Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. “ಪಿಎಮ್ ಸೂರ್ಯ ಘರ್ ಯೋಜನೆಗೆ ಈವರೆಗೆ 5.14 ಲಕ್ಷ ನೋಂದಣಿಯಾಗಿದ್ದು, ಈ ಪೈಕಿ ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್ಎನ್‌ಆರ್ ಇ ಪೋರ್ಟಲ್ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ,” ಎಂದು ಬೆಸ್ಕಾಂ ಎಂಡಿ ವಿವರಿಸಿದರು. “ರಾಜ್ಯಾದ್ಯಂತ ಮನೆಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಸಮರ್ಥ ನಾಯಕತ್ವದಲ್ಲಿ ಯೋಜನೆಯನ್ನು ಉತ್ತೇಜಿಸುವ ಗುರಿ ಹೊಂದಿದ್ದೇವೆ. ಈ ಮೂಲಕ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ…
ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ “ಶುಲ್ಕ ಮರುಪಾವತಿ” ಹಾಗೂ ‘’ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’’ಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 20ರ ವರೆಗೆ ಅವಧಿ ವಿಸ್ತರಿಸಲಾಗಿದೆ. ರಾಜ್ಯ ವಿದ್ಯಾರ್ಥಿವೇತನ ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050770005 ಅಥವಾ ಇ-ಮೇಲ್ ವಿಳಾಸ: bcwdhelpline@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಾಳೆ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಧುನಿಕ ಬೆಂಗಳೂರು ನಿರ್ಮಾಣಕ್ಕೆ ಅನೇಕ ಯೋಜನೆ ರೂಪಿಸಿದ್ದಾರೆ. ವಿಕಾಸಸೌಧ ನಿರ್ಮಾಣ, ಫ್ಲೈಓವರ್ ಗಳು, ಮೆಟ್ರೋ, ಐಟಿ ಬಿಟಿ ವಲಯಕ್ಕೆ ಉತ್ತೇಜನ ನೀಡಿದ್ದರು. ಜೊತೆಗೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತರುವ ಮೂಲಕ ಮರಳಿ ಮಕ್ಕಳು ಶಾಲೆಗೆ ಬರುವಂತೆ ಮಾಡಿದ್ದರು. ಯಶಸ್ವಿನಿ ಯೋಜನೆಯ ಮೂಲಕ ರೈತ ಸಮುದಾಯಕ್ಕೆ ಚಿಕಿತ್ಸೆ ಸೌಲಭ್ಯ ಕಲ್ಪಿಸಿದ್ದರು. ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದ ವೇಳೆ ನೀರಾವರಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ…
ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅಂತಿಮ ದರ್ಶನ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಎಸ್.ಎಂ.ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಅಂತಿಮ ದರ್ಶನ ಪಡೆದಿದ್ದಾರೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಗ್ವಾಲಿಯರ್ : ಮಧ್ಯಪ್ರದೇಶದ ಗ್ವಾಲಿಯರ್ ನಿಂದ ಶಾಕಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೆಲಸ ನೀಡುವ ಸಂಬಂಧ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಎಂಜಿನಿಯರ್‌ಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿರುವ ಘಟನೆ ನಡೆದಿದೆ. ಕೆಲಸ ಕೊಡಿಸುವುದಾಗಿ ಮಹಿಳೆಯೊಂದಿಗೆ ಎಂಜಿನಿಯರ್ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ನಂತರ, ಕೋಪಗೊಂಡ ಸ್ಥಳೀಯ ಜನರು ಮತ್ತು ಮಹಿಳೆಯ ಕುಟುಂಬ ಸದಸ್ಯರು ಇಂಜಿನಿಯರ್ ಅನ್ನು ಹಿಡಿದು ಚಪ್ಪಲಿಯಿಂದ ಥಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಈ ಘಟನೆ ಭಾನುವಾರ ನಡೆದಿದ್ದು, ಅದರ ವಿಡಿಯೋ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿ ಪಿಡಬ್ಲ್ಯೂಡಿ ನೌಕರನನ್ನು ದಾತಿಯಾ ನಿವಾಸಿ ರಾಮಸ್ವರೂಪ್ ಕುಶ್ವಾಹ ಎಂದು ಗುರುತಿಸಲಾಗಿದ್ದು, ಇವರು ದಾಬ್ರಾದಲ್ಲಿ ಸಬ್ ಇಂಜಿನಿಯರ್ ಆಗಿ ನೇಮಕಗೊಂಡಿದ್ದಾರೆ. ಉದ್ಯೋಗದ ಹೆಸರಿನಲ್ಲಿ ವಂಚಿಸಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಕೆಲಸ ಕೊಡಿಸುವ ನೆಪದಲ್ಲಿ ಕೋಣೆಗೆ ಕರೆದೊಯ್ದು ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. https://twitter.com/i/status/1866005011995766969 ಇಂಜಿನಿಯರ್ ಕೆಲಸ ಕೊಡಿಸುವುದಾಗಿ ಭರವಸೆ…
ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಎಸ್.ಎಂ.ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು, ಎಲ್ಲಾ ವರ್ಗದ ಜನರು ಮೆಚ್ಚಿಕೊಂಡಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಕೆಲಸ ಮಾಡಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಅವರು ನೀಡಿದ ಗಮನಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳಲಾಗುತ್ತದೆ. ಶ್ರೀ ಎಸ್.ಎಂ.ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರಾಗಿದ್ದರು ಎಂದು ಮೋದಿ ಟ್ವೀಟ್ ಮಾಡಿದ್ದಾರೆ. https://twitter.com/narendramodi/status/1866320843225325858 ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.…
ನವದೆಹಲಿ : ನೀವು ಸಹ Jio, Airtel, Vi ಅಥವಾ BSNL ಬಳಕೆದಾರರಾಗಿದ್ದೀರಾ ಮತ್ತು ವಂಚನೆ ಸಂದೇಶಗಳಿಂದ ತೊಂದರೆಗೊಳಗಾಗಿದ್ದೀರಾ? ಹೌದು ಎಂದಾದರೆ ಈಗ ಚಿಂತಿಸಲು ಏನೂ ಇಲ್ಲ. ವಾಸ್ತವವಾಗಿ, ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಅಂದರೆ TRAI ನಾಳೆಯಿಂದ ಅಂದರೆ ಡಿಸೆಂಬರ್ 11 ರಿಂದ ಹೊಸ ನಿಯಮವನ್ನು ಜಾರಿಗೆ ತರಲಿದೆ. TRAI ಇತ್ತೀಚೆಗೆ ‘ಸಂದೇಶ ಟ್ರೇಸಬಿಲಿಟಿ’ ನಿಯಮವನ್ನು ಪರಿಚಯಿಸಿದೆ, ಇದು ನಾಳೆಯಿಂದ ಡಿಸೆಂಬರ್ 11 ರಿಂದ ಜಾರಿಗೆ ಬರಲಿದೆ. ಈ ನಿಯಮವು ಡಿಸೆಂಬರ್ 1, 2024 ರಿಂದ ಜಾರಿಗೆ ಬರಲಿದೆ ಎಂದು ಮೊದಲು ಹೇಳಲಾಗಿತ್ತು. ಆದರೆ ಈ ಬಗ್ಗೆ ಮಾಹಿತಿ ನೀಡುತ್ತಿರುವ ಟ್ರಾಯ್ ತನ್ನ ಗಡುವನ್ನು ವಿಸ್ತರಿಸಿರುವುದಾಗಿ ತಿಳಿಸಿದೆ. ನಕಲಿ ಮತ್ತು ಅನಧಿಕೃತ ಸಂದೇಶಗಳನ್ನು ತಡೆಯಲು ಈ ನಿಯಮವನ್ನು ವಿಶೇಷವಾಗಿ ಮಾಡಲಾಗಿದೆ. ಈ ಹೊಸ ನಿಯಮ ಏನು ಗೊತ್ತಾ? ಡಿಸೆಂಬರ್ 11, 2024 ರಿಂದ ಅಂತಹ ಯಾವುದೇ ಸಂದೇಶವನ್ನು ಸ್ವೀಕರಿಸಲಾಗುವುದಿಲ್ಲ ಎಂದು TRAI ಹೇಳಿದೆ, ಇದು ಟೆಲಿಮಾರ್ಕೆಟರ್‌ಗಳು ಸೂಚಿಸಿದ ಸಂಖ್ಯೆಯ ಸರಣಿಯನ್ನು…
ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಮದ್ದೂರಿನ ಸೋಮನಳ್ಳಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಬೆಳಗಾವಿ :ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗದ ಸಭೆ ಮುಂದೂಡಿಕೆ ಮಾಡಲಾಗಿದೆ. ಬೆಳಗಾವಿಯ ಶೂನ್ಯ ರೆಸಾರ್ಟ್ನಲ್ಲಿ ಇಂದು ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಔತಣಕೂಟವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಡಿ.ಕೆ.ಶಿವಕುಮಾರ್, ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ ಪ್ರಗತಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಗೂ ಸೂಕ್ತ ಮಾರ್ಗದರ್ಶನ ನೀಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಆಗಮಿಸಿದ ನಟಿ ರಮ್ಯಾ ಅವರು ಎಸ್.ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ತಡರಾತ್ರಿ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಸಾವನ್ನಪ್ಪಿರುವುಗಿ ಘೋಷಿಸಿದ್ದಾರೆ. ಮಾಜಿ ಸಿಎಂ ಎಸ್.…