Subscribe to Updates
Get the latest creative news from FooBar about art, design and business.
Author: kannadanewsnow57
2024-25ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ-ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ-ಪುಡ್ ಕಾರ್ಟ್ ಯೋಜನೆಗಳಡಿ ನಿಗಮದ ವ್ಯಾಪಿಗೆ ಒಳಪಡುವ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.29 ರವರೆಗೆ ವಿಸ್ತರಿಸಲಾಗಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ರೂ.50 ಸಾವಿರ ಹಾಗೂ ಸಾಲ ರೂ.50 ಸಾವಿರ ಸೇರಿ ಒಟ್ಟು ಘಟಕ ವೆಚ್ಚ 1 ಲಕ್ಷ ಮಂಜೂರು ಮಾಡಲಾಗುವುದು. ಸ್ವಾವಲಂಬಿ ಸಾರಥಿ-ಪುಡ್ ಕಾರ್ಟ್ ಯೋಜನೆಯಡಿ ಪುಡ್ ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕುಗಳ ಸಹಯೋಗದೊಂದಿಗೆ ಯೋಜನೆ ಅನುಷ್ಠಾನಗೊಳಿಸಿ, ಸಾಲ ಮೊತ್ತಕ್ಕೆ ಶೇ.75ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು. 2022-23 ಹಾಗೂ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ.ತಿಮ್ಮರಾಯಪ್ಪ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಾಣಂತಿಯರ ಸಾವಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಅಫಜಲಪುರದಲ್ಲಿ 22 ವರ್ಷದ ಭಾಗ್ಯಶ್ರೀ ಎನ್ನುವವರು ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಸಾವನ್ನಪ್ಪಿದ್ದಾರೆ. ಹಾಗಾದ್ರೆ ಕಳೆದ 5 ವರ್ಷಗಳಲ್ಲಿ ಕರ್ನಾಟಕದಲ್ಲಿ ತಾಯಿ ಮರಣ ಪ್ರಕರಣಗಳು ಎಷ್ಟು ಅಂತ ಮುಂದೆ ಓದಿ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ನವೆಂಬರ್.11, 2024ರಂದು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಂದಿರ ಸಾವು ವರದಿಯಾಗಿದೆ. ನವೆಂಬರ್.9, 10 ಮತ್ತು 11ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ನಡೆದ ಶಸ್ತ್ರ ಚಿಕಿತ್ಸೆ ನಂತ್ರ ಈ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಈ ಮೂರು ದಿನಗಳಲ್ಲಿ ನಡೆಸಿದ 34 ಸಿಸೇರಿಯನ್ ನಲ್ಲಿ 7 ಪ್ರಕರಣಗಳು ತೊಂದರೆಗೆ ಈಡಾಗಿರುತ್ತದೆ. ಮೂತ್ರಪಿಂಡದ ತೊಂದರೆಯಿಂದ ಮತ್ತು ಬಹು ಅಂಗಗಳ ವೈಫಲ್ಯತೆ ಕಾರಣದಿಂದ 7 ಪ್ರಕರಣಗಳಲ್ಲಿ ಐವರು ಬಾಣಂತಿಯರು ಸಾವಿಗೀಡಾಗಿದ್ದು, ಉಳಿದ 2 ಬಾಣಂತಿಯರು ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ ಎಂದಿದ್ದಾರೆ. ಈ…
ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿನ ನ್ಯಾಷಿನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ / ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ (B.Ed) ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿಗಳು ಬಿಎಡ್ ಕೋರ್ಸ್ ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸುವ ಬಗ್ಗೆ ಎಲ್ಲಾ ಅಧಿಕೃತ ದಾಖಲತಾತಿಗಳನ್ನು ಸಲ್ಲಿಸತಕ್ಕದ್ದು. ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್ ಲೈನ್ ನಲ್ಲಿ https://Sevasindhu.karnataka.gov.in ನಲ್ಲಿ ಡಿಸೆಂಬರ್ 25 2024 ರ ಸಂಜೆ 5.30 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8277799990, Website: https://dom.karnataka.gov.in ಸಂಪರ್ಕಿಸಬಹುದು.
ಬೆಂಗಳೂರು : ರಾಜ್ಯ ಸರ್ಕಾರವು ವಿಕಲಚೇತನ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, 7 ನೇ ವೇತನ ಆಯೋಗದ ವರದಿಯಂತೆ `ಸಂಚಾರಿ ಭತ್ಯ’ ಮಂಜೂರು ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಈ ಮೊದಲು ಚಾಲ್ತಿಯಲ್ಲಿದ್ದ ರಾಜ್ಯ ಸರ್ಕಾರದ ನೀತಿಯಂತೆ, ಮೇಲೆ (1) ಮತ್ತು (2)ರಲ್ಲಿ ಓದಲಾದ ದಿನಾಂಕ: 14.02.1979 ಮತ್ತು ದಿನಾಂಕ: 17.07.1979ರ ಸರ್ಕಾರಿ ಆದೇಶಗಳಲ್ಲಿ ಅಂಧ ಮತ್ತು ಅಂಗವಿಕಲ ರಾಜ್ಯ ಸರ್ಕಾರಿ ನೌಕರರಿಗೆ ಆದೇಶದ ನಿಬಂಧನೆಗಳ ಪೂರೈಕೆಗೊಳಪಟ್ಟು ಪ್ರಯಾಣ ಭತ್ಯೆಯನ್ನು ಮಂಜೂರು ಮಾಡಿ ಆದೇಶಗಳನ್ನು ಹೊರಡಿಸಲಾಗಿತ್ತು. ಸದರಿ ಸೌಲಭ್ಯವನ್ನು ನಿರ್ದಿಷ್ಟ ಬದಲಾವಣೆಗಳೊಂದಿಗೆ ಕಾಲದಿಂದ ಕಾಲಕ್ಕೆ ಮುಂದುವರೆಸಿಕೊಂಡು ಬರಲಾಗಿರುತ್ತದೆ. ಮುಂದುವರೆದು, 6ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ, ಮೇಲೆ (3)ರಲ್ಲಿ ಓದಲಾದ ದಿನಾಂಕ: 11.01.2019ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರದ ವಿಶೇಷ-ಚೇತನ ನೌಕರರುಗಳಿಗೆ ಸದರಿ ಆದೇಶದಲ್ಲಿನ ನಿಬಂಧನೆಗಳ ಪೂರೈಕೆಗೊಳಪಟ್ಟು ಪ್ರಯಾಣ ಭತ್ಯೆಯನ್ನು ಮಂಜೂರು ಮಾಡಲು ವಿಸ್ತ್ರತ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ…
ಬೆಳಗಾವಿ : ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ಸಂಸ್ಥೆಗಳ ನಿರ್ಬಂಧಕ್ಕೆ ರಾಜ್ಯ ಉಚ್ಚನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ. ನ್ಯಾಯಾಲಯ ತಡೆಯಾಜ್ಞೆ ಇದೆ ಎಂದು ಸರ್ಕಾರ ಸುಮ್ಮನೆ ಕೂತಿಲ್ಲ. ಕಾನೂನು ಪ್ರಕಾರ ನಿರಂತರವಾಗಿ ಆನ್‌ಲೈನ್ ಬೆಟ್ಟಿಂಗ್ ಗೇಮ್ ಕಡಿವಾಣಕ್ಕೆ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಮಂಗಳವಾರ ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎಸ್.ಜೆ.ಸೋಮಶೇಖರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿ ಮಾತನಾಡಿದರು. ಹೆಚ್ಚಿನ ಪ್ರಮಾಣದಲ್ಲಿ ಯುವ ಪೀಳಿಗೆ ಆನ್‌ಲೈನ್ ಗೇಮ್‌ಗಳ ವ್ಯಸನಕ್ಕೆ ತುತ್ತಾಗುತ್ತಿದ್ದರೆ. ಆನ್‌ಲೈನ್ ಗೇಮ್ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಇದರ ತಡೆಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿ ಮಾಡಬೇಕಿದೆ. ಬೆಂಗಳೂರು ನಗರದಲ್ಲಿ 5 ಹಾಗೂ ವಿಜಯನಗರದಲ್ಲಿ ಒಬ್ಬರು ಆನ್‌ಲೈನ್ ಬೆಟ್ಟಿಂಗ್ ಆಟದ ದಂಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಪ್ಟೆವೇರ್ ಉದ್ಯೋಗಿಗಳು ಇದರ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ ಎಂದರು.…
ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ ಸೇರಿದಂತೆ 8 ಮಸೂದೆಗಳನ್ನು ಮಂಡಿಸಲಾಗಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾದ ಮಸೂದೆಗಳು 1. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಮಸೂದೆ – 2024 2. ಕರ್ನಾಟಕ (ಖನಿಜ ಹಕ್ಕುಗಳು ಮತ್ತು ಖನಿಜ ಹೊಂದಿರುವ ಭೂಮಿ) ತೆರಿಗೆ ಮಸೂದೆ – 2024 3 ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ – 2024 4. ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ಮಸೂದೆ – 2024 5. ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಮಸೂದೆ – 2024 6.ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ – 2024 7.ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ – 2024 8.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ಮಸೂದೆ – 2024
ಬೆಳಗಾವಿ : ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಅಗತ್ಯ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ಮೂರನೇ ತಿದ್ದುಪಡಿ ವಿಧೇಯಕ-2024 ಮಂಡಿಸಿ ಸದನಕ್ಕೆ ಮಾಹಿತಿ ನೀಡಿದ ಅವರು, “ಕರ್ನಾಟಕ ಭೂ ಕಂದಾಯ ಕಾನೂನು ಕಂದಾಯ ಇಲಾಖೆಯ ಅಡಿಪಾಯ. ಆದರೆ, ಈ ಕಾನೂನಿನಲ್ಲಿ ಕೆಲವು ವ್ಯಾಖ್ಯಾನಗಳು ಕ್ಲಿಷ್ಟಕರವಾಗಿದೆ. ಹೀಗಾಗಿ ಈ ಕಾನೂನುಗಳನ್ನು ಸರಳೀಕರಣಗೊಳಿಸಿ ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಹಾಗೂ ಸಣ್ಣ ಉದ್ದಿಮೆದಾರರಿಗೆ ಸರಳ ಆಡಳಿತ ನೀಡುವ ಸಲುವಾಗಿ ಈ ಕಾನೂನಿಗೆ ಪ್ರಮುಖ ನಾಲ್ಕು ತಿದ್ದುಪಡಿಗಳನ್ನು ತರಲಾಗಿದೆ” ಎಂದು ತಿಳಿಸಿದರು. ತಿದ್ದುಪಡಿ ಬಗ್ಗೆ ವಿಸ್ತೃತ ಮಾಹಿತಿ ನೀಡಿದ ಅವರು, “ಯಾವುದೇ ಜಮೀನು ಖಾಸಗಿ ವ್ಯಕ್ತಿಗೆ ಸೇರಿಲ್ಲದಿದ್ದಲ್ಲಿ ಅದು ಸರ್ಕಾರಕ್ಕೆ ಸೇರಿದೆ ಎಂಬ ಸಾರಾಂಶವನ್ನು ಕರ್ನಾಟಕ ಭೂ ಕಂದಾಯ ಕಾನೂನಿನ ಕಲಂ 67 ಹೇಳುತ್ತದೆ. ಕೆಲವರು…
ಬೆಳಗಾವಿ : ಹೊಸ ಬೈಕ್, ಕಾರು ಖರೀದಿಸುವವರಿಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ಕಾರ್ಮಿಕರ ಸಾಮಾಜಿಕ ಭದ್ರತೆ ನಿಧಿಗಾಗಿ ದ್ವಿಚಕ್ರವಾಹನ, ಸಾರಿಗೇತರ ಮೋಟಾರ್ ಕಾರುಗಳ ನೋಂದಣಿ ವೇಳೆ ತಲಾ 500 ರೂ. ಮತ್ತು 1,000 ರೂ. ಉಪಕರ ವಿಧಿಸುವ ವಿಧೇಯಕಕ್ಕೆ ವಿಧಾನಸಭೆ ಅಧಿವೇಶನದಲ್ಲಿ ಅನುಮೋದನೆ ನೀಡಲಾಗಿದೆ. ಈ ಕುರಿತು ಸಚಿವ ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದು, ರಾಜ್ಯ ಮೋಟಾರ್ ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ನಿಧಿಗಾಗಿ ದ್ವಿಚಕ್ರವಾಹನ ಮತ್ತು ಸಾರಿಗೇತರ ಮೋಟಾರು ಕಾರ್ ಗಳ ನೋಂದಣಿಯ ವೇಳೆ ಉಪಕರ ವಿಧಿಸುವ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ(ಎರಡನೇ ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಚಾಲಕರು ಸೇರಿ ಮತ್ತಿತರ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ನಿಧಿ ಸಂಗ್ರಹಣೆಗೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವಿಧೇಯಕದಂತೆ ದ್ವಿಚಕ್ರ ವಾಹನಗಳ ನೋಂದಣಿ ವೇಳೆ 500 ರೂ. ಹಾಗೂ ಸಾರಿಗೇತರ ಮೋಟಾರು ಕಾರುಗಳಿಗೆ 1,000 ರೂ.…
ಬೆಳಗಾವಿ : ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ – ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರ ಉತ್ತರಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರೆ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 18.12.2024 (ಬುಧವಾರ) ರ ಇಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಡಿಸೆಂಬರ್ 18 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ “ಹೊಸಹಳ್ಳಿ ಮುಖ್ಯರಸ್ತೆ, ರ‍್ಫತ್ ನಗರ ಪಾದರಾಯನಪುರ ಪರ‍್ವ ಮತ್ತು ಪಶ್ಚಿಮ, ದೇವರಾಜ್ ರ‍್ಸ್ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹರ‍್ಗೆ ಆಸ್ಪತ್ರೆ, ಸಂಗಮ್ ರ‍್ಕಲ್, ಓಬಳೇಶ್ ಕಾಲೋನಿ, ವಿಎಸ್ ಗರ‍್ಡನ್, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗರ‍್ಡನ್, ರ‍್ಫತ್ ನಗರ, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಪರ‍್ಕ್ ವೆಸ್ಟ್ ಅಪರ‍್ಟ್‌ಮೆಂಟ್ ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್…












