿ 2025 dd 03. 30mg dewonderand za 2202-00-101-0- 19 (2202-01-197-1-02) ๒๘1 2202-02-196-1-03 12202-00-102-0-20) d ಅನುಬಂಧ-2 ರಂತೆ ಖಜಾನೆ-2 ರಲ್ಲಿ ಆಲೋಡ್ ಮಾಡಲಾಗಿದೆ ಪರಿ ಅನಬಂಧಗಳನ್ನು ಇದರೊಂದಿಗೆ ಲಗತ್ತಿಸಲಾಗಿದೆ ಅದರಂತೆ ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ಬ್ಬಂದಿಗಳ ವೇತನದ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ಸೂಚಿಸಿದೆ.
ನವದೆಹಲಿ : ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದೆ. ಇವುಗಳಲ್ಲಿ ದೆಹಲಿಯಲ್ಲಿ 8 ಮತ್ತು ಕರ್ನಾಟಕದಲ್ಲಿ ಒಂದು ನಕಲಿ ವಿಶ್ವವಿದ್ಯಾಲಯಗಳಿವೆ. ಕಳೆದ ವರ್ಷ 20 ನಕಲಿ ವಿಶ್ವವಿದ್ಯಾಲಯಗಳಿದ್ದು, ಈ ವರ್ಷ ಅವುಗಳ ಸಂಖ್ಯೆ 21ಕ್ಕೆ ತಲುಪಿದೆ. ಈ ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಮಾನ್ಯವಾಗಿಲ್ಲ ಎಂದು ಹೇಳಿದೆ. ಮೇಲಾಗಿ, ಈ ನಕಲಿ ವಿಶ್ವವಿದ್ಯಾನಿಲಯಗಳು ಪದವಿಗಳನ್ನು ನೀಡಿದ್ದರೂ, ಉದ್ಯೋಗದ ಉದ್ದೇಶಕ್ಕಾಗಿ ಅವುಗಳನ್ನು ಗುರುತಿಸಲಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ. ದೇಶದಲ್ಲಿ ಅತಿ ಹೆಚ್ಚು ನಕಲಿ ವಿಶ್ವವಿದ್ಯಾನಿಲಯಗಳು ದೆಹಲಿಯಲ್ಲಿವೆ ಎಂದು ಅದು ಕಂಡುಹಿಡಿದಿದೆ. ದೆಹಲಿಯಲ್ಲಿ 8 ನಕಲಿ ವಿಶ್ವವಿದ್ಯಾಲಯಗಳು ದೆಹಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಂಡ್ ಫಿಸಿಕಲ್ ಹೆಲ್ತ್ ಸೈನ್ಸಸ್ ಯೂನಿವರ್ಸಿಟಿ, ದೆಹಲಿ ವಾಣಿಜ್ಯ ವಿಶ್ವವಿದ್ಯಾಲಯ ಲಿಮಿಟೆಡ್ ದರಿಯಾಗಂಜ್, ದೆಹಲಿ ಯುನೈಟೆಡ್ ನೇಷನ್ಸ್ ವಿಶ್ವವಿದ್ಯಾಲಯ, ದೆಹಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ದೆಹಲಿ ವೃತ್ತಿಪರ ವಿಶ್ವವಿದ್ಯಾಲಯ, ದೆಹಲಿ ಆಧ್ಯಾತ್ಮಿಕ ವಿಶ್ವವಿದ್ಯಾಲಯ, ದೆಹಲಿ ವಿಶ್ವಕರ್ಮ ಸ್ವಯಂ ಉದ್ಯೋಗಕ್ಕಾಗಿ…
ಬೆಂಗಳೂರು : 2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜನವರಿ 25, 2025 ರೊಳಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು. ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ ಶ್ರೀ ನಾರಾಯಣ ಗುರು/ ಶ್ರೀಮತಿ ಇಂದಿರಾಗಾಂಧಿ / ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪ.ಜಾ/ಪ.ವ./ಸಾಮಾನ್ಯ/ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಆಯಾ ತಾಲೂಕಿನ ಮೇಲ್ಕಂಡ ವಸತಿ ಶಾಲೆಗಳ…
ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಖುದ್ದು ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ. ಸಿ.ಟಿ. ರವಿ ಅವರು ಸಿಐಡಿ ತನಿಖೆಗೆ ಅಸಹಕಾರ ತೋರಿದ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಖುದ್ದು ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ. ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅಸಂಸದೀಯ ಪದ ಬಳಸಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಧ್ವನಿ ಪರೀಕ್ಷೆಗೆ ಸಿ.ಟಿ ರವಿ ವಿರೋಧಿಸಿದ್ದರು. ಹೀಗಾಗಿ ಅಸಹಕಾರ ತೋರಿದ್ದಾರೆಂದು ಕೋರ್ಟ್ ಗೆ ಸಿಐಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಕೈಗೆತ್ತಿಕೊಂಡ ಕೋರ್ಟ್ ನೋಟಿಸ್ ನೀಡಿದೆ.
ಬೆಂಗಳೂರು : ಅನಾರೋಗ್ಯದಿಂದ ನಿನ್ನೆ ನಿಧನರಾಗಿರುವ ಸ್ಯಾಂಡಲ್ ವುಡ್ ಹಿರಿಯ ಹಾಸ್ಯ ನಟ ಸರಿಗಮ ವಿಜಿ ಅವರ ಅಂತ್ಯಕ್ರಿಯೆ ಇಂದು ಚಾಮರಾಜಪೇಟೆ ಬಳಿಯ ಚಿತಾಗಾರದಲ್ಲಿ ನಡೆಯಲಿದೆ. ಶ್ವಾಸಕೋಶದ ಸೋಂಕಿನಿಂದ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಜಿ ಅವರು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನರಾಗಿದ್ದಾರೆ. ಹಿರಿಯ ಕಲಾವಿದನ ನಿಧನಕ್ಕೆ ರಾಜಕೀಯ, ಸಿನಿಮಾ ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸರಿಗಮ ವಿಜಿ ಅಂತಿಮ ದರ್ಶನಕ್ಕೆ ವ್ಯವಸ್ಥೆಕ್ಕೆ ಮಾಡಲಾಗಿದ್ದು, ಮಧ್ಯಾಹ್ನದ ಬಳಿಕ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.














