Author: kannadanewsnow57

ಬೆಳಗಾವಿ : ರಸ್ತೆ ಮೇಲೆ ನಾಯಿ ಅಡ್ಡ ಬಂದಿದ್ದಕ್ಕೆ ಅದನ್ನು ತಪ್ಪಿಸಲು ಹೋಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದ್ದು, ಈ ಒಂದು ಅಪಘಾತದಲ್ಲಿ ಅವರ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಈ ಕುರಿತು ಆಸ್ಪತ್ರೆಯ ವೈದ್ಯ ರವಿ ಪಾಟೀಲ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಹಾಗೂ ಎಲ್ 4 ಮೂಳೆ ಮುರಿದಿದೆ ಎಂದು ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ಹಿರಿಯ ಆಸ್ಪತ್ರೆಯ ವೈದ್ಯರದಂತಹ ಡಾ. ರವಿ ಪಾಟೀಲ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಎರಡು ದಿನಗಳ ಬಳಿಕ ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿ ಪರಿಗಣಿಸಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಸಚಿವೆ ಹೆಬ್ಬಾಳ್ಕರ್ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಬೇಕಾಗುತ್ತದೆ ಚನ್ನರಾಜಟಿಹೊಳಿ ತಲೆಗೆ ಪೆಟ್ಟಾಗಿದ್ದು ಹೆಚ್ಚಿನ ಗಾಯಗಳಾಗಿಲ್ಲ ಎಂದು ಬೆಳಗಾವಿಯ ವಿಜಯ ರವಿ ಪಾಟೀಲ್ ಕುರಿತು ಹೇಳಿಕೆ…

Read More

ಬೆಂಗಳೂರು : ನಾಡಿನಾದ್ಯಂತ ಇಂದು ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿಯು ಸರ್ವರ ಕಷ್ಟಗಳನ್ನು ಕಳೆದು, ಸುಖ, ಶಾಂತಿ, ಸಮೃದ್ಧಿಯ ಹೊಸ ದಿಕ್ಕಿನೆಡೆಗೆ ಮುನ್ನಡೆಸಲಿ ಎಂದು ಆಶಿಸುತ್ತೇನೆ. ಎಳ್ಳು- ಬೆಲ್ಲದ ಜೊತೆ ಪ್ರೀತಿ, ಬಾಂಧವ್ಯ ಮಿಳಿತಗೊಳ್ಳಲಿ, ನಾಡಿನಲ್ಲಿ ಸ್ನೇಹ, ಸೌಹಾರ್ದತೆ ಶಾಶ್ವತವಾಗಿ ಮನೆಮಾಡಲಿ. ನಾಡಬಂಧುಗಳಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು ಎಂದು ತಿಳಿಸಿದ್ದಾರೆ. https://twitter.com/siddaramaiah/status/1879016818003898682?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಧಾರವಾಡ : ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಧಾರವಾಡದಲ್ಲಿ ಡೆತ್ ನೋಟ್ ಬರೆದಿದ್ದು, ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ (35) ಎಂದು ತಿಳಿದುಬಂದಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೊದಲಿಗೆ ಗರಗ ಪೊಲೀಸರು ಇದೊಂದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಡೆತ್‌ನೋಟ್ ಶಿವರಾಜನೇ ಬರೆದಿದ್ದು ಎಂದು ಎಫ್‌ಎಸ್‌ಎಲ್‌ ವರದಿ ಬಂದ ಹಿನ್ನೆಲೆಯಲ್ಲಿ ಪತ್ನಿಯೇ ಸಾವಿಗೆ ಕಾರಣ ಎಂದು ಗರಗ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ಶಿವರಾಜ್ ಎತ್ತಿನಗುಡ್ಡ ಕಳೆದ 2024 ರ ಜುಲೈನಲ್ಲಿ ಮದುವೆಯಾಗಿದ್ದರು. ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಹೈಸ್ಕೂಲ್ ಶಿಕ್ಷಕಿ ಯಲ್ಲವ್ವ ಬೆಂಗೇರಿ ಎಂಬುವವಳ‌ ಜೊತೆ ಮದುವೆಯಾಗಿದ್ದರು.ಮದುವೆಯಾದ 15 ದಿನದಲ್ಲೇ ಯಲ್ಲವ್ವ ಪೋಷಕರ‌ ಮನೆಗೆ ಹೋಗಿದ್ದರು. ಶಿವರಾಜ್ ಆಗ ಪತ್ನಿಗೆ ಮನೆಗೆ ಕರೆ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ :  ಸಾವಿನ ನಂತರದ ಜಗತ್ತು ಹೇಗಿದೆ ಎಂಬುದರ ಕುರಿತು ಸಾಕಷ್ಟು ಚರ್ಚೆಗಳಿವೆ. ಪ್ರತಿಯೊಬ್ಬರೂ ಈ ಬಗ್ಗೆ ತಮ್ಮದೇ ಆದ ವಿಭಿನ್ನ ನಂಬಿಕೆಯನ್ನು ಹೊಂದಿದ್ದಾರೆ. ಆದಾಗ್ಯೂ, ಈ ವಿಷಯದ ಬಗ್ಗೆ ಇನ್ನೂ ಯಾವುದೇ ಬಲವಾದ ಪುರಾವೆಗಳು ಕಂಡುಬಂದಿಲ್ಲ. ಈ ನಡುವೆ 20 ನಿಮಿಷಗಳ ಕಾಲ ನಿಧನರಾದ ವ್ಯಕ್ತಿ, ಸಂದರ್ಶನವೊಂದರಲ್ಲಿ ತಾನು ಸಾವಿನ ನಂತರ ಹೋದ ಸ್ಥಳ ಮತ್ತು ಅವನಿಗೆ ಏನಾಯಿತು ಎಂದು ಹೇಳಿದ್ದಾನೆ. 60 ವರ್ಷ ವಯಸ್ಸಿನ ಸ್ಕಾಟ್ ಡ್ರಮ್ಮೊಂಡ್ 28 ವರ್ಷದವನಿದ್ದಾಗ, ಅವನಿಗೆ ಅಪಘಾತ ಸಂಭವಿಸಿದೆ. ಈ ಅಪಘಾತವು ಅವನ ಹೆಬ್ಬೆರಳಿಗೆ ನೋವುಂಟು ಮಾಡಿದೆ, ಅದು ಸಹ ಕಾರ್ಯನಿರ್ವಹಿಸುತ್ತಿತ್ತು. ಈ ಕಾರ್ಯಾಚರಣೆಯ ಸಮಯದಲ್ಲಿ ಅವರು ಸತ್ತರು ಎಂದು ಘೋಷಿಸಲಾಯಿತು, ಆದರೂ ಅವರು 20 ನಿಮಿಷಗಳ ನಂತರ ಜೀವಂತವಾಗಿದ್ದರು. ಈ ಅನುಭವವನ್ನು ಹಂಚಿಕೊಂಡ ಸ್ಕಾಟ್, ನಾನು ಸತ್ತಾಗ, ನರ್ಸ್ ಆಪರೇಟಿಂಗ್ ಥಿಯೇಟರ್‌ನಿಂದ ಕೂಗುತ್ತಿರುವುದನ್ನು ನಾನು ನೋಡಿದೆ. ಕಾರ್ಯಾಚರಣೆಯ ಸಮಯದಲ್ಲಿ, ನನ್ನ ಕೈ ಮತ್ತು ಹೃದಯದಲ್ಲಿ ಏನಾದರೂ ಹೋಗುತ್ತಿದೆ ಎಂಬಂತೆ…

Read More

ಕಲಬುರಗಿ: ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ ಕಪನೂರು ಸೇರಿ ನಾಲ್ವರು ಆರೋಪಿಗಳ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.  ಇಂದು ಬೆಳ್ಳಂಬೆಳಗ್ಗೆ ಸಿಐಡಿ ಅಧಿಕಾರಿಗಳು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಆರೋಪಿ ರಾಜು ಕಪನೂರ ಸೇರಿದಂತೆ ನಾಲ್ವರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಕಲಬುರ್ಗಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರಾಜು ಕಪನೂರ್ ನಿವಾಸದ ಮೇಲೆ ದಾಳಿ ಮಾಡಿದ್ದು ಅವರಲ್ಲದೆ ಉಳಿದ ಆರೋಪಿಗಳಾದ ಗೊರಖ್ ನಾಥ್, ರಾಮನಗೌಡ, ನಂದಕುಮಾರ್ ನಾಲ್ವರು ಆರೋಪಗಳ ಮನೆಯಲ್ಲಿ ಸಿಐಡಿ ಇದೀಗ ಶೋಧ ಕಾರ್ಯ ನಡೆಸಿದ್ದಾರೆ ಇಬ್ಬರು ಡಿವೈಎಸ್ಪಿ ಇನ್ಸ್ಪೆಕ್ಟರ್ 40 ಸಿಬ್ಬಂದಿಗಳಿಂದ ಇದೀಗ ತನಿಖೆ ಚುರುಕು ಗೊಳಿಸಿದ್ದಾರೆ.

Read More

ಇಂದಿನ ಡಿಜಿಟಲ್ ಯುಗದಲ್ಲಿ, ಹಣವನ್ನು ವರ್ಗಾಯಿಸಲು QR ಕೋಡ್ ಸುಲಭವಾದ ಮಾರ್ಗವಾಗಿ ಹೊರಹೊಮ್ಮಿದೆ. ಇತ್ತೀಚಿನ ದಿನಗಳಲ್ಲಿ, ತರಕಾರಿ ಖರೀದಿಸುವುದಾಗಲಿ ಅಥವಾ ಬಟ್ಟೆ ಖರೀದಿಸುವುದಾಗಲಿ, ಪ್ರತಿಯೊಂದು ಸಣ್ಣ ಮತ್ತು ದೊಡ್ಡ ಪಾವತಿಗೂ ನಾವು QR ಕೋಡ್ ಬಳಸುತ್ತೇವೆ. ಇದನ್ನು ಸುಲಭವಾಗಿ ಸ್ಕ್ಯಾನ್ ಮಾಡಬಹುದು ಮತ್ತು Google Pay, Paytm ಮತ್ತು PhonePe ನಂತಹ UPI ಪಾವತಿ ಅಪ್ಲಿಕೇಶನ್‌ಗಳನ್ನು ಬಳಸಿಕೊಂಡು ಪಾವತಿ ಮಾಡಬಹುದು. ಇದನ್ನು ಮಾಡುವುದು ತುಂಬಾ ಸುಲಭ, ನಾವು QR ಕೋಡ್ ಅನ್ನು ಸ್ಕ್ಯಾನ್ ಮಾಡಿ ಪಿನ್ ಅನ್ನು ನಮೂದಿಸಬೇಕು ಮತ್ತು ಹಣವನ್ನು ತಕ್ಷಣವೇ ಇತರ ವ್ಯಕ್ತಿಯ ಖಾತೆಗೆ ವರ್ಗಾಯಿಸಲಾಗುತ್ತದೆ. ಆದರೆ ಕೆಲವೊಮ್ಮೆ ಪರಿಶೀಲನೆ ಇಲ್ಲದೆ QR ಕೋಡ್ ಅನ್ನು ಸ್ಕ್ಯಾನ್ ಮಾಡುವುದು ಅಪಾಯಕಾರಿ ಎಂದು ಸಾಬೀತುಪಡಿಸಬಹುದು. ಇತ್ತೀಚೆಗೆ, QR ಕೋಡ್ ಸ್ಕ್ಯಾನ್‌ಗಳಲ್ಲಿ ಸ್ಕ್ಯಾಮರ್‌ಗಳು QR ಕೋಡ್ ಅನ್ನು ನಕಲಿ ಕೋಡ್‌ನೊಂದಿಗೆ ಬದಲಾಯಿಸಿದ ಅನೇಕ ಪ್ರಕರಣಗಳು ನಡೆದಿವೆ. ಅದರ ನಂತರ ಪಾವತಿಗಳು ನೇರವಾಗಿ ವಂಚಕರ ಖಾತೆಗಳಿಗೆ ಹೋಗಲು ಪ್ರಾರಂಭಿಸಿದವು. ಅಂತಹ ಪರಿಸ್ಥಿತಿಯಲ್ಲಿ, ನಿಜವಾದ…

Read More

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸದ್ಯ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗೃಹ ಸಚಿವ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಗೆ ಕರೆ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯದ ಬಗ್ಗೆ ವಿಚಾರಿಸಿದ್ದು, ಒಳ್ಳೆಯ ಚಿಕಿತ್ಸೆ ಕೊಡಿಸುವಂತೆ ಹೇಳಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಹೆಬ್ಬಾಳ್ಕರ್ ಹಾಗೂ, ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿಯಿಂದ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ.ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ.ರವಿ ಪಟೀಲ್ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆ ನೀಡುತ್ತಿದ್ದಾರೆ.

Read More

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಕಾರು ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಹೆಬ್ಬಾಳ್ಕರ್ ಹಾಗೂ, ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ.ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ.ರವಿ ಪಟೀಲ್ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆ ನೀಡುತ್ತಿದ್ದಾರೆ. ಆಸ್ಪತ್ರೆಗೆ ಬೆಳಗಾವಿ ಎಸ್ ಪಿ ಆಗಮಿಸಿದ್ದು, ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಹೆಬ್ಬಾಳ್ಕರ್ ತಾಯಿ ಹಾಗೂ ಸೋದರಿ ಕೂಡ ಆಸ್ಪತ್ರೆಗೆ ಆಗಮಿಸಿದ್ದು, ಆರೋಗ್ಯ ವಿಚಾರಿಸಿದ್ದಾರೆ.

Read More

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು,ಕಾಮುಕನೊಬ್ಬ ಅತ್ಯಾಚಾರ ಎಸಗಿ 6 ವರ್ಷದ ಮಗು ಹತ್ಯೆ ಮಾಡಿದ್ದಾನೆ. ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಬಾಲಕಿಯ ಪೋಷಕರು ಗಾರೆ ಕೆಲಸ ಮಾಡಿಕೊಂಡಿದ್ದಾರೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ ಎಂಬಾತ ಕೃತ್ಯವೆಸಗಿದ್ದಾನೆ. ಆತ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದ. ಪೋಷಕರು ಇಲ್ಲದ ವೇಳೆಯಲ್ಲಿ ಬಾಲಕಿಯನ್ನು ಪುಸಲಾಯಿಸಿ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ 7:30ಕ್ಕೆ ಘಟನೆ ನಡೆದಿದೆ.  ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

Read More

ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಮುರುಡಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಮಂಜುನಾಥ್ ಮ್ಯಾಗೇನಹಳ್ಳಿ(28), ರಂಗಪ್ಪ ಬರಮಪ್ಪ ಕೋರಿ(28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More