Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಹಲವಾರು ಸೌಲಭ್ಯಗಳನ್ನು ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ನೀವು ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿದ್ದು, ಗುರುತಿನ ಚೀಟಿ ಹೊಂದಿದ್ದಲ್ಲಿ ಮಂಡಳಿಯು ನೀಡುವ ಹಲವಾರು ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು. ನೀವು ಮಂಡಳಿಯಲ್ಲಿ ನೀಡಿರುವ ಗುರುತಿನ ಚೀಟಿ ಹೊಂದಿದ್ದೀರಾ? : ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು * ಪಿಂಚಣಿ ಸೌಲಭ್ಯ * ಕುಟುಂಬ ಪಿಂಚಣಿ ಸೌಲಭ್ಯ * ದುರ್ಬಲತೆ ಪಿಂಚಣಿ * ಟೂಲ್ ಕಿಟ್ ಸೌಲಭ್ಯ * ಹೆರಿಗೆ ಸಹಾಯಧನ ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ * ಶೈಕ್ಷಣಿಕ ಸಹಾಯಧನ * ವೈದ್ಯಕೀಯ ಸಹಾಯಧನ * ಅಪಘಾತ ಪರಿಹಾರ * ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ * ಮದುವೆ ಸಹಾಯಧನ * ತಾಯಿ ಮಗು ಸಹಾಯಹಸ್ತ
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಜನವರಿ.7ರಿಂದ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಾಯ ಉಂಟಾಗದಂತೆ ಕ್ರಮ ವಹಿಸಲು ಮಹತ್ವದ ಸೂಚನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ದಿ.07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಕರೆ ನೀಡಿರುತ್ತಾರೆ. ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನೆರವಾಗುವುದು ಆಶಾ ಕಾರ್ಯಕರ್ತೆಯರ ಪಮುಖ ಜವಾಬ್ದಾರಿಯಾಗಿರುತ್ತದೆ ಎಂದಿದ್ದಾರೆ.…
ಬೆಂಗಳೂರು : ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಯ ಯಾವುದೇ ಬಸ್ ಪಾಸ್ ದರವನ್ನು ಹೆಚ್ಚಳ ಮಾಡುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಪ್ರಮಾಣದರ ಶೇ.15 ರಷ್ಟು ಏರಿಕೆ ಬೆನ್ನಲ್ಲೇ ಬಸ್ ಪಾಸ್ ದರವೂ ಏರಿಕೆಯಾಗಲಿದೆ ಎನ್ನಲಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ ಎಂದರು. ಬಿಎಂಟಿಸಿ, ಕೆಎಸ್ ಆರ್ ಟಿಸಿ ಸೇರಿ ರಾಜ್ಯದ ನಾಲ್ಕೂ ನಿಗಮದ ಯಾವುದೇ ವಿಧದ ಪಾಸ್ ಗಳ ದರ ಹೆಚ್ಚಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿಲ್ಲ. ಸದ್ಯಕ್ಕೆ ಪಾಸ್ ದರ ಹೆಚ್ಚಳ ಮಾಡುವ ಚಿಂತನೆಯೂ ಇಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಲವಾಗುತ್ತಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣ 15 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಒಂದೆರಡು ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ 10.6, ಚಿಕ್ಕಮಗಳೂರು ಜಿಲ್ಲೆಯಲ್ಲಿ 10.2, ಚಿಂತಾಮಣಿ 10.8, ಬೀದರ್ ಹಾಗೂ ದಾವಣೆಗೆರೆಯಲ್ಲಿ ತಲಾ 11, ಬೆಳಗಾವಿಯಲ್ಲಿ 11.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಾಡಿಕೆಗಿಂತ 2 ರಿಂದ 3 ಡಿ.ಸೆ.ನಷ್ಟು ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ 11 ಡಿ.ಸೆ. ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ.
ಬೆಂಗಳೂರು : ಬಹುರನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಜಾತಿಗಣತಿ ವರದಿ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ. ಜನವರಿ 9 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಬರೋಬ್ಬರಿ 169 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಿರುವ ವರದಿಯಲ್ಲಿರುವ ಅಂಶಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸದಸ್ಯರೊಂದಿಗೆ ಚರ್ಚಿಸಲಿದ್ದಾರೆ. ಜಾತಿ ಗಣತಿ ವರದಿಯನ್ನು ಸದನದಲ್ಲಿ ಮಂಡಿಸಬೇಕೇ? ಅಥವಾ ಬೇಡವೇ ಎಂಬ ಬಗ್ಗೆಯೂ ಸಂಪುಟ ಸಭೆಯಲ್ಲೇ ತೀರ್ಮಾನಿಸಲಾಗುವುದು. ಜಾತಿ ಗಣತಿ ಸಲುವಾಗಿ 2014ರಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕಾಂತರಾಜು ನೇಮಕ ಮಾಡಿದ್ದು, 2023ರಲ್ಲಿ ಪೂರ್ಣ ವರದಿಯನ್ನು ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಸರ್ಕಾರಕ್ಕೆ ಸಲ್ಲಿಸಿದ್ದರು. ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ:ಸಿ.ಎಂ.ಘೋಷಣೆ ನಾನು ಜಾತಿ ಜನಗಣತಿ ಪರವಾಗಿ ಇದ್ದೇವೆ. ಕಾಂತರಾಜ ಅವರ ವರದಿಯನ್ನು ಮುಂದಿನ ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚಿಸುವ ಉದ್ದೇಶ ಕೂಡ ಇದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ. ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ(6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. 2023-24 ನೇ ಸಾಲಿನಲ್ಲಿ ತೇರ್ಗಡೆಯಾದ 527273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್ ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025…
ಬೆಂಗಳೂರು : ದಿನಾಂಕ 01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ, ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ಶಿಕ್ಷಕರುಗಳನ್ನು ಹಳೆಯ ಡಿಫೈನ್ಡ್ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 1. ದಾವಣಗೆರೆ ಜಿಲ್ಲೆಯ 123 ಸಹ ಶಿಕ್ಷಕರುಗಳು ಹಿಂದಿನ ಡಿಫೆನ್ಸ್ ಪಿಂಚಣಿಗೊಳಪಡಲು ಅಭಿಮತ ಸಲ್ಲಿಸಿರುವ ಪಟ್ಟಿಯನ್ನು ಒದಗಿಸಿದ್ದು ಸದರಿ ಪಟ್ಟಿಯಲ್ಲಿನ ಕ್ರಮಸಂಖ್ಯೆ 3 ರೂಪ ಕೆ ಎಂ. 700ರೇಖಾ ಹೆಚ್.ಎಸ್. 851 ಶ್ರೀ ನಾಗಪ್ಪ ಪಿ, ನಿವೃತ್ತ ದೈಹಿಕ ಶಿಕ್ಷಕರು), 8 ಶ್ರೀಮತಿ ಸಿದ್ದಮ್ಮ ಕಂಚೀಕೆರೆ: 12 ದಿವಂಗತ ಶ್ರೀ ಅಶೋಕ ಕುಮಾರ್ ಹೆಚ್.ಬಿ) ನಮೂನೆ 2ರಲ್ಲಿನ ಶ್ರೀ ನವಚತನ ಸಿ.ಪಿ ಸೇರಿ ಒಟ್ಟು ನೌಕರರಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿರುವುದಿಲ್ಲ. 2. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 148 ಪ್ರಾಥಮಿಕ ಶಾಲಾ ಸಹ ಶಿಕ್ಷಕರುಗಳು ಹಿಂದಿನ ಡಿಪೈ ಪಿಂಚಣಿಗೊಳಪಡಲು ಅಭಿಮತ ಸಲ್ಲಿಸಿರುತ್ತಾರೆ ತಮ್ಮ ಕಚೇರಿಯಿಂದ ಒದಗಿಸಿರುವ ಪಟ್ಟಿಯಲ್ಲಿನ ಕ್ರಮಸಂಖ್ಯೆ 42(ಶ್ರೀ ಮಂಜುನಾಯ್ಕ,…
ದಾವಣಗೆರೆ : ದೇಶ ನನಗೇನು ಕೊಡ್ತು ಅಲ್ಲ, ನಾನು ದೇಶಕ್ಕಾಗಿ ನನ್ನ ಕರ್ತವ್ಯವೇನು ಎಂದು ಯುವಕರು ಅರಿತುಕೊಳ್ಳಬೇಕು. ಅನೇಕ ಶಕ್ತಿಗಳು ಧರ್ಮ ಹಾಗೂ ಜಾತಿ ಹೆಸರಿನಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿವೆ. ಯಾವ ಧರ್ಮಕ್ಕೂ ವಿಶೇಷ ಸ್ಥಾನಮಾನ ಇಲ್ಲ, ಎಲ್ಲರಿಗೂ ಸಂವಿಧಾನ ಒಂದೇ, ಆದ್ದರಿಂದ ಸಂವಿಧಾನ ರಕ್ಷಿಸುವ ಕೆಲಸ ಯುವಕರು ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಯುವಜನತೆಗೆ ಕರೆ ನೀಡಿದರು. ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಬಾಪೂಜಿ ಎಂಬಿಎ ಮೈದಾನದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಯುವ ಜನೋತ್ಸವವನ್ನು ನಗಾರಿ ಬಾರಿಸಿ ಹಾಗೂ ಹೊಂಬಾಳೆ ಬಿಡಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಇಂದು ಎಲ್ಲರೂ ಶಿಕ್ಷಣ ಪಡೆದು ಉದ್ಯೋಗ ಗಳಿಸಿ, ಗೌರವ ಮತ್ತು ಸಮಾನತೆಯಿಂದ ಬಾಳಲು ಸಾಧ್ಯವಾಗಿದೆ. ಸಂವಿಧಾನ ಇದ್ದುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಸಂವಿಧಾನ ರಕ್ಷಿಸಿ, ಉಳಿಸುವುದು ನಮ್ಮಲ್ಲರ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವ…
ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ. ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ(6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. 2023-24 ನೇ ಸಾಲಿನಲ್ಲಿ ತೇರ್ಗಡೆಯಾದ 527273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್ ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಜನವರಿ 5) ಬೆಳಿಗ್ಗೆ ದೆಹಲಿ-ಮೀರತ್ ನಮೋ ಭಾರತ್ ಕಾರಿಡಾರ್‌ನ ಸಾಹಿಬಾಬಾದ್ ಮತ್ತು ನ್ಯೂ ಅಶೋಕ್ ನಗರ ನಡುವಿನ 13 ಕಿಮೀ ಉದ್ದದ ಹೆಚ್ಚುವರಿ ವಿಭಾಗವನ್ನು ಉದ್ಘಾಟಿಸಿದರು. ಪ್ರಧಾನಿ ಮೋದಿ ಅವರು ಹಿಂಡನ್ ವಾಯುನೆಲೆಯಿಂದ ಸಾಹಿಬಾಬಾದ್‌ಗೆ ಬೆಳಗ್ಗೆ 11.30ಕ್ಕೆ ತಲುಪಿದರು. ಸಾಹಿಬಾಬಾದ್ ಆರ್‌ಆರ್‌ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್‌ಆರ್‌ಟಿಎಸ್ ನಿಲ್ದಾಣದವರೆಗೆ ಪ್ರಧಾನಿ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸಿದರು. ಈ ಸಮಯದಲ್ಲಿ ಅವರು ಅನೇಕ ಮಕ್ಕಳನ್ನು ಭೇಟಿಯಾದರು. ಈ ಮಕ್ಕಳು ಪ್ರಧಾನಿ ಮೋದಿಯವರಿಗೆ ಅನೇಕ ಉಡುಗೊರೆಗಳನ್ನು ನೀಡಿದರು, ಅದರಲ್ಲಿ ವರ್ಣಚಿತ್ರಗಳು ಇತ್ಯಾದಿಗಳು ಸೇರಿವೆ. https://twitter.com/i/status/1875792056737788412 ಈ ಯೋಜನೆಯ ಉದ್ಘಾಟನೆಯೊಂದಿಗೆ ದೆಹಲಿ ಮತ್ತು ಮೀರತ್ ನಡುವಿನ ಪ್ರಯಾಣದ ಪ್ರಕ್ರಿಯೆಯು ಸುಲಭವಾಗುತ್ತದೆ. ಇದು ಪ್ರಯಾಣದ ಸಮಯವನ್ನು ಕಡಿಮೆ ಮಾಡುವುದಲ್ಲದೆ ಸುರಕ್ಷತೆ, ವಿಶ್ವಾಸಾರ್ಹತೆ, ಹೆಚ್ಚಿನ ವೇಗ ಮತ್ತು ಆರಾಮದಾಯಕ ಪ್ರಯಾಣದ ಅನುಭವವನ್ನು ನೀಡುತ್ತದೆ. https://twitter.com/i/status/1875791435620086009 ಈಗ ದೆಹಲಿಯಿಂದ ಮೀರತ್‌ಗೆ ಪ್ರಯಾಣ 40 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಇನ್ನು ಮುಂದೆ,…













