Author: kannadanewsnow57

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ಕೆಲವೊಂದು ಇಲಾಖೆ/ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಗೆ ಅರ್ಹ ಅವಲಂಬಿತರು ಯಾರು? ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ನಿಯಮ 2ರಲ್ಲಿನ “ಕುಟುಂಬ” (Family) ಅಂದರೆ, ಸರ್ಕಾರಿ ನೌಕರರ ಪತಿ ಅಥವಾ ಪತ್ನಿ b. ತಂದೆ ಮತ್ತು ತಾಯಿ (ಮಲತಾಯಿಯನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ -ಕುಟುಂಬ ಪಿಂಚಣಿ ರೂ. 8,500/- ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರಬಾರದು. C. ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರಬೇಕು ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡತೆ) 3. KASS ಯೋಜನೆಗೆ ಒಳಪಡದ ನೌಕರರ ವರ್ಗ ಸಾರ್ವಜನಿಕ ವಲಯದ (public sector…

Read More

ಬೆಂಗಳೂರು : ಗ್ರಾಮೀಣ ಭಾಗದ ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಾಮ ಪಂಚಾಯತಿಗಳಲ್ಲಿ ಜನನ, ಮರಣ ನೋಂದಣಿ ಸೇವೆ ಲಭ್ಯ. ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಸದುಪಯೋಗ ಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಜನನ, ಮರಣ, ನಿರ್ಜೀವ ಜನನನಗಳನ್ನು ನಿಮ್ಮ ಗ್ರಾಮಪಂಚಾಯಿತಿಯಲ್ಲೇ ನೋಂದಣಿ ಮಾಡಿಸುವುದು ಈಗ ಮತ್ತಷ್ಟು ಸುಲಭವಾಗಿದ್ದು, ಕೆಳಕಂಡ 9 ಸೇವೆಗಳು ಈಗ ಗ್ರಾಮಪಂಚಾಯಿತಿಯಲ್ಲೇ ಲಭ್ಯ. 1. ಜನನ ನೋಂದಣಿ 2. ಜನನ ಪ್ರಮಾಣ ತಿದ್ದುಪಡಿ 3.ಜನನ ಪ್ರಮಾಣ ಪತ್ರ ವಿತರಣೆ 4. ಮಗುವಿನ ಹೆಸರು ಸೇರ್ಪಡೆ 5.ಮರಣ ನೋಂದಣಿ 6.ಮರಣ ಪ್ರಮಾಣ ಪತ್ರ ತಿದ್ದುಪಡಿ 7. ಮರಣ ಪ್ರಮಾಣ ಪತ್ರ ವಿತರಣೆ 8. ನಿರ್ಜೀವ ಜನನ ನೋಂದಣಿ 9.ನಿರ್ಜೀವ ಜನನ ಪ್ರಮಾಣ ಪತ್ರ ವಿತರಣೆ

Read More

ಬೆಂಗಳೂರು : ರಾಜ್ಯ ಸಾರಿಗೆ ಇಲಾಖೆ ಇದೀಗ ವಾಹನ ಸವಾರರಿಗೆ ಮತ್ತೊಮ್ಮೆ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಮಾಲೀಕರಿಗೆ ಇದೀಗ ರಾಜ್ಯ ಸಾರಿಗೆ ಇಲಾಖೆಯು ಜನವರಿ 31 ರವರೆಗೆ ವಿಸ್ತರಿಸಿದೆ. ಜನವರಿ 31ರವರೆಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಇದುವರೆಗೂ ಆರು ಬಾರಿ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ನೀಡಿತ್ತು. ಇದೀಗ ಮತ್ತೊಮ್ಮೆ ಅವಕಾಶ ನೀಡಿದ್ದು, ಜನವರಿ 31 ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ರಾಜ್ಯ ಸಾರಿಗೆ ಇಲಾಖೆ ಗಡು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಮುಂದಿನ ಆದೇಶದವರೆಗೂ ವಾಹನ ಮಾಲೀಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಈ ಹಿಂದೆ ಆದೇಶ ನೀಡಿತು. ಕಳೆದ ಒಂದುವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಎಚ್ಎಸ್ಆರ್ಪಿ ನಂಬರ್ ಅಳವಡಿಕೆ ಮಾಡಲಾಗಿದೆ ಅಲ್ಲದೆ ಇನ್ನೂ 1.40 ಕೋಟಿ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಪ್ರಸಕ್ತ 2025 ರ ಅಂತಿಮ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪುರಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ. ಚುನಾವಣಾ ಆಯೋಗದ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 5.52 ಕೋಟಿ ಮಂದಿ ಮತದಾನದ ಹಕ್ಕು ಹೊಂದಿದ್ದು, ಈ ಪೈಕಿ 2.75 ಕೋಟಿ ಪುರುಷರು ಮತ್ತು 2.76 ಕೋಟಿ ಮಹಿಳೆಯರಿದ್ದಾರೆ. 31 ಜಿಲ್ಲೆಗಳ ಪೈಕಿ 26 ಜಿಲ್ಲೆಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು, ಕಲಬುರಗಿ, ಬೀದರ್, ಹಾವೇರಿ, ವಿಜಯಪುರದಲ್ಲಿ ಪುರುಷ ಮತದಾರರು ಹೆಚ್ಚಾಗಿದ್ದಾರೆ. ಹೊಸದಾಗಿ ಸೇರ್ಪಡೆಯಾದ ಪಟ್ಟಿಯಲ್ಲಿ 30,999 ಪುರುಷ ಮತದಾರರು, 72,754 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,03,776 ಮತದಾರರು ಮತದಾನದ ಹಕ್ಕು ಪಡೆದಿದ್ದಾರೆ. ಇನ್ನು 18-19 ವರ್ಷದ ಯುವಮತದಾರರ ಸಂಖ್ಯೆಯು 8,02,423 ರಷ್ಟು ಹೊಂದಿದೆ. ಕರಡು ಪಟ್ಟಿಗೆ ಹೋಲಿಸಿದರೆ ಪಟ್ಟಿಯಲ್ಲಿ 1,21,226 ಮತದಾರರು ಹೆಚ್ಚಳವಾಗಿದ್ದರೆ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರ…

Read More

ಸಾಗರ : ಭಾನುವಾರ ನಿಧನರಾದ ಹಿರಿಯ ಸಾಹಿತಿ ಡಾ.ನಾ. ಡಿಸೋಜ ಅವರ ಪಾರ್ಥಿವ ಶರೀರವನ್ನು ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಗರ ನಗರದಲ್ಲಿರುವ ಸ್ವಗ್ರಹಕ್ಕೆ ತರಲಾಗಿದ್ದು, ಇಂದು ಬೆಳಗ್ಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4 ಗಂಟೆ ಸುಮಾರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ನಾರ್ಬಟ್ ಡಿಸೋಜ ಹೆಸರಾಂತ ಸಾಹಿತಿಗಳು ಹಾಗೂ ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತರು. ಶಿವಮೊಗ್ಗ ಜಿಲ್ಲೆಯ ಇವರು ದಿನಾಂಕ 05-01-2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಇನ್ನೂ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Read More

ಬೆಂಗಳೂರು: ರಾಜ್ಯದ ಕೆ ಎಸ್ ಆರ್ ಟಿಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಅಧಿಕೃತವಾಗಿ ಸಿಎಂ ಸಿದ್ಧರಾಮಯ್ಯ ಅವರು ಈ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ವಿಧಾನಸೌಧದ, ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು “ಕೆ.ಎಸ್.ಆರ್.ಟಿ.ಸಿ ಆರೋಗ್ಯ” ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದಂತ ಅವರು, ಈ ಯೋಜನೆಯು ಉತ್ತಮವಾಗಿದ್ದು, ನೌಕರರು ಮತ್ತು ಅವರ ಅವಲಂಬಿತ ಕುಟಂಬದ ಸದಸ್ಯರುಗಳು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ನಮ್ಮ ಸರ್ಕಾರವು ಕೆ.ಎಸ್.‌ಆರ್.ಟಿ.ಸಿ ನೌಕರರಿಗೆ ಒಳ್ಳೆಯ ಕಾರ್ಯ ಮಾಡುತ್ತಿದೆ. ಶಕ್ತಿ ಯೋಜನೆಯು ಜಾರಿಯಾದ ನಂತರ ಲಿಂಗ ತಾರತಮ್ಮ ಹೋಗಲಾಡಿಸಿ, ಆರ್ಥಿಕವಾಗಿ ಮಹಿಳೆಯರನ್ನು ಸಬಲೀಕರಣಗೊಳಿಸಿದೆ. ವೈದ್ಯರನ್ನು ಉದ್ದೇಶಿಸಿ ಮಾತನಾಡಿದ ಮಾನ್ಯರು, ಈ ಯೋಜನೆಯ ಫಲನಾಭವಿಗಳನ್ನು ಯಾವುದೇ ಕಾರಣಕ್ಕೂ ತಿರಸ್ಕಾರ ಮನೋಭಾವದಿಂದ ನೋಡಬಾರದು, ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳಂತೆ ಪರಿಗಣಿಸುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ…

Read More

ಬೆಂಗಳೂರು : ರಾಜ್ಯದ ಸಾರ್ವಜನಿಕ ಆರೋಗ್ಯ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸುವುದನ್ನು ತಡೆಗಟ್ಟಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸಾರ್ವಜನಿಕ ಆರೋಗ್ಯ ಆಸ್ಪತ್ರೆಗಳಲ್ಲಿ ಅಗಿ ಅವಘಡಗಳು ಸಂಭವಿಸುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾವ ಸೂಚನೆಗಳ ಮಾರ್ಗಸೂಚಿಯು ಈ ಪತ್ರದೊಂದಿಗೆ ಲಗತ್ತಿಸಲಾಗಿದ್ದು ತಮ್ಮ ಜಿಲ್ಲೆಗಳಲ್ಲಿ ಬರುವ ಎಲ್ಲಾ ಆರೋಗ್ಯ ಕೇಂದ್ರಗಳಿಗೆ ಸದರಿ ಮಾರ್ಗಸೂಚಿಯನ್ನು ಪಾಲಿಸಿ ಅಗ್ನಿ ದುರಂತಗಳು ಸಂಭವಿಸದಂತೆ ಎಚ್ಚರ ವಹಿಸಲು ಸೂಚಿಸಿದೆ. `ಅಗ್ನಿ ಅವಘಡ’ ತಡೆಗೆ ಆರೋಗ್ಯ ಇಲಾಖೆ’ಯಿಂದ ಮಾರ್ಗಸೂಚಿ ಆಸ್ಪತ್ರೆಗಳಲ್ಲಿ ಬೆಂಕಿಯ ಘಟನೆಗಳು ಹೆಚ್ಚುತ್ತಿರುವ ಪ್ರವೃತ್ತಿಯಾಗಿರುವುದರಿಂದ, ಇದು ಗಂಭೀರವಾದ ಕಳವಳವನ್ನುಂಟುಮಾಡುತ್ತದೆ, ವಿಶೇಷವಾಗಿ ನವಜಾತ ಶಿಶುಗಳು, ಐಸಿಯು ರೋಗಿಗಳು ಮತ್ತು ವೃದ್ಧರಂತಹ ದುರ್ಬಲ ರೋಗಿಗಳಲ್ಲಿ ಗಮನಾರ್ಹವಾದ ಜೀವಹಾನಿಗೆ ಕಾರಣವಾಗಬಹುದು. ಇದು ರೋಗಿಗಳ ಪಾಲ್ಗೊಳ್ಳುವವರು, ಸಿಬ್ಬಂದಿಗಳು ಮತ್ತು ಆಸ್ಪತ್ರೆಯ ರಚನೆಗೆ ಗಮನಾರ್ಹ ಅಪಾಯಗಳನ್ನು ಉಂಟುಮಾಡುತ್ತದೆ. 2024 ರಲ್ಲಿ ಕಂಡುಬಂದಂತೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗಳು ಆಸ್ಪತ್ರೆಯ ಬೆಂಕಿಗೆ ಪ್ರಮುಖ ಕಾರಣವಾಗಿದೆ, ಇತರ ಪ್ರಾಥಮಿಕ ಕಾರಣಗಳಲ್ಲಿ ಅಡುಗೆಮನೆಯಲ್ಲಿ ಬೆಂಕಿ, ಸುಡುವ ವಸ್ತುಗಳು, ತಾಪನ ಉಪಕರಣಗಳು,…

Read More

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜೂನಿಯರ್ ಅಸೋಸಿಯೇಟ್ಸ್ (JA) ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 13,735 ಖಾಲಿ ಹುದ್ದೆಗಳು ಲಭ್ಯವಿವೆ. ಅಪ್ಲಿಕೇಶನ್ ಪ್ರಕ್ರಿಯೆಯು ಇಂದು ಡಿಸೆಂಬರ್ 17 ರಂದು ಪ್ರಾರಂಭವಾಗುತ್ತದೆ ಮತ್ತು ಜನವರಿ 7, 2025 ರವರೆಗೆ ಮುಂದುವರಿಯುತ್ತದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ (sbi.co.in) ಮೂಲಕ ನೋಂದಾಯಿಸಿಕೊಳ್ಳಬಹುದು. ಪ್ರಮುಖ ದಿನಾಂಕಗಳು ನೋಂದಣಿ ಪ್ರಾರಂಭ ದಿನಾಂಕ: ಡಿಸೆಂಬರ್ 17, 2024 ನೋಂದಣಿ ಅಂತಿಮ ದಿನಾಂಕ: ಜನವರಿ 7, 2025 ಪೂರ್ವಭಾವಿ ಪರೀಕ್ಷೆ: ಫೆಬ್ರವರಿ 2025 (ತಾತ್ಕಾಲಿಕ) ಮುಖ್ಯ ಪರೀಕ್ಷೆ: ಮಾರ್ಚ್ ಅಥವಾ ಏಪ್ರಿಲ್ 2025 (ತಾತ್ಕಾಲಿಕ) ಹೇಗೆ ಅನ್ವಯಿಸಬೇಕು ಅರ್ಜಿ ಶುಲ್ಕ ಸಾಮಾನ್ಯ/OBC/EWS ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವಾಗಿ ₹750 ಮರುಪಾವತಿಸಲಾಗದ ಮೊತ್ತವನ್ನು ಪಾವತಿಸುತ್ತಾರೆ, ಆದರೆ SC/ST/XS(ಮಾಜಿ ಸೈನಿಕರು)/DXS/PwD ಅಭ್ಯರ್ಥಿಗಳಿಗೆ ಅದೇ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಅರ್ಹತೆಯ ಮಾನದಂಡ ಶೈಕ್ಷಣಿಕ ಅರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ…

Read More

ಬೆಂಗಳೂರು: ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯ ನಿರ್ವಹಿಸಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ.  ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ನಡೆಸಲಾಯಿತು. ಆ ಸಭೆಯ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ. • ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತೀ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ. • ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ‌, • ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ.…

Read More

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಾಯ ಉಂಟಾಗದಂತೆ ಕ್ರಮ ವಹಿಸಲು ಮಹತ್ವದ ಸೂಚನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ದಿ.07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಕರೆ ನೀಡಿರುತ್ತಾರೆ. ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನೆರವಾಗುವುದು ಆಶಾ ಕಾರ್ಯಕರ್ತೆಯರ ಪಮುಖ ಜವಾಬ್ದಾರಿಯಾಗಿರುತ್ತದೆ ಎಂದಿದ್ದಾರೆ.…

Read More