Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾಹಿತಿ ನೀಡಿದ್ದು, ದಿನಾಂಕ 04-01-2025ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅವರ ಅಧ್ಯಕ್ಷತೆಯಲ್ಲಿ ಸಿಐಯುಟಿಯುಸಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿರುವ ಎಲ್ಲಾ ಸೌಲಭ್ಯದ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದಿದ್ದಾರೆ. ಆಶಾ ಕಾರ್ಯಕ್ರಮವು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಭಾಗವಾಗಿದೆ. ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿರುವುದರಿಂದ ನಿಯಮಾನುಸಾರ ಮಾರ್ಗಸೂಚಿಯಂತೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನಕ್ಕೆ ಒಳಪಟ್ಟಿರುತ್ತಾರೆ. ಎಐಯುಟಿಯುಸಿ ಸಂಘಟನೆಯ ಬೇಡಿಕೆಯಂತೆ ಇಲಾಖೆಯ ವತಿಯಿಂದ ಪ್ರತಿ ಮಾಹೆ ನಿರ್ದಿಷ್ಟ 15,000 ರೂಪಾಯಿಗಳನ್ನು ಪಾವತಿ ಮಾಡಲು ನಿಯಮಾನುಸಾರ ಮಾರ್ಗಸೂಚಿಯಂತೆ ಅವಕಾಶವಿರುವುದಿಲ್ಲ ಎಂಬುದಾಗಿ ಮನವರಿಕೆ ಮಾಡಿಕೊಡಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಆರೋಗ್ಯ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ಮೆರೆದಿದ್ದು, ಜನರಿಗೆ ಲಾಂಗು, ಮಚ್ಚ ತೋರಿಸಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬೆಂಗಳೂರಿನ ಪಾದರಾಯನಪುರದಲ್ಲಿ 10 ಕ್ಕೂ ಹೆಚ್ಚು ರೌಡಿಗಳ ಗ್ಯಾಂಗ್ ಜನರಿಗೆ ಲಾಂಗು, ಮಚ್ಚು ತೋರಿಸಿ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಲಾಂಗು, ಮಚ್ಚು ಹಿಡಿದು ಏರಿಯಾಗಳಲ್ಲಿ ಪುಡಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಸದ್ಯ ಪುಡಾರಿ ಗ್ಯಾಂಗ್ ನ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪುಡಿ ರೌಡಿಗಳನ್ನು ಹೆಡೆಮುರಿಕಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು, ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಕೆ ಎಸ್ ಆರ್ ಟಿಸಿ ಆರೋಗ್ಯ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ವೈದ್ಯಕೀಯ ಚಿಕಿತ್ಸೆಯ ನಿಬಂಧನೆಗಳು -1970 ರನ್ವಯ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ವಯ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ನಿಗಮದ ಅಧಿಕಾರಿಗಳು/ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರು ಸರ್ಕಾರದ ಮಾನ್ಯತೆ ಹೊಂದಿರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿ/ಹೊರ ರೋಗಿಯಾಗಿ ಪಡೆದ ವೈದ್ಯಕೀಯ ಚಿಕಿತ್ಸೆಯ ವೆಚ್ಚವನ್ನು CGHS 2014 ರ ದರಪಟ್ಟಿಯನ್ವಯ ಮರುಪಾವತಿ ಮಾಡಲಾಗುತ್ತಿದೆ. ಅಲ್ಲದೇ, ಅಧಿಕಾರಿಗಳು/ನೌಕರರು ಹಾಗೂ…
ಹೈದರಾಬಾದ್ : ನಟ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾದ ಫಂಕ್ಷನ್ ನಲ್ಲಿ ದುರಂತ ಸಂಭವಿಸಿದೆ. ‘ಗೇಮ್ ಚೇಂಜರ್’ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆ ಸ್ವಲ್ಪ ತಡವಾಗಿ ಬೆಳಕಿಗೆ ಬಂದಿದೆ. ರಾಜಾಜಿನಗರ ಬಳಿ ನಡೆದ ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಶನಿವಾರ ರಾಜಾಜಿನಗರದಲ್ಲಿ ನಡೆದ ‘ಗೇಮ್ ಚೇಂಜರ್’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಕಾಕಿನಾಡದ ಅರವಪಲ್ಲಿ ಮಣಿಕಂಠ ಮತ್ತು ತೊಕಡ ಚರಣ್ ಎಂಬ ಇಬ್ಬರು ಯುವಕರು ತೆರಳಿದ್ದರು. ಆದರೆ, ‘ಗೇಮ್ ಚೇಂಜರ್’ ಸಿನಿಮಾದ ಫಂಕ್ಷನ್ ಮುಗಿಸಿ ಕಾಕಿನಾಡ ಕಡೆಗೆ ಬರುತ್ತಿದ್ದಾಗ ಕಾರ್ಗಿಲ್ ಫ್ಯಾಕ್ಟರಿ ಬಳಿ ವ್ಯಾನ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಕಾಕಿನಾಡ ಮೂಲದ ಅರವಪಲ್ಲಿ ಮಣಿಕಂಠ ಹಾಗೂ ತೊಕಡ ಚರಣ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಣಿಕಂಠ ಸ್ಥಳದಲ್ಲೇ ಮೃತಪಟ್ಟರೆ, ಚರಣ್ ಕಾಕಿನಾಡ ಜಿಜಿಎಚ್ ತರುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಕೊಪ್ಪಳ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಜನವರಿ 6 ರ ಇಂದು ಕೊಪ್ಪಳ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿವೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ನೀಡಿರುವ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಕ್ಷಮೆಯಾಚಿಸಬೇಕು ಕೇಂದ್ರ ಸರ್ಕಾರ ಅವರ ರಾಜೀನಾಮೆ ಪಡೆಯುವಂತೆ ಒತ್ತಾಯಿಸಿ ಕೊಪ್ಪಳ ಬಂದ್ ಗೆ ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಇಂದಿನ ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸಂಘಟಕರು ಮನವಿ ಮಾಡಿದ್ದಾರೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಕೊಪ್ಪಳ ನಗರ ಬಂದ್ ಗೆ ಕರೆ ನೀಡಲಾಗಿದೆ. ಭದ್ರತೆಗಾಗಿ 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಕೊಪ್ಪಳ ನಗರದ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾದಿಗ, ಚಲವಾದಿ, ಮುಸ್ಲಿಂ, ಕ್ರಿಶ್ಚಿಯನ್, ಲಂಬಾಣಿ ಸಮಾಜ, ಲಿಂಗಾಯಿತ, ಹಾಲುಮತ, ವಾಲ್ಮೀಕಿ, ಭೋವಿ, ಭಜಂತ್ರಿ,…
ನವದೆಹಲಿ : ದೇಶದಾದ್ಯಂತ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗಿದ್ದು, ಈ ನಡುವೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ದೆಹಲಿ-ಎನ್‌ಸಿಆರ್ ರಾಜ್ಯಗಳಲ್ಲಿ ಕಳೆದ 2 ದಿನಗಳಿಂದ ತುಂಬಾ ದಟ್ಟವಾದ ಮಂಜು ಇದೆ. ಶೂನ್ಯ ಗೋಚರತೆಯಿಂದಾಗಿ, ಜನರು ವಾಹನ ಚಲಾಯಿಸಲು ತೊಂದರೆ ಎದುರಿಸುತ್ತಿದ್ದಾರೆ. ಹವಾಮಾನ ಇಲಾಖೆ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತದ ಪರಿಣಾಮ ನವರಿ 6 ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಹಿಮ ಬೀಳಲಿದೆ. ಇಂದು ಜನವರಿ 6 ಮತ್ತು ನಾಳೆ ಜನವರಿ 7 ರಂದು ಪಂಜಾಬ್, ಹರಿಯಾಣ, ಚಂಡೀಗಢದಲ್ಲಿ ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗಬಹುದು. ಜನವರಿ 6 ರಂದು ವಾಯುವ್ಯ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಚದುರಿದ ಮಳೆ/ಹಿಮ ಬೀಳಲಿದೆ. ಜನವರಿ 7 ಮತ್ತು…
ಪಾಟ್ನಾ : ಬಿಪಿಎಸ್‌ಸಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಾನ್ ಸೂರಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಪಾಟ್ನಾ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಬೆಳಗಿನ ಜಾವ 4 ಗಂಟೆಗೆ ಅವರನ್ನು ಬಲವಂತವಾಗಿ ಗಾಂಧಿ ಮೈದಾನದಿಂದ ಕರೆತಂದು ಏಮ್ಸ್‌ಗೆ ಕರೆದೊಯ್ಯಲಾಯಿತು ಎಂದು ವರದಿಯಾಗಿದೆ. ಕಿಶೋರ್ ಜನವರಿ 2 ಗುರುವಾರದಿಂದ ಆಮರಣ ಉಪವಾಸ ನಡೆಸುತ್ತಿದ್ದಾರೆ. ಬಿಹಾರ ಪೊಲೀಸರು ಆತನ ಆಮರಣಾಂತ ಉಪವಾಸದ ಸ್ಥಳವಾದ ಗಾಂಧಿ ಮೂರ್ತಿಯಿಂದ ಬೆಳಗಿನ ಜಾವ 4 ಗಂಟೆಗೆ ಬಂಧಿಸಿ ಆಂಬ್ಯುಲೆನ್ಸ್‌ನಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದರು. ಚುನಾವಣಾ ತಂತ್ರಗಾರ ಭಾನುವಾರ, ‘ಹೊಸದಾಗಿ ರೂಪುಗೊಂಡ ವೈಎಸ್‌ಎಸ್‌ನ 51 ಸದಸ್ಯರಲ್ಲಿ 42 ಮಂದಿ ಕಳೆದ ರಾತ್ರಿ ಚಳವಳಿಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ವೈಎಸ್‌ಎಸ್‌ನ ಎಲ್ಲಾ ಸದಸ್ಯರು ವಿವಿಧ ರಾಜಕೀಯ ಸಂಘಟನೆಗಳ ಭಾಗವಾಗಿದ್ದಾರೆ. ಆದರೆ ಅವರೆಲ್ಲರೂ ಯುವಕರು ಮತ್ತು ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಚಳುವಳಿಗೆ ಒಗ್ಗೂಡಿದ್ದಾರೆ. ವೈಎಸ್‌ಎಸ್ ಸಂಪೂರ್ಣ ರಾಜಕೀಯೇತರ ವೇದಿಕೆಯಾಗಿದೆ ಎಂದರು. ಅವರನ್ನು ಬೆಂಬಲಿಸಲು ಮಾತ್ರ ನಾನು ಇಲ್ಲಿದ್ದೇನೆ ಮತ್ತು ಈ ಆಮರಣಾಂತ ಉಪವಾಸ…
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜನವರಿ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಜನವರಿ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಮದುವೆ ಪ್ರಮಾಣ ಪತ್ರ ಪೋಷಕರ ಪಡಿತರ ಚೀಟಿ ಅಗತ್ಯ. ಪಡಿತರ ಚೀಟಿಗೆ…
ಬೆಂಗಳೂರು : ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆ ಎಸ್ ಆರ್ ಟಿ ಸಿ ಆರೋಗ್ಯ ಕಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌದದಲ್ಲಿ ಸಮ್ಮೆಳನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆ ಎಸ್ ಆರ್ ಟಿ ಸಿ ಆರೋಗ್ಯ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆ ಎಸ್ ಆರ್ ಟಿ ಸಿ ಆರೋಗ್ಯ” ಗೆ ಸನ್ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಮಾನ್ಯ ವೈದ್ಯಕೀಯ ಶಿಕ್ಷಣ…
ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ ಡಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಲೆವೆಲ್ 1 ಅಡಿಯಲ್ಲಿ ವಿವಿಧ ಹುದ್ದೆಗಳಿಗೆ 32,438 ಹುದ್ದೆಗಳನ್ನ ಭರ್ತಿ ಮಾಡುತ್ತಿದೆ. ಅರ್ಜಿ ಪ್ರಕ್ರಿಯೆಯು ಜನವರಿ 23, 2025 ರಂದು ಪ್ರಾರಂಭವಾಗುತ್ತದೆ ಮತ್ತು ಫೆಬ್ರವರಿ 22, 2025 ರಂದು ಕೊನೆಗೊಳ್ಳುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ಮಾನದಂಡಗಳನ್ನ ಪೂರೈಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಬೇಕು. RRB ಗ್ರೂಪ್ ಡಿ ನೇಮಕಾತಿ 2025 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಖಾಲಿ ಇರುವ 32,438 ಹುದ್ದೆಗಳ ವಿವರ ಇಲ್ಲಿದೆ. ಅರ್ಹತೆ : ಅಭ್ಯರ್ಥಿಗಳು 10ನೇ ತರಗತಿಯನ್ನ ಪೂರ್ಣಗೊಳಿಸಿರಬೇಕು ಅಥವಾ ಎನ್ಸಿವಿಟಿಯಿಂದ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ಪ್ರಮಾಣಪತ್ರ (NAC) ಹೊಂದಿರಬೇಕು. RRB ನಿಯಮಗಳ ಪ್ರಕಾರ ಸಡಿಲಿಕೆಯೊಂದಿಗೆ ಜುಲೈ 1, 2025 ರಂತೆ ವಯಸ್ಸಿನ ಮಿತಿಯನ್ನು 18 ರಿಂದ 36 ವರ್ಷಗಳ ನಡುವೆ ನಿಗದಿಪಡಿಸಲಾಗಿದೆ. ಆರ್ಆರ್ಬಿ ಗ್ರೂಪ್ ಡಿ ನೇಮಕಾತಿ 2025 : ಅರ್ಜಿ ಶುಲ್ಕ ಸಾಮಾನ್ಯ/ ಒಬಿಸಿ : 500 ರೂ (ಸಿಬಿಟಿ ಪರೀಕ್ಷೆಗೆ…













