Author: kannadanewsnow57

ಬೆಂಗಳೂರು : 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್ 27 ರಂದು ಒಂದು ದಿನದ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು 2:27.08.20240 ಮಂಗಳವಾರದಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಸದರಿ ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ (ದಿನಾಂಕ: 27.08.2024) ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಸದರಿ ದಿನಾಂಕವನ್ನು ಸಾರ್ವತ್ರಿಕ ರಜೆಯನ್ನಾಗಿ Negotiable Instrument Act 1881ರ ಅಡಿಯಲ್ಲಿ ಘೋಷಿಸಲಾಗಿದೆ. ಮುಂದುವರೆದು, ಮೇಲೆ ತಿಳಿಸಿರುವ ಪರೀಕ್ಷಾ ಉಪ ಕೇಂದ್ರಗಳಲ್ಲಿ ದಿನಾಂಕ:27.08.2024ರಂದು ಯಾವುದೇ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಅತ್ಯಾಚಾರ ಸಂತ್ರಸ್ತೆಯ ವಿರುದ್ಧವೇ ಆಟೋ ಚಾಲಕರೊಬ್ಬರು ದೂರು ನೀಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ನಲ್ಲಿ ಯುವತಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಇದೀಗ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಯುವತಿ ಮೇಲೆಯೇ ಇದೀಗ ದೂರು ದಾಖಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಸಂತ್ರಸ್ತೆಯ ವಿಚಾರಣೆ ನಡೆಯಲಿದೆ. ಘಟನೆ ನಡೆದ ದಿನ ಗೆಳಯನ ಜೊತೆಗೆ ಕೋರಮಂಗಲಕ್ಕೆ ಹೋಗಿದ್ದ ಯುವತಿ ಊಟ ಮುಗಿಸಿಕೊಂಡು ಬರುವಾಗ ತಾನೇ ಕಾರು ಚಾಲನೆ ಮಾಡಿದ್ದಾಳೆ. ಈ ವೇಳೆ ಮಂಗಳ ಜಂಕ್ಷನ್ ನಲ್ಲಿ ಸರಣಿ ಅಪಘಾತ ಎಸಗಿದ್ದಾರೆ.  2 ಕಾರು, 1 ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾಳೆ. ಈ ವೇಳೆ ಆಟೋ ಚಾಲಕ, ಬೈಕ್ ಸವಾರರು ಯುವತಿಯನ್ನು ಅಡ್ಡಗಟ್ಟಿ ಆಕ್ಸಿಡೆಂಟ್ ಗೆ ಪರಿಹಾರ ಕೊಡುವಂತೆ ಕೇಳಿದ್ದಾರೆ. ಆದರೆ ಯುವತಿ ಕಾರನ್ನು ಅಲ್ಲೇ ಬಿಟ್ಟು ಹೋಗಿದ್ದಾರೆ. ಹೀಗಾಗಿ ಅತ್ಯಾಚಾರ ಸಂತ್ರಸ್ತೆ ಯುವತಿ ವಿರುದ್ಧ ಆಟೋಗೋಡಿ ಸಂಚಾರಿ…

Read More

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವವರಿಗೆ ಕೇಂದ್ರ ಚುನಾವಣಾ ಆಯೋಗ ಸಿಹಿಸುದ್ದಿ ನೀಡಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದೆ. ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ…

Read More

ಹಾಸನ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ನಡೆಸಿವೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ನಡೆಸಿದ್ದಾರೆ. ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ.  ಇನ್ನೂ ಹೆಚ್ಚಿನ ಹಣ ಬಡವರಿಗೆ ನೀಡುತ್ತೇವೆ ಎಂದರು. ರಾಜ್ಯಪಾಲರ ಮೂಲಕ ಸರ್ಕಾರವನ್ನು ಅಭದ್ರಗೊಳಿಸಲು ಹೊರಟಿದ್ದಾರೆ.  ಯಾವುದೇ ಕಾರಣಕ್ಕೂ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಆಗಲ್ಲ. ಕೇಂದ್ರ ಸರ್ಕಾರ ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Read More

ನವದೆಹಲಿ : ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ಮಹಿಳಾ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ.  ಕಳೆದ ಶುಕ್ರವಾರ, ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯರ ಕ್ರೂರ ದೇಹವು ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ಸಿಆರ್ಬಿ) ಯ ಇತ್ತೀಚಿನ ವರದಿಯು ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಕಠೋರ ಚಿತ್ರವನ್ನು ಬಹಿರಂಗಪಡಿಸಿದೆ. 2022 ರಲ್ಲಿ, ದೇಶವು 4,45,256 ಪ್ರಕರಣಗಳನ್ನು ದಾಖಲಿಸಿದೆ, ಅಂದರೆ ಪ್ರತಿ ಗಂಟೆಗೆ 51 ಪ್ರಕರಣಗಳು. ಎನ್ಸಿಆರ್ಬಿ ವರದಿಯ ಪ್ರಕಾರ, ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ‘ಗಂಡಂದಿರು ಅಥವಾ ಅವರ ಸಂಬಂಧಿಕರಿಂದ ಕ್ರೌರ್ಯ’, ‘ಮಹಿಳೆಯರನ್ನು ಅಪಹರಿಸುವುದು ಮತ್ತು ಬಲವಂತವಾಗಿ ತೆಗೆದುಕೊಳ್ಳುವುದು’, ‘ಮಹಿಳೆಯರ ಮೇಲಿನ ಹಲ್ಲೆ’ ಮತ್ತು ‘ಅತ್ಯಾಚಾರ’ ಸೇರಿವೆ. ಎನ್ಸಿಆರ್ಬಿ ವರದಿಯ ಪ್ರಕಾರ, ಭಾರತದಲ್ಲಿ ಪ್ರತಿ 16 ನಿಮಿಷಕ್ಕೆ ಒಬ್ಬ ಮಹಿಳೆಯೊಂದಿಗೆ ಅತ್ಯಾಚಾರದಂತಹ ಅಸಹ್ಯಕರ ಘಟನೆ ನಡೆಯುತ್ತದೆ.  ರಾಜ್ಯಗಳಲ್ಲಿ ಅತ್ಯಾಚಾರ ಪ್ರಕರಣಗಳು…

Read More

ಬಾಗಲಕೋಟೆ : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡರುವ ಪ್ರಾಸಿಕ್ಯೂಷನ್ ವಿರೋಧಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಗಲಕೋಟೆಯ ಜಿಲ್ಲಾಧಿಕಾರಿಗಳ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆ ವೇಳೆ ರಾಜ್ಯಪಾಲರ ಪ್ರತಿಕೃತಿ ದಹನದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮಾನಿ ದ್ಯಾಮಪ್ಪ ಎಂಬುವರಿಗೆ ಬೆಂಕಿ ತಗುಲಿದ್ದು, ಮುಖ,ಎದೆ, ಭುಜಕ್ಕೆ ಸುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಹಲವಡೆ ಟೈರ್ ಗಳಿಗೆ ಬೆಂಕಿ ಹಚ್ಚಲಾಗಿದ್ದು, ಮಂಗಳೂರಿನಲ್ಲಿ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ ಎನ್ನಲಾಗಿದೆ.

Read More

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಪ್ರಚೋದನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್ಗಾಗಿ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ “ಕೀರ್ತಿಸೋಷಿಯಲ್” ಹ್ಯಾಂಡಲ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿ ಕೀರ್ತಿ ಶರ್ಮಾ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯನ್ನು ನೆನಪಿಸುವ ರೀತಿಯಲ್ಲಿ ಮುಖ್ಯಮಂತ್ರಿಯನ್ನು ಹತ್ಯೆ ಮಾಡಲು ಇತರರನ್ನು ಪ್ರೋತ್ಸಾಹಿಸಿದ ಆರೋಪ ಎದುರಿಸುತ್ತಿದ್ದಾನೆ. ಘಟನೆಯ ಬಗ್ಗೆ ಕೋಲ್ಕತಾ ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದು, “ಆರ್ಜಿ ಕಾರ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿದ ಮೂರು ಇನ್ಸ್ಟಾಗ್ರಾಮ್ ಕಥೆಗಳನ್ನು ಅಪ್ಲೋಡ್ ಮಾಡಿದ ಇನ್ಸ್ಟಾಗ್ರಾಮ್ ಐಡಿ ‘ಕೀರ್ತಿಸೋಷಿಯಲ್’ ಹೊಂದಿರುವ ಆರೋಪಿ ವ್ಯಕ್ತಿಯ ಬಗ್ಗೆ ದೂರು ಬಂದಿದೆ. ಪೋಸ್ಟ್ಗಳು ಬಲಿಪಶುವಿನ ಚಿತ್ರ ಮತ್ತು ಗುರುತನ್ನು ಬಹಿರಂಗಪಡಿಸಿವೆ, ಇದು ಸ್ವಭಾವದಲ್ಲಿ ಹೆಚ್ಚು ಆಕ್ರಮಣಕಾರಿಯಾಗಿದೆ. ಇದಲ್ಲದೆ, ಆರೋಪಿಗಳು ಪಶ್ಚಿಮ ಬಂಗಾಳದ ಗೌರವಾನ್ವಿತ ಮುಖ್ಯಮಂತ್ರಿಯ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್ಗಳು ಮತ್ತು ಜೀವ ಬೆದರಿಕೆಗಳನ್ನು ಹೊಂದಿರುವ ಎರಡು ಕಥೆಗಳನ್ನು ಹಂಚಿಕೊಂಡಿದ್ದಾರೆ. ಈ ಹೇಳಿಕೆಗಳು…

Read More

ಬೆಂಗಳೂರು: ರಾಜ್ಯದಲ್ಲಿ ದಾಂದಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯದಲ್ಲಿ ದಾಂದಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ, ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಸಿಎಂ ಸ್ಥಾನದಿಂದ ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಹಿಂದುಳಿದ ನಾಯಕ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಬಿಜೆಪಿಯಿಂದ ಷಡ್ಯಂತ್ರ ನಡೆಯುತ್ತಿದೆ. ಸಿಎಂ ವಿರುದ್ಧ ಸಂವಿಧಾನದ ವಿರುದ್ಧವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Read More

ಬೆಂಗಳೂರು : ನಾನು ಮಂತ್ರಿಯಾಗಿ  40 ವರ್ಷ ಆಯ್ತು, ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿಯವರು ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ರಾಜಕೀಯ ದುರುದ್ದೇಶದಿಂದ ಬಿಜೆಪಿಯರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ರದ್ದುಪಡಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಇಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

Read More

ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಕೇಳುತ್ತಿರುವ ವಿಪಕ್ಷ ನಾಯಕ ಆರ್. ಅಶೋಕ್ ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಆರ್. ಅಶೋಕ್ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ. ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು. ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ…

Read More