Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಎರಡು ದಿನ ಮತ್ತು ಹಾಸನ, ಕೊಡಗು, ಮೈಸೂರಿನಲ್ಲಿ ಅ.15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಯಾಗಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ನೆರವು ಪಡೆಯುವ ಸಹಕಾರಿ ಸಂಘಗಳ ನೌಕರರೂ ಲೋಕಾಯುಕ್ತ ವ್ಯಾಪ್ತಿಗೆ ಬರುತ್ತವೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಹಾಸನ ಜಿಲ್ಲೆಯ ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್ ವಿರುದ್ಧ ದಾಖಲಾಗಿರುವ ಆದಾಯ ಮೀರಿ ಆಸ್ತಿ ಪ್ರಕರಣ ಕುರಿತು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡುವಂತೆ ಸಂಘಕ್ಕೆ ಇದೇ ವೇಳೆ ನ್ಯಾಯಾಲಯ ಸೂಚಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್ ವಿರುದ್ಧ ತನಿಖೆಗೆ ಅನುಮತಿ ನಿರಾಕರಿಸಿ ನಿರ್ಣಯ ಕೈಗೊಂಡಿದ್ದ ಸಂಘದ ಕ್ರಮ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಹೈಕೋಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರು, ತಾನು ಸರ್ಕಾರಿ ಸಂಸ್ಥೆಯಲ್ಲ ಎಂದು ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ…
ಶಿವಮೊಗ್ಗ: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 18,000 ಶಿಕ್ಷಕರ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ 12,000, ಅನುದಾನಿತ ಶಾಲೆಗಳ 6 ಸಾವಿರ ಸೇರಿ 18,000 ಶಿಕ್ಷಕರ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಸರ್ಕಾರ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ನಾಲ್ಕರಿಂದ ಐದು ಸಾವಿರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಿದ್ದು, ಸರ್ಕಾರದಿಂದಲೇ ಗೌರವ ಧನ ಪಾವತಿಸಲಾಗುವುದು ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಸಮಸ್ಯೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದಕ್ಕೆ ನಾನಾ ಕಾರಣಗಳಿವೆ. ಆದರೆ, ಮುಂದೆ ಈ ರೀತಿ ಸಮಸ್ಯೆ ಉಲ್ಬಣಗೊಳ್ಳಬಾರದು ಎಂಬ ಕಾರಣಕ್ಕೆ ಸರ್ಕಾರಿ ಶಾಲೆಯಲ್ಲೇ ಎಲ್ಲೆಜಿ, ಯುಕೆಜಿಯನ್ನು ಆರಂಭಿಸಲಾಗಿದೆ. ಸದ್ಯ ಈ ವರ್ಷ ರಾಜ್ಯದಲ್ಲಿ 5 ಸಾವಿರ…
ಮೈಸೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಆರ್ ಎಸ್ಎಸ್ ಪಥಸಂಚಲನದ ವೇಳೆ ಕುಸಿದುಬಿದ್ದು ಕಾರ್ಯಕರ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರ್ ಎಸ್ ಎಸ್ ಪಥಸಂಚಲನದ ವೇಳೆ ಕುಸಿದು ಬಿದ್ದ ಜಯನಗರದ ಮಹೇಂದ್ರ (37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗೋಕುಲಂನಲ್ಲಿ ಭಾನುವಾರ ನಡೆದ ಪಥಸಂಚಲನದಲ್ಲಿ ಭಾಗವಹಿಸಿದ್ದ ಮಹೇಶ್ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ನವದೆಹಲಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಲಾದ ರಾಷ್ಟ್ರೀಯ ಶಿಕ್ಷಣ ಸಂಘ (NESTS), ಶಿಕ್ಷಕರು ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ EMRS ನೇಮಕಾತಿ 2023 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ 400 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRS) 7,267 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 23. ವಿವಿಧ ಉದ್ಯೋಗ ಖಾಲಿ ಹುದ್ದೆಗಳ ವಿವರಗಳು ಶಾಲಾ ಪ್ರಾಂಶುಪಾಲರು ಖಾಲಿ ಹುದ್ದೆಗಳ ಸಂಖ್ಯೆ: 225 ಶೈಕ್ಷಣಿಕ ಅರ್ಹತೆ: ಸ್ನಾತಕೋತ್ತರ ಪದವಿ ಮತ್ತು ಬಿ.ಎಡ್ ಪದವಿ ಹೊಂದಿರಬೇಕು. ಅಲ್ಲದೆ, 12 ವರ್ಷಗಳ ಕೆಲಸದ ಅನುಭವ ಕಡ್ಡಾಯವಾಗಿದೆ. ವಯಸ್ಸಿನ ಅರ್ಹತೆ: 50 ವರ್ಷಕ್ಕಿಂತ ಕಡಿಮೆ ಇರಬೇಕು. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಸಂಬಳ: ₹78,800 – ₹2,09,200 ಸ್ನಾತಕೋತ್ತರ ಶಿಕ್ಷಕರು (PGT) ಖಾಲಿ ಹುದ್ದೆಗಳ ಸಂಖ್ಯೆ: 1,460 ಇಂಗ್ಲಿಷ್ – 112…
ಬೆಂಗಳೂರು : ಒಂದು ಕಡೆ ವಿಪಕ್ಷ ನಾಯಕರು ನವೆಂಬರ್ನಲ್ಲಿ ಭಾರಿ ಕ್ರಾಂತಿ ಅಗಲಿದೆ ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯ ತಮ್ಮ ಎಲ್ಲಾ ಸಂಪುಟ ಸಹ ಉದ್ಯೋಗಿಗಳಿಗೆ ಇಂದು ಔತಣಕೂಟ ಏರ್ಪಡಿಸಿದ್ದಾರೆ. ಈ ಮೂಲಕ ಬಿಹಾರ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡೋದು ಬಹುತೇಕ ಫಿಕ್ಸ್ ಎಂಬಂತೆ ಈ ಒಂದು ಔತಣಕೂಟದ ಮೂಲಕ ಸುಳಿವು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಇಂದು ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದು, ಸಚಿವ ಸಂಪುಟ ಪುನಾರಚನೆಗು ಮುನ್ನ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ. ಬಿಹಾರ ಎಲೆಕ್ಷನ್ ಫಲಿತಾಂಶದ ಬಳಿಕ ಸಂಪುಟ ಪುನಾರಚನೆ ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲೂ ಕೂಡ ಈ ಒಂದು ಔತಣಕೂಟ ಭಾರಿ ಮಹತ್ವ ಪಡೆದುಕೊಂಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಚಿವರು ಹೇಗೆ ತೊಡಗಿಸಿಕೊಳ್ಳಬೇಕು ಎಂಬ…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಗಣತಿ ಮುಂದುವರೆದಿದ್ದು, ಈವರೆಗೆ 131,65,809 ಮನೆಗಳ 4,87,21,722 ಜನರ ಮಾಹಿತಿ ದಾಖಲಾಗಿದೆ. ಒಟ್ಟಾರೆ ಶೇ.88.88 ರಷ್ಟು ಗಣತಿ ಪೂರ್ಣಗೊಂಡಿದೆ. ಒಟ್ಟಾರೆ 1,47,88,831 ಮನೆಗಳ ಸಮೀಕ್ಷೆ ಗುರಿ ಹೊಂದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶೇ.95ಕ್ಕಿಂತ ಹೆಚ್ಚು ಸಮೀಕ್ಷೆ ಪೂರ್ಣಗೊಂಡಿದೆ. ಭಾನುವಾರ 1,85,232 ಮನೆಗಳ ಸಮೀಕ್ಷೆ ಮಾಡಲಾಗಿದೆ. ಇದುವರೆಗೂ ಬೆಂಗಳೂರು ನಗರದಲ್ಲಿ 11.95 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇಂದು ಒಂದು ದಿನ 1,35,2732 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಕಳೆದ 9 ದಿನಗಳಲ್ಲಿ ಒಟ್ಟು 11,95,717 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಕೇಂದ್ರ ನಗರ ಪಾಲಿಗೆ ವ್ಯಾಪ್ತಿಯಲ್ಲಿ ರೂ. 1,53,839 ಮಣಿಗಳ ಸಮೀಕ್ಷೆ ಪೂರ್ಣಗೊಂಡಿದೆ. ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ 1,75,480 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇನ್ನು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,92,239 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಅದೇ ರೀತಿಯಾಗಿ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,11, 38 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ…
ದಕ್ಷಿಣ ಅಮೆರಿಕದ ದಕ್ಷಿಣ ಕೆರೊಲಿನಾದಲ್ಲಿ ಜನದಟ್ಟಣೆಯ ಬಾರ್ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಮುಂಜಾನೆ ಸೇಂಟ್ ಹೆಲೆನಾ ದ್ವೀಪದ ಜನಪ್ರಿಯ ಬಾರ್ನಲ್ಲಿ ನೂರಾರು ಜನರು ಜಮಾಯಿಸಿದ್ದರು, ಗುಂಡಿನ ಚಕಮಕಿ ನಡೆಯಿತು, ಬಾರ್ನಲ್ಲಿ ನಾಲ್ವರು ಜನರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಮತ್ತು ಕನಿಷ್ಠ 20 ಜನರು ಗಾಯಗೊಂಡಿದ್ದಾರೆ, ಇದರಲ್ಲಿ ನಾಲ್ವರನ್ನು ಗಂಭೀರ ಸ್ಥಿತಿಯಲ್ಲಿ ಸ್ಥಳೀಯ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಶೆರಿಫ್ ಕಚೇರಿ ತಿಳಿಸಿದೆ. ಘಟನೆ ಇನ್ನೂ ತನಿಖೆಯಲ್ಲಿದೆ ಮತ್ತು ಸಂಭಾವ್ಯ ಶಂಕಿತರನ್ನು ಶೆರಿಫ್ ಕಚೇರಿ ಪರಿಶೀಲಿಸುತ್ತಿದೆ ಎಂದು ಅದು ಹೇಳಿದೆ. https://twitter.com/MarcLiverman/status/1977498645864780194
ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 2 ವರ್ಷದ ಹಿಂದೆ ಗ್ರಾಮದ ಈರಣ್ಣಗೌಡ ಮೇಲೆ ಕೊಲೆಯಾದ ಸಾಗರ್ ಹಾಗೂ ಇಸಾಕ್ ಹಲ್ಲೆ ನಡೆಸಿದ್ದರು. ಕೆಲ ದಿನಗಳ ಹಿಂದೆ ಚಿಕಿತ್ಸೆ ಫಲಿಸದೇ ಈರಣ್ಣಗೌಡ ಮೃತಪಟ್ಟಿದ್ದ. ಇದೇ ದ್ವೇಷಕ್ಕೆ ಕೊಲೆಗೈದಿರುವ ಸಂಶಯ ವ್ಯಕ್ತವಾಗಿದ್ದು, ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ 2025 ರ ವರ್ಷಕ್ಕೆ ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವೀಧರ ಮತ್ತು ಪದವಿಪೂರ್ವ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಮಂಡಳಿ (RRB) ಕೇಂದ್ರೀಕೃತ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 8,050 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ 5,000 ಪದವೀಧರ ಹುದ್ದೆಗಳು ಮತ್ತು 3,050 ಪದವಿಪೂರ್ವ ಹುದ್ದೆಗಳು ಸೇರಿವೆ. ಈ ಪದವೀಧರ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳು ಅಕ್ಟೋಬರ್ 21 ರಿಂದ ಪ್ರಾರಂಭವಾಗುತ್ತವೆ. ಪದವಿಪೂರ್ವ ಹುದ್ದೆಗಳಿಗೆ ಅರ್ಜಿಗಳು ಅಕ್ಟೋಬರ್ 28, 2025 ರಿಂದ ಪ್ರಾರಂಭವಾಗುತ್ತವೆ. ಇತರ ವಿವರಗಳನ್ನು ಕೆಳಗೆ ಪರಿಶೀಲಿಸಬಹುದು. ಆರ್ಆರ್ಬಿ ಅಹಮದಾಬಾದ್, ಅಜ್ಮೀರ್, ಬೆಂಗಳೂರು, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್, ಚಂಡೀಗಢ, ಚೆನ್ನೈ, ಗುವಾಹಟಿ, ಗೋರಖ್ಪುರ, ಜಮ್ಮು – ಶ್ರೀನಗರ, ಕೋಲ್ಕತ್ತಾ, ಮಾಲ್ಡಾ, ಮುಂಬೈ, ಮುಜಫರ್ಪುರ್, ಪಾಟ್ನಾ, ಪ್ರಯಾಗ್ರಾಜ್, ರಾಂಚಿ, ಸಿಕಂದರಾಬಾದ್, ಸಿಲಿಗುರಿ, ತಿರುವನಂತಪುರಂ ಪ್ರದೇಶಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡುತ್ತದೆ. RRB NTPC ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುವ ಹುದ್ದೆಗಳು…














