Author: kannadanewsnow57

ಮೈಸೂರು: ಹೊಸ ವರ್ಷದ ಮೈಸೂರು ಜೈಲಿನಲ್ಲಿ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವನ್ನಪ್ಪಿದ್ದು, ಈ ಮೂಲಕ ಸಾವನ್ನಪ್ಪಿದ ಕೈದಿಗಳ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ. ಹೊಸ ವರ್ಷದ ದಿನ ಕೇಕ್ ತಯಾರಿಸಲು ಎಸೆನ್ಸ್ ತರಿಸಲಾಗಿದ್ದು, ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೈದಿಗಳು ಕೇಕ್ ತಯಾರಿಸಲು ಇಟ್ಟಿದ್ದ ಎಸೆನ್ಸ್ ಕುಡಿದಿದ್ದರು. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ನಿನ್ನೆ ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದರು. ಇಂದು ಚಾಮರಾಜನಗರದ ಕೈದಿ ನಾಗರಾಜ್ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ. ಮತ್ತೊಬ್ಬ ಕೈದಿ ರಮೇಶ್ ಆರೋಗ್ಯ ಸ್ಥಿತಿಯು ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಆಭರಣ ಪ್ರಿಯರಿಗೆ ಬಿಗ್ ಶಾಕ್, ದೇಶಾದ್ಯಂತ ಇಂದು ಮತ್ತೆ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಶುದ್ಧ ಚಿನ್ನದ ದರ 10 ಗ್ರಾಂಗೆ 700 ರೂ. ಏರಿಕೆಯಾಗಿ 79 700 ರೂ.ಗೆ ತಲುಪಿದೆ. ಚಿನ್ನಾಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳ ತಾಜಾ ಖರೀದಿಯಿಂದಾಗಿ ದೆಹಲಿಯಲ್ಲಿ ಚಿನ್ನದ ದರ 10 ಗ್ರಾಂ ಗೆ 700 ರೂ. ಏರಿಕೆಯಾಗಿದ್ದು, 79,300 ರೂ.ಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 1300 ರೂ.ಏರಿಕೆಯಾಗಿದ್ದು, 92,000 ರೂ.ಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ ಒಂದು ಗ್ರಾಂಗೆ 7215 ರೂ. ಇದ್ದು 10 ಗ್ರಾಂ ಗೆ 72,150 ರೂ. ಆಗಿದೆ. 24 ಕ್ಯಾರೆಟ್ ನ ಚಿನ್ನದ ದರ 10 ಗ್ರಾಂ ಗೆ 78210 ರೂ. ಇದೆ. ಈ ಮೂಲಕ ದಿನದಿಂದ ದಿನಕ್ಕೆ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಬೆಲೆ ಏರಿಕೆಯಾಗುತ್ತಿದ್ದು, ಆಭರಣ ಪ್ರಿಯರಿಗೆ ಶಾಕ್ ಎದುರಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಎಸ್ಕಾಂ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಎಸ್ಕಾಂ ಸಿಬ್ಬಂದಿಗಳಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಎಂಜಿನಿಯರ್ ಗಳ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಇತರೆ ಎಸ್ಕಾಂಗಳಲ್ಲೂ ಶೀಘ್ರವೆ ಈ ಸೌಲಭ್ಯ ಕಲ್ಪಿಸಲಾಗುವುದು ಎಂದರು. ಇಂಧನ ಇಲಾಖೆಯ ಎಲ್ಲ ಎಸ್ಕಾಂ ಸಿಬ್ಬಂದಿಗೂ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಸದ್ಯದಲ್ಲೇ ಜಾರಿ ಮಾಡುವಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸಚಿವರು ಸೂಚನೆ ನೀಡಿದ್ದಾರೆ.

Read More

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕುಂದು–ಕೊರತೆಗಳು ಹಾಗೂ ವಿವಿಧ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ ನಿಮ್ಮ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಪಡೆಯಬಹುದು. ಈ ಸಮಸ್ಯೆಗಳಿಗೆ ತಕ್ಷಣವೇ ಸಿಗಲಿದೆ ಪರಿಹಾರ ಗ್ರಾಮ ಪಂಚಾಯಿತಿ ಆಸ್ತಿ ತೆರಿಗೆ ಪಾವತಿ ಜನನ ಹಾಗೂ ಮರಣ ಪ್ರಮಾಣ ಪತ್ರ ಮಾಹಿತಿ ನಿಮ್ಮ ಗ್ರಾಮದ ಕುಡಿಯು ನೀರಿನ ಸಮಸ್ಯೆ ಮಹತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಪಡೆಯಲು ಬೇಡಿಕೆ ಸಲ್ಲಿಸಲು ನಿಮ್ಮ ಗ್ರಾಮದ ರಸ್ತೆ ದುರಸ್ಥಿ ಮಾಡಿಸಲು ದೂರು ನೀಡಬೇಕೇ? ಮೇಲ್ಕಂಡ ಎಲ್ಲ ಸಮಸ್ಯೆಗಳಿಗೆ ದೂರು ಸಲ್ಲಿಸಲು ಸಾರ್ವಜನಿಕರು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ, ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರು ಕರೆ ಮಾಡಬಹುದು.

Read More

ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವೃತ್ತಿನಿರತ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಉಚಿತವಾಗಿ 192 ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್‌ಲೈನ್ ವೆಬ್‌ಸೈಟ್ ballari.nic.in ಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 06 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಬಳ್ಳಾರಿ-ಮೊ.9035547140, ಸಂಡೂರು-ಮೊ.9844200579, ಜಿಪಂ ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕರ ಮೊ.9901313417 ಗೆ ಸಂಪರ್ಕಿಸಬಹುದು ಎಂದು ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ಮಂಗಳವಾರ ಬೆಳಗ್ಗೆ ಭಾರತದ ನೇಪಾಳ, ಟಿಬೆಟ್ ಮತ್ತು ಬಿಹಾರ ರಾಜ್ಯದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಭೂಕಂಪದ ಘಟನೆಯಲ್ಲಿ ಸುಮಾರು 130 ಕ್ಕೂ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ನೇಪಾಳದಲ್ಲಿ 7.1 ತೀವ್ರತೆಯ ಭೂಕಂಪ ಸಂಭವಿಸಿದ ನಂತರ, ಇದು ಸನ್ನದ್ಧತೆಯ ಪ್ರಾಮುಖ್ಯತೆಯನ್ನು ಸಂಪೂರ್ಣವಾಗಿ ನೆನಪಿಸುತ್ತದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ಪ್ರಕಾರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ದೆಹಲಿ-ಎನ್‌ಸಿಆರ್ ಪ್ರದೇಶದಂತಹ ಭಾರತದ ಭಾಗಗಳಲ್ಲಿ ಸಂಭವಿಸಿದ ಭೂಕಂಪವು ನೇಪಾಳದ ಬಳಿ ಲೊಬುಚೆಯಿಂದ ಉತ್ತರಕ್ಕೆ 93 ಕಿಮೀ ದೂರದಲ್ಲಿ ಬೆಳಿಗ್ಗೆ 6:35 ಕ್ಕೆ ಅಪ್ಪಳಿಸಿತು. – ಪೂರ್ವದಲ್ಲಿ ಟಿಬೆಟ್ ಗಡಿ ಬಂದಿತು. ಹೆಚ್ಚುವರಿಯಾಗಿ, ರಾಯಿಟರ್ಸ್ ಪ್ರಕಾರ, ಚೀನಾದ ಅಧಿಕಾರಿಗಳು ಟಿಬೆಟ್‌ನ ಶಿಗಾಟ್ಸೆ ನಗರದಲ್ಲಿ 6.8 ತೀವ್ರತೆಯ ಭೂಕಂಪವನ್ನು ವರದಿ ಮಾಡಿದ್ದಾರೆ. ಭೂಕಂಪದಿಂದ ಆಗುವ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟ ತಡೆಯುವ ಪ್ರಶ್ನೆ ಮತ್ತೊಮ್ಮೆ ಉದ್ಭವಿಸಿದೆ. ಅಂತಹ ಪರಿಸ್ಥಿತಿಯಲ್ಲಿ, ತಂತ್ರಜ್ಞಾನವು ನಿಮ್ಮ ಫೋನ್‌ನಲ್ಲಿಯೇ ಭೂಕಂಪದ ಬಗ್ಗೆ ತಿಳಿದುಕೊಳ್ಳಲು ಸುಲಭವಾದ ಮಾರ್ಗವನ್ನು ಅಭಿವೃದ್ಧಿಪಡಿಸಿದೆ. ಸ್ಮಾರ್ಟ್‌ಫೋನ್‌ನಲ್ಲಿ ಭೂಕಂಪದ…

Read More

ನವದೆಹಲಿ : ವಿಧವೆಯಾದ ಸೊಸೆ ಜೀವನಾಂಶ ನೀಡುವಂತೆ ಮಾವನಿಗೆ ಬಲವಂತ ಮಾಡುವಂತಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಈ ನಿರ್ಧಾರವನ್ನು ನೀಡುವಾಗ, ನ್ಯಾಯಾಲಯವು ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯಿದೆ, 2005 ಅಥವಾ ಮುಸ್ಲಿಂ ವೈಯಕ್ತಿಕ ಕಾನೂನನ್ನು (ಬಶೀರ್ ಖಾನ್ ವರ್ಸಸ್ ಇಶ್ರತ್ ಬಾನೊ) ಉಲ್ಲೇಖಿಸಿದೆ. ವರದಿಯ ಪ್ರಕಾರ, ನ್ಯಾಯಮೂರ್ತಿ ಹೃದೇಶ್ ಒಬ್ಬ ವ್ಯಕ್ತಿಯ ಅರ್ಜಿಯನ್ನು ಸ್ವೀಕರಿಸುವಾಗ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ, ವಿಚಾರಣೆ ಮತ್ತು ಸೆಷನ್ಸ್ ನ್ಯಾಯಾಲಯವು ತನ್ನ ವಿಧವೆ ಸೊಸೆಗೆ ಮಾಸಿಕ 3,000 ರೂ. ಜೀವನಾಂಶ ನೀಡುವ ತೀರ್ಪಿನ ವಿರುದ್ಧ ವ್ಯಕ್ತಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅಕ್ಟೋಬರ್ 24 ರಂದು ತನ್ನ ತೀರ್ಪಿನಲ್ಲಿ, ಮುಸ್ಲಿಂ ಕಾನೂನು ಮತ್ತು ಕೌಟುಂಬಿಕ ದೌರ್ಜನ್ಯ ಕಾಯ್ದೆಯ ನಿಬಂಧನೆಗಳ ಪ್ರಕಾರ, ಪ್ರಸ್ತುತ ಅರ್ಜಿದಾರರು, ಪ್ರತಿವಾದಿಯ ಮಾವ, ಪ್ರತಿವಾದಿಗೆ ಜೀವನಾಂಶ ಪಾವತಿಸಲು ಒತ್ತಾಯಿಸಲಾಗುವುದಿಲ್ಲ ಕೋರ್ಟ್ ಅಭಿಪ್ರಾಯಪಟ್ಟಿದೆ. ಅರ್ಜಿದಾರರ ಮಗನಿಗೆ 2011 ರಲ್ಲಿ ವಿವಾಹವಾಗಿತ್ತು. ಆದರೆ ಕೇವಲ ನಾಲ್ಕು ವರ್ಷಗಳ ನಂತರ, 2015 ರಲ್ಲಿ, ಅವರ…

Read More

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಮುಖ ಕಾರ್ಯಕ್ರಮಗಳ ಪ್ರಗತಿ ಪರೀಶೀಲನೆ ಸಭೆ ನಡೆಯಿತು. ಆ ಸಭೆಯ ಪ್ರಮುಖ ಮುಖ್ಯಾಂಶಗಳು ಮುಂದಿದೆ ಓದಿ. • ಪ್ರಸ್ತುತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.11182 ಕೋಟಿ ಅನುದಾನ ಒದಗಿಸಲಾಗಿದ್ದು, ಇದುವರೆಗೆ ರೂ.6593 ಕೋಟಿ ವೆಚ್ಚ ಮಾಡಲಾಗಿದೆ. ಅನುದಾನಕ್ಕೆ ಶೇ.58.96 ಪ್ರಗತಿ ಸಾಧಿಸಲಾಗಿದೆ. • ರಾಜ್ಯದಲ್ಲಿ ತಾಯಂದಿರ ಮರಣ ಅನುಪಾತ ದೇಶಕ್ಕೆ ಹೋಲಿಸಿದರೆ ಕಡಿಮೆಯಿದೆ. 2018-20ರ ಅವಧಿಯಲ್ಲಿ ರಾಜ್ಯದಲ್ಲಿ ಒಂದು ಲಕ್ಷಕ್ಕೆ 69 ಮರಣ ಸಂಭವಿಸುತ್ತಿದ್ದು, ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಇದರ ಪ್ರಮಾಣ 55 ಕ್ಕೆ ಇಳಿದಿದೆ. • ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸಲು ವ್ಯಾಪಕ ಅಭಿಯಾನ ಆರಂಭಿಸಬೇಕು. ತಾಯಂದಿರ ಮರಣ ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. • ಹೆರಿಗೆ ಪ್ರಮಾಣಕ್ಕೆ…

Read More

ಚಿತ್ರದುರ್ಗ : ಕೀಟನಾಶಕಗಳ ಬಳಕೆಯಲ್ಲಿ ರೈತರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ, ಕೃಷಿ ಪೂರಕ ಸೂಕ್ಷ್ಮ ಜೀವಿಗಳ ಅಲಭ್ಯತೆ ರೈತರನ್ನು ಕಾಡಲಿದೆ. ಈ ಕುರಿತಂತೆ ಕೃಷಿ ಮತ್ತು ತೋಟಗಾರಿಕೆ ಅಧ್ಯಯನದ ವಿದ್ಯಾರ್ಥಿಗಳು ರೈತರಿಗೆ ತರಬೇತಿ ಮೂಲಕ ಮನವರಿಕೆ ಮಾಡಿಕೊಟ್ಟರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ. ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಕಸವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೀಟನಾಶಕಗಳ ಬಳಕೆಯಲ್ಲಿ ವಹಿಸಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು. ರೈತರು ವಾಡಿಕೆಯಂತೆ ಹೆಚ್ಚಿನ ಮಟ್ಟದ ಕೀಟನಾಶಕಗಳನ್ನು ಬಳಸುತ್ತಾರೆ. ಸಾಮಾನ್ಯವಾಗಿ ಕೀಟನಾಶಕ ಮಣ್ಣಿನೊಳಗೆ ಸೇರಿಕೊಂಡು ನೇರವಾಗಿ ಮಣ್ಣಿನ ಫಲವತ್ತತೆಯನ್ನು ನಾಶಮಾಡುತ್ತದೆ ಹಾಗೂ ಸೂಕ್ಷ್ಮ ಜೀವಿಗಳ ಲಭ್ಯತೆಯು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ಹೇಳಿದರು. ಹೀಗಾಗಿ ರೈತರು ಕೀಟನಾಶಕಗಳನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ವಿಧಾನದಲ್ಲಿ ಬಳಕೆ ಮಾಡುವುದು ಸೂಕ್ತವೆಂದು ಅಂತಿಮ ವರ್ಷದ ವಿದ್ಯಾರ್ಥಿನಿ ಚೈತ್ರ…

Read More

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ 2024 ನೇ ಸಾಲಿನಲ್ಲಿ ವಿತರಿಸಿರುವ ವಿಕಲಚೇತನರ ಬಸ್‍ಪಾಸುಗಳನ್ನು ಫೆಬ್ರುವರಿ 28 ರ ವರೆಗೆ ಮಾನ್ಯ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ವಿಕಲಚೇತನ ಪಾಸುದಾರರ ನವೀಕರಣ/ ಹೊಸ ಪಾಸು ಪಡೆಯುವ ವಿಶೇಷಚೇತನರು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ https://sevasinduservices.karnataka.gov.in ನಲ್ಲಿ ಸಲ್ಲಿಸುವುದು. ಅರ್ಜಿ ಸಲ್ಲಿಸುವಾಗ ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸ್‍ಪೋರ್ಟ್ ಅಳತೆಯ ಪೋಟೋ ಹಾಗೂ ಯುಡಿಐಡಿ/ ಗುರುತಿನ ಚೀಟಿಯನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಬೇಕಿದೆ. ಪಾಸುಗಳನ್ನು ಆಯಾಯ ತಾಲ್ಲೂಕಿನ ಘಟಕದಲ್ಲಿ ನವೀಕರಿಸಿ ಪಡೆಯಬಹುದಾಗಿದೆ. ಹೊಸದಾಗಿ ಪಾಸ್ ಪಡೆಯುವವರು ವಿಭಾಗೀಯ ಕಚೇರಿ ಪುತ್ತೂರಿನಲ್ಲಿ ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸ್‍ಪೋರ್ಟ್ ಅಳತೆಯ 02 ಪೋಟೋ, ಅಂಚೆ ಚೀಟಿ ಗಾತ್ರದ ಹಾಗೂ ಯು.ಡಿ.ಐ.ಡಿ/ ಗುರುತಿನ ಚೀಟಿಯ ಪ್ರತಿ ಮತ್ತು ಯು.ಡಿ.ಐ.ಡಿ/ ಗುರುತಿನ ಚೀಟಿಯ ಮೂಲ ಪ್ರತಿಯನ್ನು ಮಾನ್ಯತ ಅವಧಿಯನ್ನು ಪರಿಶೀಲನೆ ಮಾಡುವ ಸಲುವಾಗಿ ಪರಿಶೀಲನೆಗಾಗಿ ತೋರಿಸತಕ್ಕದ್ದು ಹಾಗೂ ರೂ.660 ಪಾವತಿ ಮಾಡಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ…

Read More