Author: kannadanewsnow57

ನವದೆಹಲಿ : ಕೇಂದ್ರ ಸರ್ಕಾರದ ಡಿಜಿಟಲ್ ಅಗ್ರಿಕಲ್ಚರ್ ಮಿಷನ್ ಅಡಿಯಲ್ಲಿ, ದೇಶದ ಪ್ರತಿಯೊಬ್ಬ ರೈತರ ಡಿಜಿಟಲ್ ಗುರುತನ್ನು ರಚಿಸಲು ರೈತ ಗುರುತಿನ ಚೀಟಿಯನ್ನು ಮಾಡಲಾಗುವುದು. 11 ಕೋಟಿ ರೈತರಿಗೆ ಡಿಜಿಟಲ್ ಐಡೆಂಟಿಟಿ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಒಂದೇ ಕಾರ್ಡ್‌ನಿಂದ ಕಿಸಾನ್ ಸಮ್ಮಾನ್ ನಿಧಿ, ಕಿಸಾನ್ ಕ್ರೆಡಿಟ್ ಕಾರ್ಡ್ ಮತ್ತು ಬೆಳೆ ಮಾರಾಟದಂತಹ ಕೆಲಸ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ಇದೀಗ ರೈತ ಗುರುತಿನ ಚೀಟಿ ಮಾಡುವ ಕಾರ್ಯವನ್ನು ಚುರುಕುಗೊಳಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ನವೆಂಬರ್ 28 ರಂದು ರಾಜ್ಯಗಳಿಗೆ ಪತ್ರವನ್ನು ಕಳುಹಿಸಿದ್ದು, 2024-25 ನೇ ಹಣಕಾಸು ವರ್ಷದಲ್ಲಿ 6 ಕೋಟಿ ರೈತರಿಗೆ, 2025-26 ರಲ್ಲಿ 3 ಕೋಟಿ ಮತ್ತು 2 ಕೋಟಿ ರೈತರಿಗೆ ರೈತ ಗುರುತಿನ ಚೀಟಿಗಳನ್ನು ತಯಾರಿಸಲು ಶಿಬಿರಗಳನ್ನು ಆಯೋಜಿಸಲು ಆದೇಶಿಸಿದೆ. 2026-27 ರಲ್ಲಿ ಒಳಗೊಳ್ಳಲಿದೆ. ಕಿಸಾನ್ ಪೆಹಚಾನ್ ಪತ್ರವು ಆಧಾರ್-ಸಂಯೋಜಿತ ಡಿಜಿಟಲ್ ಗುರುತಾಗಿದೆ, ಇದನ್ನು ಭೂ ದಾಖಲೆಗಳಿಗೆ ಲಿಂಕ್ ಮಾಡಲಾಗುತ್ತಿದೆ.…

Read More

ನವದೆಹಲಿ: ಪೊಂಗಲ್ ಮತ್ತು ಮಕರ ಸಂಕ್ರಾಂತಿ ಹಬ್ಬಗಳ ಕಾರಣ ಬುಧವಾರ (ಜನವರಿ 15, 2025)ದ ನಾಳೆ ನಿಗದಿಯಾಗಿದ್ದ ಯುಜಿಸಿ-ನೆಟ್ ಪರೀಕ್ಷೆಯನ್ನು ( UGC-NET examination ) ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಪ್ರಕಟಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಎನ್ಟಿಎ ತಿಳಿಸಿದೆ. 2025 ರ ಜನವರಿ 15 ರಂದು ಪೊಂಗಲ್, ಮಕರ ಸಂಕ್ರಾಂತಿ ಮತ್ತು ಇತರ ಹಬ್ಬದ ಕಾರಣದಿಂದಾಗಿ ಯುಜಿಸಿ – ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಮನವಿ ಬಂದಿದೆ ಎಂದು ಎನ್ಟಿಎ ಹೇಳಿಕೆಯಲ್ಲಿ ತಿಳಿಸಿದೆ. “ಆಕಾಂಕ್ಷಿಗಳ ಹಿತದೃಷ್ಟಿಯಿಂದ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) 2025 ರ ಜನವರಿ 15 ರಂದು ನಿಗದಿಯಾಗಿದ್ದ ಯುಜಿಸಿ-ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು” ಎಂದು ಅದು ಹೇಳಿದೆ.

Read More

ಬಾಗಲಕೋಟೆ : ಸೈಬರ್ ವಂಚಕರು ಜನಸಾಮಾನ್ಯರನ್ನು ಗುರಿಯಾಗಿಸಿ ಕೊಂಡು ಡಿಜಿಟಲ್ ಮತ್ತು ಒನ್ಲೈನ್ ವಂಚನೆಯ ಮೂಲಕ ಅವರ ಖಾತೆಯಲ್ಲಿದ್ದಂತಹ ಲಕ್ಷಾಂತರ ಹಣವನ್ನು ದೋಚಿರುವ ಪ್ರಕರಣಗಳನ್ನು ನಾವು ಕೇಳಿದ್ದೇವೆ. ಆದರೆ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೂಡ ಇದೀಗ ವಂಚನೆ ಎಸಗಿರುವುದು ಬೆಳಗೆ ಬಂದಿದೆ. ಹೌದು ಬಾಗಲಕೋಟೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದ್ದು, ಮೊಬೈಲ್ನಲ್ಲಿ ಒಂದು ಲಿಂಕ್ ಬರುತ್ತದೆ. ಈ ಒಂದು ಲಿಂಕ್ ಓಪನ್ ಮಾಡಿದ್ ತಕ್ಷಣ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಕಾಣಿಸಿಕೊಳ್ಳುತ್ತದೆ. ಲಿಂಕ್ ಓಪನ್ ಮಾಡಿದ ತಕ್ಷಣ ನಿಮ್ಮ ಖಾತೆಯಲ್ಲಿನ ಹಣ ಫೋನ್ ಪೇ ಮೂಲಕ 749 ವಂಚಕರ ಖಾತೆಗೆ ವರ್ಗಾವಣೆಯಾಗುತ್ತದೆ. ಮೊಬೈಲ್ ರಿಚಾರ್ಜ್ ಹೆಸರಿನಲ್ಲಿ ವಂಚಕರು ಈ ಒಂದು ಲಿಂಕ್ ಕ್ರಿಯೇಟ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನ ಮೊಬೈಲ್ ಇಂದ ಮೊಬೈಲ್ ಗೆ ಫೇಕ್ ಲಿಂಕ್ ಪಾಸ್ ಆಗುತ್ತಿದ್ದು, ಮತ್ತೊಂದೆಡೆ ಫೇಕ್ ಲಿಂಕ್ ಓಪನ್ ಮಾಡಿದ್ರೆ ಸಿಎಂ ಸಿದ್ದರಾಮಯ್ಯ ಪೋಟೋ ಓಪನ್ ಆಗುತ್ತೆ.…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ಕೆಲವೊಂದು ಇಲಾಖೆ/ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಗೆ ಅರ್ಹ ಅವಲಂಬಿತರು ಯಾರು? ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ನಿಯಮ 2ರಲ್ಲಿನ “ಕುಟುಂಬ” (Family) ಅಂದರೆ, ಸರ್ಕಾರಿ ನೌಕರರ ಪತಿ ಅಥವಾ ಪತ್ನಿ b. ತಂದೆ ಮತ್ತು ತಾಯಿ (ಮಲತಾಯಿಯನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ -ಕುಟುಂಬ ಪಿಂಚಣಿ ರೂ. 8,500/- ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರಬಾರದು. C. ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರಬೇಕು ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡತೆ) 3. KASS ಯೋಜನೆಗೆ ಒಳಪಡದ ನೌಕರರ ವರ್ಗ ಸಾರ್ವಜನಿಕ ವಲಯದ (public sector…

Read More

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ವಂಚಕರು ವಿವಿಧ ರೀತಿಯಲ್ಲಿ ಜನರನ್ನು ವಂಚಿಸುತ್ತಿದ್ದು, ಇದೀಗ ಸಂಕ್ರಾಂತಿಗೆ ಶಾಪಿಂಗ್ ಮಾಡಿ ಹಬ್ಬದ ದಿನದಂದು ಉಚಿತ ರೀಚಾರ್ಜ್ ಪಡೆಯಿರಿ ಸೇರಿದಂತೆ ಹಲವು ಉಡುಗೊರೆ ಇರುವ ಮೆಸೇಜ್ ಕಳುಹಿಸಿ ವಂಚನೆ ಎಸಗುತ್ತಿದ್ದಾರೆ. ನಿಮ್ಮ ಫೋನ್ ಮತ್ತು ವಾಟ್ಸಾಪ್ ಸಂಖ್ಯೆಗಳಿಗೆ ಬಂದಿರುವ ಸಂದೇಶಗಳನ್ನು ನೋಡಿದರೆ ಬ್ಯಾಂಕ್ ಖಾತೆಗಳಲ್ಲಿರುವ ಹಣವೆಲ್ಲಾ ಖಾಲಿಯಾಗಲಿದೆ ಎಂದು ಸೈಬರ್ ಕ್ರೈಂ ಪೊಲೀಸರು ಎಚ್ಚರಿಸಿದ್ದಾರೆ. ಇ-ಕಾಮರ್ಸ್ ವೆಬ್‌ಸೈಟ್‌ಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಹೆಸರಿನಲ್ಲಿ ಬರುವ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಸಂಕ್ರಾಂತಿ ಹಬ್ಬದ ಉದ್ದೇಶದಿಂದ ವಾಟ್ಸಪ್ ಗ್ರೂಪ್ ಗಳನ್ನು ಆಯೋಜಿಸಿ ಆಹ್ವಾನ ನೀಡಲಾಗುತ್ತಿದೆ. ಹೊಸ ಬಟ್ಟೆ, ವಾಹನ ಖರೀದಿಗೆ ರಿಯಾಯಿತಿ ನೀಡುವಂತೆ ಇ-ಮೇಲ್ ಹಾಗೂ ವಾಟ್ಸ್ ಆಪ್ ನಂಬರ್ ಗಳಿಗೆ ಜಾಹೀರಾತುಗಳನ್ನು ಕಳುಹಿಸಲಾಗುತ್ತಿದೆ. ಇತ್ತೀಚಿಗೆ ಸಿಎಂ ಹೆಸರಿನಲ್ಲಿ ಉಚಿತ ರೀಚಾರ್ಜ್ ಆಫರ್ ಎಂದು ಲಿಂಕ್ ಕಳುಹಿಸುತ್ತಿದ್ದಾರೆ, ರೂ.749 ಮೌಲ್ಯದ 3 ತಿಂಗಳ…

Read More

ಶಬರಿಮಲೆ : ಇಂದು ಮಕರ ಸಂಕ್ರಾಂತಿ ಶುಭದಿನದಂದು ಶ್ರೀ ಅಯ್ಯಪ್ಪ ಕ್ಷೇತ್ರವಾದ ಶಬರಿಮಲೆಯಲ್ಲಿ ಸಂಜೆ ಮಕರಜ್ಯೋತಿ ದರ್ಶನವಾಗಲಿದೆ. ಹೀಗಾಗಿ, ಮಕರವಿಳಕ್ಕು ಆಚರಣೆ ಮತ್ತು ಮಕರಜ್ಯೋತಿ ದರ್ಶನಕ್ಕಾಗಿ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಇಂದು ಪವಿತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಮಕರಜ್ಯೋತಿ ಕಾಣಲಿದ್ದು, ಸುಮಾರು 1.5 ಲಕ್ಷ ಭಕ್ತರು ಶಬರಿಮಲೆಗೆ ಆಗಮಿಸಿ ಈ ಕ್ಷಣವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಸಂಜೆ 6 ಗಂಟೆಯಿಂದ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶುರುವಾಗಲಿವೆ. ಸಂಜೆ 6 ಗಂಟೆ ವೇಳೆಗೆ ಪೊನ್ನಂಬಾಲಮೇಡು ಬೆಟ್ಟದಲ್ಲಿ ಮಕರಜ್ಯೋತಿ ಕಾಣಲಿದೆ. ಮಕರವಿಳ್ಳಕ್ಕು ಹಬ್ಬ ಜ. 19 ರಂದು ಅಂತ್ಯಗೊಳ್ಳಲಿದೆ. ಮಕರ ಜ್ಯೋತಿಯ ಐತಿಹಾಸಿಕ ಹಿನ್ನಲೆ ಶಬರಿಮಲೆಯ ಪ್ರಮುಖ ಕಾರ್ಯಕ್ರಮವೆಂದರೆ ಮಕರ ಜ್ಯೋತಿ (ಸಾಮಾನ್ಯವಾಗಿ ಜನವರಿ 14 ರಂದು). ತಿರುವಾಭರಣಂ ಅಥವಾ ಭಗವಂತನ ಪವಿತ್ರ ಆಭರಣಗಳು (ಪಂದಳಂ ರಾಜನು ಪ್ರಸ್ತುತಪಡಿಸಿದ) ಮೂರು ಪೆಟ್ಟಿಗೆಗಳಲ್ಲಿ ಶಬರಿಮಲೆಗೆ ಆಗಮಿಸುತ್ತವೆ. ಆಭರಣ ಪೆಟ್ಟಿಗೆಗಳ ಆಗಮನದ ನಂತರ ಇಡೀ ಪರ್ವತವು ಈ ಕಾರ್ಯಕ್ರಮವನ್ನು ವೀಕ್ಷಿಸಲು ಅಲ್ಲಿ ನೆರೆದಿದ್ದ…

Read More

ಬೆಂಗಳೂರು : ಇಂದು ವರ್ಷದ ಮೊದಲ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ನಾಡಿನಲ್ಲಿಡೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಅದೇ ರೀತಿಯಾಗಿ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನವು ಇಂದು ವಿಶೇಷ ವಿಸ್ಮಯಕ್ಕೆ ಕಾರಣವಾಗಲಿದೆ. ಏಕೆಂದರೆ ಸಂಕ್ರಾಂತಿ ಹಬ್ಬದ ದಿನದಂದು ಸೂರ್ಯನು ದಕ್ಷಿಣ ಪಥದಿಂದ ಉತ್ತರಪದಕೆತನ ದಿಕ್ಕನ್ನು ಬದಲಿಸುವ ವೇಳೆ ಈ ಒಂದು ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಲಿವೆ. ವರ್ಷಕ್ಕೆ ಸಂಕ್ರಾಂತಿ ಹಬ್ಬದ ದಿನದಂದೇ ಈ ಒಂದು ವಿಸ್ಮಯ ಹಾಗೂ ಕೌತುಕ ಘಟನೆ ಜೋಳದಲ್ಲಿದ್ದು ಇದನ್ನು ಕಣ್ತುಂಬಿಕೊಳ್ಳಲು ಅಪಾರ ಪ್ರಮಾಣದ ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ಸಂಜೆ 5.20 ರಿಂದ 5.23 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಲಿದೆ. ಲಿಂಗಭಾಗದಲ್ಲಿ ಎಷ್ಟು ಸಮಯ ಸೂರ್ಯರಶ್ಮಿ ಇರುತ್ತೆ ಅನ್ನೋದರ ಮೇಲೆ ಭವಿಷ್ಯ ಹೇಳಲಾಗುವುದು. ಇನ್ನು ದೇವಸ್ಥಾನದಲ್ಲಿ ಬೆಳಿಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮಾಡಲಾಗುವುದು. ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ತೆರೆದಿರಲಿದೆ. ನಂತರ…

Read More

ಬೆಂಗಳೂರು : ಇಂದು ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಹೂವು, ಹಣ್ಣು, ತೆಂಗಿನ ಕಾಯಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಮಳೆ ಸೇರಿದಂತೆ ವಿವಿಧ ಕಾರಣಗಳಿಂದ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಮಾರುಕಟ್ಟೆಗಳಲ್ಲಿ ಕಬ್ಬಿನ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಕಳೆದ ಬಾರಿ 10 ಕಬ್ಬುಗಳ ಒಂದು ಕಟ್ಟು 400 ರೂ. ಇದ್ರೆ ಈ ಬಾರಿ 500 ರೂ.ಗೆ ತಲುಪಿದೆ. ಇನ್ನು ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ತೆಂಗಿನ ಕಾಯಿ ಬೆಲೆ 50 ರಿಂದ 60 ರೂ.ವರೆಗೆ ತಲುಪಿದೆ. ಮಲ್ಲಿಗೆ ಕೆಜಿಗೆ 250 ರೂ. ಇದ್ರೆ, ಕಾಕಡ ಕಜಿಗೆ 230 ರೂ. ಇದೆ. ಗುಲಾಬಿ ಕೆಜಿಗೆ 160 ರೂ, ಸೇವಂತಿಗೆ ಕೆಜಿಗೆ 150-170 ರೂ. ಚೆಂಡು ಹೂವು 110 ರೂ.ಗೆ ಮಾರಾಟವಾಗುತ್ತಿದೆ.

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಗ್ರಹಗಳ ರಾಜನಾದ ಸೂರ್ಯ ದೇವರು ಮಕರ ರಾಶಿಯನ್ನು ಪ್ರವೇಶಿಸಿದಾಗ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ಇದು ಹಿಂದೂ ಧರ್ಮದ ಪ್ರಮುಖ ಹಬ್ಬವಾಗಿದೆ. ಈ ದಿನ ಸೂರ್ಯ ದೇವರನ್ನು ಪೂಜಿಸಲಾಗುತ್ತದೆ. ಮಕರ ಸಂಕ್ರಾಂತಿಯ ದಿನದಂದು ಸೂರ್ಯ ದೇವರನ್ನು ಪೂಜಿಸುವುದರಿಂದ ಜಾತಕನ ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತವೆ ಮತ್ತು ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ಈ ದಿನದಿಂದ, ಸೂರ್ಯನ ಉತ್ತರಾಯಣ ಚಲನೆ ಪ್ರಾರಂಭವಾಗುತ್ತದೆ ಮತ್ತು ಈ ಕಾರಣಕ್ಕಾಗಿ ಇದನ್ನು ಉತ್ತರಾಯಣ ಎಂದೂ ಕರೆಯಲಾಗುತ್ತದೆ.  ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ, ಮಕರ ಸಂಕ್ರಾಂತಿ ಹಬ್ಬವನ್ನು ಜನವರಿ 14 ರಂದು ಆಚರಿಸಲಾಗುತ್ತದೆ. ಆದರೆ ಕೆಲವೊಮ್ಮೆ ಈ ಹಬ್ಬವು ಜನವರಿ 15 ರಂದು ನಡೆಯುತ್ತದೆ. ಇದು ಸೂರ್ಯ ದೇವರು ಧನು ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸುತ್ತಿದ್ದಾನೆಯೇ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. 2025 ರಲ್ಲಿ, ಮಕರ ಸಂಕ್ರಾಂತಿ ಜನವರಿ 14 ರ ಮಂಗಳವಾರ ಬೆಳಿಗ್ಗೆ 9:03 ರಿಂದ ಪ್ರಾರಂಭವಾಗುತ್ತದೆ. ಪುಣ್ಯಕಾಲ (ಶುಭ ಅವಧಿ) ಜನವರಿ 14…

Read More

ಬೆಂಗಳೂರು : ಕರ್ನಾಟಕ ಸೋಪ್ಸ್‌ ಅಂಡ್‌ ಡಿಟರ್ಜೆಂಟ್ಸ್‌ (ಕೆಎಸ್‌ಡಿಎಲ್‌) ಸಂಸ್ಥೆಯು ವಿಜಯಪುರದ ಬಳಿ ಮೈಸೂರು ಸ್ಯಾಂಡಲ್‌ ಸೋಪು ಉತ್ಪಾದನಾ ಘಟಕ ಸ್ಥಾಪಿಸಲಿದ್ದು, 400 ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಗಲಿದೆ. ಈ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದು, ಕರ್ನಾಟಕ ಸೋಪ್ಸ್‌ ಅಂಡ್‌ ಡಿಟರ್ಜೆಂಟ್ಸ್‌ (ಕೆಎಸ್‌ಡಿಎಲ್‌) ಸಂಸ್ಥೆಯು ವಿಜಯಪುರದ ಇಟ್ಟಂಗಿಹಾಳ ರಸ್ತೆ ಬದಿಯ 10 ಎಕರೆ ಪ್ರದೇಶದಲ್ಲಿ ಶೀಘ್ರವೇ ಮೈಸೂರು ಸ್ಯಾಂಡಲ್‌ ಸೋಪು ಉತ್ಪಾದನಾ ಘಟಕ ಸ್ಥಾಪಿಸಲಿದೆ ಎಂದು ತಿಳಿಸಿದ್ದಾರೆ. ಈ ಘಟಕ ಆರಂಭದಿಂದ 400 ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಗಲಿದೆ. ಉತ್ತರ ಕರ್ನಾಟಕದ ಜನರಿಗೆ ಮಾತ್ರವಲ್ಲದೇ ಮಹಾರಾಷ್ಟ್ರದವರೆಗೂ ಗುಣಮಟ್ಟದ ಸಾಬೂನು, ಇತರೆ ಉತ್ಪನ್ನ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

Read More