Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಹಾಗೂ ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು. ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು. ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಗಣಿ ಮತ್ತು ಭೂವಿಜ್ಞಾನ ಇಲಾಖೆ: ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧಿಸಲಾಗಿದೆ. ಈ ವರ್ಷದ ಒಟ್ಟು ರಾಜಸ್ವ ಗುರಿ 9 ಸಾವಿರ ಕೋಟಿ ರೂ. ಇದ್ದು, ನವೆಂಬರ್ ಅಂತ್ಯದವರೆಗೆ 4,862 ಕೋಟಿ ರೂ.ರಾಜಸ್ವ ಸಂಗ್ರಹಿಸಲಾಗಿದೆ. ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮ ವಹಿಸಬೇಕು. 2025-26 ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಖಾಳಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.* ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು. ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು. ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು. ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Read More

ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ.? ಮೇಲೆ ಓದಲಾದ ಕ್ರ.ಸಂ. (1) ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು. ಮೇಲೆ ಓದಲಾದ ಕ್ರ.ಸಂ. (2) ರ ಸಹಕಾರ ಸಂಘಗಳ ನಿಬಂಧಕರ ಪ್ರಸ್ತಾವನೆಯಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ (Flagship) ವಿಶಿಷ್ಟ ಯೋಜನೆಯಾಗಿದ್ದು, ಇದರಲ್ಲಿ ಯಶಸ್ವಿನಿ ಪ್ರೋಟೋಕಾಲ್‌ನಂತೆ ನಿಗದಿ ಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳಪಟ್ಟು ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5.00 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ. ಯಶಸ್ಸಿನಿ ಯೋಜನೆಯು ವಿಮಾ ಯೋಜನೆಯಾಗಿರುವುದಿಲ್ಲ. ಬದಲಾಗಿ ಇದೊಂದು…

Read More

ಬೆಂಗಳೂರು: ಮನೆ ಕಟ್ಟೋರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಮರಳು ಸಿಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮರಳು ನೀತಿ ಜಾರಿಗೊಳಿಸಿದೆ. ಆಯವ್ಯಯದಲ್ಲಿ ಘೋಷಿಸಿದಂತೆ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸಿದೆ.ಸಾರ್ವಜನಿಕರು ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ದರದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು 1, 2 ಮತ್ತು 3ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗುವುದು. ಪ್ರತಿ ಮೆಟ್ರಿಕ್ ಟನ್ ಮರಳಿನ ಮಾರಾಟ ಬೆಲೆಯನ್ನು 300 ರೂ. ನಿಗದಿಪಡಿಸಲಾಗಿದೆ ಎಂದು…

Read More

ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಮುಖ್ಯಶಿಕ್ಷಕನೇ 5 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ಯಡ್ರಾಮಿ ಪಟ್ಟಣದ ನವೋದಯ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಹಾಜಿಮಲಂಗ್ ಗಣಿಯಾರ್ ಬಂಧಿತ ಆರೋಪಿಯಾಗಿದ್ದು, ಶಾಲೆಯ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಈ ವಿಷಯ ಮನೆಯಲ್ಲಿ ತಿಳಿಸದಂತೆ ಬೆದರಿಕೆ ಸಹ ಹಾಕಿದ್ದಾನೆ. ಬಾಲಕಿ ಪಕ್ಕದ ಮನೆಯವರ ಮುಂದೆ ಶಾಲೆಯಲ್ಲಿ ನಡೆದ ಘಟನೆ ವಿವರಿಸಿದ್ದಾಳೆ. ಪಕ್ಷದ ಮನೆಯವರು ಕೂಡಲೇ ಬಾಲಕಿಯ ತಂದೆ-ತಾಯಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕುಟುಂಬಸ್ಥರು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿ ಮುಖ್ಯಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಇಲಾಖಾ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳ ರಜೆ ಮಂಜೂರಾತಿಯ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂಸ್ಕೃತ ಕಾಲೇಜು, ಚಿತ್ರಕಲಾ ಕಾಲೇಜು, ಶಿಕ್ಷಣ ಕಾಲೇಜು ಹಾಗೂ ಕಾನೂನು ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳು ದೀರ್ಘವಧಿ ರಜೆಗಳಾದ ಗಳಿಕೆ ರಜೆ, ಅಸಾಧಾರಣಾ ರಜೆ, ಮಾತೃತ್ವ ರಜೆ, ಪಿತೃತ್ವ ರಜೆ, ವ್ಯಾಸಂಗ ರಜೆಗಳ ಹಾಗೂ ಸಾಂಧರ್ಭಿಕ ರಜೆ ಮೇಲೆ ತೆರಳುವ ಸಂದರ್ಭದಲ್ಲಿ ಸದರಿ ರಜೆಗಳಿಗೆ ಸಂಬಂಧಪಟ್ಟ ಪ್ರಾದೇಶಿಕ ಜಿಂಟಿ ನಿರ್ದೇಶಕರುಗಳಿಂದ ಪೂರ್ವಾನುಮತಿ ಪಡೆಯದೆ ರಜೆಯನ್ನು ಹಾಗೂ ಕೇಂದ್ರ ಸ್ಥಾನ ಬಿಡುತ್ತಿರುವ ಪ್ರಕರಣಗಳ ಮಾಹಿತಿಯು ಈ ಕಛೇರಿಯಲ್ಲಿ ಸ್ವೀಕೃತಗೊಂಡಿರುವ ಹಿನ್ನೆಲೆಯಲ್ಲಿ ಈ ಕುರಿತು ಗಂಭೀರವಾಗಿ ಪರಿಗಣಿಸಲಾಗಿದೆ. ಪರಿಶೀಲಿಸಲಾಗಿ. ಇನ್ನೂ ಮುಂದೆ ಪ್ರಭಾರ ಪ್ರಾಂಶುಪಾಲರುಗಳು ಯಾವುದೇ ರಜೆಯನ್ನು ಹಾಗೂ ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಂಬಂಧಪಟ್ಟ ಪ್ರಾದೇಶಿಕ ಜಂಟಿ ನಿರ್ದೇಶಕರುಗಳ ಪೂರ್ವಾನುಮತಿ ಪಡೆದು ತೆರಳುವಂತೆ ಕಡ್ಡಾಯವಾಗಿ…

Read More

ಬೆಂಗಳೂರು: ಮನೆ ಕಟ್ಟೋರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಮರಳು ಸಿಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮರಳು ನೀತಿ ಜಾರಿಗೊಳಿಸಿದೆ. ಆಯವ್ಯಯದಲ್ಲಿ ಘೋಷಿಸಿದಂತೆ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸಿದೆ.ಸಾರ್ವಜನಿಕರು ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ದರದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು 1, 2 ಮತ್ತು 3ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗುವುದು. ಪ್ರತಿ ಮೆಟ್ರಿಕ್ ಟನ್ ಮರಳಿನ ಮಾರಾಟ ಬೆಲೆಯನ್ನು 300 ರೂ. ನಿಗದಿಪಡಿಸಲಾಗಿದೆ ಎಂದು…

Read More

ಬೆಂಗಳೂರು : 2025ರ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ-1ರ ಮೌಲ್ಯಮಾಪನ ಕಾರ್ಯಕ್ಕಾಗಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ನೋಂದಣಿ/ಅಪ್‌ಡೇಟ್ ಮಾಡುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ನಡೆಯಲಿರುವ 2025ರ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ-1ರ ಮೌಲ್ಯಮಾಪನ ಕಾರ್ಯಕ್ಕಾಗಿ ರಾಜ್ಯದ ಎಲ್ಲಾ ಸರ್ಕಾರಿ, ಮಾನ್ಯತೆ ಪಡೆದಿರುವ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಷಯ ಶಿಕ್ಷಕರ ವಿವರಗಳನ್ನು ಶಾಲಾ ಲಾಗಿನ್ನಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಲು ದಿನಾಂಕ: 03-12-2024 ರಿಂದ ಅವಕಾಶ ಕಲ್ಪಿಸಲಾಗಿದೆ. ಶಾಲೆಯ ಮುಖ್ಯ ಶಿಕ್ಷಕರು ತಮ್ಮನ್ನೂ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರನ್ನು ಮೌಲ್ಯಮಾಪನ ಕಾರ್ಯಕ್ಕೆ ನೋಂದಾಯಿಸುವುದು ಕಡ್ಡಾಯವಾಗಿರುತ್ತದೆ ಮತ್ತು ಹಿಂದಿನ ವರ್ಷಗಳಲ್ಲಿ ಈಗಾಗಲೇ ನೋಂದಾಯಿಸಿರುವ ಶಿಕ್ಷಕರ ವಿವರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲದಿದ್ದರೂ ಸಹ ಮತ್ತೊಮ್ಮೆ ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ನೇಮಕಗೊಂಡ, ಬಡ್ತಿ ಮತ್ತು ವರ್ಗಾವಣೆಯಿಂದ…

Read More

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಅಂಗವಿಕಲರ ಆರೈಕೆದಾರರಿಗೆ 1,000 ರೂ. ಮಾಸಿಕ ಭತ್ಯೆ ನೀಡುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು, ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದು ಎಂದು ಘೋಷಿಸಿದ್ದಾರೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾoಗಣ ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ , ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ…

Read More

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಮುಂಬರುವ ವರ್ಷಗಳಲ್ಲಿ ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಪರೀಕ್ಷೆಯನ್ನು ತೆಗೆದುಕೊಳ್ಳಲು ಹೊಸ ಆಯ್ಕೆಯನ್ನು ನೀಡಲು ಪರಿಗಣಿಸುತ್ತಿದೆ. ಈ ಯೋಜನೆಯಡಿಯಲ್ಲಿ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯದ ಆಧಾರದ ಮೇಲೆ ಪರೀಕ್ಷೆಯ ಕಷ್ಟದ ಮಟ್ಟವನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಈ ಹಂತವನ್ನು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರ ಅಡಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ, ಇದರಲ್ಲಿ ವಿದ್ಯಾರ್ಥಿಗಳು ತಮ್ಮ ಜ್ಞಾನ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಎರಡು ಹಂತಗಳಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶ ಮಾಡಿಕೊಡಲು ಪ್ರಸ್ತಾಪಿಸಲಾಗಿದೆ. ಗಣಿತದಲ್ಲಿ ಪ್ಯಾಟರ್ನ್ ಅನ್ನು ಈಗಾಗಲೇ ಅಳವಡಿಸಲಾಗಿದೆ ಪ್ರಸ್ತುತ, ಈ ಹೊಸ ಪರೀಕ್ಷಾ ಮಾದರಿಯನ್ನು ಈಗಾಗಲೇ 10 ನೇ ತರಗತಿಯ ಬೋರ್ಡ್ ಪರೀಕ್ಷೆಯ ಭಾಗವಾಗಿರುವ ಗಣಿತ ವಿಷಯದಲ್ಲಿ ಅಳವಡಿಸಲಾಗಿದೆ. ಸಿಬಿಎಸ್‌ಇ ಮೂಲಗಳ ಪ್ರಕಾರ, ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶವನ್ನು ಒದಗಿಸುವ ಉದ್ದೇಶದಿಂದ ಈ ಉಪಕ್ರಮವನ್ನು ಪ್ರಾರಂಭಿಸಲಾಗುತ್ತಿದೆ, ಇದರಿಂದಾಗಿ ಅವರ ನೈಜ ಸಾಮರ್ಥ್ಯವನ್ನು ಸರಿಯಾಗಿ ಅಳೆಯಬಹುದು. ಈ ಮಾದರಿಯು…

Read More