Author: kannadanewsnow57

ಬೆಂಗಳೂರು : ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಮುಖ್ಯಮಂತ್ರಿಯವರ 1 ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ನೀಡುವ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬ್ಯಾಂಕ್ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಮೊದಲ ಹಂತದಲ್ಲಿ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ. ನೀಡಲು ಬ್ಯಾಂಕುಗಳ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ. ಮೊದಲ ಹಂತದಲ್ಲಿ ಸಾಲಕ್ಕಾಗಿ 3 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, 316 ಮಂದಿಗೆ ಸಾಲ ಮಂಜೂರಾಗಿದೆ. ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಎಸ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಐಐಎಫ್ಎಲ್ ಬ್ಯಾಂಕ್ ವತಿಯಿಂದ 15.80 ಕೋಟಿ ರೂಪಾಯಿ ಮೊತ್ತದ ಚೆಕ್ ಗಳನ್ನು ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು 1 ಲಕ್ಷ ಮನೆ ಯೋಜನೆಯಡಿ ಹಂತ ಹಂತವಾಗಿ 45,125 ಫಲಾನುಭವಿಗಳಿಗೆ ಸಾಲ ಮಂಜೂರಾದಲ್ಲಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಮನೆಗಳ ಹಂಚಿಕೆ ಮಾಡಲಾಗುವುದು,…

Read More

ಬೆಂಗಳೂರು : ಫ್ಲೈಓವರ್ ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ಮಾನಸಿಕ ಅಸ್ವಸ್ಥೆಯೊಬ್ಬಳು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆಯಲ್ಲಿ ನಡೆದಿದೆ. ದೊಡ್ಡಬಳ್ಲಾಪುರ ತಾಲೂಕಿನ ದೊಡ್ಡ ಹೆಜ್ಜಾಜಿ ಗ್ರಾಮದ ನರಸಿಂಹಮೂರ್ತಿ ಎಂಬ ವ್ಯಕ್ತಿಯನ್ನು ಮಾನಸಿಕ ಅಸ್ವಸ್ಥೆ ಉಮಾದೇವಿ ಕೊಲೆ ಮಾಡಿದ್ದು, ಪೊಲೀಸರು ಮಾನಸಿಕ ಅಸ್ವಸ್ಥೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನರಸಿಂಹಮೂರ್ತಿ ಹಲವು ವರ್ಷಗಳಿಂದ ದಾಬಸ್ ಪೇಟೆಯಲ್ಲೇ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ರು. ಶನಿವಾರ ಉದ್ದಾನೇಶ್ವರ ದೇಗುಲದ ಪಕ್ಕದ ಫ್ಲೈಓವರ್ ಬಳಿ ಮಲಗಿದ್ದ ವೇಳೆ ಅತನ ಮೇಲೆ ರಾಮನಗರ ಜಿಲ್ಲೆಯ ಕುದೂರು ಮೂಲದ ಉಮಾದೇವಿ ಎಂಬಾಕಿ ಏಕಾಏಕಿ ಕಲ್ಲಿನಿಂದ ಹಲ್ಲೆ ನಡೆಸಿದ್ದಾಳೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ನರಸಿಂಹಮೂರ್ತಿಯನ್ನು ಸ್ಥಳೀಯರು ಆ್ಯಂಬುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ಪಿಡಿಒ ಹುದ್ದೆ ನೇಮಕಾತಿ ಪರೀಕ್ಷೆ ವೇಳೆ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಯೊಬ್ಬನನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಲಾ ಕಾಲೇಜಿನ ಕೇಂದ್ರವೊಂದರಲ್ಲಿ ಪಿಡಿಒ ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಓರ್ವ ಅಭ್ಯರ್ಥಿಯನ್ನು ತುಮಕೂರಿನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ನಡೆಯುತ್ತಿದ್ದ ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಬೆಂಗಳೂರಿನ ರಾಮಮೂರ್ತಿ ನಗರದ ಅಭ್ಯರ್ಥಿಯೊಬ್ಬ ಬ್ಲೂಟೂತ್ ಸಾಧನ ಬಳಸಿ ಅಕ್ರಮ ಮಾಡುತ್ತಿರುವುದು ಸಿಸಿ ಕ್ಯಾಮರಾ ಕಂಟ್ರೋಲ್ ರೂಮ್ ನಲ್ಲಿ ಕೂತು ವೀಕ್ಷಿಸುತ್ತಿದ್ದ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಕೊಠಡಿಗೆ ತೆರಳಿ ಆತನನ್ನು ವಿಚಾರಣೆ ನಡೆಸಲು ಮುಂದಾದಾಗ, ಆತ ನೆಪ ಹೇಳಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನನ್ನು ಹಿಡಿದುಕೊಂಡ ಸಿಬ್ಬಂದಿ, ಭದ್ರತೆಗೆ ನಿಯೋಜನೆಗೊಂಡ ಪೊಲೀಸರ ವಶಕ್ಕೆ ನೀಡಲಾಗಿದೆ. ಸದ್ಯ ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಬೆಳಗಾವಿ : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ದುರಂತದ ಬೆನ್ನಲ್ಲೇ ಇದೀಗ ಬೆಳಗಾವಿಯ ಬಿಮ್ಸ್ ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 6 ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಸಾವನ್ನಪ್ಪಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.  ಬೆಳಗಾವಿಯಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಹಾಗೂ ಒಂದು ವರ್ಷದ ಅವಧಿಯಲ್ಲಿ 322 ಶಿಶುಗಳು ಮೃತಪಟ್ಟಿದ್ದು, ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. 2024 ರ ಏಪ್ರೀಲ್ ನಿಂದ ಅಕ್ಟೋಬರ್ ವರೆಗೆ ಜಿಲ್ಲೆಯಲ್ಲಿ 29 ಬಾಣಂತಿಯರ ಸಾವಾಗಿದೆ. ಹೆರಿಗೆಯ ಸಮಯದಲ್ಲಿ ತೀವ್ರ ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಸೇರಿ ಹಲವು ಕಾರಣಗಳಿಂದ ಬೆಳಗಾವಿ ಜಿಲ್ಲೆಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರ ಸಾವು ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ಹೇಳಿಕೊಂಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳ ಸರಣಿ ಸಾವಿನ ಪ್ರಕರಣವನ್ನು ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

Read More

ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್​ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ, ವಕ್ಫ್ ಆಸ್ತಿ ವಿವಾದ ಚರ್ಚೆಗೆ ಪ್ರಮುಖ ಬಿಂದುಗಳಾಗಬಹದು. ವಕ್ಫ್ ವಿವಾದ, ಪಡಿತರ ಚೀಟಿ ಗೊಂದಲ, ಮುಡಾ ಹಗರಣ ಸೇರಿ ಸಾಲು ಸಾಲು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳು ವಿಪಕ್ಷಗಳು ಸಜ್ಜಾಗಿವೆ. ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಚಾಟಿ ಬೀಸಲು ವಿಪಕ್ಷಗಳು ತಯಾರಿ ನಡೆಸಿವೆ. ಹಾಗೇ ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳಾದ ಮೂಲಭೂತ ಸೌಕರ್ಯದ ವಿಚಾರಕ್ಕೆ ಈ ಬಾರಿಯಾದರೂ ಪರಿಹಾರ ಸಿಗುತ್ತಾ ಕಾದು ನೋಡಬೇಕಿದೆ.

Read More

ಬೆಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲು ಬೀರಿದೆ. ಕಳೆದ ಹಲವಾರು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಅವಾಂತರ ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಕಾಏಕಿ ತರಕಾರಿ ಬೆಲೆ ಏರಿಕೆಯಾಗಿದೆ. ಹೌದು ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ತರಕಾರಿ ಇಳುವರಿ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಮಾರುಕಟ್ಟೆಗೆ ಪೂರೈಕೆ ಗಣನೀಯವಾಗಿ ಇಳಿದಿದ್ದು, ತರಕಾರಿ ಬೆಲೆ ಗಗನಕ್ಕೇರಿದೆ. ದಿಢೀರ್ ತರಕಾರಿ ಬೆಲೆ ಏರಿಕೆಯಿಂದಾಗಿ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಿದೆ. ಟೊಮ್ಯಾಟೋ ಕೆಜಿಗೆ 60 ರಿಂದ 70 ಏರಿಕೆಯಾಗಿದೆ, ಅದೇ ರೀತಿಯಾಗಿ ನುಗ್ಗೇಕಾಯಿ 500 ರೂ, ಬಟಾಣಿ, ಕೆಜಿಗೆ 180 ರಿಂದ 200 ರೂ, ಮೆಣಸಿನಕಾಯಿ ಕೆಜಿಗೆ 40 ರಿಂದ 50 ರೂ, ಆಲೂಗಡ್ಡೆ ಕೆಜಿಗೆ 35 ರಿಂದ 40 ರೂ, ಬೀನ್ಸ್ ಕೆಜಿಗೆ 60 ರೂ, ಕ್ಯಾರೆಟ್ ಕೆಜಿಗೆ 60 ರಿಂದ 80 ರೂ, ಹಾಗೂ ಗ್ರೀನ್ ಕ್ಯಾಪ್ಸಿಕ್ಸಂ ಕೆಜಿಗೆ 50…

Read More

ಬೆಂಗಳೂರು : 2024-25 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಬಾಲಾಸ್ಯ ಕಾರ್ಯಕ್ರಮದಡಿ 17 ನೇ ಸುತ್ತಿನ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 1-19ನೇ ವಯೋಮಾನದ ಎಲ್ಲಾ ಮಕ್ಕಳಿಗೆ ಮಾತ್ರ ವಿತರಿಸಿ ಹಮ್ಮಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2024-25 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಮತ್ತು ಪದವಿ ಪೂರ್ವ ಶಿಕ್ಷಣ ಕಾಲೇಜುಗಳಲ್ಲಿ 1-19 ರ ವಯೋಮಾನದ ಎಲ್ಲಾ ಮಕ್ಕಳಿಗೆ ರಾಷ್ಟ್ರೀಯ ಜಂತುಹುಳು ನಿವಾರಣೆಯ ದಿನಾಚರಣೆಯನ್ನು (National De-worming Day – NDD) ಪ್ರಸ್ತುತ ಶೈಕ್ಷಣಿಕ ವರ್ಷದ ಕಾರ್ಯಕ್ರಮವಾಗಿ ಡಿಸೆಂಬರ್-2024ರ ಮಾಹೆಯಲ್ಲಿ ದಿನಾಂಕ : 09.12.2024 ರಂದು ಮತ್ತು ಸದರಿ ದಿನದಂದು ಹಾಜರಾಗದೇ ಇರುವ ಮಕ್ಕಳಿಗೆ ದಿನಾಂಕ :16.12.2024 ರಂದು ಮಾಪ್ ಅಪ್ ದಿನವನ್ನಾಗಿ ( Mop up Day ) ಆಯೋಜಿಸಲು ಉಲ್ಲೇಖಿತ ಸಭೆಯಲ್ಲಿ…

Read More

ಹಾವೇರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ ಈ ಹಿನ್ನೆಲೆಯಲ್ಲಿ ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದೆ. ಈ ಒಂದು ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ಅಕ್ಕಿ ಕಡಿಮೆ ಮಾಡಲ್ಲ ಎಂದು ತಿಳಿಸಿದರು. ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಕಡಿಮೆ ಮಾಡಲ್ಲ. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳಲ್ಲ. ಅರ್ಹ ಇರುವ ಎಲ್ಲರಿಗೂ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ದೇಶದಲ್ಲಿ ನಮ್ಮ ರಾಜ್ಯದಲ್ಲಿ ಅಷ್ಟೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ತಗುಲುವ ಹಣ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಸಹ ಅಕ್ಕಿ ಕೊಡಲಿಲ್ಲ. ಬಿಜೆಪಿ ಅಧಿಕಾರ ಇರುವ ರಾಜ್ಯದಲ್ಲಿ 10 ಕೆಜಿ ಅಕ್ಕಿ…

Read More

ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಸಾಲದ ಮಿತಿಯನ್ನು ₹2 ಲಕ್ಷಕ್ಕೆ ಏರಿಕೆ ಮಾಡಿದೆ. ಹೌದು, ರೈತರ ಕೃಷಿ ಚಟುವಟಿಕೆಗಳಿಗೆ ಕಿಸಾನ್‌ ಸಮ್ಮಾನ್‌ ಯೋಜನೆ ಮೂಲಕ ನೆರವಾದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಇದೀಗ ಕೃಷಿ ಸಾಲದ ಮಿತಿಯನ್ನು ₹2 ಲಕ್ಷಕ್ಕೆ ಏರಿಕೆ ಮಾಡಿದೆ. ಅಡಮಾನ ರಹಿತ ಕೃಷಿ ಸಾಲದ ಮಿತಿಯನ್ನು ಕೇಂದ್ರ ಬಿಜೆಪಿ ಸರ್ಕಾರ ಈ ಹಿಂದೆ ₹1 ಲಕ್ಷದಿಂದ ₹1.6 ಲಕ್ಷಕ್ಕೆ ಏರಿಕೆ ಮಾಡಿತ್ತು. ಇದೀಗ ಮತ್ತೊಮ್ಮೆ ₹2 ಲಕ್ಷಕ್ಕೆ ಏರಿಸುವ ಮೂಲಕ ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಸಾಲ ಪಡೆಯಲು ಅನುಕೂಲ ಮಾಡಿಕೊಟ್ಟಿದೆ. ಹಣದುಬ್ಬರ ಮತ್ತು ಕೃಷಿಯಲ್ಲಿ ಬಳಸುವ ಕಚ್ಚಾ ವಸ್ತುಗಳ ಬೆಲೆಯಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಗ್ಯಾರಂಟಿ ರಹಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷದಿಂದ ರೂ. 2 ಲಕ್ಷ” ಎಂದು ನಿರ್ಧರಿಸಲಾಗಿದೆ. ಇದರಿಂದ ಸಣ್ಣ ಮತ್ತು ಅತಿಸಣ್ಣ ರೈತರು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ…

Read More

ಬಳ್ಳಾರಿ : ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ ಸಾಬೀತುಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ. ತುಕಾರಾಮ್ ಅವರಿಗೂ ಮೊದಲು ಸಂಡೂರು ಹೇಗಿತ್ತು ಎನ್ನುವುದೂ ನನಗೂ ಗೊತ್ತು. ಈಗ ತುಕಾರಾಮ್ ಅವರು ಒಳ್ಳೆ ಕೆಲಸಗಳನ್ನು ಮಾಡಿರುವುದನ್ನು ನಾನು ನೋಡಿದ್ದೇನೆ. ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು…

Read More