Author: kannadanewsnow57

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಚಾಲಕ ಶಿವ ಪ್ರಸಾದ್ ಹಿಟ್ & ರನ್ ಕೇಸ್ ದಾಖಲಿಸಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕ ತಮ್ಮನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾಯವಾಗಿದೆ ಎಂದು ಕಾರಿನ ಚಾಲಕ ಜಿ ಶಿವಪ್ರಸಾದ್ ಅವರು ದೂರು ನೀಡಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.‘ನಾನು ಸಚಿವರ ಸರ್ಕಾರಿ ಕಾರು ಚಲಾಯಿಸುತ್ತಿದ್ದೆ. ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದೆವು. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಯ ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 48ರ ಮೇಲಿದ್ದೆವು. ನಮ್ಮ ಮುಂದೆ ಕಂಟೇನರ್ ಟ್ರಕ್ ಹೋಗುತ್ತಿತ್ತು. ಅದರ ಚಾಲಕ ಯಾವುದೇ ಮುನ್ಸೂಚನೆ ಕೊಡದೆ ಎಡಬದಿಗೆ ಬಂದನು. ಕಾರನ್ನು ಎಡಬದಿಗೆ ತೆಗೆದುಕೊಂಡರೂ ಅದರ ಬಲಬದಿಗೆ…

Read More

ಇಂದಿನ ಕಾಲದಲ್ಲಿ, ಹೆಚ್ಚಿನ ಜನರು ತಮ್ಮ ವ್ಯಕ್ತಿತ್ವವನ್ನು ಹೆಚ್ಚಿಸಲು ವಿವಿಧ ರೀತಿಯ ಗಡ್ಡವನ್ನು ಇಟ್ಟುಕೊಳ್ಳಲು ಇಷ್ಟಪಡುತ್ತಾರೆ, ಆದರೆ ಅನೇಕ ಜನರು ಕ್ಲೀನ್ ಶೇವ್ ಲುಕ್ ಅನ್ನು ಇಟ್ಟುಕೊಳ್ಳುತ್ತಾರೆ. ಜನರು ತಮ್ಮ ದೇಹದ ಪ್ರಕಾರ ಮತ್ತು ಉದ್ಯೋಗಕ್ಕೆ ಅನುಗುಣವಾಗಿ ತಮ್ಮ ಗಡ್ಡದ ಲುಕ್ ಸಹ ಬದಲಾಯಿಸಬೇಕಾಗುತ್ತದೆ. ಹಲವರಿಗೆ ಪ್ರತಿದಿನ ಬೆಳಗ್ಗೆ ಎದ್ದ ನಂತರ ಗಡ್ಡ ಬೋಳಿಸುವ ಅಭ್ಯಾಸವಿದ್ದರೆ ಇನ್ನು ಕೆಲವರು ತಿಂಗಳುಗಟ್ಟಲೆ ಗಡ್ಡ ಬೋಳಿಸಿಕೊಳ್ಳುವುದಿಲ್ಲ. ಗಡ್ಡವನ್ನು ಬೋಳಿಸುವುದು ಪುರುಷರಿಗೆ ಸಾಮಾನ್ಯ ವಿಷಯವಾಗಿದೆ, ಆದರೆ ಪ್ರತಿದಿನ ಗಡ್ಡವನ್ನು ಬೋಳಿಸುವುದು ಪ್ರಯೋಜನಕಾರಿ ಅಥವಾ ಹಾನಿಕಾರಕವೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಚರ್ಮ ರೋಗ ತಜ್ಞರ ಪ್ರಕಾರ, ಗಡ್ಡವನ್ನು ಇಟ್ಟುಕೊಳ್ಳುವುದರಿಂದ ಚರ್ಮಕ್ಕೆ ಯಾವುದೇ ಹಾನಿಯಾಗುವುದಿಲ್ಲ, ಆದರೆ ಗಡ್ಡ ದೊಡ್ಡದಾಗಿದ್ದರೆ ಅದನ್ನು ಪ್ರತಿದಿನ ಚೆನ್ನಾಗಿ ತೊಳೆಯಬೇಕು. ದಿನದ ಗಡಿಬಿಡಿಯಲ್ಲಿ, ಧೂಳು, ಸೂಕ್ಷ್ಮಜೀವಿಗಳು, ಎಣ್ಣೆ ಮತ್ತು ಸತ್ತ ಚರ್ಮದ ಜೀವಕೋಶಗಳು ಮುಖದ ಮೇಲೆ ಸಂಗ್ರಹವಾಗುತ್ತವೆ, ಅದನ್ನು ಫೇಸ್ ವಾಶ್ ಅಥವಾ ಕ್ಲೆನ್ಸರ್ನಿಂದ ತೊಳೆಯಬೇಕು. ನಿಮ್ಮ ಗಡ್ಡವನ್ನು ಬೆಳೆಸುವುದು ಮತ್ತು ಅದನ್ನು ಪ್ರತಿದಿನ…

Read More

ಕಲಬುರ್ಗಿ : ತನ್ನ ಬಾಲ್ಯದ ಗೆಳೆಯನೊಬ್ಬ ಅಪಘಾತದಲ್ಲಿ ಮೃತಪಟ್ಟಿರುವುದರಿಂದ ಆತನದ್ದೇ ನೆನಪಿನಲ್ಲಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಾಳದ ಶಿವರಾಜ ಮಡಿವಾಳ (22) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದುಬಂದಿದೆ. ಬಾಲ್ಯ ಸ್ನೇಹಿತ ಪ್ರವೀಣ್ ಚವ್ಹಾಣ್ ಎರಡು ತಿಂಗಳ ಹಿಂದೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಇದರಿಂದ ಮನನೊಂದ ಶಿವರಾಜ ಮಡಿವಾಳ ಭಾನುವಾರ ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಶಿವರಾಜ ಕೆಲಸಕ್ಕಾಗಿ ಮಹಾರಾಷ್ಟ್ರದ ಪುಣೆಗೆ ತೆರಳಿ ಅಲ್ಲಿಯೇ ಕುಟುಂಬಸ್ಥರ ಜತೆಗೆ ವಾಸವಾಗಿದ್ದರು. ಗೆಳೆಯನ ಸಾವಿನಿಂದ ಶಿವರಾಜ ಬಹಳಷ್ಟು ಮಾನಸಿಕವಾಗಿ ನೊಂದಿದ್ದ. ಬ್ಯಾಂಕ್ ಕೆಲಸಕ್ಕೆಂದು ಕಲಬುರಗಿಗೆ ಬಂದಿದ್ದ ಶಿವರಾಜ ಸ್ಟೇಷನ್ ಪ್ರದೇಶದ ಲಾಡ್ಜ್‌ ನಲ್ಲಿ ವಾಸ್ತವ್ಯ ಹೂಡಿದ್ದರು.ಆತ್ಮಹತ್ಯೆ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಿದೆ. ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು,ವಿಚಾರಣೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಪರವಾಗಿ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಸರ್ಕಾರದ ಪರ ಕಪಿಲ್ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ವಾದಿಸಲಿದ್ದಾರೆ. ಹಿಂದಿನ ಭೂಮಾಲೀಕ ದೇವರಾಜು ಪರ ದುಷ್ಯಂತ್ ದವೆ ವಾದಿಸಲಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ. ರಾಘವನ್ ವಾದ ಮಂಡಿಸಲಿದ್ದಾರೆ. ಡಿಸೆಂಬರ್ 19 ರಂದು ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯಪೀಠ 2025 ಜನವರಿ 15 ಕ್ಕೆ ವಿಚಾರಣೆ ಮುಂದೂಡಿತ್ತು.  ಆಕ್ಷೇಪಣೆ…

Read More

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ 6 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಹಾಸನ, ಚಾಮರಾಜನಗರ, ಮೈಸೂರು, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನವರಿ 15 ರಿಂದ ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜ್ಯದಲ್ಲಿ ಶೀತಾಗಾಳಿ ಬೀಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಳವಾಗುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, 5 ದಿನ ವಿಪರೀತ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ವಲಯದಲ್ಲಿ ಚಳಿ ಹೆಚ್ಚಿರಲಿದೆ. ತಾಪಮಾನ 2 ರಿಂದ…

Read More

ಬೃಂದಾವನ : ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಯಾತ್ರಿಕರ ಬಸ್ ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಓರ್ವ ಪ್ರಯಾಣಿಕ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಬೃಂದಾವನದಲ್ಲಿ ನಡೆದಿದೆ. ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ ಸುಟ್ಟು ಕರಕಲಾಗಿದೆ. ಆ ಸಮಯದಲ್ಲಿ 50 ಯಾತ್ರಿಕರು ಇದ್ದರು ಎಂದು ಹೇಳಲಾಗುತ್ತಿದೆ. ಕುಂಭಮೇಳಕ್ಕೆ ತೆರಳುವ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿ 50 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುರಂತದಲ್ಲಿ ಕುಭಿರ್ ಮಂಡಲದ ಪಾಲ್ಸಿ ಗ್ರಾಮದ ವೃದ್ಧರೊಬ್ಬರು ಸಜೀವ ದಹನವಾಗಿದ್ದಾರೆ. https://twitter.com/i/status/1879332676228026616

Read More

ಬೆಂಗಳೂರು: ರಾಜ್ಯದ ಎಲ್ಲಾ ಪರೀಕ್ಷಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕೆ-ಸೆಟ್ ಪರೀಕ್ಷೆ ಸೇರಿ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ಸಲ್ಲಿಸುವ ದಾಖಲೆಗಳು ಮುಂದಿನ ಎಲ್ಲಾ ಪರೀಕ್ಷೆಗಳಿಗೂ ಅನ್ವಯವಾಗುವಂತೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಕೆ – ಸೆಟ್ 2024 ಅರ್ಹ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಸಚಿವ ಡಾ.ಎಂ.ಸಿ. ಸುಧಾಕರ್, ಪರೀಕ್ಷಾರ್ಥಿಗಳು ಪ್ರತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ದಾಖಲೆಗಳನ್ನು ನೀಡುವ ಬದಲು ಒಮ್ಮೆ ನೀಡಿದ ದಾಖಲೆಗಳನ್ನು ಎಲ್ಲಾ ಪರೀಕ್ಷೆಗಳಿಗೂ ಬಳಕೆಯಾಗುವಂತಹ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಕೆ-ಸೆಟ್ ಪರೀಕ್ಷೆ ಅಥವಾ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ದಾಖಲಿ ಸಲ್ಲಿಸಿದವರು ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ದಾಖಲೆ ಸಲ್ಲಿಸಬೇಕಿಲ್ಲ. ಈ ರೀತಿಯಾದ ತಂತ್ರಜ್ಞಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಳವಡಿಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಇದೇ ವೇಳೆ…

Read More

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಲೈಂಗಿಕತೆ ಮತ್ತು ಸಂಬಂಧಗಳ ಬಗ್ಗೆ ಮುಕ್ತ ಚರ್ಚೆ ನಡೆಯುತ್ತಿದೆ. ಇತ್ತೀಚೆಗೆ ನಡೆಸಲಾದ ‘ಲೇಡ್ ಇನ್ ಇಂಡಿಯಾ 2025’ ಸಮೀಕ್ಷೆಯು ಭಾರತೀಯರ ಲೈಂಗಿಕ ಜೀವನದ ಬಗ್ಗೆ ಹಲವು ಆಸಕ್ತಿದಾಯಕ ಮತ್ತು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ಈ ಸಮೀಕ್ಷೆಯಲ್ಲಿ 10,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಮತ್ತು ಅದರ ಫಲಿತಾಂಶಗಳು ಭಾರತೀಯರ ಸಂಬಂಧಗಳು ಮತ್ತು ಲೈಂಗಿಕ ಆರೋಗ್ಯದ ಬಗ್ಗೆ ಹೊಸ ಮಾಹಿತಿಯನ್ನು ನೀಡಿವೆ. ಭಾರತೀಯರ ಲೈಂಗಿಕ ಜೀವನದ ಬಗ್ಗೆ ದೊಡ್ಡ ಬಹಿರಂಗಪಡಿಸುವಿಕೆ ಈ ಸಮೀಕ್ಷೆಯ ಪ್ರಕಾರ, 55% ಭಾರತೀಯರು ತಮ್ಮ ಲೈಂಗಿಕ ಜೀವನದಲ್ಲಿ ತೃಪ್ತರಾಗಿಲ್ಲ ಮತ್ತು ಅವರು ಹೆಚ್ಚಿನ ಲೈಂಗಿಕತೆಯನ್ನು ಬಯಸುತ್ತಾರೆ. ಈ ಅಂಕಿ ಅಂಶವು ಕೇವಲ ವಿವಾಹಿತರಿಗೆ ಸೀಮಿತವಾಗಿಲ್ಲ, ಅವಿವಾಹಿತರು, ದಂಪತಿಗಳು ಮತ್ತು ವಿವಾಹಿತರು ಸಹ ಈ ಅಸಮಾಧಾನವನ್ನು ಎದುರಿಸುತ್ತಿದ್ದಾರೆ. ಸಮೀಕ್ಷೆಯ ಪ್ರಕಾರ, ಶೇ. 59 ರಷ್ಟು ವಿವಾಹಿತರು ತಮ್ಮ ಲೈಂಗಿಕ ಜೀವನದ ಬಗ್ಗೆ ಅತೃಪ್ತರಾಗಿದ್ದಾರೆ. ನಿರ್ದಿಷ್ಟವಾಗಿ ಮಹಿಳೆಯರು (60%), ಪುರುಷರಿಗಿಂತ (53%) ಸ್ವಲ್ಪ ಹೆಚ್ಚು ಅತೃಪ್ತರಾಗಿದ್ದಾರೆ. ಲೈಂಗಿಕತೆ…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಿದೆ. ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು,ವಿಚಾರಣೆ ನಡೆಸಲಿದ್ದಾರೆ. ಡಿಸೆಂಬರ್ 19 ರಂದು ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯಪೀಠ 2025 ಜನವರಿ 15 ಕ್ಕೆ ವಿಚಾರಣೆ ಮುಂದೂಡಿತ್ತು. ರಲ್ಲಿ ಆಕ್ಷೇಪಣೆ ಸಲ್ಲಿಸಲು ಪ್ರತಿ ವಾದಿಗಳಿಗೆ ಸೂಚನೆ ನೀಡಿತು. ಅಲ್ಲದೆ ಜನವರಿ 15 ಇಂದು ಅಂತಿಮ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧರಿಸಿದೆ ಎನ್ನಲಾಗಿದೆ.

Read More

2024-25 ನೇ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್‍ನಿಂದ ಮಾನ್ಯತೆ ಪಡೆದಿರುವ ಧಾರವಾಡ ಜಿಲ್ಲೆಯಲ್ಲಿನ ಸರ್ಕಾರಿ, ಅರೇಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000 ರೂ. ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಜನವರಿ 20, 2025 ರೊಳಗಾಗಿ https://sevasindu.karanataka. gov.in ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2971590 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More