Subscribe to Updates
Get the latest creative news from FooBar about art, design and business.
Author: kannadanewsnow57
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಸಮೀಪದ ಮಂಜನಾಡಿ ಗ್ರಾಮದ ಖಂಡಿಕದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುತ್ತಲಿಬ್ ಅವರ ಪತ್ನಿ ಖುಬ್ರಾ, ಮಕ್ಕಳಾದ ಮಹದಿಯಾ, ಮಜಿಯಾ ಮಾಯಿಜಾ ಗಾಯಗೊಂಡಿದ್ದು, ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಮಧ್ಯರಾತ್ರಿ ವೇಳೆ ಸ್ಪೋಟದಿಂದಾಗಿ ಮನೆಯ ಮೇಲ್ಚಾವಣಿ ಸಂಪೂರ್ಣ ಹಾರಿ ಹೋಗಿದ್ದು, ಕಿಟಕಿ ಹಾಗೂ ಕೊಠಡಿಗಳು ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
2024 ರ ಕೊನೆಯ ತಿಂಗಳು ಡಿಸೆಂಬರ್ ತಿಂಗಳಲ್ಲಿ ಜಗತ್ತು ಅಪರೂಪದ ಖಗೋಳ ಘಟನೆಗೆ ಸಾಕ್ಷಿಯಾಗಲಿದೆ. ಹೌದು, ಈ ತಿಂಗಳು ಜಗತ್ತು ತಣ್ಣನೆಯ ಚಂದ್ರನನ್ನು ನೋಡಲಿದೆ. ನೀವು ಹುಣ್ಣಿಮೆ, ಸೂಪರ್ ಮೂನ್, ಹಂಟರ್ ಮೂನ್ ನೋಡಿರಬಹುದು, ಆದರೆ ಕೋಲ್ಡ್ ಮೂನ್ ಬಗ್ಗೆ ಜಗತ್ತಿಗೆ ತಿಳಿದಿರುವುದಿಲ್ಲ. ಈ ಚಂದ್ರನು ಪ್ರತಿವರ್ಷ ಕಾಣಿಸಿಕೊಳ್ಳುತ್ತಾನೆ ಮತ್ತು ಈ ತಿಂಗಳ ತಂಪಾದ ಚಳಿಗಾಲದ ರಾತ್ರಿಯಲ್ಲಿ ಗೋಚರಿಸುತ್ತಾನೆ. ಈ ಚಂದ್ರನು ಡಿಸೆಂಬರ್ 21 ರ ಸುಮಾರಿಗೆ ವರ್ಷದ ದೀರ್ಘ ರಾತ್ರಿಯಲ್ಲಿ ಗೋಚರಿಸುತ್ತಾನೆ. ಈ ಬಾರಿ ಡಿಸೆಂಬರ್ 15ರ ಹುಣ್ಣಿಮೆಯ ರಾತ್ರಿ ಸುಮಾರು 4:02 ಗಂಟೆಗೆ ಈ ಶೀತಲ ಚಂದ್ರ ಗೋಚರಿಸಲಿದ್ದು, ಉತ್ತುಂಗದಲ್ಲಿರಲಿದೆ. Space.com ಅನ್ನು ಉಲ್ಲೇಖಿಸಿ ಈ ಮಾಹಿತಿಯನ್ನು ಬಹಿರಂಗಪಡಿಸಲಾಗಿದೆ. ಡಿಸೆಂಬರ್ ತಿಂಗಳು ಚಳಿಗಾಲದಲ್ಲಿ ತಂಪಾದ ತಿಂಗಳು, ಆದ್ದರಿಂದ ಹುಣ್ಣಿಮೆಯ ರಾತ್ರಿ ಗೋಚರಿಸುವ ಈ ಚಂದ್ರನನ್ನು ಶೀತ ಚಂದ್ರ ಎಂದು ಕರೆಯಲಾಗುತ್ತದೆ. ಈ ಹೆಸರನ್ನು ನ್ಯೂಯಾರ್ಕ್ ಮತ್ತು ಕೆನಡಾದ ಮೊಹಾಕ್ ಜನರು ನೀಡಿದರು. ಕೋಲ್ಡ್ ಮೂನ್ ಭಾರತದಲ್ಲಿ ಗೋಚರಿಸುವುದಿಲ್ಲ ಮಾಧ್ಯಮ ವರದಿಗಳ…
ಬೆಂಗಳೂರು : ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಮುಖ್ಯಮಂತ್ರಿಯವರ 1 ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ನೀಡುವ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬ್ಯಾಂಕ್ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಮೊದಲ ಹಂತದಲ್ಲಿ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ. ನೀಡಲು ಬ್ಯಾಂಕುಗಳ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ. ಮೊದಲ ಹಂತದಲ್ಲಿ ಸಾಲಕ್ಕಾಗಿ 3 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, 316 ಮಂದಿಗೆ ಸಾಲ ಮಂಜೂರಾಗಿದೆ. ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಎಸ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಐಐಎಫ್ಎಲ್ ಬ್ಯಾಂಕ್ ವತಿಯಿಂದ 15.80 ಕೋಟಿ ರೂಪಾಯಿ ಮೊತ್ತದ ಚೆಕ್ ಗಳನ್ನು ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು 1 ಲಕ್ಷ ಮನೆ ಯೋಜನೆಯಡಿ ಹಂತ ಹಂತವಾಗಿ 45,125 ಫಲಾನುಭವಿಗಳಿಗೆ ಸಾಲ ಮಂಜೂರಾದಲ್ಲಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಮನೆಗಳ ಹಂಚಿಕೆ ಮಾಡಲಾಗುವುದು,…
ಬಳ್ಳಾರಿ : ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಇದರ ಕುರಿತಾಗಿ ಉನ್ನತ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ, ಅವರು ನೀಡುವ ವರದಿಯನ್ನಾಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದರು. ಶನಿವಾರ ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂದು ಕರ್ನಾಟಕ ರಾಜ್ಯ ಡ್ರಗ್ಸ್ ಲಾಜಿಸ್ಟಿಕ್ಸ್ ವರದಿ ನೀಡಿದ್ದರೆ, ಸೆಂಟ್ರಲ್ ಡ್ರಗ್ಸ್ ಲ್ಯಾಬ್(CDL) ಪಾಸಿಟಿವ್ ವರದಿ ನೀಡಿದೆ. ಇದನ್ನು ಉಲ್ಲೇಖಿಸಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ)ಗೆ ಪತ್ರ ಬರೆದು ಪ್ರಶ್ನೆ ಮಾಡಿದ್ದೇವೆ. ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಆದೇಶಿಸಲಾಗುವುದು ಎಂದರು. ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ತಜ್ಞರ ಸಮಿತಿ ತಂಡ ಕಳುಹಿಸುತ್ತೇವೆ. ಎಲ್ಲಿ ತಪ್ಪಾಗಿದೆ ಅದನ್ನು ಕಂಡು ಹಿಡಿಯಬೇಕಿದೆ ಎಂದರು. ಜಿಲ್ಲೆಯ…
ಬೆಂಗಳೂರು : ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಕುಖ್ಯಾತ ಅಂತಾರಾಜ್ಯ ಸರಗಳ್ಳರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸರು ಮೂವರು ಅಂತಾರಾಜ್ಯ ಸರಗಳರನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪ್ಪುರ, ಮೈಸೂರು, ಆಂಧ್ರಪ್ರದೇಶ ಸೇರಿದಂತೆ 33 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳರು ಕೈಚಳಕ ತೋರಿದ್ದರು. ಆಂಧ್ರದಲ್ಲಿ ಕಳ್ಳತನದ ವೇಳೆ ಮಹಿಳೆಯೊಬ್ಬರನ್ನು ಹತ್ಯೆ ಮಾಡಿದ್ದರು. ದೊಡ್ಡಬಳ್ಳಾಪುರದಲ್ಲಿ ಸೆ.19ರದು ಮೂರು ಕಡೆಗಳಲ್ಲಿ ಈ ಗ್ಯಾಂಗ್ ಕಳ್ಳತನ ಮಾಡಿತ್ತು. ಮೈಸೂರಿನಲ್ಲಿ ಒಂದೇ ಪ್ರದೇಶದಲ್ಲಿ ಮೂರು ಕಡೆ ಕಳ್ಳತನ ಮಾಡಿದ್ದರು. ಪೊಲೀಸರ ಕಣ್ತಪ್ಪಿಸಿ ಆಂಧ್ರಕ್ಕೆ ಪರಾರಿಯಾಗುತ್ತಿದ್ದ ವೇಳೆ ಪಿಐ ಸಾದಿಕ್ ಪಾಷಾ ನೇತೃತ್ವದ ತಂಡ ಮೂವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಅನಾವರಣವು ಶ್ರೀ ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಅನಾವರಣಗೊಳ್ಳಲಿರುವುದು. ಇದು ಕೇವಲ ಒಂದು ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮವಲ್ಲ, ಬದಲಾಗಿ ನಮ್ಮ ಪ್ರಜಾಪ್ರಭುತ್ವದ ಮೂಲ ಆಶಯಗಳು, ಸಮಾನತೆ, ಮಾನವೀಯ ಸಂದೇಶಗಳನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸುವ ಹಾಗೂ ಶ್ರೀ ಮಹಾತ್ಮಾ ಗಾಂಧೀಜಿಯವರು ಅಧಿವೇಶನದಲ್ಲಿ ಪಾಲ್ಗೊಂಡ ಶತಮಾನೋತ್ಸವದ, ಸ್ಮರಣಾರ್ಥವಾಗಿ ನಡಯುವ ಒಂದು ಮಹತ್ವದ ಐತಿಹಾಸಿಕ ಕ್ಷಣವಾಗಿದೆ. ಕ್ಯಾನ್ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರಕ್ಕೆ ಜೀವಂತಿಗೆ…
ಬೆಂಗಳೂರು : ಕಳೆದ ಮೂರು-ನಾಲ್ಕು ದಶಕಗಳಿಂದ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಲಕ್ಷಾಂತರ ರೈತರಿಗೆ ಜಮೀನು ಮಂಜೂರು ಮಾಡಲಾಗಿದೆ. ಆದರೆ, ನಾನಾ ಕಾರಣಗಳಿಂದಾಗಿ ರೈತರಿಗೆ ಸೂಕ್ತ ದಾಖಲೆಗಳನ್ನು ನೀಡಲಾಗಿಲ್ಲ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ಹೀಗಾಗಿ ರೈತರಿಗೆ ಇಂತಹ ಶೋಷಣೆಗಳಿಂದ ತುಸು ನೆಮ್ಮದಿ ನೀಡಬೇಕು ಎಂಬ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ಕಂದಾಯ ಇಲಾಖೆ ಸ್ಪಷ್ಟವಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ನಮೂನೆ 1-5 ಹಾಗೂ 6-10 ಅನ್ನು ಸರಳೀಕರಣಗೊಳಿಸಿ ರೈತರ ಜಮೀನನ್ನು ದುರಸ್ಥಿ ಮಾಡಿಕೊಡಬೇಕು ಹಾಗೂ ಬಡ ರೈತರ ಪಾಲಿನ ಮಹತ್ವಾಕಾಂಕ್ಷೆಯ ಯೋಜನೆಯಾದ ಬಗರ್ ಹುಕುಂ ಅಡಿಯಲ್ಲಿ ಮಂಜೂರು ಮಾಡಲಾಗುವ ಜಮೀನಿಗೆ ಹಕ್ಕುಪತ್ರ ನೀಡುವುದು ಮಾತ್ರವಲ್ಲದೆ, ರಿಜಿಸ್ಟರ್ ಕಚೇರಿಯಲ್ಲಿ ಸ್ವತಃ ತಹಶೀಲ್ದಾರ್ ನೋಂದಣಿ ಮಾಡಿಕೊಡುವಂತಹ ವ್ಯವಸ್ಥೆಯನ್ನು ರೂಪಿಸಬೇಕು ಎಂಬ ವಿಚಾರದಲ್ಲಿ ನಮ್ಮ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡಿತ್ತು. ಅದರಂತೆ ನಮೂನೆ 1-5…
ಬೆಂಗಳೂರು : ಮಾದಕ ವಸ್ತು ಬಳಕೆ ನಿಯಂತ್ರಿಸಲು ಡ್ರಗ್ ಫ್ರೀ ಕರ್ನಾಟಕ ಆ್ಯಪ್ ಅನ್ನು ಪೊಲೀಸ್ ಇಲಾಖೆ ಅಭಿವೃದ್ಧಿಪಡಿಸಿದೆ. ಗಾಂಜಾ ಬೆಳೆಯುತ್ತಿರುವವರು, ಮಾರಾಟ ಮಾಡುತ್ತಿರುವವರು, ಗ್ರಾಹಕರು, ಸಿಂಥೆಟಿಕ್ ಡ್ರಗ್ಸ್ ತಯಾರಿಸುತ್ತಿರುವ ಪ್ರಯೋಗಾಲಯಗಳು, ಸಂಗ್ರಹಣೆ ಮಾಡುತ್ತಿರುವ ಸಂಗ್ರಹಕಾರರು, ಸಾಗಾಣಿಕೆ ಮಾಡುತ್ತಿರುವ ಸಾರಿಗೆ ವ್ಯವಸ್ಥೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಈ ಆ್ಯಪ್ ಮೂಲಕ ಪೊಲೀಸರೊಂದಿಗೆ ಗೌಪ್ಯವಾಗಿ ಹಂಚಿಕೊಳ್ಳಬಹುದು. ಸಾರ್ವಜನಿಕರು ಹಂಚಿಕೊಂಡ ಮಾಹಿತಿ ಲೊಕೇಷನ್ ಅನ್ನು ಸ್ಥಳೀಯ ಪೊಲೀಸರು, ಡಿಸಿಪಿ, ಎಸ್‌ಪಿ ಹಾಗೂ ಉಸ್ತುವಾರಿ ಮೇಲಾಧಿಕಾರಿಗಳಿಗೆ ಹಂಚಿಕೊಳ್ಳುತ್ತಾರೆ. ಮಾಹಿತಿ ಪಡೆದ ಅಧಿಕಾರಿಯು, ಆ ಮಾಹಿತಿಯ ನೈಜತೆ ಖಾತ್ರಿ ಪಡಿಸಿಕೊಂಡು ದಾಳಿ ಮಾಡುವ ವ್ಯವಸ್ಥೆ ಜಾರಿಗೆ ತರಲಾಗಿದೆ.
ಬೆಂಗಳೂರು: ರಾಜ್ಯದ ಅನೇಕ ಸರ್ಕಾರಿ ನೌಕರರಿಗೆ ತಮ್ಮ ವಿರುದ್ಧ ಸಾಬೀತಾದಂತ ಆರೋಪಗಳಿಗೆ ಯಾವೆಲ್ಲ ಶಿಕ್ಷೆ ಆಗಲಿವೆ ಅಂತ ಗೊತ್ತಿಲ್ಲ. ಇಂತಹ ರಾಜ್ಯ ಸರ್ಕಾರಿ ನೌಕರರಿಗೆ ನೌಕರನ ವಿರುದ್ಧ ಸಾಬೀತಾದ ಆರೋಪಗಳಿಗೆ ಅನುಗುಣವಾಗಿ ಯಾವೆಲ್ಲ ದಂಡನೆಗಳನ್ನು ವಿಧಿಸಬಹುದಾಗಿದೆ ಅಂತ ಮುಂದೆ ಓದಿ. ಈ ಬಗ್ಗೆ 2001ರಲ್ಲಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಮಾಹಿತಿ ನೀಡಿದ್ದು, ಅದರಲ್ಲಿ ರಾಜ್ಯ ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ ವಿಧಿಸಬಹುದಾದಂತಹ ದಂಡನೆಗಳ ಬಗ್ಗೆ ಕರ್ನಾಟಕ ಸಿವಿಲ್ ಸೇವಾ ನಿಯಮದಲ್ಲಿ ನಿರ್ದಿಷ್ಟ ಪಡಿಸಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ಎಂಬುದನ್ನು ನಿಗದಿಪಡಿಸಿರುವುದಿಲ್ಲ. ಇದರಿಂದಾಗಿ ಕೆಲವು ಸಂದರ್ಭಗಳಲ್ಲಿ ಆರೋಪದ ತೀವ್ರತೆಗಿಂತ ವಿಧಿಸಲಾದ ದಂಡನೆಗಳು ಕಡಿಮೆ ಅಥವಾ ಹೆಚ್ಚಿನದಾಗುವ, ಹೊಂದಿದ ಆರೋಪಗಳ ಶಿಸ್ತು ಪ್ರಾಧಿಕಾರಿಗಳು, ಹೋಲಿಸಬಹುದಾದಂತಹ ತೀವ್ರತೆಯನ್ನು ಹೊಂದಿದ ಆರೋಪಗಳ ಪ್ರಕರಣಗಳಲ್ಲಿ ಬೇರೆ ಬೇರೆ ದಂಡನೆಗಳನ್ನು…
ಹೈದರಾಬಾದ್ : ವಾಲಿಬಾಲ್ ಆಡುವಾಗಲೇ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ನಡೆದಿದೆ. ಪೆದ್ದಮಂದಡಿ ಮಂಡಲದ ಬಲಿಜಪಲ್ಲಿ ಗ್ರಾಮದ ಜೆಡ್.ಪಿ.ಹೆಚ್.ಎಸ್. ಶಾಲೆಯ ಆವರಣದಲ್ಲಿ ಸಿಎಂ ಕಪ್ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಮೈದಾನದಲ್ಲಿಯೇ ಕುಸಿದುಬಿದ್ದು ಮೃತಪಟ್ಟಿದ್ದಾನೆ. ವಿದ್ಯಾರ್ಥಿಯನ್ನು ಸಾಯಿ ಪುನೀತ್(15)ಎಂದು ಗುರುತಿಸಲಾಗಿದೆ. 10ನೇ ತರಗತಿ ವಿದ್ಯಾರ್ಥಿ ಸಾಯಿ ಪುನೀತ್ ಪಂದ್ಯದ ವೇಳೆ ಏಕಾಏಕಿ ಕುಸಿತು ಬಿದ್ದಿದ್ದ, ಕೂಡಲೇ ಬಾಲಕನ್ನು ಶಾಲೆಯ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ. ವಿದ್ಯಾರ್ಥಿ ಹೃದಯಘಾತದಿಂದ ಈ ಮೊದಲೇ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ದೃಢಪಡಿಸಿದ್ದಾರೆ.












