Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಳವಾಗುತ್ತಿದ್ದು, ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮಳೆ ಮೋಡ ಇಲ್ಲದ ಕಾರಣ ಶುಭ್ರಾಕಾಶ ನಿರ್ಮಾಣ, ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 5 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ ಹಾಗೂ ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಗಾಳಿ ಬೀಸುತ್ತಿರುವುದರಿಂದ ಉತ್ತರ ಒಳನಾಡಿನ ಬೀದರ್, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 2 ದಿನ ಶೀತ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳೀಸಿದೆ. ಬೆಂಗಳೂರಿನಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಾಡಿಕೆಗಿಂತ 2 ರಿಂದ 3 ಡಿ.ಸೆ.ನಷ್ಟು ಕಡಿಮೆಯಾಗಿದೆ. ಶನಿವಾರ ಬೆಂಗಳೂರು ನಗರದಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ 11 ಡಿ.ಸೆ. ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ.

Read More

ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಟಿ ಅಂಜನಾ ರೆಹಮಾನ್( ನಿಧನರಾಗಿದ್ದಾರೆ. ತನ್ನ ವೃತ್ತಿಜೀವನದಲ್ಲಿ ಸುಮಾರು 300 ಚಲನಚಿತ್ರಗಳನ್ನು ಮಾಡಿರುವ ನಟಿ ಶನಿವಾರ ಮುಂಜಾನೆ 1:10 ಕ್ಕೆ 60 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ನಟಿ ಅಂಜನಾ ಬಂಗಬಂಧು ಶೇಖ್ ಮುಜೀಬ್ ವೈದ್ಯಕೀಯ ವಿಶ್ವವಿದ್ಯಾಲಯ(ಬಿಎಸ್‌ಎಂಎಂಯು) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿತ್ರ ಕಲಾವಿದರ ಸಂಘದ ಅಧ್ಯಕ್ಷೆ ಮಿಶಾ ಸೌದಾಗೋರ್ ಅವರು ಅಂಜನಾ ನಿಧನದ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಅಂಜನಾ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿದ್ದು, ಔಷಧಿಗಳು ಕೆಲಸ ಮಾಡುವುದನ್ನು ನಿಲ್ಲಿಸುವ ಹಂತಕ್ಕೆ ಆರೋಗ್ಯ ಸ್ತಿತಿ ಹದಗೆಟ್ಟಿದೆ. ನಂತರ ರಕ್ತದ ಸೋಂಕು ಇದೆ ಎಂದು ತಿಳಿದುಬಂದಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಆರೋಗ್ಯ ಸ್ಥಿತಿ ಸುಧಾರಿಸಿಲ್ಲ. ಹೀಗಾಗಿ ಬುಧವಾರ ಬಿಎಸ್‌ಎಂಎಂಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅವರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Read More

ಬೆಂಗಳೂರು : ರಸ್ತೆ ದಾಟುತ್ತಿದ್ದ ವೇಳೆ ಲಾರಿಯೊಂದು ಪಾದಚಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಬಳಿಯ ಟೋಲ್ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿಯಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಬಾಬು ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದು. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣದರವನ್ನು ಶನಿವಾರ ಮಧ್ಯ ರಾತ್ರಿಯಿಂದಲೇ ಜಾರಿಗೆ ಬರುವಂತೆ ಏರಿಕೆ ಮಾಡಲಾಗುತ್ತಿದೆ ಎಂಬುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶದಲ್ಲಿ ತಿಳಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2015ರಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ 2020ರಲ್ಲಿ ಪಯಾಣದ ದರ ಪರಿಷ್ಕರಣೆ ಮಾಡಲಾಗಿರುತ್ತದೆ. ಪ್ರಯಾಣ ದರ ಪರಿಷ್ಕರಣೆಗಾಗಿ ನಿಗಮದ ಸಿಬ್ಬಂದಿ ವೇತನ ವೆಚ್ಚ ಇಂಧನ ವೆಚ್ಚ ಹಾಗೂ ನಿರ್ವಹಣಾ ವೆಚ್ಚವನ್ನು ಪರಿಗಣಿಸಲಾಗುತ್ತಿದೆ. ಪುಸ್ತುತ ರೂ.9.56 ಕೋಟಿ ಮೊತ್ತವನ್ನು ಹೆಚ್ಚುವರಿಯಾಗಿ ವೆಚ್ಚ ಮಾಡುತ್ತಿದ್ದು, ಸಿಬ್ಬಂದಿ ವೆಚ್ಚ ಸೇರಿ ವಾರ್ಷಿಕವಾಗಿ do.3650.00 ಕೋಟಿ ನಿಗಮಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ, ಶೇ.15ರಷ್ಟು ಪ್ರಯಾಣದ ದರ ಹೆಚ್ಚಳ ಮಾಡಲು ಸಭೆಯು ನಿರ್ಣಯಿಸಿ, ಅದರಂತೆ ಪುಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದಿದ್ದಾರೆ. ವ್ಯವಸ್ಥಾಪಕ ನಿರ್ದೆಶಕರು, ಕರ್ನಾಟಕ ರಾಜ್ಯ…

Read More

ಬೆಂಗಳೂರು : ರಾಜ್ಯದ ರೈತರಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಾಗುತ್ತಿರುವುದರಿಂದ ಹಗಲು ವೇಳೆಯೇ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಎಲ್) ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವರು, “ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಇಲ್ಲದಂತೆ ನೋಡಿಕೊಳ್ಳಬೇಕು”, ಎಂದು ಸೂಚಿಸಿದರು. ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನ ನಡೆಸಿದ ಅವರು, ಕಳೆದ ಬೇಸಿಗೆಯಲ್ಲಿ ಸರಾಸರಿ 3,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೂಲಕ ಉಷ್ಣ ವಿದ್ಯುತ್ ಸ್ಥಾವರಗಳು ದಾಖಲೆ ನಿರ್ಮಿಸಿದ್ದವು.ಈ ಬಾರಿ…

Read More

ಬೆಂಗಳೂರು : ರಾಜ್ಯ ಸಾರಿಗೆ ಇಲಾಖೆ ಇದೀಗ ವಾಹನ ಸವಾರರಿಗೆ ಮತ್ತೊಮ್ಮೆ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಮಾಲೀಕರಿಗೆ ಇದೀಗ ರಾಜ್ಯ ಸಾರಿಗೆ ಇಲಾಖೆಯು ಜನವರಿ 31 ರವರೆಗೆ ವಿಸ್ತರಿಸಿದೆ. ಜನವರಿ 31ರವರೆಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಇದುವರೆಗೂ ಆರು ಬಾರಿ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ನೀಡಿತ್ತು. ಇದೀಗ ಮತ್ತೊಮ್ಮೆ ಅವಕಾಶ ನೀಡಿದ್ದು, ಜನವರಿ 31 ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ರಾಜ್ಯ ಸಾರಿಗೆ ಇಲಾಖೆ ಗಡು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಮುಂದಿನ ಆದೇಶದವರೆಗೂ ವಾಹನ ಮಾಲೀಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಈ ಹಿಂದೆ ಆದೇಶ ನೀಡಿತು. ಕಳೆದ ಒಂದುವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಎಚ್ಎಸ್ಆರ್ಪಿ ನಂಬರ್ ಅಳವಡಿಕೆ ಮಾಡಲಾಗಿದೆ ಅಲ್ಲದೆ ಇನ್ನೂ 1.40 ಕೋಟಿ…

Read More

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಎಲ್) ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವರು, “ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಇಲ್ಲದಂತೆ ನೋಡಿಕೊಳ್ಳಬೇಕು”, ಎಂದು ಸೂಚಿಸಿದರು. ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನ ನಡೆಸಿದ ಅವರು, ಕಳೆದ ಬೇಸಿಗೆಯಲ್ಲಿ ಸರಾಸರಿ 3,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೂಲಕ ಉಷ್ಣ ವಿದ್ಯುತ್ ಸ್ಥಾವರಗಳು ದಾಖಲೆ ನಿರ್ಮಿಸಿದ್ದವು.ಈ ಬಾರಿ ಅದಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಿ ಹೊಸ ದಾಖಲೆ ಸ್ಥಾಪಿಸಬೇಕು. ಅದಕ್ಕಾಗಿ ಎಲ್ಲಾ…

Read More

ದಾವಣಗೆರೆ : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು 6 ರಂದು ನಡೆಯಲಿದ್ದು ನಗರದ ಎಂ.ಬಿ.ಎ. ಮೈದಾನದ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮ ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಮತ್ತು ಯುವ ಪ್ರಶಸ್ತಿ ಪುರಷ್ಕøತರು ಭಾಗವಹಿಸುವರು. 7 ಸ್ಪರ್ಧೆಗಳು; ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ 7 ಸ್ಪರ್ಧೆಗಳಿದ್ದು ಪ್ರತ್ಯೇಕವಾಗಿ ನಡೆಯಲಿವೆ. ಜಾನಪದ ನೃತ್ಯ ಸ್ಪರ್ಧೆಯು ಬಿಐಇಟಿ ಕಾಲೇಜಿನ ಎಸ್.ಎಸ್.ಎಂ. ಸಾಂಸ್ಕøತಿಕ ಸಭಾಂಗಣ, ಜಾನಪದ ಗೀತೆ ಸ್ಪರ್ಧೆಯು ಬಾಪೂಜಿ ಎಂಬಿಎ ಕಾಲೇಜು ಸಭಾಂಗಣ, ವಿಜ್ಞಾನ ವಸ್ತು ಪ್ರದರ್ಶನ ಎಂಬಿಎ ಮೈದಾನದಲ್ಲಿನ ಎಸ್.ಎಸ್. ಪಬ್ಲಿಕ್ ಸ್ಕೂಲ್, ಕವನ ರಚನೆ ಎಂಬಿಎ ಕಾಲೇಜಿನ ಕೊಠಡಿ 1, ಕಥೆ ಬರೆಯುವುದು ಇಲ್ಲಿನ ಕೊಠಡಿ 2 ರಲ್ಲಿ ಹಾಗೂ ಚಿತ್ರಕಲೆ ಸ್ಪರ್ಧೆ ಮತ್ತು…

Read More

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 5 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಪಡಿತರ ಚೀಟಿದಾರರ ಖಾತೆಗೆ ನೇರ ನಗದು ವರ್ಗಾವಣೆ ಸಂಬಂಧಿಸಿದಂತೆ, ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿಸಿಕೊಳ್ಳಬೇಕು ಹಾಗೂ ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಶಾಖೆಗಳಿಗೆ ಹಾಗೂ ಸ್ಥಳೀಯ ಆಹಾರ ನಿರೀಕ್ಷರನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು ಎಂದು ನ್ಯಾಮತಿ ತಹಶೀಲ್ದಾರ್ ತಿಳಿಸಿದ್ದಾರೆ.

Read More

ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ಯುವನಿಧಿ’ ಯೋಜನೆಯಲ್ಲಿ 2022-23 ಮತ್ತು 2023-24 ನೇ ಸಾಲಿನಲ್ಲಿ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ದಿ: 06-01-2025 ರಿಂದ 20-01-2025 ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಹೆಸರು ನೋಂದಾಯಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪದವೀಧರರಿಗೆ ಪ್ರತಿ ತಿಂಗಳು ರೂ.3000/- ಹಾಗೂ ಡಿಪ್ಲೊಮಾ ಪದವೀಧರರಿಗೆ ರೂ.1500 ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನ ಪೂರೈಸಿ ಹೆಸರನ್ನು ನೋಂದಾಯಿಸಿಕೊAಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ನಂತರ ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಹೆಯಾನ ತಾನು ನಿರುದ್ಯೋಗಿಯೆಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆAದು ಹಾಗೂ ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಸ್ವಯಂ ಘೋಷಣೆ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಮುಂದಿನ ಕಂತು ಪಾವತಿಸಲಾಗುವುದು.…

Read More