Author: kannadanewsnow57

ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು, ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ನೀರಿನ ದರ ಪರಿಷ್ಕರಣೆ ಸಂಬಂಧ ಸಾರ್ವಜನಿಕ ಆಕ್ಷೇಪಣೆಗೆ ಈ ಬಾರಿ ಅವಕಾಶ ನೀಡಲಾಗಿತ್ತು. ಗೃಹ, ಗೃಹೇತರರ ನೀರಿನ ಬಳಕೆದಾರರು, ಹೋಟೆಲ್, ಅಪಾರ್ಟ್ಮೆಂಟ್ ಅಸೋಸಿಯೇಷನ್ ಜೊತೆ ಸಭೆ ನಡೆಸಲಾಗಿದ್ದು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನೀರಿನ ದರ ಪರಿಷ್ಕರಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ವಿದ್ಯುತ್‌ ದರ ಪರಿಷ್ಕರಣೆ ಮಾಡಲಾಗಿದ್ದು, ನೀರಿನ ದರ ಮಾತ್ರ ಪರಿಷ್ಕರಣೆ ಮಾಡಿಲ್ಲ ಹೀಗಾಗಿ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಜಲಮಂಡಳಿಯ ಅದಾಯಕ್ಕಿಂತಲೂ ವೆಚ್ಚ ಹೆಚ್ಚಾಗಿದೆ. ಗೃಹ ಬಳಕೆ ನೀರಿನ ದರವನ್ನು ಶೇ. 30 ರಿಂದ 40 ಹಾಗೂ ವಾಣಿಜ್ಯ ಬಳಕೆಗೆ ಶೇ. 45 ರಷ್ಟು ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿದೆ. 2014 ರ ನವೆಂಬರ್‌-2024…

Read More

ಬೆಂಗಳೂರು : ಆನ್ ಲೈನ್ ನಲ್ಲಿ ಗೇಮ್ ಆಡುವವರೇ ಎಚ್ಚರ. ಬೆಂಗಳೂರಿನಲ್ಲಿ ಆನ್ ಲೈನ್ ಗೇಮ್ ಹುಚ್ಚಿಗೆ ಯುವಕ ಬಲಿಯಾದ ಘಟನೆ ನಡೆದಿದೆ. ಬೆಂಗಳೂರಿನ ಕೆ ಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಲ ತೀರಿಸಲಾಗದೇ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪ್ರವೀಣ್ ಎಂಬ ಯುವಕ ಆನ್ ಲೈನ್ ಗೇಮ್ ಆಟಕ್ಕೆ ಬಲಿಯಾಗಿದ್ದಾನೆ. ಆನ್ ಲೈನ್ ನಲ್ಲಿ ಆಟ ಆಡಲು ಸಾಲ ಮಾಡಿಕೊಂಡಿದ್ದ ಪ್ರವೀಣ್ ಸಾಲ ತೀರಿಸಲಾಗದೇ ಮೃತಪಟ್ಟಿದ್ದಾನೆ. 3 ದಿನದ ಹಿಂದೆ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಲ ನೀಡಿದವರು ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಹಾಗೂ ಆನ್ ಲೈನ್ ನಲ್ಲಿ ಗೆದ್ದ ಹಣವನ್ನು ಸಾಲಗಾರರು ಕಿತ್ತುಕೊಂಡಿದ್ದಕ್ಕೆ ಬೇಸತ್ತು ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

Read More

ನ್ಯೂಯಾರ್ಕ್‌ : ಯುನೈಟೆಡ್ ಹೆಲ್ತ್‌ಕೇರ್ ಸಿಇಒ ಬ್ರಿಯಾನ್ ಥಾಂಪ್ಸನ್ ಅವರನ್ನು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹಿಲ್ಟನ್ ಹೋಟೆಲ್ ಹೊರಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಯುನೈಟೆಡ್ ಹೆಲ್ತ್‌ಕೇರ್ ಸಿಇಒ ಬ್ರಿಯಾನ್ ಥಾಂಪ್ಸನ್ ಅವರನ್ನು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹಿಲ್ಟನ್ ಹೋಟೆಲ್ ಹೊರಗೆ ಗುಂಡು ಹಾರಿಸಲಾಯಿತು, ಇದರ ಪರಿಣಾಮವಾಗಿ ಅವನ ಸಾವಿಗೆ ಕಾರಣವಾಯಿತು. ಮಾಹಿತಿ ಪ್ರಕಾರ ಹಂತಕ ಬೈಕ್‌ನಲ್ಲಿ ಬಂದಿದ್ದು, ಮುಖಕ್ಕೆ ಕಪ್ಪು ಮಾಸ್ಕ್ ಹಾಕಿಕೊಂಡಿದ್ದ. https://twitter.com/BGatesIsaPyscho/status/1864346874251289015?ref_src=twsrc%5Etfw%7Ctwcamp%5Etweetembed%7Ctwterm%5E1864346874251289015%7Ctwgr%5E105c27263c08db71d388f5f42ea8b80863707538%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fnews24hindi-epaper-dh7ff60505e8854d7dbdfe58abbc421d2f%2Fusyunaitedhelthakeyarkeceobrayanthompasankihatyabaiksavarbadamashnemarigoli-newsid-n642042391 ಪೊಲೀಸರ ಪ್ರಕಾರ, 50 ವರ್ಷದ ಬ್ರಿಯಾನ್ ಥಾಂಪ್ಸನ್ ಹಿಲ್ಟನ್ ಹೋಟೆಲ್ ಹೊರಗೆ ನಿಂತಿದ್ದಾಗ ದಾಳಿ ಮಾಡಿದ್ದಾನೆ. ಹತ್ಯಾಕಾಂಡದ ನಂತರ, ಹೋಟೆಲ್ ಮತ್ತು ಸುತ್ತಮುತ್ತಲಿನ ಒಂದು ಕಿಲೋಮೀಟರ್‌ಗೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಶೋಧಿಸಲಾಗುತ್ತಿದೆ. ಹಂತಕನ ಬೆನ್ನಿನಲ್ಲಿ ಬ್ಯಾಗ್ ನೇತು ಹಾಕಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರ ಎತ್ತರ 5 ಅಡಿಗಿಂತ ಹೆಚ್ಚಿತ್ತು. ನ್ಯೂಯಾರ್ಕ್ ಪೊಲೀಸರ ಪ್ರಕಾರ, ಕೊಲೆಗಾರ ಬ್ರಿಯಾನ್ ಎದೆಗೆ ಗುಂಡು ಹಾರಿಸಿದ್ದಾನೆ. ಗುಂಡು…

Read More

ಬೆಂಗಳೂರು: ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚುವಂತೆ ಕೋರಿ ಪತ್ರ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಶೇ.40 ರಿಂದ 74 ರಷ್ಟು ವಿಕಲಚೇತನರಿಗೆ ₹800, 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ ₹1,400 ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ₹2,000 ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚುವಂತೆ ಕೋರಿ ಪತ್ರ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳು 1000 ರೂ.ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ ನೀಡಲಾಗುವುದು.ವಿಕಲಚೇತನರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಬಜೆಟ್‌ನಲ್ಲಿ ₹44 ಕೋಟಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Read More

ಹೈದರಾಬಾದ್ : ವಿಶ್ವದಾದ್ಯಂತ ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ-2 ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ವೀಕ್ಷಣೆಗೆ ಹೋಗಿದ್ದ ಮಹಿಳೆಯೊಬ್ಬರು ಕಾಲ್ತುಳಿತದಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೌದು, ತೆಲಂಗಾಣದ ಹೈದರಾಬಾದ್ ಸಂಧ್ಯಾ ಚಿತ್ರಮಂದಿರಕ್ಕೆ ಪುಷ್ಪ-2 ಸಿನಿಮಾಕ್ಕೆ ಹೋಗಿದ್ದ ಮಹಿಳೆಯೊಬ್ಬರು ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ರೇವತಿ ಎಂದು ಗುರುತಿಸಲಾಗಿದೆ. ತನ್ನ ಮಗನ ಜೊತೆಗೆ ಪುಷ್ಪ-2 ಸಿನಿಮಾಗೆ ಹೋಗಿದ್ದ ವೇಳೆ ಸಂಧ್ಯಾ ಚಿತ್ರಮಂದಿರದ ಬಳಿ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿಚಾರ್ಜ್ ವೇಳೆ ಕಾಲ್ತುಳಿದಲ್ಲಿ ತಾಯಿ ರೇವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗ ತೇಜ್ ಗಂಭೀರವಾಗಿ ಗಾಯಗೊಂಡಿದ್ದು, ಬೇಗಂಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಮುಂಬೈ : ತೀವ್ರ ಹಗ್ಗ ಜಗ್ಗಾಟದ ನಡುವೆ ಕೊನೆಗೂ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗಿದ್ದಾರೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ನೂತನ ಸಿಎಂ ಎಂದು ಘೋಷಣೆ ಮಾಡಲಾಯಿತು. ಹೌದು ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರುವ ವಿಚಾರದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ನಡುವೆ ನಡೆದಿದ್ದ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಆಯ್ಕೆಯಾಗಿದ್ದಾರೆ. ಇಂದು ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ದೇವೇಂದ್ರ ಫಡ್ನವೀಸ್ ಅವರು ನೂತನ ಸಿಎಂ ಎಂದು ಮಹಾರಾಷ್ಟ್ರ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದ್ದು, ಕೇಂದ್ರ ವೀಕ್ಷಕರದ ನಿರ್ಮಲಾ, ವಿಜಯ್ ರೂಪಾಣಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಇಂದು ರಾಜ್ಯಪಾಲರನ್ನು ಮಹಾಯುತಿ ನಿಯೋಗ ಭೇಟಿಯಾಗಲಿದೆ. ಇದೆ ವೇಳೆ ದೇವೇಂದ್ರ ಫಡ್ನವಿಸ್ ಗೆ…

Read More

ಬೆಂಗಳೂರು : ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಐವಿ ದ್ರಾವಣದ 22 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಕೇಸ್ ದಾಖಲಿಸಿ ಎಂದು ಸೂಚಿಸಿದರು. ಈ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ 22 ಬ್ಯಾಚ್ ಗಳ NSQ ವರದಿಯಲ್ಲಿ 13 ಬ್ಯಾಚ್ ಗಳ ವರದಿ ಪ್ರಶ್ನಿಸಿ ಕಂಪನಿಯವರು ಸೆಂಟ್ರಲ್ ಡ್ರಗ್ ಲ್ಯಾಬರೋಟಿರಿ ಮೆಟ್ಟಿಲೇರಿದ್ದಾರೆ. ಅದರಲ್ಲಿ 4 ಬ್ಯಾಚ್ ಗಳು ಗುಣಮಟ್ಟ ಹೊಂದಿವೆ ಎಂದು ಸೆಂಟ್ರಲ್ ಡ್ರಗ್ ಲ್ಯಾಬ್ ವರದಿ ನೀಡಿದೆ. ಅಲ್ಲದೇ 13 ಬ್ಯಾಚ್ ಗಳ ಬಗ್ಗೆ ಸೆಂಟ್ರಲ್ ಡ್ರಗ್ ಲ್ಯಾಬ್ ನಿಂದ ವರದಿ ಬರಬೇಕಿದೆ…

Read More

ಬೆಂಗಳೂರು : ಹೊಸ ಅರಣ್ಯ ಒತ್ತುವರಿ ತಡೆಗೆ ರೂಪಿಸಿರುವ ಉಪಗ್ರಹ ಕಣ್ಗಾವಲು ವ್ಯವಸ್ಥೆ Forest Cover Change Alert System ಬಳಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಹೊಸದಾಗಿ ಅರಣ್ಯ ಒತ್ತುವರಿಗೆ ಅವಕಾಶ ನೀಡದೆ, ಶೂನ್ಯ ಸಹಿಷ್ಣುತೆ ತಳೆಯುವಂತೆ ಮತ್ತು ಒತ್ತುವರಿದಾರರು ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು. ಭೌಗೋಳಿಕ ಪ್ರದೇಶದ ಶೇ.33ರಷ್ಟು ಹಸಿರು ಹೊದಿಕೆ ಇರಬೇಕು. ಆದರೆ ರಾಜ್ಯದಲ್ಲಿ ಶೇ.22ರಷ್ಟು ಹಸಿರು ಹೊದಿಕೆ ಇದೆ. ಇರುವ ಅರಣ್ಯವನ್ನೂ ಒತ್ತುವರಿ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲೇಬೇಕು. ಈಗಾಗಲೇ ಅಕ್ಷಾಂಶ, ರೇಖಾಂಶ ಆಧಾರಿತ ಜಿಯೋ ರೆಫರೆನ್ಸ್ ಮೂಲಕ ಗುರುತಿಸಲಾಗಿರುವ ಅರಣ್ಯ ಗಡಿಯೊಳಗೆ ಯಾವುದೇ ಒತ್ತುವರಿ ಆಗದಂತೆ ಕರ್ನಾಟಕ ರಾಜ್ಯ ದೂರ ಸಂವೇದಿ ಆನ್ವಯಿಕ ಕೇಂದ್ರ (KSRSAC) ಸಹಯೋಗದಲ್ಲಿ ಸಿದ್ಧಪಡಿಸಲಾಗಿರುವ ಅರಣ್ಯ ಬದಲಾವಣೆ ಮುನ್ನೆಚ್ಚರಿಕಾ ವ್ಯವಸ್ಥೆಯನ್ನು ಸಮರ್ಥವಾಗಿ ಬಳಸಿಕೊಳ್ಳಿ ಎಂದು ತಿಳಿಸಿದರು. ಸರ್ಕಾರದ ನಡಾವಳಿಯಂತೆ 2015ರ…

Read More

ಬೆಂಗಳೂರು : ಜಗದ್ವಿಖ್ಯಾತ ಮೈಸೂರು ದಸರಾ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಯ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಜುನ ಆನೆಯ ಸ್ಮಾರಕ ನಿರ್ಮಿಸಲು ಭೂಮಿ ಪೂಜೆಯನ್ನೂ ನೆರವೇರಿಸಲಾಗಿದೆ. ಹುತಾತ್ಮ ಅರ್ಜುನ ಆನೆಯ ಪ್ರಥಮ ಪುಣ್ಯ ಸ್ಮರಣೆಯ ದಿನವಾದ ಬುಧವಾರ ಈ ಸ್ಮಾರಕ ಲೋಕಾರ್ಪಣೆ ಮಾಡುವ ಉದ್ದೇಶ ಇತ್ತು. ಆದರೆ ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ. ಬೆಳಗಾವಿ ಅಧಿವೇಶನದ ನಂತರ ಸ್ಮಾರಕ ಉದ್ಘಾಟನೆ ನೆರವೇರಿಸಲಾಗುವುದು. ಇನ್ನು ಹೊಸದಾಗಿ ಅರಣ್ಯ ಒತ್ತುವರಿಗೆ ಅವಕಾಶ ನೀಡದೆ, ಶೂನ್ಯ ಸಹಿಷ್ಣುತೆ ತಳೆಯುವಂತೆ ಮತ್ತು ಒತ್ತುವರಿದಾರರು ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು. ಭೌಗೋಳಿಕ ಪ್ರದೇಶದ ಶೇ.33ರಷ್ಟು ಹಸಿರು ಹೊದಿಕೆ ಇರಬೇಕು. ಆದರೆ ರಾಜ್ಯದಲ್ಲಿ ಶೇ.22ರಷ್ಟು ಹಸಿರು ಹೊದಿಕೆ ಇದೆ. ಇರುವ ಅರಣ್ಯವನ್ನೂ ಒತ್ತುವರಿ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲೇಬೇಕು. ಈಗಾಗಲೇ ಅಕ್ಷಾಂಶ, ರೇಖಾಂಶ ಆಧಾರಿತ ಜಿಯೋ ರೆಫರೆನ್ಸ್ ಮೂಲಕ ಗುರುತಿಸಲಾಗಿರುವ ಅರಣ್ಯ ಗಡಿಯೊಳಗೆ…

Read More

ಬೆಂಗಳೂರು : ರಾಜ್ಯದಲ್ಲಿ ಕಳೆದ ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ನೀರು ಕಲುಷಿತಗೊಳ್ಳುವ ಹಾಗೂ ಸಾಂಕ್ರಾಮಿಕ ರೋಗಗಳು ಹಬ್ಬುವ ಸಾಧ್ಯತೆಯಿರುವುದರಿಂದ ಮುಂಜಾಗರೂಕತ ಕ್ರಮಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯತಿಗಳಿಗೆ ಸೂಚನೆ ನೀಡಬೇಕೆಂದು ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ. ಸಿಎಒಗಳೊಂದಿಗೆ ನಡೆದ ವಿಡಿಯೊ ಸಭೆಯಲ್ಲಿ ಮಾತನಾಡಿದ ಸಚಿವರು ರಾಜ್ಯದ 18ರಿಂದ 20 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ, ಈ ಕಾರಣದಿಂದ ಕುಡಿಯುವ ನೀರು ಕಲುಷಿತಗೊಳ್ಳುವ ಸಂಭವ ಹೆಚ್ಚಾಗಿರುತ್ತದೆ, ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಜಲಮೂಲಗಳ ಸುತ್ತ ಮುತ್ತ ಶುಚಿತ್ವ ಕಾಪಾಡುವುದು, ನೀರು ಸರಬರಾಜು ಕೊಳವೆಗಳಲ್ಲಿ ಸೋರಿಕೆಯಿಲ್ಲದಂತೆ ಎಚ್ಚರವಹಿಸುವುದು, ಕೊಳವೆಗಳು ಹಾದು ಹೋಗುವ ಮಾರ್ಗಗಳ ಪರಿಶೀಲನೆ ಸೇರಿದಂತೆ ತೀವ್ರ ನಿಗಾ ಇಡಲು ಸಚಿವರು ಸೂಚಿಸಿದರಲ್ಲದೆ, ನೀರಿನ ಮಾದರಿಗಳನ್ನು ಪರೀಕ್ಷಿಸಿಯೇ ನೀರು ಸರಬರಾಜು ಮಾಡಬೇಕೆಂದು ಹೇಳಿದರು. ಸತತ ಮಳೆಯಿಂದಾಗಿ ಗ್ರಾಮಗಳಲ್ಲಿ ಸಾಂಕ್ರಾಮಿರೋಗಗಳು ಹಬ್ಬದಂತೆ ಜಾಗ್ರತೆ ವಹಸಿಲು ಸಚಿವರು ಸೂಚಿಸಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ…

Read More