Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ: 18.09.2024ರ ಅಧಿಸೂಚನೆ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡಿರುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಏನಿದೆ? ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ದಿನಾಂಕ:18.09.2024ರ ಅಧಿಸೂಚನ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡುವ ಬಗ್ಗೆ. ದಿನಾಂಕ:18.09.2024ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೇನನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1D) ನಂತರ (1E) ಯನ್ನು ಸೇರ್ಪಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಪತಿಯೊಂದು ಪುವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃಂದ ಬಲದಲ್ಲಿ ಶೇಕಡ 2% ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಆದರೆ,…
ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್, 20 ರವರೆಗೆ ವಿಸ್ತರಿಸಲಾಗಿರುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವಡೆ ಇಂದಿನಿಂದ ಡಿ.8 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ, ಕೊಡಗು , ಹಾಸನ, ಬೆಂಗಳೂರು ನಗರ, ತುಮಕೂರು, ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಹಾವೇರಿ, ಗದಗ ಭಾಗದಲ್ಲಿ ಮಳೆಯಾಗಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು, ನಾಳೆ ಕೊಡಗು, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ. ಇನ್ನುಳಿದ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ರೋಗಗಳ ಸಂಖ್ಯೆಯೂ ಕ್ರಮೇಣ ಹೆಚ್ಚುತ್ತಿದೆ. ಸರಿಯಾದ ಜೀವನಶೈಲಿಯ ಕೊರತೆ ಮತ್ತು ಕೆಟ್ಟ ಅಭ್ಯಾಸಗಳಂತಹ ಕಾರಣಗಳಿಂದಾಗಿ ಅನೇಕ ರೋಗಗಳು ಜನರನ್ನು ಕಾಡುತ್ತಿವೆ. ಆದರೆ ರಕ್ತದ ಗುಂಪನ್ನು ಅವಲಂಬಿಸಿ ರೋಗಗಳು ಬರುವ ಸಾಧ್ಯತೆ ಇದೆ ಎಂದು ನಿಮಗೆ ತಿಳಿದಿದೆಯೇ? ಪ್ರತಿಯೊಬ್ಬರೂ ವಿಭಿನ್ನ ರೀತಿಯ ರಕ್ತದ ಗುಂಪನ್ನು ಹೊಂದಿದ್ದಾರೆ, ಮತ್ತು ಆ ರಕ್ತದ ಗುಂಪುಗಳು ವಿಭಿನ್ನ ಗುಣಲಕ್ಷಣಗಳನ್ನು ಹೊಂದಿವೆ, ಏಕೆಂದರೆ ಒಬ್ಬ ವ್ಯಕ್ತಿಯು ಅನೇಕ ರೋಗಗಳಿಂದ ಪ್ರಭಾವಿತನಾಗಿರುತ್ತಾನೆ. ನಮ್ಮಲ್ಲಿ ಹೆಚ್ಚಿನವರು O+, O-, A+, A-, B+, B-, AB+, AB- ನಂತಹ ಕೆಲವು ರಕ್ತದ ಗುಂಪನ್ನು ಹೊಂದಿದ್ದಾರೆ. ನಮ್ಮ ರಕ್ತದ ಗುಂಪು ಯಾವುದು ಎಂದು ತಿಳಿದರೆ ರೋಗಗಳ ಭೀತಿಯನ್ನು ಗುರುತಿಸಬಹುದು ಎನ್ನುತ್ತಾರೆ ತಜ್ಞರು. O ರಕ್ತದ ಗುಂಪಿನ ಜನರು ಹೆಚ್ಚು ಕಾಲ ಬದುಕುತ್ತಾರೆ ಮತ್ತು ಇತರ ರಕ್ತ ಗುಂಪುಗಳ ಜನರಿಗಿಂತ ಮಾರಣಾಂತಿಕ ಕಾಯಿಲೆಗಳ ಅಪಾಯ ಕಡಿಮೆ ಎಂದು ಹೇಳಲಾಗುತ್ತದೆ. 2022 ರಲ್ಲಿ ನಡೆಸಿದ ಸಂಶೋಧನೆಯಲ್ಲಿ, ಕೆಲವು ರಕ್ತದ ಗುಂಪುಗಳಿಗೆ ಸೇರಿದ ಜನರ…
ನವದೆಹಲಿ : ರಾಜ್ಯದಲ್ಲಿ 2028 ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2028 ಕ್ಕೆ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. ನಾವು ಕಾಂಗ್ರೆಸ್ ನ ಈ ಸಮಾವೇಶಕ್ಕೆ ಹೆದರುವುದಿಲ್ಲ. ಅಧಿಕಾರದಲ್ಲಿ ಇದ್ದಾಗ ಸಮಾವೇಶ ಮಾಡುತ್ತಿದ್ದಾರೆ. ರಾಜ್ಯದ ಜನರ ಹಣ ಲೂಟಿ ಮಾಡಿ ಸಮಾವೇಶ ಮಾಡುತ್ತಿದ್ದಾರೆ. ರಾಜ್ಯದ ಜನರಿಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಗೊತ್ತಾಗಿದೆ. ಹಾಸನ ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಏನು? ಸಿದ್ದರಾಮಯ್ಯ ಅವರೇ ಈ ಹಿಂದೆ ಸಿಎಂ ಆಗಿದ್ದ ವೇಳೆ ಕ್ಷೇತ್ರಕ್ಕೆ ಏನೂ ಮಾಡಿಲ್ಲ. ಹಾಸನಕ್ಕೊಂದು ಫ್ಲೈಓವರ್ ಮಾಡಿಸಿಲ್ಲ. ಮಂಜೂರಾಗಿದ್ದ ರೈಲ್ವೆ ಯೋಜನೆಯನ್ನು ತಡೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾರವಾರ : ಮುಂದಿನ 6 ತಿಂಗಳಲ್ಲಿ ರಾಜ್ಯದ 1.26 ಲಕ್ಷ ರೈತರಿಗೆ ಬಗರ್ ಹುಕುಂ ಯೋಜನೆ ಅಡಿ ಸಾಗುವಳಿ ಚೀಟಿ ನೀಡುವ ಗುರಿ ಹೊಂದಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯ ಅಂಬೇಡ್ಕರ್ ಭವನದಲ್ಲಿ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಬಗರ್ ಹುಕುಂ ಸಾಗುವಳಿ ಚೀಟಿ, ಪಹಣಿ, ಪೋಡಿ ದಾಖಲೆ, ಕಂದಾಯ ಗ್ರಾಮಗಳ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು. ರಾಜ್ಯದ 3800 ದಾಖಲೆ ರಹಿತ ವಸತಿ ಪ್ರದೇಶಗಳನ್ನು ಮುಂದಿನ ಆರು ತಿಂಗಳಲ್ಲಿ ಕಂದಾಯ ಗ್ರಾಮಗಳೆಂದು ಘೋಷಿಸಲಾಗುವುದು. ಆ ಗ್ರಾಮಗಳಲ್ಲಿ ವಾಸಿಸುವ 1.50 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು. ಬಗರ್ ಹುಕುಂ ಸಾಗುವಳಿದಾರರಿಂದ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಆಂದೋಲನದ ರೀತಿಯಲ್ಲಿ ಅರ್ಜಿಗಳ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಲಿದೆ ಎಂದು ಹೇಳಿದರು. ವಿವಿಧ ಪ್ರದೇಶಗಳಲ್ಲಿ ತಾಂಡಾಗಳು, ಹಟ್ಟಿಗಳು, ಕ್ಯಾಂಪ್ ಗಳಿಗೆ ಅಧಿಕೃತ ಮಾನ್ಯತೆ ಇಲ್ಲದ ಕಾರಣ ಅವುಗಳಿಗೆ ಕಂದಾಯ ಗ್ರಾಮದ ಅಧಿಕಾರ ನೀಡಲು…
ಶಿರಸಿ : ಮುಂದಿನ 6 ತಿಂಗಳಲ್ಲಿ ರಾಜ್ಯದ 1.26 ಲಕ್ಷ ರೈತರಿಗೆ ಬಗರ್ ಹುಕುಂ ಯೋಜನೆ ಅಡಿ ಸಾಗುವಳಿ ಚೀಟಿ ನೀಡುವ ಗುರಿ ಹೊಂದಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯ ಅಂಬೇಡ್ಕರ್ ಭವನದಲ್ಲಿ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಬಗರ್ ಹುಕುಂ ಸಾಗುವಳಿ ಚೀಟಿ, ಪಹಣಿ, ಪೋಡಿ ದಾಖಲೆ, ಕಂದಾಯ ಗ್ರಾಮಗಳ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು. ರಾಜ್ಯದ 3800 ದಾಖಲೆ ರಹಿತ ವಸತಿ ಪ್ರದೇಶಗಳನ್ನು ಮುಂದಿನ ಆರು ತಿಂಗಳಲ್ಲಿ ಕಂದಾಯ ಗ್ರಾಮಗಳೆಂದು ಘೋಷಿಸಲಾಗುವುದು. ಆ ಗ್ರಾಮಗಳಲ್ಲಿ ವಾಸಿಸುವ 1.50 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು. ಬಗರ್ ಹುಕುಂ ಸಾಗುವಳಿದಾರರಿಂದ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಆಂದೋಲನದ ರೀತಿಯಲ್ಲಿ ಅರ್ಜಿಗಳ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಲಿದೆ ಎಂದು ಹೇಳಿದರು. ವಿವಿಧ ಪ್ರದೇಶಗಳಲ್ಲಿ ತಾಂಡಾಗಳು, ಹಟ್ಟಿಗಳು, ಕ್ಯಾಂಪ್ ಗಳಿಗೆ ಅಧಿಕೃತ ಮಾನ್ಯತೆ ಇಲ್ಲದ ಕಾರಣ ಅವುಗಳಿಗೆ ಕಂದಾಯ ಗ್ರಾಮದ ಅಧಿಕಾರ ನೀಡಲು…
ಇಂದಿನ ದಿನಗಳಲ್ಲಿ ಎಲ್ಲರೂ ಹಣಕ್ಕೆ ಪ್ರಾಮುಖ್ಯತೆ ನೀಡುತ್ತಾರೆ. ಈ ಹಣವನ್ನು ಗಳಿಸಲು ಸಾಕಷ್ಟು ಜ್ಞಾನವನ್ನು ಹೊಂದಿರುವುದು ಮುಖ್ಯ ವಿಷಯ. ಅವರಿಗೆ ಜ್ಞಾನವಿದ್ದರೆ ಹೇಗಾದರೂ ಹಣ ಸಂಪಾದಿಸಬಹುದು. ಸರಸ್ವತಿ ದೇವಿಯು ಈ ಜ್ಞಾನದ ಅಧಿಪತಿ. ಸರಸ್ವತಿ ದೇವಿಯ ಪರಿಪೂರ್ಣ ಕೃಪೆ ಇರುವ ಯಾವುದೇ ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿಗೆ ಕೊರತೆಯಾಗುವುದಿಲ್ಲ ಎಂದು ಹೇಳಬೇಕು. ಆದ್ದರಿಂದ ಸಂಪತ್ತು ಮತ್ತು ಸಮೃದ್ಧಿಯಿಂದ ಬದುಕಲು ಬಯಸುವವರು ಮೊದಲು ಸರಸ್ವತಿ ದೇವಿಯನ್ನು ಪೂಜಿಸಬೇಕು. ಅದರ ನಂತರವೇ ಮಹಾಲಕ್ಷ್ಮಿಯನ್ನು ಪೂಜಿಸಬೇಕು. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ಸರಸ್ವತಿ ದೇವಿಯನ್ನು ಪೂಜಿಸುವ ಸರಳ ವಿಧಾನವನ್ನು ನಾವು ನೋಡಲಿದ್ದೇವೆ . ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ,…
ಬಿಹಾರ : ಬಿಹಾರದ ಸಮಸ್ತಿಪುರ್ ಜಿಲ್ಲೆಯಲ್ಲಿ ನಾಚಿಕೆಗೇಡಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಇದರಲ್ಲಿ ಇನ್ಸ್‌ಪೆಕ್ಟರ್ ಮೊಹಮ್ಮದ್ ಬಿಲಾಲ್ ಖಾನ್ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಮಹಿಳೆ ತನ್ನ ಬುದ್ಧಿವಂತಿಕೆಯಿಂದ ಇಡೀ ಘಟನೆಯ ವಿಡಿಯೋ ಮಾಡಿ ಸಾರ್ವಜನಿಕಗೊಳಿಸಿದ್ದಾಳೆ. ಮಾಹಿತಿಯ ಪ್ರಕಾರ, ಮಹಿಳೆ ವಿರುದ್ಧ ಎರಡು ವರ್ಷಗಳ ಹಳೆಯ ಪ್ರಕರಣವೊಂದು ನಡೆಯುತ್ತಿದ್ದು, ಈ ಸಂಬಂಧ ಇನ್ಸ್‌ಪೆಕ್ಟರ್ ಆಕೆಯನ್ನು ವಿಚಾರಣೆಗಾಗಿ ಠಾಣೆಗೆ ಕರೆಸಿದ್ದರು. ಇನ್ಸ್‌ಪೆಕ್ಟರ್ ಮಹಿಳೆಯನ್ನು ಪ್ರತ್ಯೇಕ ಮನೆಗೆ ಕರೆಸಿ, ನನ್ನೊಂದಿಗೆ ಸೆಕ್ಸ್ ಮಾಡಿದ್ರೆ ಪ್ರಕರಣದಲ್ಲಿ ಸಹಾಯ ಮಾಡುವ ಭರವಸೆ ನೀಡಿದರು. ಇನ್ಸ್‌ಪೆಕ್ಟರ್ ಆಕೆಯ ಮೇಲೆ ಬಲವಂತಪಡಿಸಲು ಪ್ರಯತ್ನಿಸಿದರು. ಈ ವೇಳೆ ಮಹಿಳೆ ತನ್ನ ಸುರಕ್ಷತೆಗಾಗಿ ಇಡೀ ಘಟನೆಯ ವಿಡಿಯೋವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾಳೆ. ಇನ್ಸ್ ಪೆಕ್ಟರ್ ಅಶ್ಲೀಲ ಕೃತ್ಯ ಎಸಗಿರುವ ವಿಡಿಯೋ ವೈರಲ್ ಆಗಿದೆ https://twitter.com/i/status/1864197090924220912 ವೈರಲ್ ವಿಡಿಯೋದಲ್ಲಿ, ಇನ್ಸ್‌ಪೆಕ್ಟರ್ ಮಹಿಳೆಯನ್ನು ಹಿಡಿಯಲು ಪದೇ ಪದೇ ಪ್ರಯತ್ನಿಸುತ್ತಿರುವುದನ್ನು ನೋಡಬಹುದು, ಆದರೆ ಮಹಿಳೆ ಅವನಿಂದ ದೂರ ಹೋಗುವಂತೆ ಕೇಳುತ್ತಾಳೆ. ಆದರೆ, ಸಮಸ್ತಿಪುರ ಎಸ್ಪಿ…
ಬೆಂಗಳೂರು : ಮೊಬೈಲ್ ಬಿಟ್ಟು ಓದಿಕೋ ಎಂದು ತಾಯಿ ಬುದ್ದಿಮಾತು ಹೇಳಿದಕ್ಕೆ ಬೇಸರಗೊಂಡ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರಿಶಿಣಕುಂಟೆ ಗ್ರಾಮದಲ್ಲಿ ನಡೆದಿದೆ. ಆದರ್ಶನಗರ ನಿವಾಸಿ ಪುಷ್ಪಾ ಅವರ ಮಗ ಶಶಾಂಕ (19) ಮೃತ ಯುವಕ, ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಶಶಾಂಕ್ ಗೆ ಪರಿಕ್ಷೆ ಹಿನ್ನೆಲೆಯಲ್ಲಿ ರಜೆ ನೀಡಲಾಗಿತ್ತು. ಓದಿಕೊಳ್ಳದೆ ಮನೆಯಲ್ಲಿ ಮೊಬೈಲ್ ಗೇಮ್ ಆಡಿಕೊಂಡಿದ್ದ ಇದೇ ವಿಚಾರವಾಗಿ ಮಂಗಳವಾರ ರಾತ್ರಿ ತಾಯಿ ಪರೀಕ್ಷೆಗೆ ಓದಿಕೋ ಎಂದು ಬುದ್ದಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ಶಶಾಂಕ್ ರೂಮ್ ಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ.ೆ












