Subscribe to Updates
Get the latest creative news from FooBar about art, design and business.
Author: kannadanewsnow57
ಬಳ್ಳಾರಿ : ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಬಡ ಕುಟುಂಬಗಳ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷಿö್ಮ ಯೋಜನೆಯನ್ನು ಜಾರಿಗೆ ತಂದು, ಸಂಕಷ್ಟದಲ್ಲಿದ್ದವರಿಗೆ ನೆರವಾಗುವುದು, ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಯೋಜನೆಯ ಆಶಯವಾಗಿದ್ದು, ಮಹಿಳಾ ಕೂಲಿ ಕಾರ್ಮಿಕರು, ಬಡ ಕುಟುಂಬದ ಮಹಿಳೆಯರಿಗೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿಯೋಜನೆಯು ಆಸರೆಯಾಗಿದೆ. ಮಕ್ಕಳ ಶಾಲೆ ಶುಲ್ಕ, ವೈದ್ಯಕೀಯ ಖರ್ಚು, ದಿನಸಿ ಖರೀದಿ ಹೀಗೆ ನಾನಾ ರೀತಿಯಲ್ಲಿ ಗೃಹಲಕ್ಷಿö್ಮ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ನೀಡುವ ರೂ.2000 ಸದ್ಬಳಕೆಯಾಗುತ್ತಿದೆ. ಇದರೊಂದಿಗೆ ಕೆಲ ಮಹಿಳೆಯರು ಸ್ವಂತ ವ್ಯಾಪಾರ, ಹೊಲಿಗೆ ಯಂತ್ರ ಖರೀದಿ, ಬಳೆ ಅಂಗಡಿ ವ್ಯಾಪಾರ, ಬ್ಯೂಟಿ ಪಾರ್ಲರ್ ಆರಂಭಿಸಿ ಗೃಹಲಕ್ಷಿö್ಮ ಯೋಜನೆಯ ಸದುಯೋಗ ಪಡೆದುಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದ ಬಳೆ ಅಂಗಡಿ ಪ್ರಾರಂಭಿಸಿದ ಮಹಿಳೆ: ಸಂಡೂರು ತಾಲ್ಲೂಕಿನ ಹೊಸ ದರೋಜಿ ಗ್ರಾಮದ ನಿವಾಸಿಯಾದ ಲಕ್ಷಿö್ಮ ಅವರು ತಮ್ಮ ಕಷ್ಟಕರ ಜೀವನದಲ್ಲಿ ಸಣ್ಣ ವ್ಯಾಪಾರ ಆರಂಭಿಸಬೇಕೆAಬ ಆಸೆ ಗೃಹಲಕ್ಷಿö್ಮ ಯೋಜನೆಯು ಈಡೇರಿಸಿದ್ದು, ವ್ಯಾಪಾರವು ಮನೆಯ ಆರ್ಥಿಕ…
ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಜೋಳ (ನೀ), ಕಡಲೆ (ನೀ/ಮ)ಹಾಗೂ ಬೇಸಿಗೆ ಹಂಗಾಮಿನ ಗ್ರಾಮಪಂಚಾಯಿತಿ ಮಟ್ಟದ ಬೆಳೆಗಳಾದ ನೆಲಗಡಲೆ (ಶೇಂಗಾ) (ನೀ), ಭತ್ತ (ನೀ), ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ಬೆಳೆಗಳಾದ ಮುಸುಕಿನ ಜೋಳ (ನೀ), ಸೂರ್ಯಕಾಂತಿ (ನೀ/ಮ) ಕುಸುಮೆ (ಮ), ಈರುಳ್ಳಿ (ನೀ), ಮತ್ತು ಬೇಸಿಗೆ ಹಂಗಾಮಿನ ಸೂರ್ಯಕಾಂತಿ (ನೀ), ಈರುಳ್ಳಿ (ನೀ) ಜಿಲ್ಲೆಯ ಬೆಳೆಗಳಾಗಿವೆ. ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ನಿಗದಿ ಪಡಿಸಲಾಗಿದೆ. ಹಿಂಗಾರು ಹಂಗಾಮಿನ ಬೆಳೆಗಳಾದ-ಜೋಳ(ನೀ), ಮುಸುಕಿನ ಜೋಳ (ನೀ)- ಡಿ.16 ಮತ್ತು ಕಡಲೆ(ನೀ/ಮ)-ಡಿ.31. ಸೂರ್ಯಕಾಂತಿ (ನೀ/ಮ)…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಬಿಇಡಿ ಮತ್ತು ಡಿಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindu.karnataka.gov.in ಮೂಲಕ ಡಿ.25 ರೊಳಗಾಗಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲ್ಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು. ಜಿಲ್ಲಾ ಮತ್ತು ತಾಲ್ಲೂಕುವಾರು ಮಾಹಿತಿ ಕೇಂದ್ರದ ವಿವರ: ಬಳ್ಳಾರಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ (ಮೊ.8310321101), ಸಂಡೂರು ತೋಟಗಾರಿಕೆ ಇಲಾಖೆಯಲ್ಲಿನ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ (ಮೊ.9036925966, 8660575061), ಸಿರುಗುಪ್ಪದ ಬಳ್ಳಾರಿ ರಸ್ತೆಯ ನಗರಸಭೆ…
ಬೆಂಗಳೂರು : ರಾಜ್ಯದ 3,800 ದಾಖಲೆ ರಹಿತ ವಸತಿ ಪ್ರದೇಶಗಳನ್ನು 6 ತಿಂಗಳಲ್ಲಿ ಕಂದಾಯ ಗ್ರಾಮಗಳೆಂದು ಘೋಷಿಸಲಾಗುವುದು. ಆ ಗ್ರಾಮಗಳಲ್ಲಿ ವಾಸಿಸುವ 1.50 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯ ಅಂಬೇಡ್ಕರ್ ಭವನದಲ್ಲಿ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಬಗರ್ ಹುಕುಂ ಸಾಗುವಳಿ ಚೀಟಿ, ಪಹಣಿ, ಪೋಡಿ ದಾಖಲೆ, ಕಂದಾಯ ಗ್ರಾಮಗಳ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು. ರಾಜ್ಯದ 3800 ದಾಖಲೆ ರಹಿತ ವಸತಿ ಪ್ರದೇಶಗಳನ್ನು ಮುಂದಿನ ಆರು ತಿಂಗಳಲ್ಲಿ ಕಂದಾಯ ಗ್ರಾಮಗಳೆಂದು ಘೋಷಿಸಲಾಗುವುದು. ಆ ಗ್ರಾಮಗಳಲ್ಲಿ ವಾಸಿಸುವ 1.50 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು. ಬಗರ್ ಹುಕುಂ ಸಾಗುವಳಿದಾರರಿಂದ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಆಂದೋಲನದ ರೀತಿಯಲ್ಲಿ ಅರ್ಜಿಗಳ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಲಿದೆ ಎಂದು ಹೇಳಿದರು. ವಿವಿಧ ಪ್ರದೇಶಗಳಲ್ಲಿ ತಾಂಡಾಗಳು, ಹಟ್ಟಿಗಳು, ಕ್ಯಾಂಪ್ ಗಳಿಗೆ ಅಧಿಕೃತ ಮಾನ್ಯತೆ ಇಲ್ಲದ ಕಾರಣ ಅವುಗಳಿಗೆ…
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್, ವಿದ್ಯುತ್ ದರ ಹೆಚ್ಚಳ ಮಾಡಲು ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂಗಳು ಮುಂದಾಗಿವೆ ಎನ್ನಲಾಗಿದೆ. ರಾಜ್ಯದಲ್ಲಿ ಪ್ರತಿ ಯೂನಿಟ್ ಗೆ 60 ಪೈಸೆಯಿಂದ 1 ರೂ.ವರೆಗೆ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಮನವಿ ಮಾಡಿದ್ದು, 2025 -26 ರಲ್ಲಿ ಪ್ರತಿ ಯೂನಿಟ್ ಗೆ 67 ಪೈಸೆ, 2026 -27ರಲ್ಲಿ ಯೂನಿಟ್ ಗೆ 75 ಪೈಸೆ, 2027- 28ರಲ್ಲಿ ಯೂನಿಟ್ ಗೆ 91 ಪೈಸೆಯಷ್ಟು ದರ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಾಯ ಕೊರತೆ ಸರಿದೂಗಿಸಲು ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದರ ಏರಿಕೆಯ ಬಗ್ಗೆ ಕೆಇಆರ್‌ಸಿ ವತಿಯಿಂದ ಸಾರ್ವಜನಿಕರು, ಉದ್ಯಮಿಗಳು, ವ್ಯಾಪಾರಸ್ಥರು ಸೇರಿದಂತೆ ಎಲ್ಲಾ ವರ್ಗದವರಿಂದ ಅಹವಾಲು ಸ್ವೀಕರಿಸಿ ನಂತರ ದರ ಹೆಚ್ಚಳದ ಬಗ್ಗೆ ಅಂತಿಮ ಆದೇಶ ಹೊರಡಿಸಲಿದೆ. 2025ರ ಫೆಬ್ರವರಿ, ಮಾರ್ಚ್ ನಲ್ಲಿ ಆದೇಶ ಹೊರಡಿಸಿ ಏಪ್ರಿಲ್ 1ರಿಂದ ಹೊಸ ದರ…
ಹಾಸನ : ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾ.ರಾಜ್ ಅವರು ಅಭಿಮಾನಿಗಳನ್ನು ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಆಶೀರ್ವದಿಸಿದ್ದಕ್ಕೆ ನನ್ನ ಅನಂತ ಧನ್ಯವಾದಗಳು. ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಲ್ಲಿ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗನನ್ನು ಶಿಗ್ಗಾಂವಿಯಲ್ಲಿ ಜನ ಸೋಲಿಸಿ ನಮಗೆ ಆಶೀರ್ವದಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತ ಈ ರಾಜ್ಯದ ಜನತೆ ಯಾವತ್ತೂ ಕೊಟ್ಟಿಲ್ಲ. ಒಮ್ಮೆ ಕಾಂಗ್ರೆಸ್ ಬೆಂಬಲದಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲದಲ್ಲಿ ಮುಖ್ಯಮಂತ್ರಿ ಆದರು. ಬಳಿಕ ಎರಡೂ ಪಕ್ಷಗಳಿಗೆ ವಂಚಿಸಿದರು ಎಂದು ಕಿಡಿಕಾರಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಇಷ್ಟು ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ…
ಬೆಂಗಳೂರು : ಶಬರಿಮಲೆ ಯಾತ್ರಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ. ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ ಬಸ್ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ 2.20ಕ್ಕೆ ಹೊರಟು ಸಂಜೆ 5.10ಕ್ಕೆ ಮೈಸೂರು ತಲುಪಲಿದೆ. ಮರುದಿನ ಬೆಳಗ್ಗೆ 6.45ಕ್ಕೆ ನಿಲಕ್ಕಲ್ ಬಸ್ ನಿಲ್ದಾಣವನ್ನು ತಲುಪಲಿದೆ. ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶ ನೀಡಲಾಗಿದ್ದು, ಬರುವಾಗ ನಿಲಕ್ಕಲ್ ಬಸ್ ನಿಲ್ದಾಣಕ್ಕೆ ಬರಬೇಕಾಗುತ್ತದೆ. ಪ್ರತಿದಿನ ಸಂಜೆ 6ಕ್ಕೆ ನಿಲಕ್ಕಲ್ನಿಂದ ವೋಲ್ವೊ ಬಸ್ ಹೊರಡಲಿದ್ದು, ಮರುದಿನ ಬೆಳಗ್ಗೆ 10ಕ್ಕೆ ಮೆಜೆಸ್ಟಿಕ್ ತಲುಪಲಿದೆ. ನಿಮ್ಮ ಹತ್ತಿರದ ಖಾಸಗಿ ಟಿಕೆಟ್ ಕೌಂಟರ್ಗಳಲ್ಲದೆ, ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಬುಕ್ಕಿಂಗ್ ಕೌಂಟರ್ಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದು. ವೆಬ್ಸೈಟ್ https://www.ksrtc.in/ ಟಿಕೆಟ್ ಬುಕ್ಕಿಂಗ್ ಮಾಡಬಹುದು. ವೋಲ್ವೋ ಪ್ರಯಾಣ ವಿವರ: ಮಧ್ಯಾಹ್ನ 1:50ಕ್ಕೆ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಟು ಸಂಜೆ 5:10ಕ್ಕೆ ಮೈಸೂರು ತಲುಪಿ…
ನವದೆಹಲಿ : ಚೀನಾದ ಹ್ಯಾಕರ್‌ಗಳು ಯುಎಸ್ ಟೆಲಿಕಾಂ ಸಂಸ್ಥೆಗಳು ಸೇರಿದಂತೆ ಹಲವು ದೇಶಗಳನ್ನು ಗುರಿಯಾಗಿಸಿಕೊಂಡಿದ್ದಾರೆ, ಇದು ಬಹಿರಂಗಗೊಂಡಿರುವುದು ವಿಶ್ವದಲ್ಲಿ ಸಂಚಲನ ಮೂಡಿಸಿದೆ. ಚೀನಾದ ‘ಹ್ಯಾಕಿಂಗ್’ ಅಭಿಯಾನದಿಂದ ಕನಿಷ್ಠ ಎಂಟು ಅಮೆರಿಕನ್ ದೂರಸಂಪರ್ಕ ಕಂಪನಿಗಳು ಮತ್ತು ಹಲವಾರು ದೇಶಗಳು ಪ್ರಭಾವಿತವಾಗಿವೆ ಎಂದು ಶ್ವೇತಭವನ ಹೇಳಿದೆ. ಶ್ವೇತಭವನದ (ಯುಎಸ್ ಅಧ್ಯಕ್ಷರ ಅಧಿಕೃತ ನಿವಾಸ ಮತ್ತು ಕಚೇರಿ) ಉನ್ನತ ಅಧಿಕಾರಿಯಾಗಿರುವ ಡೆಪ್ಯುಟಿ ನ್ಯಾಷನಲ್ ಸೆಕ್ಯುರಿಟಿ ಅಡ್ವೈಸರ್ ಅನ್ನೆ ನ್ಯೂಬರ್ಗರ್ ಅವರು ವ್ಯಾಪಕವಾದ ಚೀನಾದ ‘ಹ್ಯಾಕಿಂಗ್’ ಅಭಿಯಾನದ ಬಗ್ಗೆ ಹೊಸ ವಿವರಗಳನ್ನು ನೀಡಿದರು. ವಿವರಗಳ ಪ್ರಕಾರ, ಚೀನಾದ ಈ ‘ಹ್ಯಾಕಿಂಗ್’ ಅಭಿಯಾನವು ಬೀಜಿಂಗ್‌ನಲ್ಲಿರುವ ಅಧಿಕಾರಿಗಳಿಗೆ ಅಪರಿಚಿತ ಸಂಖ್ಯೆಯ ಅಮೆರಿಕನ್ನರ ಖಾಸಗಿ ಸಂದೇಶಗಳು ಮತ್ತು ಫೋನ್ ಸಂಭಾಷಣೆಗಳನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿತು. ನ್ಯೂಬರ್ಗರ್ ಈ ‘ಹ್ಯಾಕಿಂಗ್’ ಪ್ರಕರಣವನ್ನು ಬಹಿರಂಗಪಡಿಸಿದ್ದಾರೆ ಮತ್ತು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಮತ್ತು ಸೈಬರ್ ಸೆಕ್ಯುರಿಟಿ ಮತ್ತು ಇನ್‌ಫ್ರಾಸ್ಟ್ರಕ್ಚರ್ ಸೆಕ್ಯುರಿಟಿ ಏಜೆನ್ಸಿಯು ‘ಹ್ಯಾಕಿಂಗ್’ ಮತ್ತು ಅದಕ್ಕೆ ಸಂಬಂಧಿಸಿದವರನ್ನು ಬೇರುಸಹಿತಗೊಳಿಸಲು ಮತ್ತು ಭವಿಷ್ಯದಲ್ಲಿ ಇದೇ…
ಹಾಸನ : ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಜನಕಲ್ಯಾನ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಅರೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ. ಸಮಾವೇಶದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಇಂದಿನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಕೆ.ಹೆಚ್. ಮುನಿಯಪ್ಪ, ಜಮೀರ್ ಅಹ್ಮದ್ ಖಾನ್,ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಸಮಾವೇಶಕ್ಕೆ ಲಕ್ಷಾಂತರ ಜನರು ಸೇರಿದ್ದು, ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆತರಲು 1,500 ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬೆಂಗಳೂರು : ಜನರು ಸೇವಿಸುವ ಆಹಾರದಲ್ಲಿ ಕಲುಷಿತ, ವಿಷಕಾರಿ ಅಥವಾ ಇನ್ನಿತರ ಯಾವುದೇ ರಾಸಾಯನಿಕಗಳು ಬೆರೆತಿರುವುದು ಕಂಡು ಬಂದರೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಆಹಾರ ಪ್ರಯೋಗಾಲಯಕ್ಕೆ ಭೇಟಿ ನೀಡಿ ಆಹಾರ ಸುರಕ್ಷತಾ ಗುಣಮಟ್ಟ ಪರೀಕ್ಷಿಸುವ ವಿಧಾನವನ್ನು ಪರಿಶೀಲಿಸಿದ್ದಾರೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿನಿತ್ಯ ಸೇವಿಸಲ್ಪಡುವ ಆಹಾರ ಪದಾರ್ಥಗಳ ಪರೀಕ್ಷೆ ನಡೆಸಲು ನಮ್ಮ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈಗಾಗಲೇ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣದ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಜನರು ಸೇವಿಸುವ ಆಹಾರದಲ್ಲಿ ಕಲುಷಿತ, ವಿಷಕಾರಿ ಅಥವಾ ಇನ್ನಿತರ ಯಾವುದೇ ರಾಸಾಯನಿಕಗಳು ಬೆರೆತಿರುವುದು ಕಂಡು ಬಂದರೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.









