Author: kannadanewsnow57

ಬೆಂಗಳೂರು: ವಿಶ್ವ ಬ್ರೈಲ್ ದಿನಾಚರಣೆಯಂದು ದೃಷ್ಟಿದೋಷವುಳ್ಳ ವಿಕಲಚೇತನರ ಸರ್ಕಾರಿ ನೌಕರರಿಗೆ ದಿನಾಂಕ 04-01-2025ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ನಿರ್ದೇಶಕರು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆರವರ ಪುಸ್ತಾವನೆಯಲ್ಲಿ ಪ್ರತಿ ವರ್ಷ ದಿವಂಗತ ಲೂಯಿ ಬೈಲ್ ರವರ ಜನ್ಮ ದಿನದ ಅಂಗವಾಗಿ ಜನವರಿ 04ರಂದು ನಡೆಯುವ ವಿಶ್ವ ಬ್ರೆಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ದೃಷ್ಟಿದೋಷವುಳ್ಳ ವಿಕಲಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಒದಗಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ರೌಂಡ್, ಬೆಂಗಳೂರು ಇವರು ಕೋರಿದ್ದು, ಅದರಂತೆ ದಿನಾಂಕ: 04.01.2025 ರಂದು ದಿವಂಗತ ಲೂಯಿ ಬೈಲ್ ಅವರ ಜನ್ಮ ದಿನದ ಅಂಗವಾಗಿ ನಡೆಯುವ ವಿಶ್ವ ಬೈಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಅಂಧ ಸರ್ಕಾರಿ ನೌಕರರಿಗೆ ಒಂದು ದಿನ ವಿಶೇಷ…

Read More

ನವದೆಹಲಿ : ಉದ್ಯೋಗಿ ಪಿಂಚಣಿ ಯೋಜನೆ (ಇಪಿಎಸ್) ಅಡಿಯಲ್ಲಿ ಪಿಂಚಣಿ ಪಡೆಯುವ ಜನರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ಉ, ಇನ್ಮುಂದೆ ಇಪಿಎಸ್ ಅಡಿಯಲ್ಲಿ ಬರುವ ಪಿಂಚಣಿದಾರರು ಭಾರತದ ಯಾವುದೇ ಬ್ಯಾಂಕ್ ಶಾಖೆಯಿಂದ ಪಿಂಚಣಿ ಹಿಂಪಡೆಯಲು ಸಾಧ್ಯವಾಗುತ್ತದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ನೌಕರರ ಪಿಂಚಣಿ ಯೋಜನೆ, 1995 ಗಾಗಿ ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆ (CPPS) ಪ್ರಸ್ತಾವನೆಯನ್ನು ಅನುಮೋದಿಸಿದೆ. CPPS ರಾಷ್ಟ್ರೀಯ ಮಟ್ಟದ ಕೇಂದ್ರೀಕೃತ ವ್ಯವಸ್ಥೆಯಾಗಿದ್ದು, ಇದು ಭಾರತದಲ್ಲಿನ ಯಾವುದೇ ಬ್ಯಾಂಕ್ ಅಥವಾ ಶಾಖೆಯ ಮೂಲಕ ಪಿಂಚಣಿ ಪಾವತಿಯನ್ನು ಅನುಮತಿಸುತ್ತದೆ. ಸೆಪ್ಟೆಂಬರ್ 4, 2024 ರಂದು ಪತ್ರಿಕಾ ಮಾಹಿತಿ ಬ್ಯೂರೋ ಹೊರಡಿಸಿದ ಪತ್ರಿಕಾ ಹೇಳಿಕೆಯ ಪ್ರಕಾರ, ಈ ವ್ಯವಸ್ಥೆಯು ಇಪಿಎಸ್ ಪಿಂಚಣಿದಾರರಿಗೆ ಜನವರಿ 1, 2025 ರಿಂದ ಭಾರತದ ಯಾವುದೇ ಬ್ಯಾಂಕ್, ಶಾಖೆ ಅಥವಾ ಸ್ಥಳದಿಂದ ಪಿಂಚಣಿ ಪಡೆಯಲು ಅನುಕೂಲವಾಗುತ್ತದೆ. ಯಾರು ಪ್ರಯೋಜನ ಪಡೆಯುತ್ತಾರೆ 78 ಲಕ್ಷಕ್ಕೂ ಹೆಚ್ಚು ಇಪಿಎಸ್ ಪಿಂಚಣಿದಾರರು ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯಿಂದ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.…

Read More

ರಾಯಚೂರು : ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕ್ ನಲ್ಲಿ ನಾಯಿ ಮೃತದೇಹ ಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಕುಡಿಯುವ ನೀರು ಪೂರೈಕೆ ಟ್ಯಾಂಕ್ ನಲ್ಲಿ ನಾಯಿಯೊಂದು ಸತ್ತು ಬಿದ್ದಿರುವುದು ಪತ್ತೆಯಾಗಿದ್ದು, ಇದೇ ನೀರನ್ನು ಮೂರು ದಿನಗಳಿಂದ ಪೂರೈಕೆ ಮಾಡಿರುವ ಹಿನ್ನೆಲೆಯಲ್ಲಿ ತಾಲೂಕಿನ 17 ಗ್ರಾಮಗಳ ಜನರಲ್ಲಿ ಆತಂಕ ಮನೆ ಮಾಡಿದೆ. ನೀರು ಕುಡಿದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ವಿವಿಧ ಗ್ರಾಮಗಳ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಮ್ಮ ಯಾತ್ರಿ ಆಪ್ ನಲ್ಲಿ ಆಟೋ ಬುಕ್ ಮಾಡಿದ್ದ ವೇಳೆ ಕುಡಿದ ನಶೆಯಲ್ಲಿ ನಿಗದಿತ ಸ್ಥಳಕ್ಕೆ ತೆರಳದೆ ಆಟೋ ಚಾಲಕ ಬೇರೆ ಸ್ಥಳಕ್ಕೆ ತೆರಳಿದ್ದ ಸಂದರ್ಭ ಭಯ ಭೀತಾರಾದಂತಹ ಮಹಿಳೆ ಆಟೋದಿಂದ ಜಿಗಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ. ಹೌದು. ಬೆಂಗಳೂರಲ್ಲಿ ಮಹಿಳೆಯ ಜೊತೆಗೆ ಆಟೋ ಚಾಲಕ ಕಿರಿಕ್ ಮಾಡಿಕೊಂಡಿದ್ದು, ಆಟೋ ಚಾಲಕನ ಕಿರುಕುಳಕ್ಕೆ ಮಹಿಳೆ ಭಯ ಭೀತಾರಾಗಿದ್ದಾರೆ. ನಮ್ಮ ಯಾತ್ರೆ ಆಪ್ ನಲ್ಲಿ ಆಟೋವನ್ನು ಮಹಿಳೆ ಬುಕ್ ಮಾಡಿದ್ದಾರೆ. ನಿಗದಿದ್ದ ಸ್ಥಳಕ್ಕೆ ಹೋಗದೆ ಆಟೋ ಚಾಲಕ ಬೇರೆ ಕಡೆ ಹೋಗಿದ್ದಾನೆ. ಕುಡಿದ ನಶೆಯಲ್ಲಿ ಮಹಿಳೆಯ ಜೊತೆ ಕಿರಿಕ್ ಮಾಡಿದ್ದಾನೆ. ಈ ವೇಳೆ ಗಾಡಿ ನಿಲ್ಲಿಸಲ್ಲ ಜಿಗಿದು ಹೋಗು ಎಂದು ಚಾಲಕ ಹೇಳಿದಾಗ, ಅನಿವಾರ್ಯವಾಗಿ ಮಹಿಳೆ ಚಲಿಸುತ್ತಿದ್ದ ಆಟೋದಿಂದ ಜಿಗಿದಿದ್ದಾಳೆ. ಹೊರಮಾವಿನಿಂದ ಥಣಿಸಂದ್ರಕ್ಕೆ ಮಹಿಳೆ ಆಟೋ ಬುಕ್ ಮಾಡಿದ್ದರು. ಆದರೆ ಚಾಲಕ ಹೆಬ್ಬಾಳದತ್ತ ಆಟೋ ತಿರುಗಿಸಿದ್ದಾನೆ ಎಂದು ಮಹಿಳೆಯ ಆರೋಪಿಸಿದ್ದರು.ಇದೀಗ ಆಟೋ ಚಾಲಕನನ್ನು…

Read More

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಬೋಧನಾ ಕಾರ್ಯಕ್ಕೆ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್ ಲೈನ್ ಮೂಲಕ ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಕೌನ್ಸೆಲಿಂಗ್ ಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಜನವರಿ- ಫೆಬ್ರವರಿಯಲ್ಲಿ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಪ್ರಾಧ್ಯಾಪಕರಿಗೆ ಹಂಚಿಕೆಯಾಗಿ ಉಳಿಕೆಯಾಗುವ ಕಾರ್ಯಭಾರಕ್ಕೆ ಅನುಕೂಲವಾಗಿ ನೇಮಕ ಮಾಡುವಂತೆ ಸೂಚನೆ ನೀಡಲಾಗಿದೆ. ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜನವರಿ 3ರಿಂದ 8ರವರೆಗೆ ಅರ್ಜಿ ಸಲ್ಲಿಸಬಹುದು. ಜನವರಿ 9ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ತಿದ್ದುಪಡಿಗೆ ಜನವರಿ 10 ಮತ್ತು 11ರ ವರೆಗೆ ಅವಕಾಶವಿರುತ್ತದೆ. ಜನವರಿ 13ರಂದು ಪಟ್ಟಿಯ ಅನ್ವಯ ಕಾಲೇಜು ಆಯ್ಕೆಯ ಕೌನ್ಸಿಲಿಂಗ್ ನಡೆಸಲಿದ್ದು, ಜನವರಿ 30ರಂದು ಕೌನ್ಸೆಲಿಂಗ್ ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಗೆ…

Read More

ಮಡಿಕೇರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮದ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ‘ಗೃಹ ಆರೋಗ್ಯ ಕಾರ್ಯಕ್ರಮ’ದ ಬಗ್ಗೆ ಮಾಹಿತಿಯನ್ನು ನೀಡಿದರು. 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಮನೆ ಮನೆಗೆ ತೆರಳಿ ಸಾಂಕ್ರಾಮಿಕ ವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆ ಮಾಡಲಾಗುತ್ತದೆ. ಯೋಜನೆಯಡಿಯಲ್ಲಿ ಎಲ್ಲಾ ಸಾರ್ವಜನಿಕರ ಆರೋಗ್ಯ ಮಟ್ಟ ಸುಧಾರಿಸುವ ಮತ್ತು ಸಾಂಕ್ರಾಮಿಕ ವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿ ಹೊಂದಿದೆ. ಕೊಡಗಿನಲ್ಲಿ ಜನವರಿ 6 ರಿಂದ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಜನತೆಯ ಮನೆ ಮನೆ ಬಾಗಿಲಿಗೆ ಆರೋಗ್ಯ ಸೇವೆ ಸಲ್ಲಿಸುವುದು ರಾಜ್ಯ ಸರ್ಕಾರದ ಯೋಜನೆಯಾಗಿದೆ. ಸಮುದಾಯ ಆರೋಗ್ಯ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತರನ್ನು ಒಳಗೊಂಡ 150…

Read More

ಬೆಂಗಳೂರು : ಕೆಎಎಸ್ ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ. ಮುಂದಿನ ಹತ್ತು ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ. ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ. ಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ಅಧಿಕಾರಿಗಳು ಬದ್ಧತೆ ತೋರಿಸಬೇಕು. ಅಂಬೇಡ್ಕರ್ ಅವರ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದರು. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀನಿ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿ ಆಹಾರ, ಶಿಕ್ಷಣ, ಮಾಹಿತಿ ಹಕ್ಕುಗಳನ್ನು ಕಡ್ಡಾಯ ಮಾಡುವ ಮೂಲಕ…

Read More

2024-25ನೇ ಸಾಲಿನಿಂದ ಕೇಂದ್ರ ಪುರಸ್ಕøತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗುವುದು. ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಲ್ಲಿಯೂ ಫೆಸಿಲಿಟೇಷನ್ ಕೇಂದ್ರಗಳನ್ನು ತೆರೆದು ಇ-ದೃಢೀಕರಣ ಪಡೆಯಲಾಗುತ್ತಿದೆ. ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ಕಡ್ಡಾಯವಾಗಿ ಇ-ಕೆವೈಸಿ ಧೃಡೀಕರಣ ನೊಂದಣಿ ಮಾಡಿಸಲು ಕೋರಿದೆ. ಇಲ್ಲದವಾದಲ್ಲಿ ಕೇಂದ್ರ ಸರ್ಕಾರದಿಂದ ಬರುವ ಶೇ.60 ರಷ್ಟು ವಿದ್ಯಾರ್ಥಿವೇತನ ಮಂಜೂರಾಗುವುದಿಲ್ಲ ಎಂದು ಹೊಳಲ್ಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಬ್ರಾಹ್ಮಣ ಯುವತಿಯರಿಗೆ ಸಿಹಿಸುದ್ದಿ ನೀಡಿದ್ದು, ಅರ್ಚಕ, ಪುರೋಹಿತರನ್ನು ಮದುವೆಯಾಗುವ ಬ್ರಾಹ್ಮಣ ಯುವತಿಯರಿಗೆ 3 ಲಕ್ಷ ಪ್ರೋತ್ಸಾಹಧನ ನೀಡಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಅರುಂಧತಿ ಯೋಜನೆಯಡಿ ಬಡ ಬ್ರಾಹ್ಮಣ ಹುಡುಗಿಯ ಮದುವೆ ಸ೦ದರ್ಭದಲ್ಲಿ ₹25 ಸಾವಿರ ಪ್ರೋತ್ಸಾಹ ಧನ ಹಾಗೂ ಮೈತ್ರೇಯಿ ಯೋಜನೆಯಡಿ ಅರ್ಚಕರು ಮತ್ತು ಪುರೋಹಿತರನ್ನು ವಿವಾಹವಾಗುವ ಬ್ರಾಹ್ಮಣ ಯುವತಿಯರಿಗೆ ವರ್ಷಕ್ಕೆ ₹1 ಲಕ್ಷದಂತೆ ಒಟ್ಟು 3 ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಚಕರು ಹಾಗೂ ಪುರೋಹಿತರನ್ನು ವಿವಾಹ ಆಗಲು ಯುವತಿಯರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿಯೂ ಮೈತ್ರಿ ಯೋಜನೆ ಜಾರಿಗೆ ತರಲಾಗಿದೆ. ಅರ್ಜಿ ಸಲ್ಲಿಸುವುದ ಹೇಗೆ? ಕರ್ನಾಟಕದ ಅರುಂಧತಿ ಯೋಜನೆ / ಮೈತ್ರಿ ಯೋಜನೆಗೆ ಆನ್ಲೈನ್ ಅರ್ಜಿ ಆಹ್ವಾನಿಸುತ್ತದೆ. ನೋಂದಣಿ ನಮೂನೆಗಳನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ (https://ksbdb.karnataka.gov.in/english) ಲಭ್ಯ. ಮೈತ್ರಿ ಯೋಜನೆ ಅಥವಾ ಅರುಂಧತಿ ಯೋಜನೆಗಾಗಿ ನೋಂದಣಿ ಮಾಡಲು ಹೆಡರ್ನಲ್ಲಿರುವ “ಸೈನ್ ಇನ್”…

Read More

ತುಮಕೂರು: ಸರ್ಕಾರಿ ಆಸ್ಪತ್ರೆಯಲ್ಲಿ ಚುಚ್ಚು ಮದ್ದು ಹಾಕಿಸಿದ್ದ ಎರಡೂವರೆ ತಿಂಗಳ ಗಂಡು ಮಗು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಭಕ್ತರಹಳ್ಳಿಯಲ್ಲಿ ನಡೆದಿದೆ. ಭಕ್ತರಹಳ್ಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಚುಚ್ಚುಮದ್ದು ಹಾಕಿಸಿದ್ದ ಎರಡೂವರೆ ತಿಂಗಳ ಗಂಡು ಮಗು ಶುಕ್ರವಾರ ಬೆಳಗಿನ ಜಾವ ಮೃತಪಟ್ಟಿದೆ. ಮಗು ಸಾವಿಗೆ ಚುಚ್ಚುಮದ್ದು ನೀಡಿದ್ದೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಸಿಂಗೋನಹಳ್ಳಿ ಗ್ರಾಮದ ಚೈತ್ರ ಮತ್ತು ಮುರಳಿ ದಂಪತಿಯ ಎರಡೂವರೆ ತಿಂಗಳ ಗಂಡು ಮಗು ದಕ್ಷಿತ್ ಗೆ ಗುರುವಾರ ಮಧ್ಯಾಹ್ನ ಲಸಿಕೆ ಹಾಕಿಸಲಾಗಿತ್ತು. ಭಕ್ತರಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿದ್ದು, ರಾತ್ರಿ ಮಗುವಿಗೆ ಜ್ವರ ಬಂದಿದೆ. ವಿಪರೀತ ನೋವಿನಿಂದ ನರಳಿ ಶುಕ್ರವಾರ ಬೆಳಗಿನ ಜಾವ ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More