Author: kannadanewsnow57

ಬೆಳಗಾವಿ : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು. ಪ್ರಕರಣಗಳನ್ನು ಮರು ಪರಿಶೀಲಿಸುವಂತೆ ಉಪವಿಭಾಗಾಧಿಕಾರಿಗಳು ಸೂಚಿಸಿದರೆ, ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು. https://twitter.com/KarnatakaVarthe/status/1866357481666212181 ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷವಾಗಿರಬೇಕು. ಆದರೆ, 7000 ಅರ್ಜಿದಾರರಿಗೆ 18 ವರ್ಷ ಆಗೇ ಇಲ್ಲ. 3273 ಜನ ಅರ್ಜಿದಾರರು ಕೃಷಿಕರೇ ಅಲ್ಲ. ಸ್ಮಶಾನ, ರಸ್ತೆ, ಕೆರೆ, ಗುಂಡುತೋಪು ಮಂಜೂರಾತಿ ಕೋರಿ 27,452 ಜನ ಅರ್ಜಿ ಸಲ್ಲಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ 33,000…

Read More

UGC NET ಡಿಸೆಂಬರ್ 2024 ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದು ಪ್ರಮುಖ ಅಪ್‌ಡೇಟ್ ಆಗಿದೆ. ಕೆಲವು ಕಾರಣಗಳಿಂದ ಈ ಪರೀಕ್ಷೆಯಲ್ಲಿ ಭಾಗವಹಿಸಲು ಇನ್ನೂ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಕೊನೆಯ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ugcnet.nta.ac.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮಾಧ್ಯಮದ ಮೂಲಕ ಅರ್ಜಿ ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಬೇಕು. ಇಂದು ಅಂದರೆ 10ನೇ ಡಿಸೆಂಬರ್ 2024 ರ ನಂತರ ಅಪ್ಲಿಕೇಶನ್ ವಿಂಡೋವನ್ನು ಮುಚ್ಚಲಾಗುತ್ತದೆ ಎಂಬುದನ್ನು ನೆನಪಿನಲ್ಲಿಡಿ. ಈ ದಿನಾಂಕಗಳಲ್ಲಿ ತಿದ್ದುಪಡಿಗೆ ಅವಕಾಶವಿರುತ್ತದೆ ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ಅಭ್ಯರ್ಥಿಯು ತಪ್ಪು ಮಾಡಿದರೆ, ಅದನ್ನು ತಿದ್ದುಪಡಿ ಮಾಡಬಹುದು. ತಿದ್ದುಪಡಿ ವಿಂಡೋವನ್ನು 12 ರಿಂದ 13ನೇ ಡಿಸೆಂಬರ್ 2024 ರ ನಡುವೆ ತೆರೆಯಲಾಗುತ್ತದೆ. ಅಭ್ಯರ್ಥಿಗಳು ಈ ದಿನಾಂಕಗಳ ನಡುವೆ ನಮೂನೆಯಲ್ಲಿನ ದೋಷಗಳನ್ನು ಸರಿಪಡಿಸಲು ಸಾಧ್ಯವಾಗುತ್ತದೆ. ನೀವೇ ಅನ್ವಯಿಸಬಹುದು ಅಭ್ಯರ್ಥಿಗಳು ಲ್ಯಾಪ್‌ಟಾಪ್/ಡೆಸ್ಕ್‌ಟಾಪ್ ಅಥವಾ ಮೊಬೈಲ್ ಮೂಲಕ ಯುಜಿಸಿ ನೆಟ್ ಪರೀಕ್ಷೆಗೆ ಅರ್ಜಿ…

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಲಾಗಿದೆ. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅಗಲಿದ ನಾಯಕ ಎಸ್.ಎಂ.ಕೃಷ್ಣ ಅವರಿಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ವಿಧಾನಸಭೆ ಕಲಾಪದಲ್ಲಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ಸುಧೀರ್ಘ ರಾಜಕಾರಣ ಮಾಡಿದ್ದಾರೆ. ನಾನು ವಿದ್ಯಾರ್ಥಿಯಾಗಿದ್ದ ವೇಳೆ ಅವರ ಅಭಿಮಾನಿಯಾಗಿದ್ದೆ. ಅವರು ಮುತ್ಸದ್ಧಿ ರಾಜಕಾರಣಿಯಾಗಿದ್ದರು ಎಂದು ತಿಳಿಸಿದ್ದಾರೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ…

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಲಾಗಿದೆ. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅಗಲಿದ ನಾಯಕ ಎಸ್.ಎಂ.ಕೃಷ್ಣ ಅವರಿಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ನಾಳೆಯ ಕಲಾಪವನ್ನು ಗುರುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಶ್ರೀ.ಎಸ್.ಎಂ.ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ಮುಂದುವರೆದು ದಿವಂಗತರ ಅಂತ್ಯಕ್ರಿಯೆಯನ್ನು 2:11.12.20240 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ…

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಳೆಯ ಕಲಾಪ ಗುರುವಾರಕ್ಕೆ ಮುಂದೂಡಲಾಗಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಳೆಯ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅಂತಿಮ ದರ್ಶನ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್.ಕೃಷ್ಣ ಅವರ ನಿವಾಸದಲ್ಲಿ ಅವರ ಪಾರ್ಥಿವ ಶರೀರಕ್ಕೆ ನಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ರಾಜಕೀಯ ಗುರುವಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಎಸ್ಎಮ್ ಕೃಷ್ಣ ಅವರ ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಹಲವು ಗಣ್ಯರು ರಾಜಕೀಯ ನಾಯಕರು ಅವರ ಅಂತಿಮ ದರ್ಶನ ಪಡೆದು ಸಂತಾಪಸೂಚಿಸಿದರು.ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅವರ ಕಾಲಿಗೆ ನಮಿಸಿ ಕಣ್ಣೀರು ಹಾಕಿ ಸಂತಾಪ ಸೂಚಿಸಿದರು. ಏಕೆಂದರೆ ಡಿ ಕೆ ಶಿವಕುಮಾರ್ ಅವರ ರಾಜಕೀಯ ಗುರು ಎಸ್ ಎಂ ಕೃಷ್ಣ ಅವರು ಆಗಿದ್ದರು. ಅವರ ಗರಡಿಯಲ್ಲಿ ಡಿಕೆ ಶಿವಕುಮಾರ್ ಅವರು ರಾಜಕೀಯವಾಗಿ ಬಹು ಎತ್ತರಕ್ಕೆ ಬೆಳೆದಿದ್ದಾರೆ. ಕಾಲಿಗೆ ನಮಸ್ಕರಿಸುವ ವೇಳೆ ಬಿಕ್ಕಿ ಬಿಕ್ಕಿ ಅತ್ತಿರುವ ದೃಶ್ಯ ಕಂಡು ಬಂದಿತು.…

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ, ಎಸ್ ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಅಗಲಿದ ನಾಯಕನಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಸ್ಎಮ್ ಕೃಷ್ಣ ಅವರ ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಹಲವು ಗಣ್ಯರು ರಾಜಕೀಯ ನಾಯಕರು ಅವರ ಅಂತಿಮ ದರ್ಶನ ಪಡೆದು ಸಂತಾಪಸೂಚಿಸಿದರು.ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅವರ ಕಾಲಿಗೆ ನಮಿಸಿ ಕಣ್ಣೀರು ಹಾಕಿ ಸಂತಾಪ ಸೂಚಿಸಿದರು. ಏಕೆಂದರೆ ಡಿ ಕೆ ಶಿವಕುಮಾರ್ ಅವರ ರಾಜಕೀಯ ಗುರು ಎಸ್ ಎಂ ಕೃಷ್ಣ ಅವರು ಆಗಿದ್ದರು. ಅವರ ಗರಡಿಯಲ್ಲಿ ಡಿಕೆ ಶಿವಕುಮಾರ್ ಅವರು ರಾಜಕೀಯವಾಗಿ ಬಹು ಎತ್ತರಕ್ಕೆ ಬೆಳೆದಿದ್ದಾರೆ. ಕಾಲಿಗೆ ನಮಸ್ಕರಿಸುವ ವೇಳೆ ಬಿಕ್ಕಿ ಬಿಕ್ಕಿ ಅತ್ತಿರುವ ದೃಶ್ಯ ಕಂಡು ಬಂದಿತು. ಇದೇ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚೆಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು ಶಾಸಕರು ಭಾಗಿಯಾಗಿದ್ದರು. ಈಗಾಗಲೇ ಪ್ರಧಾನ ಮಂತ್ರಿ…

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಾಳೆ ಬೆಳಗ್ಗೆ 8 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಎಲ್ಲರಿಗೂ ಅಂತಿಮ ನಮನ ಸಲ್ಲಿಸಲು ಅವಕಾಶವಿದೆ, ನಾಳೆ ಬೆಳಿಗ್ಗೆ 8 ಗಂಟೆಗೆ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 10.30ರ ವರೆಗೆ ಮದ್ದೂರಿಗೆ ಕರೆದುಕೊಂಡು ಹೋಗಿ, ಮಧ್ಯಾಹ್ನ 3 ಗಂಟೆಯವರೆಗೆ ಕುಟುಂಬದವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4 ಗಂಟೆಗೆ ಸರ್ಕಾರಿ ಗೌರವ ಸಲ್ಲಿಸಿ ಅಂತಿಮ ಸಂಸ್ಕಾರ ನಡೆಯಲಿದೆ. https://twitter.com/i/status/1866342989611848024

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ನಾಳೆ ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯಾದ್ಯಂತ 3 ದಿನ ಶೋಕಾಚರಣೆ ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ…

Read More