Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದಿನಿಂದ ಮತ್ತೆ 5 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದಿನಿಂದ5 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ. ಮಹಾಮಳೆಗೆ ರಾಜ್ಯದ ಹಲವೆಡೆ ಸಾವು-ನೋವುಗಳು ಸಂಭವಿಸಿದ್ದಾವೆ. ಅಲ್ಲಲ್ಲೇ ಮನೆ, ಧನದ ಕೊಟ್ಟಿಗೆಗಳು ಬಿದ್ದು ಹಾನಿಗೊಂಡಿದ್ದಾವೆ. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಪರಿಹಾರ ನೀಡುವಂತ ಕಾರ್ಯವನ್ನು ಸ್ಥಳೀಯ ಆಡಳಿತಗಳು ಮಾಡುತ್ತಿವೆ. http://twitter.com/KarnatakaVarthe/status/1927652643616223421
ಬೆಂಗಳೂರು: ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ ನೀರು ಸಂಗ್ರಹಿಸಬೇಕು. ಅಡುಗೆ ಸಿಬ್ಬಂದಿ, ಸಹಾಯಕ ಆರೋಗ್ಯ ತಪಾಸಣೆ ನಡೆಸಬೇಕು. ಸಿಹಿಯೂಟದ ಜತೆಗೆ ಮೊದಲ ದಿನವೇ ಬೇಯಿಸಿದ ಮೊಟ್ಟೆ ವಿತರಣೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಬೆಂಗಳೂರಿನ ಆಡುಗೋಡಿಯ ಪಟೇಲ್ ಮುನಿ ಚಿನ್ನಪ್ಪ ಪ್ರೌಢಶಾಲೆ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 9 ಗಂಟೆಗೆ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಲಿದ್ದಾರೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಶೈಕ್ಷಣಿಕ ಅವಧಿಯು ದಿನಾಂಕ:…
ಬೆಂಗಳೂರು: ರಾಜ್ಯದ ರೈತರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ರೈತ ಖರೀದಿ ಕೇಂದ್ರ ಸ್ಥಾಪಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಈಗಾಗಲೇ ಸ್ಥಾಪಿಸಿರುವ ಖರೀದಿ ಕೇಂದ್ರಗಳನ್ನು ವರ್ಷದ 365 ದಿನಗಳ ಕಾಲ ಶಾಶ್ವತವಾಗಿ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಪ್ರತಿ ಜಿಲ್ಲೆಯ ರೈತರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ರೈತ ಸೇನೆ ಕರ್ನಾಟಕ ಅಧ್ಯಕ್ಷ ವಿ. ವೀರೇಶ್ ಸೊಬರದಮಠ ಅರ್ಜಿ ಸಲ್ಲಿಸಿದ್ದರು. ರೈತರು ತಮ್ಮ ಉತ್ಪನ್ನಗಳನ್ನು ಸಮರ್ಪಕ ಪ್ರಮಾಣದಲ್ಲಿ ಮಾರಾಟ ಮಾಡಲು, ಮಧ್ಯವರ್ತಿಗಳ ಹಾವಳಿ ತಪ್ಪಿಸಲು ರಾಜ್ಯದ ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ತೆರೆಯಬೇಕೆಂದು ಹೈಕೋರ್ಟ್ ತಿಳಿಸಿದೆ. ಈ ಅರ್ಜಿಯ ವಿಚಾರಣೆ ನಡೆಸಿದಾಗ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ, ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ.…
ಬೆಂಗಳೂರು : ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆಗೆ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ದೂರು ಸಲ್ಲಿಕೆ ಮಾಡಿದ್ದಾರೆ.ಕನ್ನಡಿಗರ ಭಾವನೆಗೆ ನಟ ಕಮಲ್ ಹಾಸನ್ ಧಕ್ಕೆ ತಂದಿದ್ದಾರೆ.ಆತನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿದ್ದಾರೆ. ಥಗ್ ಲೈಫ್ ಇವೆಂಟ್ ನಲ್ಲಿ ಭಾಗಿಯಾಗಿದ್ದಂತ ನಟ ಕಮಲ್ ಹಾಸನ್ ಅವರು, ನಟ ಶಿವರಾಜ್ ಕುಮಾರ್ ಎದುರೇ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿ ಹೇಳುವ ಮೂಲಕ ಈಗ ವಿವಾದ ಸೃಷ್ಠಿಸಿದ್ದಾರೆ. ಈ ಮೂಲಕ ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಿತ ಹೇಳಿಕೆ ನೀಡಿದ್ದಾರೆ.
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಬಾಕಿ ಇದೆ. ಅದನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ…
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಭಾರತ ಸರ್ಕಾರದ Ministry of electronics and Information Technology ರವರು ಅಭಿವೃದ್ಧಿಪಡಿಸಿರುವ National Scholarship Portal https://ssp.postmatric.karnataka.gov.in ನಲ್ಲಿ One Time Registration ಸಂಖ್ಯೆಯನ್ನು ಕಡ್ಡಾಯವಾಗಿ Create ಮಾಡಿಕೊಂಡು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-26711096 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ದಕ್ಷಿಣ ಕನ್ನಡ, ತುಮಕೂರು,ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 1,741 ಕೋಟಿ ರು. ಬಂಡವಾಳ ಹೂಡಿಕೆಯ ಹಾಗೂ 12500 ಉದ್ಯೋಗ ಸೃಷ್ಟಿಸುವ 63 ಯೋಜನೆಗೆ ಸಚಿವ ಎಂ.ಬಿ. ಪಾಟೀಲ್ ಅಧ್ಯಕ್ಷತೆಯ ಏಕಗವಾಕ್ಷಿ ಸಮಿತಿ ಸಭೆ ಅಸ್ತು ಎಂದಿದೆ. ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ, ಫೀಡ್ ಪ್ಲ್ಯಾಂಟ್, ಪ್ರಿ ಫ್ಯಾಬ್ರಿಕೇಟೆಡ್ ಮಾಡ್ಯುಲರ್, ಬಸ್ ಬಾಡಿ ಬಿಲ್ಡಿಂಗ್, ರಕ್ಷಣಾ ವಲಯಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ಬಿಡಿಭಾಗ ತಯಾರಿಕಾ ಘಟಕ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆಯ ಅಧ್ಯಕ್ಷತೆ ವಹಿಸಿ, ಒಟ್ಟು 15,441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ಸುಮಾರು 5,277 ಜನರಿಗೆ ಉದ್ಯೋಗ ಲಭ್ಯವಾಗಲಿದೆ. ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2,406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ ,…
ಬೆಂಗಳೂರು : 2025-26ನೇ ಸಾಲಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ / ಉಪನ್ಯಾಸಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಿರ್ವಹಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮಗಳು 2020″ ಮತ್ತು ಉಲ್ಲೇಖ (03) ರ ನಿಯಮಗಳನ್ವಯ ಪ್ರಾಂಶುಪಾಲರ/ ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, 2025-26 ನೇ ಸಾಲಿಗೆ ಪ್ರಾಂಶುಪಾಲರ /ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು. ಈ ವರ್ಗಾವಣೆಗೆ ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸತಕ್ಕದು. ಖುದ್ದಾಗಿ ಅಥವಾ ಪತ್ರ ಮುಖೇನ ಲಿಖಿತವಾಗಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಮತ್ತು ಪರಿಗಣಿಸಲಾಗುವುದಿಲ್ಲ. ಸಾಮಾನ್ಯ ಸೂಚನೆಗಳು: 1) ವರ್ಗಾವಣಾ ಅಧಿನಿಯಮ ಮತ್ತು ನಿಯಮಗಳಲ್ಲಿ ನಿಗಧಿಪಡಿಸಿರುವ ವಿಧಿ ವಿಧಾನಗಳನ್ವಯ ಪ್ರಾಂಶುಪಾಲರ / ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು. 2) ಉಪನ್ಯಾಸಕರ ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡಂತೆ ವರ್ಗಾವಣೆ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆ ಮತ್ತು ಆಯ್ಕೆ ಕುರಿತ ಸೂಚನೆಗಳಿಗೆ ಮಾರ್ಪಾಡು ಮಾಡುವ ಬಗ್ಗೆ. ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ಬಗ್ಗೆ ಉಲ್ಲೇಖಿತ ಸುತ್ತೋಲೆಯನ್ವಯ ನೋಂದಾವಣೆ ಮತ್ತು ಆಯ್ಕೆ ಕುರಿತು ಸೂಚನೆಗಳನ್ನು ನೀಡಲಾಗಿದೆ. ಆದರೆ, ತಾಂತ್ರಿಕ ತೊಂದರೆಯಿಂದಾಗಿ ನಿಗದಿತ ಅವಧಿಯೊಳಗೆ ನೌಕರರು ನೋಂದಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ ಸಾಧ್ಯವಾಗದೇ ಇರುವುದರಿಂದ ಕಾಲಾವಕಾಶದ ಅವಶ್ಯಕತೆ ಇರುತ್ತದೆ. ಆದ್ದರಿಂದ ಈ ಕೆಳಕಂಡ ಅಂಶಗಳನ್ನು ಪರಿಗಣಿಸಿ ಮಾರ್ಪಾಡು ಸುತ್ತೋಲೆ ಹೊರಡಿಸಲು ತಮ್ಮಲ್ಲಿ ಕೋರಿದೆ. ಮಾರ್ಪಾಡು ಮಾಡಬೇಕಾಗಿರುವ ಸೂಚನೆಗಳು ಸರ್ಕಾರಿ ನೌಕರ ಯೋಜನೆಗೆ ಒಳಪಡಲು ಆಯ್ಕೆಯನ್ನು ವ್ಯಕ್ತಪಡಿಸಲು ಉದ್ದೇಶಿಸಿದಲ್ಲಿ ದಿ:20-05-2025ರೊಳಗೆ | ಘೋಷಣೆಯನ್ನು ತನ್ನ ಮೇಲಾಧಿಕಾರಿಗಳ ಮೂಲಕ ಡಿ.ಡಿ.ಓ. ಗಳಿಗೆ ಸಲ್ಲಿಸತಕ್ಕದ್ದು. ಇಂತಹ ಘೋಷಣೆಯನ್ನು ಸಲ್ಲಿಸುವ ನೌಕರರಿಂದ ಯೋಜನೆಯ ವಂತಿಕೆಯನ್ನು ລຳ-20250 ಮಾಹೆಯಿಂದ ಸ್ವಯಂಚಾಲಿತವಾಗಿ…
ಬೆಂಗಳೂರು : ರಾಜ್ಯ ಸರ್ಕಾರು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ನೀಡಿದ್ದು, 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ 40 ಸಾವಿರ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳಲು ಆದೇಶ ಹೊರಡಿಸಿದೆ. ಮೇಲ್ಮಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ (ಮಾರ್ಚ್-2026) ವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ) ಒಟ್ಟು-40000. ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಉಲ್ಲೇಖ-03ರ ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ. ಉಲ್ಲೇಖ-03 ರಲ್ಲಿ ಒಟ್ಟು-40000. ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಸಹಮತಿಸಿದ್ದು, ಪ್ರಸ್ತುತ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ…