Author: kannadanewsnow57

ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಡಿಸೆಂಬರ್ 31 ರವರೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು. ಮೇಲೆ ಓದಲಾದ ಕ್ರ.ಸಂ. (2) ರ ಸಹಕಾರ ಸಂಘಗಳ ನಿಬಂಧಕರ ಪ್ರಸ್ತಾವನೆಯಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ (Flagship) ವಿಶಿಷ್ಟ ಯೋಜನೆಯಾಗಿದ್ದು, ಇದರಲ್ಲಿ ಯಶಸ್ವಿನಿ ಪ್ರೋಟೋಕಾಲ್‌ನಂತೆ ನಿಗದಿ ಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳಪಟ್ಟು ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5.00 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ. ಯಶಸ್ಸಿನಿ ಯೋಜನೆಯು ವಿಮಾ ಯೋಜನೆಯಾಗಿರುವುದಿಲ್ಲ. ಬದಲಾಗಿ ಇದೊಂದು ಸ್ವಯಂ ನಿಧಿ ಸಹಕಾರ ಸಂಘಗಳ…

Read More

ಬೆಂಗಳೂರು: ರಾಜ್ಯದ 46,755 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 1,65,618 ಕಾರ್ಯನಿರತ ಶಿಕ್ಷಕರ ಹುದ್ದೆಗಳಿವೆ. ಇವುಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್‌‍.ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ ಕೆ. ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ ಒಟ್ಟು 46,755 ಶಾಲೆಗಳಿದ್ದು, 1,65,618 ಶಿಕ್ಷಕರ ಕಾರ್ಯನಿರತ ಹುದ್ದೆಗಳಿವೆ. ಪ್ರಾಥಮಿಕ ಶಿಕ್ಷಣದಲ್ಲಿ 50,067 ಹಾಗೂ ಪ್ರೌಢಶಾಲೆಗಳಲ್ಲಿ 9,705 ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 2024ರ ಅಕ್ಟೋಬರ್ 28 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಹೊರಡಿಸಬಾರದು ಎಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಹಿಂದಿನ ಸರ್ಕಾರ ಕೇವಲ 4500 ಶಿಕ್ಷಕರನ್ನು ನೇಮಕ ಮಾಡಿದ್ದು, ನಮ್ಮ ಸರ್ಕಾರದಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ರಾಜ್ಯಾದ್ಯಂತ 91,061 ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಹೌದು, ಮಾನದಂಡ ಉಲ್ಲಂಘಿಸಿ ಪಡೆದ 91,061 ಬಿಪಿಎಲ್ ಕಾರ್ಡ್ ಗಳು ರದ್ದಾಗಿವೆ. ಆದಾಯ ತೆರಿಗೆ ಪಾವತಿದಾರರು, ವಾರ್ಷಿಕ 1.20 ಲಕ್ಷ ರೂ.ಗಿಂತ ಹೆಚ್ಚಿರುವವರುಉ, ಸರ್ಕಾರಿ ನೌಕರರು, ಮೃತ ಫಲಾನುಭವಿಗಳು ಹಾಗೂ 6 ತಿಂಗಳಿನಿಂದ ಪಡಿತರ ಪಡೆಯದ ಕಾರ್ಡ್ ಗಳನ್ನು ಗುರುತಿಸಿ ಆಹಾರ ಇಲಾಖೆ 2023-24ರಲ್ಲಿ 74,342 ಹಾಗೂ 2024 ರಲ್ಲಿ 16,719 ಕಾರ್ಡ್ ಗಳನ್ನು ರದ್ದುಮಾಡಿದೆ. ರಾಜ್ಯದಲ್ಲಿ ಹ್ಯೂಮನ್ ರಿಸೋರ್ಸ್ ಮ್ಯಾನೇಜ್ ಮೆಂಟ್ ಸಿಸ್ಟಂ ಮಾಹಿತಿ ಆಧರಿಸಿ 5 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರು ಪಡೆದಿದ್ದ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ರಾಜ್ಯದಲ್ಲಿ ಅಕ್ರಮ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರ ಪತ್ತೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 98,431…

Read More

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ (ಪುಡ್‌ಕಾರ್ಟ್ ಉದ್ದೇಶಕ್ಕಾಗಿ ಮಾತ್ರ) ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿ.29 ರೊಳಗಾಗಿ ಸೇವಾ-ಸಿಂಧು ಪೋರ್ಟಲ್‌ನ https://sevasindhu.karnataka.gov.in ಲಿಂಕ್ ಮೂಲಕ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ. ಅರ್ಜಿ ಸಲ್ಲಿಸಿದವರು ಉದ್ದೇಶ ಬದಲಾವಣೆ ಮಾಡಲು ಇಚ್ಚಿಸಿದ್ದಲ್ಲಿ https://swdcorp.karnataka.gov.in/ADCLPortal ನಲ್ಲಿ ನೇರ ಸಾಲ ಯೋಜನೆಯಡಿ ಕುರಿಸಾಕಾಣಿಕೆ ಉದ್ದೇಶಕ್ಕೆ ಹಾಗೂ ಸ್ವಾವಲಂಭಿ ಸಾರಥಿ ಯೋಜನೆಯಡಿ ಪುಡ್‌ಕಾರ್ಟ್ ಉದ್ದೇಶಕ್ಕೆ ಎಂದು ಬದಲಾವಣೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ಪ್ರದೇಶದ ಆದರ್ಶ ಕಾಲೋನಿಯ ಸೆಂಟ್ ಜೋಸೆಫ್ ಬಾಲಕರ ಶಾಲೆಯ ಎದುರುಗಡೆಯ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬಳ್ಳಾರಿ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಭತ್ತ ಕಟಾವು ಮಾಡಲು ಪ್ರತಿ ಗಂಟೆಗೆ ಯಂತ್ರಕ್ಕೆ 2600 ರೂ. ಗರಿಷ್ಠ ದರ ನಿಗದಿ ಮಾಡಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ. ಭತ್ತ ಕಟಾವು ಯಂತ್ರದ ಮಾಲೀಕರು ಈ ದರ ಮೀರದಂತೆ ಭತ್ತ ಕಟಾವು ಕೈಗೊಳ್ಳಬೇಕು. ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಭತ್ತ ಕಟಾವು ಯಂತ್ರದ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದಲ್ಲಿ ರೈತರು ಕಂದಾಯ ಅಥವಾ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

Read More

ಜೈಪುರ : ಗ್ಯಾಸ್ ಟ್ಯಾಂಕರ್ ಒಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸ್ಪೋಟಗೊಂಡ ಪರಿಣಾಮ ಭೀಕರ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೈಪುರ-ಅಜ್ಮೇರ್ ಹೆದ್ದಾರಿಯ ಭಂಕ್ರೋಟಾ ಎಂಬಲ್ಲಿ ನಡೆದಿದೆ. ಜೈಪುರದಲ್ಲಿ ಸಿಎನ್’ಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಸ್ಪೋಟಗೊಂಡು 11 ಮಂದಿ ಸಜೀವ ದಹನರಾಗಿದ್ದು, ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ. https://twitter.com/Zinda_Avdhesh/status/1869935607788528122 ರಾಜಸ್ಥಾನದ ಜೈಪುರದ ಅಜ್ಮೀರ್ ರಸ್ತೆಯ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ಬೆಳಿಗ್ಗೆ ಎಲ್ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಮತ್ತು ಸಿಎನ್ಜಿ (CNG) ಟ್ರಕ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಾಹಿತಿಯ ಪ್ರಕಾರ, ಟ್ರಕ್ ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದೆ. .ಘಟನೆಯಲ್ಲಿ 30 ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿದೆ. ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಉತ್ತರ ನೀಡಿದರು. ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ. ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್, ಯಶವಂತಪುರ ಮೆಟ್ರೋ ನಿಲ್ದಾಣ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶಿಶು ಆಹಾರ ಕೇಂದ್ರಗಳು ಇವೆ. ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಹಾಗೂ ಅಂಗವಿಕಲರಿಗೆ ಶೌಚಾಲಯಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು. https://twitter.com/KarnatakaVarthe/status/1869681398317002946?ref_src=twsrc%5Etfw%7Ctwcamp%5Etweetembed%7Ctwterm%5E1869681398317002946%7Ctwgr%5E742a831720fe7f6c12893d1240057f39b3abbcd6%7Ctwcon%5Es1_&ref_url=https%3A%2F%2Fkannadadunia.com%2Flive-news%2Fgood-news-for-women-the-government-is-planning-to-open-breastfeeding-care-centers-in-all-metro-stations-of-the-state%2F

Read More

ಬೆಂಗಳೂರು : ಆಯುಕ್ತಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ನೌಕರರು ಇನ್ಮುಂದೆ ರಜೆ ಮಂಜೂರಾತಿಯನ್ನು ಕಡ್ಡಾಯವಾಗಿ ಇ ಆಫೀಸ್ ತಂತ್ರಜ್ಞಾನದಲ್ಲಿ ಸಲ್ಲಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಯುಕ್ತಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ ನೌಕರರು ಇನ್ನು ಮುಂದೆ ಕಡ್ಡಾಯವಾಗಿ ಇ ಆಫೀಸ್ ತಂತ್ರಾಂಶದಲ್ಲಿ ಎಲ್ಲಾ ರೀತಿಯ ರಜೆ ಕೋರಿಕೆಯನ್ನು ಸಲ್ಲಿಸಿ ಮೇಲಾಧಿಕಾರಿಗಳ ಮಂಜೂರಾತಿ ಪಡೆಯುವುದು ಕಡ್ಡಾಯವಾಗಿದೆ ಎಂದು ತಿಳಿಸಲಾಗಿದೆ. ಇ ಆಫೀಸ್ ತಂತ್ರಾಂಶದಲ್ಲಿ ಯಾವುದೇ ರೀತಿಯ ತೊಂದರೆಗಳ ನಿವಾರಣೆಗೆ ಶ್ರೀ ಹರೀಶ್ ತಂತ್ರಜ್ಞರು ಇ ಆಫೀಸ್ ಇವರನ್ನು ಸಂರ್ಪರ್ಕಿಸಲು ಸೂಚನೆ ನೀಡಲಾಗಿದೆ.

Read More

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯು ಕರ್ನಾಟಕ ಭಾರತ್ ಗೌರವ್ ಯೋಜನೆಯಡಿ ದಕ್ಷಿಣ ಕ್ಷೇತ್ರಗಳ ಯಾತ್ರೆ, ದ್ವಾರಕಾ ಯಾತ್ರೆ ಮತ್ತು ಪುರಿಜಗನ್ನಾಥ ದರ್ಶನ ಯಾತ್ರೆಗಳಿಗೆ ಪ್ರವಾಸ ಕೈಗೊಳ್ಳಲು ಇಚ್ಛಿಸುವ ಸಾರ್ವಜನಿಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಮತ್ತು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ-ಸಿ ಅಧಿಸೂಚಿತ ದೇವಸ್ಥಾನಗಳಲ್ಲಿ/ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು/ನೌಕರರನ್ನು ಉಚಿತವಾಗಿ ಕಳುಹಿಸಲು ಹಾಗೂ ಇದಕ್ಕೆ ತಗುಲುವ ವೆಚ್ಚವನ್ನು ಸಾಮಾನ್ಯ ಸಂಗ್ರಹಣ ನಿಧಿಯಿಂದ ಭರಿಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ದಕ್ಷಿಣ ಕ್ಷೇತ್ರಗಳ ಯಾತ್ರಾ : ರಾಮೇಶ್ವರ-ಕನ್ಯಾಕುಮಾರಿ-ಮಧುರೈ-ತಿರುವನಂತಪುರA ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಯಾತ್ರಾ ಪ್ಯಾಕೇಜ್‌ಗೆ ಒಟ್ಟು ರೂ. 25,000/- ಗಳು ತಗುಲಲಿದ್ದು, ಕರ್ನಾಟಕ ಸರ್ಕಾರದ ವತಿಯಿಂದ ಅಂದಾಜು ರೂ. 10,000/- ಗಳನ್ನು ಭರಿಸಲಾಗುವುದು. ಇದರಲ್ಲಿ ಫಿಕ್ಸೆಡ್ ಹ್ಯೂಲೇಜ್, ಆರ್‌ಯು ಚಾರ್ಚ್, ಸ್ಟೇಬಲಿಂಗ್ ಚಾರ್ಚ್, ವೈದ್ಯಕೀಯ ವೆಚ್ಚ, ಇತರೆ ವೆಚ್ಚ ಹಾಗೂ ಸಹಾಯ ಧನ ರೂ. 5,000/-ಗಳು ಒಳಗೊಂಡಿರುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ರೂ. 10,000/-ಗಳನ್ನು ಮಾತ್ರ ಪಾವತಿಸಬೇಕಾಗಿರುತ್ತದೆ.…

Read More

ಬಳ್ಳಾರಿ : ತಾಲ್ಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಔಷಧಿಗಳ ಮಾಹಿತಿ ಹೊಂದಿ ಜನತೆಗೆ ತಾವು ವೈದ್ಯರೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ನಕಲಿ ವೈದ್ಯರ 05 ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ತಿಳಿಸಿದ್ದಾರೆ. ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಸೂಚನೆ ಮೇರೆಗೆ ತಾಲ್ಲೂಕ ಆರೋಗ್ಯ ಅಧಿಕಾರಿ ಡಾ.ಆರ್.ಅಬ್ದುಲ್ಲಾ ಅವರ ತಂಡ ಕಪ್ಪಗಲ್ಲು ಗ್ರಾಮಕ್ಕೆ ತೆರಳಿ ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಎಸ್‌ಎಸ್‌ಎಲ್‌ಸಿ, ಪಿಯುಸಿ ತನಕ ಓದಿಕೊಂಡು ಜನತೆಗೆ ಚಿಕಿತ್ಸೆ ನೀಡುತ್ತಿದ್ದ ರಾಜಣ್ಣ ಕ್ಲಿನಿಕ್, ಶೇಕ್ಷಾವಲಿ ಕ್ಲಿನಿಕ್, ರೆಹಮಾನ್ ಕ್ಲಿನಿಕ್, ಮಹದೇವ್ ಕ್ಲಿನಿಕ್ ಮತ್ತು ಗುರು ಕ್ಲಿನಿಕ್‌ಗಳನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಅಧಿಕೃತ ವೈದ್ಯ ಪದವಿ ಪಡೆದ ವೈದ್ಯರ ಬಳಿ…

Read More