Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಭಾರತದಲ್ಲಿ ಹೊಸ ಹಣಕಾಸು ವರ್ಷ ಅಂದರೆ ಏಪ್ರಿಲ್ 1, 2026 ರಿಂದ ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸಲಿವೆ. ಸರ್ಕಾರವು ಹಳೆಯ ‘ಆದಾಯ ತೆರಿಗೆ ಕಾಯ್ದೆ 1961’ ರ ಬದಲಿಗೆ ಹೊಸ ‘ಆದಾಯ ತೆರಿಗೆ ಕಾಯ್ದೆ 2025’ ಅನ್ನು ಜಾರಿಗೆ ತರುತ್ತಿದೆ. ಈ ಹೊಸ ಕಾಯ್ದೆಯು ಸಂಪೂರ್ಣವಾಗಿ ಪಾರದರ್ಶಕತೆ ಮತ್ತು ಡಿಜಿಟಲ್ ಅನುಸರಣೆಯ ಮೇಲೆ ಕೇಂದ್ರೀಕೃತವಾಗಿದೆ. ನಿಮ್ಮ ತೆರಿಗೆ ಸ್ಲ್ಯಾಬ್‌ಗಳು ಅಥವಾ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ರಿಪೋರ್ಟಿಂಗ್ ಮತ್ತು ಫೈಲಿಂಗ್ ಮಾಡುವ ವಿಧಾನವು ಸಂಪೂರ್ಣವಾಗಿ ಬದಲಾಗಲಿದೆ. ಏಪ್ರಿಲ್ 1 ರಿಂದ ಏನೆಲ್ಲಾ ಬದಲಾಗಲಿದೆ? ಇಲ್ಲಿದೆ ಸಂಪೂರ್ಣ ವಿವರ: 1. ಫಾರ್ಮ್-16 ರ ಬದಲಿಗೆ ‘ಫಾರ್ಮ್-130’ ಇದುವರೆಗೆ ಉದ್ಯೋಗಿಗಳು ಪಡೆಯುತ್ತಿದ್ದ ಫಾರ್ಮ್-16 ಇನ್ನು ಇತಿಹಾಸವಾಗಲಿದೆ. ಇದರ ಜಾಗಕ್ಕೆ ಫಾರ್ಮ್-130 ಬರಲಿದೆ. ಇದು TDS ಪ್ರಮಾಣಪತ್ರವಾಗಿ ಕಾರ್ಯನಿರ್ವಹಿಸಲಿದ್ದು, ಸಂಬಳದಿಂದ ಕಡಿತವಾದ ತೆರಿಗೆ ಮತ್ತು ವಿನಾಯಿತಿಗಳ ಸಂಪೂರ್ಣ ವಿವರವನ್ನು ಹೊಂದಿರುತ್ತದೆ. ಇನ್ನು ಮುಂದೆ ITR ಫೈಲಿಂಗ್ ಹೆಚ್ಚು ಆಟೊಮೇಟೆಡ್ ಆಗಲಿದ್ದು,…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 153 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿಗಳ ಪೊಲೀಸ್ ಪದಕ’ವನ್ನು ಪ್ರಕಟಿಸಲಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಐಜಿಪಿ (ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಅವರು ಮಾರ್ಚ್ 27ರಂದು ಅಧಿಕೃತ ಆದೇಶ ಹೊರಡಿಸಿದ್ದಾರೆ. ಪ್ರಮುಖ ಪುರಸ್ಕೃತರು: ಈ ಬಾರಿಯ ಪುರಸ್ಕೃತರ ಪಟ್ಟಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಿಂದ ಹಿಡಿದು ಕಾನ್ಸ್ಟೇಬಲ್ ಹಂತದವರೆಗಿನ ಸಿಬ್ಬಂದಿ ಸೇರಿದ್ದಾರೆ. ಪ್ರಮುಖವಾಗಿ: ಡಾ. ಸುಮನ್ ಡಿ. ಪೆನ್ನೇಕರ್ (ಎಸ್ಪಿ, ಬಳ್ಳಾರಿ ಜಿಲ್ಲೆ) ಡಾ. ಅರುಣ್ ಕೆ. (ಎಸ್ಪಿ, ಉಡುಪಿ ಜಿಲ್ಲೆ) ಪ್ರತೀಕ್ ಶಂಕರ್ (ಎಸ್ಪಿ, ಯಾದಗಿರಿ ಜಿಲ್ಲೆ) ಡಾ. ಗೋಪಾಲ ಎಂ. ಬ್ಯಾಕೋಡ (ಡಿಸಿಪಿ, ಸಂಚಾರ ದಕ್ಷಿಣ ವಿಭಾಗ, ಬೆಂಗಳೂರು) ಸೇರಿದಂತೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಒಟ್ಟು 153 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸರ್ಕಾರ ಈ ಗೌರವಕ್ಕೆ ಆಯ್ಕೆ ಮಾಡಿದೆ. ಏಪ್ರಿಲ್ 2ರಂದು ಪದಕ ಪ್ರದಾನ ಸಮಾರಂಭ: ಪದಕ ಪುರಸ್ಕೃತರಿಗೆ ಏಪ್ರಿಲ್ 02,…
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ಹಾವು ಕಡಿತದ ಪ್ರಕರಣಗಳು ಆತಂಕಕಾರಿಯಾಗಿ ಏರಿಕೆಯಾಗಿದ್ದು, ಒಟ್ಟು 36,636 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 273 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಪರಿಷತ್‌ನಲ್ಲಿ ಮಾಹಿತಿ ನೀಡಿದ್ದಾರೆ. ಬುಧವಾರ ನಡೆದ ಕಲಾಪದಲ್ಲಿ ಸದಸ್ಯ ಕೆ. ಗೋವಿಂದರಾಜ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಹಾವು ಕಡಿತವನ್ನು ನಿಯಂತ್ರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಗಮನಾರ್ಹ ಅಂಕಿ-ಅಂಶಗಳು ಕಳೆದ ಮೂರು ವರ್ಷಗಳಲ್ಲಿ ಹಾವು ಕಡಿತದ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗಿರುವುದು ವರದಿಯಿಂದ ತಿಳಿದುಬಂದಿದೆ: ವರ್ಷ ದಾಖಲಾದ ಪ್ರಕರಣಗಳು ಮೃತಪಟ್ಟವರ ಸಂಖ್ಯೆ 2023 6,596 19 2024 13,235 100 2025 16,805 154 ಒಟ್ಟು 36,636 273 ‘ಘೋಷಿತ ಕಾಯಿಲೆ’ ಪಟ್ಟಿಗೆ ಸೇರ್ಪಡೆ ಹಾವು ಕಡಿತದ ಪ್ರಕರಣಗಳ ಬಗ್ಗೆ ನಿಖರ ಮಾಹಿತಿ ಪಡೆಯಲು ಮತ್ತು ಸಾವಿನ ಪ್ರಮಾಣ ತಗ್ಗಿಸಲು ರಾಜ್ಯ ಸರ್ಕಾರ ಇದನ್ನು…
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ಆರಂಭಿಕ ಸಾಕ್ಷರತೆ ಮತ್ತು ಸಂಖ್ಯಾಜ್ಞಾನವನ್ನು (FLN) ಬಲಪಡಿಸುವ ನಿಟ್ಟಿನಲ್ಲಿ, ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ‘ಕಲಿಕಾ ದೀಪ’ ಕಾರ್ಯಕ್ರಮವನ್ನು ರಾಜ್ಯದ 1,145 ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (DSERT) ಆದೇಶ ಹೊರಡಿಸಿದೆ. 2026-27ರ ವೇಳೆಗೆ ಎಲ್ಲಾ ವಿದ್ಯಾರ್ಥಿಗಳು ಭಾಷೆ ಮತ್ತು ಗಣಿತದಲ್ಲಿ ಪ್ರಾವೀಣ್ಯತೆ ಸಾಧಿಸುವ ಗುರಿಯೊಂದಿಗೆ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಏನಿದು ‘ಕಲಿಕಾ ದೀಪ’ ಯೋಜನೆ? 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಸುಸ್ಥಿತಿಯಲ್ಲಿರುವ ಕಂಪ್ಯೂಟರ್ ಲ್ಯಾಬ್ಗಳನ್ನು ಹೊಂದಿರುವ 1,145 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. ‘ಏಕ್ ಸ್ಟೆಪ್’ (EkStep) ಫೌಂಡೇಶನ್ ಸಹಯೋಗದೊಂದಿಗೆ ಈ AI ಆಧಾರಿತ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಇದರ ಮೂಲಕ 4 ರಿಂದ 6ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 1,44,062 ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ…
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪಿ.ಎಂ. ಪೋಷಣ್ (ಮಧ್ಯಾಹ್ನದ ಉಪಾಹಾರ/ಬಿಸಿಯೂಟ) ಯೋಜನೆಯಡಿ ಕೆಲಸ ಮಾಡುತ್ತಿರುವ ತಾತ್ಕಾಲಿಕ ಅಡುಗೆ ಸಿಬ್ಬಂದಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪ್ರಸ್ತುತ ಶೈಕ್ಷಣಿಕ ವರ್ಷದ ಅಂತ್ಯಕ್ಕೆ (ಮಾರ್ಚ್ 31, 2026) ಇವರ ಸೇವೆಯನ್ನು ಬಿಡುಗಡೆಗೊಳಿಸಲು ಸೂಚಿಸಲಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ನೇಮಿಸಿಕೊಳ್ಳಲು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮಾರ್ಚ್ 31ಕ್ಕೆ ಬಿಡುಗಡೆ, ಜೂನ್ 1 ರಿಂದ ಮರು ಸೇರ್ಪಡೆ: 2025-26ನೇ ಸಾಲಿನಲ್ಲಿ ಜೂನ್ 2025 ರಿಂದ ಮಾರ್ಚ್ 2026ರ ವರೆಗೆ ಒಟ್ಟು 10 ತಿಂಗಳ ಅವಧಿಗೆ ಅಡುಗೆ ಸಿಬ್ಬಂದಿಯ ಸೇವೆಯನ್ನು ಪಡೆಯಲಾಗಿತ್ತು. ಇದೀಗ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31, 2026 ರಂದು ಎಲ್ಲಾ ಅಡುಗೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ತದನಂತರ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ದಿನವಾದ ಜೂನ್ 1, 2026 ರಂದು ಇದೇ ಸಿಬ್ಬಂದಿಯನ್ನು ಮುಂದಿನ 10 ತಿಂಗಳ…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಖಾಸಗಿ ಶಾಲೆಗಳನ್ನು ಆರಂಭಿಸುವವರಿಗೆ, ಮಾನ್ಯತೆ ಪಡೆಯಲು ಹಾಗೂ ಶಾಲಾ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯು ಹೊಸ ಕರಡು ನಿಯಮಗಳನ್ನು ಪ್ರಕಟಿಸಿದೆ. ಈ ಮೂಲಕ ಖಾಸಗಿ ಶಾಲೆಗಳ ನಿಯಂತ್ರಣಕ್ಕೆ ಕಠಿಣ ಹೆಜ್ಜೆ ಇಟ್ಟಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ (ವರ್ಗೀಕರಣ, ನಿಯಂತ್ರಣ ಮತ್ತು ಪಠ್ಯಕ್ರಮ) (ತಿದ್ದುಪಡಿ) ನಿಯಮಗಳು 2026’ರ ಕರಡು ಪ್ರಕಾರ, ಪೂರ್ವ ಪ್ರಾಥಮಿಕದಿಂದ ಪ್ರೌಢಶಾಲೆಯವರೆಗೆ ಯಾವುದೇ ಹೊಸ ಖಾಸಗಿ ಶಾಲೆ ಸ್ಥಾಪಿಸಲು ಆಡಳಿತ ಮಂಡಳಿಯು ಸ್ವಂತ ಭೂಮಿ ಹೊಂದಿರಬೇಕು. ಇಲ್ಲವೇ, ಕನಿಷ್ಠ 15 ವರ್ಷಗಳ ಕಾಲಾವಧಿಗೆ ನೋಂದಾಯಿತ ಗುತ್ತಿಗೆ (ಲೀಸ್) ಭೂಮಿಯನ್ನು ಹೊಂದಿರಬೇಕು. ದಾಖಲೆಗಳ ಸಲ್ಲಿಕೆ: ಜಾಗದ ಮಾಲೀಕತ್ವದ ಪುರಾವೆಯಾಗಿ ಪಹಣಿ, ಇ-ಖಾತಾ ಅಥವಾ ಖಾತಾ ದಾಖಲೆಗಳನ್ನು ಸಲ್ಲಿಸುವುದು ಇನ್ನು ಮುಂದೆ ಕಡ್ಡಾಯವಾಗಿದೆ. ಶಾಲಾ ಸ್ಥಳಾಂತರಕ್ಕೆ ಅವಕಾಶ: ಹಾಲಿ ನಡೆಯುತ್ತಿರುವ ಶಾಲೆಯ ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದರೆ, ಸುಸ್ಥಿತಿಯಲ್ಲಿರುವ ಸ್ವಂತ, ಬಾಡಿಗೆ ಅಥವಾ ಲೀಸ್ ಜಾಗದ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಲು ಕಾಲಾವಕಾಶ ನೀಡುವ ನಿಯಮವನ್ನು ರೂಪಿಸಲಾಗಿದೆ. ಇ-ಬ್ಯಾಂಕ್ ಗ್ಯಾರಂಟಿ ಕಡ್ಡಾಯ:…
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ತೈಲ ಕಂಪನಿಗಳನ್ನು ನಷ್ಟದಿಂದ ಪಾರು ಮಾಡಲು ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ‘ವಿಶೇಷ ಹೆಚ್ಚುವರಿ ಅಬಕಾರಿ ಸುಂಕ’ವನ್ನು ಪ್ರತಿ ಲೀಟರ್‌ಗೆ ತಲಾ 10 ರೂ.ಗಳಷ್ಟು ಕಡಿತಗೊಳಿಸಿದೆ. ಆದರೆ, ಇದರ ನೇರ ಲಾಭ ತೈಲ ಮಾರಾಟ ಸಂಸ್ಥೆಗಳಿಗೆ ಮಾತ್ರ ಸಿಗಲಿದ್ದು, ಬಂಕ್‌ಗಳಲ್ಲಿ ಗ್ರಾಹಕರಿಗೆ ಪೆಟ್ರೋಲ್ ಅಥವಾ ಡೀಸೆಲ್ ದರ ಇಳಿಕೆಯಾಗುವುದಿಲ್ಲ. ದರ ಇಳಿಕೆ ಯಾಕಿಲ್ಲ? ಮಧ್ಯಪ್ರಾಚ್ಯ ಸಂಘರ್ಷದ ಕಾರಣದಿಂದಾಗಿ ಯುದ್ಧಪೂರ್ವದಲ್ಲಿ ಪ್ರತಿ ಬ್ಯಾರೆಲ್‌ಗೆ 70 ಡಾಲರ್ ಇದ್ದ ಕಚ್ಚಾತೈಲದ ದರ ಇದೀಗ 100 ಡಾಲರ್‌ಗೆ ಏರಿಕೆಯಾಗಿದೆ (ಕಳೆದ ಒಂದು ತಿಂಗಳಲ್ಲೇ 30 ಡಾಲರ್ ಹೆಚ್ಚಳ). ಇದರಿಂದ ದೇಶೀಯ ತೈಲ ಕಂಪನಿಗಳು ಭಾರಿ ನಷ್ಟ ಅನುಭವಿಸುತ್ತಿದ್ದವು. ಈ ನಷ್ಟವನ್ನು ಸರಿದೂಗಿಸಲು ಮತ್ತು ತೈಲ ಬೆಲೆ ಹೆಚ್ಚಳವನ್ನು ತಡೆಯಲೆಂದೇ ಸರ್ಕಾರ ಈ ಸುಂಕ ಕಡಿತ ಮಾಡಿದೆ. ಈ ‘ವಿಶೇಷ ಹೆಚ್ಚುವರಿ ಅಬಕಾರಿ ಸುಂಕ’ವನ್ನು ತೈಲ ಕಂಪನಿಗಳು ಸರ್ಕಾರಕ್ಕೆ ಪಾವತಿಸುತ್ತಿದ್ದವು. ಈಗ ಆ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬಹುತೇಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್’ಗಳೊಂದಿಗೆ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಂತರ ದೇಶದಲ್ಲಿ ಉದ್ಭವಿಸುವ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಸಂಬಂಧಿತ ಸಮಸ್ಯೆಗಳನ್ನ ಸಿದ್ಧಪಡಿಸುವುದು ಮತ್ತು ಪರಿಶೀಲಿಸುವುದು ಈ ಸಭೆಯ ಪ್ರಾಥಮಿಕ ಉದ್ದೇಶವಾಗಿತ್ತು. ಸಭೆಯ ಸಮಯದಲ್ಲಿ, ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಧಿಸಲಾಗುವುದಿಲ್ಲ ಎಂದು ಪ್ರಧಾನಿ ಮೋದಿ ಮುಖ್ಯಮಂತ್ರಿಗಳಿಗೆ ಸ್ಪಷ್ಟವಾಗಿ ಹೇಳಿದರು. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧವು ಭಾರತ ಸೇರಿದಂತೆ ಪ್ರಪಂಚದಾದ್ಯಂತ ಪರಿಣಾಮಗಳನ್ನು ಬೀರಿದೆ. ಆದಾಗ್ಯೂ, ಈ ಸವಾಲುಗಳ ಹೊರತಾಗಿಯೂ, ಲಾಕ್‌ಡೌನ್’ನಂತಹ ಪ್ರಮುಖ ನಿರ್ಧಾರ ಅಗತ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಏನು ಹೇಳಿದರು? * ಪಶ್ಚಿಮ ಏಷ್ಯಾದಲ್ಲಿನ ಉದಯೋನ್ಮುಖ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. * ‘ಟೀಮ್ ಇಂಡಿಯಾ’ ಆಗಿ ದೇಶವು ಒಟ್ಟಾಗಿ ಈ ಸವಾಲನ್ನು…
ಬೆಂಗಳೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ರಾಜ್ಯ ಸರ್ಕಾರವು ದ್ವಿಭಾಷಾ ನೀತಿಯತ್ತ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ ಇನ್ನು ಮುಂದೆ ಹಿಂದಿ ಸೇರಿದಂತೆ ತೃತೀಯ ಭಾಷೆಯ ಅಂಕಗಳನ್ನು ಅಂತಿಮ ಫಲಿತಾಂಶಕ್ಕೆ ಪರಿಗಣಿಸದಿರಲು ತೀರ್ಮಾನಿಸಲಾಗಿದೆ. ಈ ಮೂಲಕ ಎಸ್ಎಸ್ಎಲ್ಸಿ ಪರೀಕ್ಷೆಯ ಒಟ್ಟು ಅಂಕಗಳು 625 ರಿಂದ 525 ಕ್ಕೆ ಇಳಿಕೆಯಾಗಲಿವೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ಮಧು ಬಂಗಾರಪ್ಪ, ತೃತೀಯ ಭಾಷಾ ವಿಷಯಗಳಿಗೆ ಇನ್ನುಮುಂದೆ ‘ಪಾಸ್’ ಅಥವಾ ‘ಫೇಲ್’ ಎಂಬ ಮಾನದಂಡ ಇರುವುದಿಲ್ಲ. ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆ ಬರೆಯಬೇಕಾದರೂ, ಅವರಿಗೆ ಕೇವಲ ಎ, ಬಿ, ಸಿ, ಡಿ ಮಾದರಿಯಲ್ಲಿ ಗ್ರೇಡಿಂಗ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಮಾರ್ಚ್ 31 ರಿಂದಲೇ ಜಾರಿ ಇದೇ ಮಾರ್ಚ್ 31 ರಂದು ನಡೆಯಲಿರುವ ತೃತೀಯ ಭಾಷಾ ಪರೀಕ್ಷೆಯಿಂದಲೇ ಈ ಹೊಸ ನಿಯಮ ಜಾರಿಗೆ ಬರಲಿದೆ. ಶೀಘ್ರದಲ್ಲೇ ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಹೊರಬೀಳಲಿದೆ. ಯಾವ್ಯಾವ ಭಾಷೆಗಳಿಗೆ ಅನ್ವಯ? ಹಿಂದಿ ಮಾತ್ರವಲ್ಲದೆ…
ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಕ್ರಿಕೆಟ್ ಹಬ್ಬ ಇಂದಿನಿಂದ (ಮಾರ್ಚ್ 28) ಅದ್ಧೂರಿಯಾಗಿ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿವೆ. ತವರಿನ ಅಂಗಳವಾದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬ್ಲಾಕ್ ಬಸ್ಟರ್ ಪಂದ್ಯ ನಡೆಯಲಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕಳೆದ ಸೀಸನ್‌ನಲ್ಲಿ ಆರ್‌ಸಿಬಿಗೆ ಮೊದಲ ಬಾರಿಗೆ ಟ್ರೋಫಿ ಗೆದ್ದುಕೊಟ್ಟಿದ್ದ ರಜತ್ ಪಾಟಿದಾರ್ ಈ ಬಾರಿಯೂ ತಂಡವನ್ನು ಮುನ್ನಡೆಸಲಿದ್ದಾರೆ. ಮತ್ತೊಂದೆಡೆ, ಯುವ ಆಟಗಾರ ಇಶಾನ್ ಕಿಶನ್ ಅವರು ಮೊದಲ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿರುವುದು ವಿಶೇಷ. ಭರ್ಜರಿ ಫಾರ್ಮ್‌ನಲ್ಲಿ ವಿರಾಟ್ ಕೊಹ್ಲಿ ಐಪಿಎಲ್ ಆರಂಭಕ್ಕೂ ಮುನ್ನವೇ ಕಿಂಗ್ ಕೊಹ್ಲಿ ವಿರಾಟ್ ತಮ್ಮ ಖದರ್ ತೋರಿದ್ದಾರೆ. ಇತ್ತೀಚೆಗೆ ನಡೆದ ಅಭ್ಯಾಸ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ 45 ರನ್ ಚಚ್ಚುವ ಮೂಲಕ ಎದುರಾಳಿಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ. ಕೊಹ್ಲಿಯವರ ಹೊಸ…














