Author: kannadanewsnow57

ಬೆಂಗಳೂರು : ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. 1. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 (ಸಂಕ್ಷಿಪ್ತವಾಗಿ ‘2021ರ ನಿಯಮಗಳು), ದಿನಾಂಕ: 07-01-2021 ರಿಂದ ಜಾರಿಗೆ ಬಂದಿರುತ್ತದೆ. 2. 2021ರ ನಿಯಮಗಳ ನಿಯಮ 24(3) ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ. ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗೆ, ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ. ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದಲ್ಲಿ ಅಥವಾ ಎಲೇ ಮಾಡಿದ್ದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ…

Read More

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬೆಂಗಳೂರು : ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ರಾಷ್ಟ್ರೀಯ ಭೂಮಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೋಡಿ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಪೂರಕವಾಗಿ 227 ಪರವಾನಿಗೆ ಭೂಮಾಪಕರನ್ನು ಕಾಯಂ ಮಾಡಲಾಗುವುದು. ಸರ್ವೆ ಇಲಾಖೆಯಲ್ಲಿ ಖಾಲಿ ಇರುವ 36 ಸಹಾಯಕ ನಿರ್ದೇಶಕರನ್ನು ನೇಮಕ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಪೋಡಿ ಮುಕ್ತ ಅಭಿಯಾನ ನಡೆಸಿದರೂ ಇನ್ನು ಅನೇಕ ಗ್ರಾಮಗಳಲ್ಲಿ ಪೋಡಿ ಸಮಸ್ಯೆ ನಿವಾರಣೆಯಾಗಿಲ್ಲ. ಹೀಗಾಗಿ ಸರ್ವೆ ಕಾರ್ಯ ಪೂರ್ಣಗೊಳಿಸಿ ದಾಖಲೆಗಳನ್ನು ಸರಿಪಡಿಸಿ ಪೋಡಿ ಮುಕ್ತ ಗ್ರಾಮವನ್ನಾಗಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕೆರೆಗಳ ಒತ್ತುವರಿ ಪತ್ತೆ ಮಾಡಲು ರಾಜ್ಯ ಎಲ್ಲಾ ಕೆರೆಗಳ ಸರ್ವೆ ನಡೆಸಿ ಒತ್ತುವರಿ ತೆರವುಗೊಳಿಸಬೇಕು. ಇದಕ್ಕಾಗಿ ಸರ್ವೇ ಇಲಾಖೆ ಸೂಕ್ತ ರೀತಿ ಕೆಲಸ ಮಾಡಬೇಕು…

Read More

ಬೆಂಗಳೂರು: ರಾಜ್ಯಾಧ್ಯಂತ ಭಗವಾನ್ ಬುದ್ಧ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸಹಕಾರ ಸಂಘಗಳ ಅಪರ ನಿಬಂಧಕರು (ನಿ), ಮೈಸೂರು ಇವರು ದಿನಾಂಕ:19.08.2023ರ ಪತ್ರದಲ್ಲಿ, ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು, ಏಷ್ಯಾ ಖಂಡದ ಹಲವಾರು ರಾಷ್ಟ್ರಗಳು ಬುದ್ದ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ವೈಭವದಿಂದ ಆಚರಿಸುತ್ತಿದ್ದು, ವಿಶ್ವದ ಪ್ರಥಮ ಹಾಗೂ ಶ್ರೇಷ್ಠ ದಾರ್ಶನಿಕರಾದ ಬುದ್ಧರ ಜಯಂತಿಯನ್ನು ಅವರು ಜನಿಸಿದ ಭಾರತದಲ್ಲಿ ಸರ್ಕಾರದ ವತಿಯಿಂದ ಆಚರಿಸುವುದು ಸೂಕ್ತ ಎಂದು ತಿಳಿಸುತ್ತಾ, ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಸರ್ಕಾರದ ವತಿಯಿಂದ ಪ್ರತಿವರ್ಷ ಆಯೋಜಿಸಿ ಆಚರಿಸಲು ಸರ್ಕಾರದ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದಿದ್ದಾರೆ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಈಗಾಗಲೇ ವಾರ್ಷಿಕವಾಗಿ ವಿವಿಧ ಮಹಾಪುರುಷರ…

Read More

ಬೆಂಗಳೂರು : ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಆಸ್ತಿ ತೆರಿಗೆಯನ್ನು ವಿಧಿಸುತ್ತವೆ ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕವಾಗಿ ಆಸ್ತಿ ತೆರಿಗೆ ಸಂಗ್ರಹ ಮಾಡಲು ಬಾಫೂಜಿ ಸೇವಾ ಕೇಂದ್ರ ಮತ್ತು ಪಂಚತಂತ್ರ 2.0 ತಂತ್ರಾಂಶದ ಮೂಲಕ ಸೇವೆಯನ್ನು ನೀಡಲಾಗುತ್ತಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಿಕೊಂಡು ಸರ್ಕಾರದ ಸುತ್ತೋಲೆಯಂತೆ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಕೂಡ ನಿಯಾಮಾನುಸಾರ ತಂತ್ರಾಂಶದಲ್ಲಿ ಇಂಧೀಕರಿಸುತ್ತ ಕಂದಾಯ ವಸೂಲಾತಿ ಅಂದೋಲನಗಳನ್ನು ಆಯೋಜಿಸಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಳೆದ ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಶೇ 75% ರಷ್ಟು ಕಂದಾಯ ವಸೂಲಾತಿಯಾಗಿದ್ದು, 2024-25ನೇ ಸಾಲಿನಲ್ಲಿ ಶೇ 88% ರಷ್ಟು ಕಂದಾಯ…

Read More

ನವದೆಹಲಿ : ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾನನ್ನು 18 ದಿನಗಳ ಎನ್ ಐಎ ವಶಕ್ಕೆ ನೀಡಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದೆ. ತಹವೂರ್ ರಾಣಾನನ್ನು ಕಸ್ಟಡಿಗೆ ಪಡೆಯಲು ಎನ್ ಐಎ ಅಧಿಕಾರಿಗಳು ಪ್ರಬಲ ಸಾಕ್ಷ್ಯ ಒದಗಿಸಿದ್ದು, ವಿಚಾರಣೆ ನಡೆಸಿದ ದೆಹಲಿಯ ವಿಶೇಷ ನ್ಯಾಯಾಲಯ ತಹವೂರ್ ರಾಣಾನನ್ನು 18 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. 26/11 ದಾಳಿಯ ಪ್ರಮುಖ ಆರೋಪಿಯಾಗಿರುವ ರಾಣಾ, ಹಸ್ತಾಂತರದಿಂದ ತಪ್ಪಿಸಿಕೊಳ್ಳುವ ಕೊನೆಯ ಪ್ರಯತ್ನ ವಿಫಲವಾದ ನಂತರ ಬುಧವಾರ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಎನ್ ಐಎ ಅಧಿಕಾರಿಗಳು ಭಾರತಕ್ಕೆ ಕರೆತಂದಿದ್ದಾರೆ.

Read More

ಚಿತ್ರದುರ್ಗ : ಪ್ರತಿವರ್ಷದಂತೆ ಈ ವರ್ಷವೂ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಜಿಲ್ಲಾಮಟ್ಟದಲ್ಲಿ ಇದೇ ಏಪ್ರಿಲ್ 15 ಮತ್ತು 16ರಂದು ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಏಪ್ರಿಲ್ 15 ಮತ್ತು 16ರಂದು ನಡೆಯುವ ಚಿತ್ರದುರ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಆಯಾ ಇಲಾಖಾ ಮುಖ್ಯಸ್ಥರು ಶೇ.50ರಷ್ಟು ಸಿಬ್ಬಂದಿಗಳಿಗೆ ಮೀರದಂತೆ ಭಾಗವಹಿಸು ಅನುಮತಿ ನೀಡತಕ್ಕದ್ದು. ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅಧಿಕಾರಿ, ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣ ಪತ್ರ ಹಾಜರು ಪಡಿಸುವ ಷರತ್ತಿಗೊಳಪಡಿಸಿ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವುದು ಮತ್ತು ಕ್ರೀಡಾಕೂಟ ನಡೆಯುವ ದಿನಗಳ ಪ್ರಯಾಣಭತ್ಯೆಯನ್ನು ಮಾತೃ ಇಲಾಖೆಯಿಂದಲೇ ಭರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಸಮಿತಿ ಅಧ್ಯಕ್ಷರಾದ ಟಿ.ವೆಂಕಟೇಶ್ ತಿಳಿಸಿದ್ದಾರೆ.

Read More

ಬೆಂಗಳೂರು : ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶಾಲಾ ವಾಹನಗಳ ಶುಲ್ಕ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಡೀಸೆಲ್ ದರ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಖಾಸಗಿ ಶಾಲೆಗಳ ಶಾಲಾ ವಾಹನಗಳ ಶುಲ್ಕವನ್ನು 1000 ರೂ.ನಿಂದ 1,500 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ. ಖಾಸಗಿ ಶಾಲಾ ವಾಹನಗಳ ಸಂಘದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಶೈಕ್ಷಣಿಕ ವರ್ಷದಿಂದಲೇ ನೂತನ ದರ ಜಾರಿಗೆ ಬರುವ ಸಾಧ್ಯತೆ ಇದೆ. ಇನ್ನು ಅನುದಾನ ರಹಿತ ಶಾಲೆಗಳಲ್ಲಿ ಶೇಕಡ 15 ರಿಂದ 20 ರಷ್ಟು ಪ್ರವೇಶ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಪೋಷಕರಿಗೆ ಹೆಚ್ಚಿನ ಶುಲ್ಕದ ಹೊರೆ ಬಿದ್ದಿದೆ. ಪ್ರತಿವರ್ಷ ಶಾಲೆಗಳಲ್ಲಿ ನಿರ್ವಹಣಾ ವೆಚ್ಚ, ಸಿಬ್ಬಂದಿ ವೇತನ, ಡೀಸೆಲ್ ಬೆಲೆ ಏರಿಕೆ ಮೊದಲಾದ ಕಾರಣಗಳಿಂದ ಪ್ರವೇಶ ಶುಲ್ಕದಲ್ಲಿ 15 ರಿಂದ 20 ರಷ್ಟು ಹೆಚ್ಚಳ ಮಾಡುವುದಾಗಿ ಖಾಸಗಿ ಶಾಲೆಗಳು ಪ್ರಕಟಿಸಿವೆ.

Read More

ಬೆಂಗಳೂರು : ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಆಚರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ರಾಷ್ಟ್ರೀಯ ಭೂಮಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ಇದ್ದಂತೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ. ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದರು. ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು…

Read More

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ರಾಷ್ಟ್ರೀಯ ಭೂಮಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ಇದ್ದಂತೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ. ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ…

Read More