Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಭಾರೀ ಮಳೆಯಿಂದಾಗಿ ತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತದ ಅಲೆ ಮುಂದುವರಿಯಲಿದೆ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ, ಮೋಡ ಇಲ್ಲದ ಕಾರಣ ಶುಭ್ರ ಆಕಾಶ, ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 5 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ, ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಗಾಳಿ ಬೀಸುತ್ತಿರುವುದರಿಂದ ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಶೀತ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ,…
ನವದೆಹಲಿ : ವಯೋಸಹಜ ಕಾಯಿಲೆಗಳಿಂದ ನಿನ್ನೆ ನಿಧನರಾಗಿರುವ ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಪ್ರಧಾನಿ ಮೋದಿ ಕನ್ನಡದಲ್ಲೇ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ‘’ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. https://twitter.com/narendramodi/status/1868886506686795896
ಬೆಂಗಳೂರು : ವಕ್ಫ್ ಗೆ ಸೇರಿದ್ದ ಜಮೀನು ಒತ್ತುವರಿ ತೆರವು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಸೈಯದ್ ಎಜಾಜ್ ಅಹ್ಮದ್ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. ರಾಜ್ಯದಲ್ಲಿ 1.12 ಲಕ್ಷ ಎಕರೆ ಜಮೀನು ಒತ್ತುವಾರಿ ಆಗಿದೆ ಎಂದು ವರದಿಯಿದೆ. ರಾಜಕೀಯ ಕಾರಣಕ್ಕೆ ಸರ್ಕಾರ ಒತ್ತುವರಿ ತೆರವಿಗೆ ತಡೆ ನೀಡಿದೆ. ರೈತರಿಗೆ ನೀಡಿದ್ದ ನೋಟಿಸ್ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ನ್ಯಾಯಾಂಗ ತನಿಖೆಗೆ ಕೋರಿದ್ದರು. ರೈತರಿಗೆ ನೀಡಿದ್ದ ನೋಟಿಸ್ ಹಿಂಪಡೆದ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದರು. ಇದಕ್ಕೆ ಕೋರ್ಟ್ ಕಾಯ್ದೆ ಉಲ್ಲಂಘನೆಯಾಗಿದ್ದರೆ ಪ್ರಶ್ನಿಸಬಹುದು ಎಂದು ಹೇಳಿದೆ.
ಉತ್ತರ ಕನ್ನಡ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಹಾಲಕ್ಕಿ ಸಮುದಾಯದ ಜಾನಪದ ಕಲಾವಿದೆ, ಪದ್ಮಶ್ರೀ ಸುಕ್ರಿ ಬೊಮ್ಮು ಗೌಡ ಅವರ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ತನ್ನದೇ ವಿಶಿಷ್ಠ ಸಾಧನೆಯ ಮೂಲಕ ಗಮನ ಸೆಳೆದಿದ್ದೇ ತುಳಸಿ ಗೌಡ. ಇವರು ಪರಿಸರ ಪ್ರೇಮಿ. ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡರ ಸಾಧನೆ ಅಪಾರ. ವೃಕ್ಷಮಾತೆ ಎಂದೆನಿಸಿಕೊಂಡಿರುವ ಈಕೆ ಬೆಳೆಸಿದ ಮರಗಳು ಒಂದಲ್ಲಾ, ಎರಡಲ್ಲಾ.. ಲಕ್ಷಗಟ್ಟಲೇ! ಇವರು ಕಟ್ಟಿಗೆ ಸಂಗ್ರಹಿಸಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಮತ್ತಿಘಟ್ಟ ಅರಣ್ಯ ನರ್ಸರಿಯಲ್ಲಿ ಸೇವೆ ಮಾಡಿ ನಿವೃತ್ತರಾದರೂ ಈಗಲೂ ಅಲ್ಲಿಗೆ ಹೋಗಿ ಯುವಕರಿಗೆ ತರಬೇತಿ, ಮಾರ್ಗದರ್ಶನ ನೀಡುತ್ತಿದ್ದರು. ತುಳಸಿ ಕಳೆದ ಆರು ದಶಕಗಳಿಂದ ಈ ಕೆಲಸವನ್ನು ಯಾವುದೇ ಪ್ರತಿಫಲ ನಿರೀಕ್ಷೆ ಇಲ್ಲದೆ ಮಾಡುತ್ತಿದ್ದರು.. ಸ್ಥಳೀಯರು ಹೇಳುವಂತೆ ತುಳಸಿ ಅವರು, ಅರಣ್ಯ ಇಲಾಖೆ ನಡೆಸಿದ ಅರಣ್ಯೀಕರಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅವರ…
ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸರ್ಕಿಟ್ ಹೌಸ್ ಹಾಗೂ ಪೀರನವಾಡಿ ಗಾಂಧಿ ಭವನದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗ ಗಂಗಾಧರ ದೇಶಪಾಂಡೆ ಹಾಗೂ ಜವಹಾರ್ ಲಾಲ್ ನೆಹರೂ ಅವರು ಮಾತ್ರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆಗ ದೇಶಪಾಂಡೆ ಅವರು ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸಲು ಆಹ್ವಾನ ನೀಡಿದರು. ಆ ಅಧಿವೇಶನಕ್ಕೆ ಬಂದ ಬರುವ ಜನರಿಗೆ ಕುಡಿಯುವ ನೀರು ಕಲ್ಪಿಸಲು ಬಾವಿ ತೋಡಲಾಗಿತ್ತು. 100 ವರ್ಷಗಳ ನಂತರ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅಂದು ಗಾಂಧಿ ಇಂದು ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ. ಈ ಮಧ್ಯೆ ಅನೇಕ ಮಹಾನ್ ನಾಯಕರು ಆ ಸ್ಥಾನ ಅಲಂಕರಿಸಿದ್ದಾರೆ. ನಿಜಲಿಂಗಪ್ಪನವರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ,…
ಮುಂಬೈ : ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಹಲವು ವಿಡಿಯೋಗಳು ವೈರಲ್ ಆಗುತ್ತವೆ. ಈ ನಡುವೆ ಗ್ರೈಂಡರ್’ ಗೆ ಸಿಲುಕಿ 19 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಭಯಾನಕ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಮುಂಬೈನ ವರ್ಲಿಯ ಆದರ್ಶ್ ನಗರದಲ್ಲಿ ಯುವಕನೊಬ್ಬ ಗ್ರೈಂಡರ್ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಜಾರ್ಖಂಡ್ ಮೂಲದ ಸೂರಜ್ ನಾರಾಯಣ್ ಯಾದವ್ ಕಳೆದ ಮೂರ್ನಾಲ್ಕು ತಿಂಗಳಿನಿಂದ ಸಚಿನ್ ಕೊಥೇಕರ್ ಒಡೆತನದ ರಸ್ತೆಬದಿಯ ಚೈನೀಸ್ ಫುಡ್ ಸ್ಟಾಲ್ನಲ್ಲಿ ಕೆಲಸ ಮಾಡುತ್ತಿದ್ದನು. ಯಾದವ್ ಅವರು ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದಿದ್ದು, ಗ್ರೈಂಡರ್ ಅವರನ್ನು ಒಳಗೆ ಎಳೆದುಕೊಂಡಿದೆ. ಘಟನೆಯ ಭಯಾನಕ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸದ್ಯ ಘಟನೆ ಸಂಬಂಧ ಸ್ಥಳಕ್ಕೆ ದಾದರ್ ಪೊಲೀಸರು ಭೇಟಿ ನೀಡಿದ್ದು, ಫುಡ್ ಸ್ಟಾಲ್ ನ ಮಾಲೀಕ ಕೊಥೇಕರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. https://twitter.com/fpjindia/status/1868906603426283606?ref_src=twsrc%5Etfw%7Ctwcamp%5Etweetembed%7Ctwterm%5E1868906603426283606%7Ctwgr%5Ec0da0a7cc39a0ab233b04fe915ca5350526c797f%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಬೆಂಗಳೂರು : ಆಹಾರ ಸುರಕ್ಷತಾ ಇಲಾಖೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಆಹಾರ ಸುರಕ್ಷತಾ ಇಲಾಖೆಗೆ ಪ್ರತ್ಯೇಕ ನೇಮಕ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್-ಡಿ ಹುದ್ದೆಗಳನ್ನು ಶೇ.30 ರಷ್ಟು Non-Clinical ಗೂ, ಶೇ. 45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ. 75 ರಷ್ಟು ಮೀರದಂತೆ ಹೊರಗುತ್ತಿಗೆ ಮೂಲಕ ಟೆಂಡರ್ ಆಹ್ವಾನಿಸಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು. ರಾಜ್ಯದಲ್ಲಿ ಖಾಲಿಯಿರುವ ತಜ್ಞ ವೈದ್ಯರನ್ನು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಕೆಲವು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಮತ್ತು ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ ಹುದ್ದೆಗೆ ನೇಮಿಸಲಾಗುತ್ತಿದೆ.…
ಬೆಳಗಾವಿ : ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ. ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ ಎಂದರು. ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 188 ಗ್ರಾಮಗಳಿಗೆ ಸಂಬಂಧಿಸಿದಂತೆ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ. 2022ರಲ್ಲಿ ಅಂದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊಂಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒಂದೇ ಹಂತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ…
ನವದೆಹಲಿ : ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಹಲವಾರು ಸಂಸದರು ಮಂಗಳವಾರ ಸಂಸತ್ತಿನ ಸಂಕೀರ್ಣದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟಿಸಿದ್ದಾರೆ. ಬಾಂಗ್ಲಾದೇಶದ ಹಿಂದೂಗಳು ಮತ್ತು ಕ್ರಿಶ್ಚಿಯನ್ನರೊಂದಿಗೆ ಸ್ಟ್ಯಾಂಡ್ ವಿಥ್’ ಎಂದು ಬರೆದ ಬ್ಯಾಗ್ ಅನ್ನು ಪ್ರಿಯಾಂಕಾ ಗಾಂಧಿ ಧರಿಸಿ ಬಂದಿದ್ದಾರೆ. ಪ್ರಿಯಾಂಕಾ ಗಾಂಧಿ ಮತ್ತು ಇತರ ಹಲವಾರು ಸಂಸದರು ಸಂಸತ್ ಭವನದ ‘ಮಕರ ದ್ವಾರ’ ಬಳಿ ಜಮಾಯಿಸಿ ‘ಕೇಂದ್ರ ಸರ್ಕಾರ ಉತ್ತರಿಸಬೇಕು’ ಮತ್ತು ‘ನಮಗೆ ನ್ಯಾಯ ಬೇಕು’ ಎಂಬ ಘೋಷಣೆಗಳನ್ನು ಎತ್ತಿದರು. ಈ ವಿಷಯವಾಗಿ ಕಾಂಗ್ರೆಸ್ ಸೋಮವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿತ್ತು. https://twitter.com/i/status/1868898191762243596 ಕೇರಳದ ವಯನಾಡಿನ ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಕೂಡ ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ಪ್ಯಾಲೆಸ್ತೀನ್ ಜನರಿಗೆ ಬೆಂಬಲವಾಗಿ ಪ್ಯಾಲೆಸ್ತೀನ್ ಎಂದು ಬರೆದಿರುವ ಕೈಚೀಲವನ್ನು ಹೊತ್ತು ಸೋಮವಾರ ಸಂಸತ್ತನ್ನು ತಲುಪಿದ್ದಾರೆ. ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾಗೌಡ, ದರ್ಶನ್ ಸೇರಿದಂತೆ ಹಲವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಇದೀಗ ಮತ್ತೊಬ್ಬ ಆರೋಪಿ ಜೈಲಿನಿಂದ ರಿಲೀಸ್ ಆಗಿದ್ದಾನೆ. ಪ್ರಕರಣದ ಎ-12 ಆರೋಪಿ ಲಕ್ಷ್ಮಣ್ ಶಿವಮೊಗ್ಗ ಜೈಲಿನಿಂದ ರಿಲೀಸ್ ಆಗಿದ್ದಾನೆ. ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ್ದಾನೆ. ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳಾದ ಜಗದೀಶ್ ಹಾಗೂ ಅನು ಕುಮಾರ್ ಶ್ಯೂರಿಟಿ ಒದಗಿಸಲು ಸಾಧ್ಯವಾಗದೇ ಜೈಲಿನಿಂದ ಹೊರ ಬರಲು ಒದ್ದಾಟ ನಡೆಸುತ್ತಿದ್ದಾರೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದು, ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇಂದು ಪವಿತ್ರಾಗೌಡ ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಪವಿತ್ರಾಗೌಡ ತಾಯಿ ಭಾಗ್ಯಮ್ಮ ಬೆಂಗಳೂರಿನ ವಜ್ರಮುನೇಶ್ವರ ದೇಗುಲದಲ್ಲಿ ದರ್ಶನ್ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಹೈಕೋರ್ಟ್ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ 7…












