Author: kannadanewsnow57

ಬೆಂಗಳೂರು : ಅನುಕಂಪದ ಆಧಾರದ ಮೇಲೆ ನೇಮಕಾತಿ ಪ್ರಸ್ತಾವನೆಗೆ ಸಂಬಂಧಿಸಿದಂತೆ ಚೆಕ್ ಲೀಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಅಭ್ಯರ್ಥಿಯು ಮೃತ ಸರ್ಕಾರಿ ನೌಕರನ ಮಗಳಾಗಿದ್ದಲ್ಲಿ ಅಥವಾ ಸಹೋದರ / ಸಹೋದರಿ ಇದ್ದಲ್ಲಿ ಅವಿವಾಹಿತರಾಗಿರುವ ಬಗ್ಗೆ (ನಿಯಮ 3(2) ರನ್ವಯ ಸಂಬಂಧಿಸಿದ ತಹಶೀಲ್ದಾರರಿಂದ ನೀಡಲಾದ ಪ್ರಮಾಣ ಪತ್ರ ಲಗತ್ತಿಸುವುದು.

Read More

ಬೆಂಗಳೂರು : ಸಂಸ್ಥೆಯ ಬಸ್‌ಗಳಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಸಂಭವಿಸಿದಾಗ ಅನುಸರಿಸಬೇಕಾದ ಕ್ರಮಗಳ ಕುರಿತು ಕರ್ನಾಟಕ ಸಾರಿಗೆ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ. ಸಂಸ್ಥೆಯ ಬಸ್ಸುಗಳಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಸಂಭವಿಸಿದಾಗ ಅಗ್ನಿನಂದಕಗಳ ಉಪಯೋಗದ ಬಗ್ಗೆ ಎಲ್ಲಾ ಸಿಬ್ಬಂದಿಗಳಿಗೆ ಹೆಚ್ಚು ಹೆಚ್ಚು ತರಬೇತಿ ನೀಡುವುದು. ಸಂಸ್ಥೆಯ ವಾಹನಗಳ/ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಕೆಳಕಂಡ ಕ್ರಮಗಳನ್ನು ಅನುಸರಿಸುವುದು ಅಗತ್ಯವಾಗಿರುತ್ತದೆ. 1. ಎಲ್ಲಾ ಪ್ರತಿಷ್ಠಿತ ರಾತ್ರಿ ಸಾರಿಗೆಯ ವಾಹನಗಳಲ್ಲಿ 05 ಲೀಟರ್‌ನ 02 ಅಗ್ನಿನಂದಕಗಳು, ಇತರೆ ವಾಹನಗಳಲ್ಲಿ ಅವಶ್ಯ ಅಗ್ನಿ ನಂದಕಗಳು ಸುಸ್ಥಿತಿಯಲ್ಲಿ ಇರುವುದನ್ನು ಖಾತರಿಪಡಿಸಿಕೊಂಡು ಕಾರ್ಯಾಚರಣೆ ಮೇಲೆ ಕಳುಹಿಸುವುದು. 2. ಪ್ರತಿಷ್ಠಿತ ವಾಹನಗಳಲ್ಲಿ (Fire Detection & Suppression System), FAPS (Fire Alarm & Protection System) ಹಾಗೂ ಸದರಿ ಉಪಕರಣಗಳು ಸದಾ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಹಾಗೂ ಈ ಬಗ್ಗೆ ಚಾಲನಾ ಸಿಬ್ಬಂದಿಗಳಿಗೆ ಅವುಗಳ ಕಾರ್ಯನಿರ್ವಹಣೆ ಬಗ್ಗೆ ತಿಳುವಳಿಕೆ ಮೂಡಿಸುವುದು. 3. FDAS (Fire Detection & Alarm System)…

Read More

ಬೆಂಗಳೂರು : ಅನುಕಂಪದ ಆಧಾರದ ಮೇಲೆ ನೇಮಕಾತಿ ಪ್ರಸ್ತಾವನೆಗೆ ಸಂಬಂಧಿಸಿದಂತೆ ಚೆಕ್ ಲೀಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಅಭ್ಯರ್ಥಿಯು ಮೃತ ಸರ್ಕಾರಿ ನೌಕರನ ಮಗಳಾಗಿದ್ದಲ್ಲಿ ಅಥವಾ ಸಹೋದರ / ಸಹೋದರಿ ಇದ್ದಲ್ಲಿ ಅವಿವಾಹಿತರಾಗಿರುವ ಬಗ್ಗೆ (ನಿಯಮ 3(2) ರನ್ವಯ ಸಂಬಂಧಿಸಿದ ತಹಶೀಲ್ದಾರರಿಂದ ನೀಡಲಾದ ಪ್ರಮಾಣ ಪತ್ರ ಲಗತ್ತಿಸುವುದು.

Read More

ಮಂಡ್ಯ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಇನ್ನೋವಾ ಕಾರು ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಇನ್ನೋವಾ ಕಾರು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಹುಣಸೂರು ಮೂಲದ ಚಂದ್ರಶೇಖರ್ ಸಜೀವ ದಹವಾಗಿದ್ದಾರೆ. ಕಾರಿನಿಂದ ಹೊರಬಾರಲಾಗದೇ ಚಾಲಕ ಚಂದ್ರಶೇಖರ್ ಸಜೀವ ದಹನವಾಗಿದ್ದಾರೆ. ಸದ್ಯ ಚಂದ್ರಶೇಖರ್ ಶವವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ. ಶ್ರೀರಂಗಪಟ್ಟಣ ಟೌನ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು :  01ನೇ ನವೆಂಬರ್ 2025ರ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಮಾನ್ಯ ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 01ನೇ ನವೆಂಬರ್ 2025ರ ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಮಾನ್ಯ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ದಿನಾಂಕ: 17.09.2025 ರಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್‌ಟ್‌ನ ವಿವಿಧ ಯೋಜನೆಯಡಿಯಲ್ಲಿ ನೊಂದಾಯಿತಗೊಂಡಿರುವ, ಖಾಸಗಿ ಆಸ್ಪತ್ರೆಗಳನ್ನು “ಭಾವಿತ ನೊಂದಾವಣಿ” ಎಂದು ಪರಿಗಣಿಸಿರುವುದರಿಂದ 186 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆಗೊಳಿಸಲಾಗಿರುತ್ತದೆ. ಮುಂದುವರೆದು, ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯಗಳು ಹಾಗೂ ಇತರೆ ಮಾನದಂಡಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಪರಿಶೀಲಿಸಿಕೊಂಡು, ಆಸ್ಪತ್ರೆಗಳೊಂದಿಗೆ ಸೂಕ್ತ ಒಪ್ಪಂದ (MoU) ಮಾಡಿಕೊಳ್ಳುವ ಷರತ್ತಿಗೊಳಪಟ್ಟು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸಿರುವ ಅನುಬಂಧದಲ್ಲಿನ 70 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆಗೊಳಿಸಲಾಗಿದೆ. ಸದರಿ ಅಧಿಸೂಚನೆಯನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆರ್ 2020, ದಿನಾಂಕ:02.04.2025 ರಲ್ಲಿ ನೀಡಿರುವ ಅಧಿಕಾರ ಪ್ರತ್ಯಾಯೋಜನೆಯ ಮೇರೆಗೆ ಹೊರಡಿಸಲಾಗಿದೆ.

Read More

ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಶಾಲಾ ಸಮವಸ್ತ್ರ ಧರಿಸಿದ ವಿದ್ಯಾರ್ಥಿನಿಯರು ವೈನ್ ಶಾಪ್ ಗೆ ಹೋಗಿ ಮದ್ಯ ಖರೀದಿಸಿದ್ದಾರೆ.ಇದಕ್ಕೆ ಸಂಬಂಧಿಸಿದ ವಿಡಿಯೋ ಪ್ರಸ್ತುತ ವೈರಲ್ ಆಗುತ್ತಿದೆ. ನೈನ್ ಪುರ್ ಪ್ರದೇಶದ ಸರ್ಕಾರಿ ಮದ್ಯದ ಅಂಗಡಿಯಲ್ಲಿ ನಡೆದ ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ. ವಿಡಿಯೋದಲ್ಲಿ, ಸಮವಸ್ತ್ರ ಧರಿಸಿದ ವಿದ್ಯಾರ್ಥಿನಿಯರು ಮುಖವನ್ನು ಸ್ಕಾರ್ಫ್ ನಿಂದ ಮುಚ್ಚಿಕೊಂಡು ವೈನ್ ಶಾಪ್ ಒಳಗೆ ಬಂದರು. ಅವರು ಕೌಂಟರ್ ಗೆ ಹೋಗಿ, ಮದ್ಯ ಖರೀದಿಸಿ ಹೊರಟುಹೋದರು. ಅಂಗಡಿ ವ್ಯವಸ್ಥಾಪಕರು ಸಹ ಮದ್ಯವನ್ನು ವಿದ್ಯಾರ್ಥಿಗಳಿಗಾಗಿ ಎಂದು ನೋಡದೆ ಮಾರಾಟ ಮಾಡಿರುವುದು ಆಶ್ಚರ್ಯಕರವಾಗಿದೆ. ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಅಧಿಕಾರಿಗಳು ತಕ್ಷಣ ಪ್ರತಿಕ್ರಿಯಿಸಿದರು. ಸ್ಥಳೀಯ ಪೊಲೀಸರು ಸ್ಥಳಕ್ಕೆ ಹೋಗಿ ಅಂಗಡಿಯನ್ನು ಪರಿಶೀಲಿಸಿದರು. ಅವರು ಸಿಸಿಟಿವಿ ವಿಡಿಯೋ ಫ್ರೇಮ್ ಮೂಲಕ ಪರೀಕ್ಷಿಸಿದರು ಮತ್ತು ವಿದ್ಯಾರ್ಥಿನಿಯರಿಗೆ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ದೃಢಪಡಿಸಿದರು. ಇದು ಅಕ್ರಮ ಎಂದು ಕಂಡುಬಂದಿದೆ. ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ, ವಿವರವಾದ…

Read More

ಶಿವಮೊಗ್ಗ : ಸರ್ಕಾರವು ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿ 200 ಹೊಸ ವಿದ್ಯಾರ್ಥಿನಿಲಯಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಶೀಘ್ರದಲ್ಲಿ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಅವರು ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯಿಂದ ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ  ಶಿವಮೊಗ್ಗ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ಯೋಜನೆ, ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.  ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅನುದಾನದಿಂದ ನಿರ್ಮಿಸಲಾದ ಹಾಸ್ಟೆಲ್  ಕಟ್ಟಡಕ್ಕೆ ನಿಗಧಿತ ಸಂಖ್ಯೆಯ ವಿದ್ಯಾರ್ಥಿಗಳ ಕೊರತೆಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. ಅನೇಕ ವರ್ಷಗಳಿಂದ ಪಾಳುಬಿದ್ದಿದ್ದ ಕಟ್ಟಡವನ್ನು ಇತರೆ ಹಿಂದುಳಿದ ವರ್ಗಗಳ ಇಲಾಖೆಯು ನಿಯಮಾನುಸಾರ ವಶಕ್ಕೆ ಪಡೆದು, ಅಭಿವೃದ್ಧಿಪಡಿಸಿ, ಅದನ್ನು ಸದುಪಯೋಗಪಡಿಸಿಕೊಳ್ಳಲಾಗುತ್ತಿದೆ.…

Read More

ನವದೆಹಲಿ : ದೇಶದ ಲಕ್ಷಾಂತರ ಬ್ಯಾಂಕ್ ಗ್ರಾಹಕರಿಗೆ ಅತ್ಯಂತ ಮುಖ್ಯವಾದ ಬ್ಯಾಂಕಿಂಗ್ ವಲಯಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯವು ಒಂದು ಪ್ರಮುಖ ಘೋಷಣೆಯನ್ನು ಮಾಡಿದೆ. ನವೆಂಬರ್ 1, 2025 ರಿಂದ ಜಾರಿಗೆ ಬರಲಿರುವ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಕಾಯ್ದೆ, 2025 ರ ಅಡಿಯಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರುವುದಾಗಿ ಸಚಿವಾಲಯ ಘೋಷಿಸಿದೆ. ಈ ಹೊಸ ನಿಬಂಧನೆಗಳು ನಿಮ್ಮ ಬ್ಯಾಂಕ್ ಖಾತೆಗಳು, ಲಾಕರ್ಗಳು ಮತ್ತು ಸುರಕ್ಷಿತ ಕಸ್ಟಡಿಯಲ್ಲಿರುವ ಸ್ವತ್ತುಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಈಗ, ಗ್ರಾಹಕರು ತಮ್ಮ ಹಣ ಮತ್ತು ಸ್ವತ್ತುಗಳ ಮೇಲೆ ಹೆಚ್ಚಿನ ನಿಯಂತ್ರಣ ಮತ್ತು ನಮ್ಯತೆಯನ್ನು ಹೊಂದಿರುತ್ತಾರೆ. ನವೆಂಬರ್ 1 ರಿಂದ ಏನು ಬದಲಾಗಲಿದೆ? ಇಲ್ಲಿಯವರೆಗೆ, ಬ್ಯಾಂಕ್ ಖಾತೆಗಳು ಅಥವಾ ಲಾಕರ್ಗಳು ಒಂದು ಅಥವಾ ಎರಡು ನಾಮಿನಿಗಳ ಆಯ್ಕೆಯನ್ನು ಮಾತ್ರ ಹೊಂದಿದ್ದವು. ಆದಾಗ್ಯೂ, ಹೊಸ ನಿಯಮಗಳ ಅಡಿಯಲ್ಲಿ, ಗ್ರಾಹಕರು ಈಗ ಏಕಕಾಲದಲ್ಲಿ ಅಥವಾ ಅನುಕ್ರಮವಾಗಿ ನಾಲ್ಕು ನಾಮಿನಿಗಳನ್ನು ನಾಮನಿರ್ದೇಶನ ಮಾಡಲು ಸಾಧ್ಯವಾಗುತ್ತದೆ. ಇದರರ್ಥ ನಿಮ್ಮ ಬ್ಯಾಂಕ್ ಖಾತೆ ಅಥವಾ ಲಾಕರ್ನಲ್ಲಿ…

Read More

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತಿತಿರ ಧರ್ಮಜ ಉತ್ತಪ್ಪ ಅವರು ತಿಳಿಸಿದ್ದಾರೆ.   ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅರ್ಹರಿಗೆ ಬಿಪಿಎಲ್‍ನಿಂದ ಎಪಿಎಲ್‍ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ ಇಲಾಖೆ ಅಥವಾ  ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೆದಾರರಿಗೆ ಮನವಿ ಸಲ್ಲಿಸುವಂತಾಗಬೇಕು. ಇದರಿಂದ ಪರಿಶೀಲಿಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಿದ್ದಾರೆ. ಆ ನಿಟ್ಟಿನಲ್ಲಿ ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರು ನಿರ್ದೇಶನ ನೀಡಿದರು. ಅನ್ನಭಾಗ್ಯ ಯೋಜನೆಯಡಿ ಪ್ರತೀ ಫಲಾನುಭವಿಗೆ 10 ಕೆ.ಜಿ. ಅಕ್ಕಿ ವಿತರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ…

Read More