Author: kannadanewsnow57

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಫಂಗಲ್ ಚಂಡಮಾರುತ ಅಪ್ಪಳಿಸಿದ್ದು, ಇದರ ಪರಿಣಾಮವಾಗಿ ಬೆಂಗಳೂರಿನ ಹಲವಡೆ ರಾತ್ರಿಯಿಂದಲೇ ತುಂತುರು ಮಳೆ ಆರಂಭವಾಗಿದೆ. ಹೌದು ಬೆಂಗಳೂರಿನ ಹಲವಡೆ ರಾತ್ರಿಯಿಂದ ತುಂತುರು ಮಳೆಯಾತ್ತಿದೆ. ಕೊರೆಯುವ ಚಳಿ ಜೊತೆಗೆ ತುಂತುರು ಮಳೆಗೆ ಬೆಂಗಳೂರಿನ ಜನರು ಹೈರಾಣಾಗಿದ್ದಾರೆ. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಇದೀಗ ಕರ್ನಾಟಕದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಡಿಸೆಂಬರ್ 3ರಂದು ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Read More

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ ನೀಡುವ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ಸಾರ್ವಜನಿಕರು ಮುಕ್ತವಾಗಿ ವೀಕ್ಷಿಸಲು, ಪರಿಶೀಲಿಸಲು, ಸಲಹೆ ನೀಡುವ ವಿನೂತನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ ನೀಡುತ್ತಿರುವ ತಿಂಡಿ, ಊಟದ ವಿವರಗಳನ್ನು ಅಪ್ಲೋಡ್ ಮಾಡಲಾಗುವುದು. ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ಶಾಲೆಗಳಲಿ ನೀಡುವ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟದ ಫೋಟೋಗಳನ್ನು https://foodswdok.in/cr ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಲಿದ್ದು, ಪೋಷಕರು, ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

Read More

ಬೆಂಗಳೂರು : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣದ ಬೆನ್ನಲ್ಲೇ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ (ಗ್ಲುಕೋಸ್) ಬಳಕೆಯನ್ನು ತಡೆ ಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿರುವ 2600 ಸರ್ಜರಿಗಳಲ್ಲಿ, ಸಾಕಷ್ಟು ಸಿಸೇರಿಯನ್ ನಡೆದಿವೆ. ಇಂತಹ ಘಟನೆ ವರದಿಯಾಗಿರಲಿಲ್ಲ. ಮೊದಲ ಬಾರಿ ಇಂತಹ ದುರಂತ ಸಂಭವಿಸಿದೆ. ಬಾಣಂತಿಯರ ಸಾವಿನ ಪ್ರಕರಣದಲ್ಲಿ ನಮಗೆ ಅನುಮಾನ ಇರುವುದು ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣದ ಮೇಲೆ. ದ್ರಾವಣ ಗುಣಮಟ್ಟದ ಪರೀಕ್ಷೆಗೆ ಕಳಿಸಿದ್ದೇವೆ.‌ ವರದಿ ಬರಲು 8-9 ದಿನಗಳಾಗಬಹುದು. ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೆವೆ ಎಂದರು. ಕರ್ತವ್ಯಲೋಪದ ಆರೋಪದಲ್ಲಿ ಈಗಾಗಲೇ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಅಮಾನತ್ತು ಮಾಡಲಾಗಿದೆ. ಈ ಮೊದಲೇ ಕಂಪನಿಯನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿದ್ದೇವು. ಆದರೆ ಕಂಪನಿಯವರು ಹೈಕೋರ್ಟ್ ನಿಂದ ದ್ರಾವಣ ಬಳಕೆಗೆ ಪ್ರಮಾಣಪತ್ರ ತಂದಿದ್ದಾರೆ. ಡ್ರಗ್ ಕಂಟ್ರೋಲ್ ನವರು 92 ಬ್ಯಾಚ್ ಪರೀಕ್ಷೆ ಮಾಡಿ, 22…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಬರೋಬ್ಬರಿ 1.26 ಲಕ್ಷ ಅರ್ಜಿಗಳು ಸಾಗುವಳಿ ಚೀಟಿಗೆ ಅರ್ಹವಾಗಿವೆ. ಮೊದಲ ಹಂತದಲ್ಲಿ ಡಿಸೆಂಬರ್.15ರೊಳಗೆ 5,000 ರೈತರಿಗೆ ಸಾಗುವಳಿ ಚೀಟಿ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸ ಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬಗರ್ ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳ ಪೈಕಿ ಕನಿಷ್ಟ 5,000 ಜನರ ಅರ್ಜಿಗಳನ್ನಾದರೂ “ಬಗರ್ ಹುಕುಂ” ಕಮಿಟಿಯ ಎದುರು ಮಂಡಿಸಿ ಡಿ.15ರ ಒಳಗೆ ಸಾಗುವಳಿ ಚೀಟಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, “ರಾಜ್ಯಾದ್ಯಂತ ಲಕ್ಷಾಂತರ ಜನ ಬಗರ್ ಹುಕುಂ ಅಡಿಯಲ್ಲಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಪೈಕಿ 1,26,000 ಅರ್ಜಿಗಳನ್ನು ಮಾತ್ರ ಅರ್ಹ ಎಂದು ಪರಿಗಣಿಸಲಾಗಿದೆ. ಕೆಲ…

Read More

ಚೆನ್ನೈ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತ ಪುದುಚೇರಿ, ತಮಿಳುನಾಡು ಕರಾವಳಿಗೆ ಅಪ್ಪಳಿಸಿದ್ದು, ತಮಿಳುನಾಡಿನಲ್ಲಿ ಚಂಡಮಾರುತದ ಅಬ್ಬರಕ್ಕೆ ನಾಲ್ವರು ಬಲಿಯಾಗಿದ್ದಾರೆ. ಚೆನ್ನೈನ ಮುತ್ಯಾಲಪೇಟೆಯಲ್ಲಿ ಉತ್ತರ ಪ್ರದೇಶ ಮೂಲದ ಚಂದನ್ ಬಲಿಯಾಗಿದ್ದಾರೆ. ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಆ ವಿಜಯನಗರದಲ್ಲಿ ಪೌರಕಾರ್ಮಿಕ ಮೃತಪಟ್ಟಿದ್ದಾರೆ. ವಿದ್ಯುತ್ ಕೇಬಲ್ ತಗುಲಿ ಪೌರಕಾರ್ಮಿಕ ಶಕ್ತಿವೇಲ್ ಸಾವನ್ನಪ್ಪಿದ್ದಾರೆ. ವ್ಯಾಸರಪಾಡಿಯಲ್ಲಿ ಗುತ್ತಿಗೆ ಕಾರ್ಮಿಕ ಜಗನ್ನಾಥನ್ ಮೃತಪಟ್ಟಿದ್ದಾರೆ. ಅವರು ಮೋಟರ್ ಪಂಪ್ ಆಪರೇಟ್ ಮಾಡುವಾಗ ಅವಘಡ ಸಂಭವಿಸಿದೆ. ವ್ಯಾಸರಪಾಡಿಯ ಗಣೇಶಪುರಂನಲ್ಲಿ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಫಲವೇಶ್ವರ್ ಎಂಬಾತ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸಿಎಂ ಸ್ಟಾಲಿನ್ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಫಂಗಲ್ ಚಂಡಮಾರುತದಿಂದಾಗಿ ತತಮಿಳುನಾಡು, ಪುದುಚೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೇಶದ ಏಳು ರಾಜ್ಯಗಳಿಗೆ ಸವಾಲಾಗಿ ಪರಿಣಮಿಸಬಹುದು. ಈ ಚಂಡಮಾರುತದ ಬಗ್ಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಚಂಡಮಾರುತವು ಪುದುಚೇರಿಯ ಕಾರೈಕಲ್ ಮತ್ತು ತಮಿಳುನಾಡಿನ ಮಹಾಬಲಿಪುರಂ…

Read More

ನವದೆಹಲಿ : ಡಿಸೆಂಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಶಾಕ್, ಇಂದು ಬೆಳ್ಳಂಬೆಳಗ್ಗೆ ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯು 18.50 ರೂ. ಹೆಚ್ಚಳವಾಗಿದೆ. ಆದರೆ 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಇತ್ತೀಚಿನ ದರಗಳ ಪ್ರಕಾರ, ಡಿಸೆಂಬರ್ 1, 2024 ರಿಂದ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 18.50 ರೂ. ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಇಂದಿನಿಂದ ಡಿಸೆಂಬರ್ 1 ರಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1818.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 1927 ರೂ. ಮುಂಬೈನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 16.50 ರೂ. ಇಲ್ಲಿ 1754.50 ರೂ.ಗೆ ದೊರೆಯುತ್ತಿದ್ದ ಸಿಲಿಂಡರ್ ಇಂದಿನಿಂದ 1771 ರೂ.ಗೆ ಲಭ್ಯವಾಗಲಿದೆ. ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಇಲ್ಲ. ದೆಹಲಿಯಲ್ಲಿ 14 ಕೆಜಿ ಎಲ್‌ಪಿಜಿ ಸಿಲಿಂಡರ್ ಆಗಸ್ಟ್ 1 ರ ದರದಲ್ಲಿ ಲಭ್ಯವಿದೆ. ಇಂದಿಗೂ…

Read More

ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2400 ಕೆ.ಎಸ್.ಆರ್.ಪಿ. ಪೋಲೀಸರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶಿಸಿದೆ. ಹೌದು, ರಾಜ್ಯ ಸರ್ಕಾರವು ಸಶಸ್ತ್ರ ಮೀಸಲು ಪಡೆಯ ಎರಡು ಹೊಸ ಬೆಟಾಲಿಯನ್ ಆರಂಭಿಸಲು ಸೂಚನೆ ನೀಡಿದ್ದು, ದೇವನಹಳ್ಳಿ ಮತ್ತು ಕೆಜಿಎಫ್ ಬಳಿ 2,400 ಪೊಲೀಸರ ಬಲವುಳ್ಳ ಎರಡು ಬೆಟಾಲಿಯನ್ ಆರಂಭಕ್ಕೆ ಅಧಿಕೃತವಾಗಿ ಆದೇಶಿಸಿದ್ದು, ಪ್ರಸ್ತುತ 12 ಕೆ.ಎಸ್.ಆರ್.ಪಿ., ಎರಡು ಐ.ಆರ್.ಬಿ. ಬೆಟಾಲಿಯನ್ ಗಳು ಇದ್ದು, ಮತ್ತಷ್ಟು ಬೆಟಾಲಿಯನ್ ಆರಂಭಿಸುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದು, ಸರ್ಕಾರ ಒಪ್ಪಿಗೆ ನೀಡಿದೆ. ದೇವನಹಳ್ಳಿ ಸಮೀಪ ನೂರು ಎಕರೆ, ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನಲ್ಲಿ 50 ಎಕರೆ ಜಾಗದಲ್ಲಿ ಹೊಸ ಬೆಟಾಲಿಯನ್ ಆರಂಭಿಸಲಿದ್ದು, ಇಲ್ಲಿ ತಲಾ ಓರ್ವ ಕಮಾಂಡೆಂಟ್ ಸೇರಿ 1200 ಪೊಲೀಸರಂತೆ 2400 ಪೊಲೀಸರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

Read More

ಬೆಂಗಳೂರು : ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಟ 24% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರನ್ನು ನೇಮಕಾತಿ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಪತ್ರದಲ್ಲಿ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಇವರು ಮಾನ್ಯ ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮತ್ತು ನಿಗಮಗಳ ಅಧಿಕಾರಿಗಳೊಂದಿಗೆ ದಿನಾಂಕ:01-06-2023 ರಂದು ಜರುಗಿದ ಸಭೆಯಲ್ಲಿ, ‘ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ 24% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸಿಕೊಳ್ಳಲು ಕಾನೂನು ಇಲಾಖೆಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದ್ದು, ಸಭಾ ನಡವಳಿಯಲ್ಲಿ ಕ್ರಮವಹಿಸಲು ನಿರ್ದೇಶನವಿರುತ್ತದೆ. ಅದರಂತೆ, ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಕನಿಷ್ಠ 24% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸುವಂತೆ ಶೇ.24 ರಷ್ಟು ಪರಿಶಿಷ್ಟ ಜಾತಿ/ ಪಂಗಡದವರಿಗೆ ಪ್ರಾತಿನಿಧ್ಯತೆ ನೀಡಬಹುದೆಂಬ ಅಭಿಪ್ರಾಯದೊಂದಿಗೆ ಪ್ರಸ್ತಾವನೆಯನ್ನು ಕಾನೂನು ಇಲಾಖೆಗೆ ಕಳುಹಿಸಲು ಸೂಕ್ತ…

Read More

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೀಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಇದೀಗ ಕರ್ನಾಟಕದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಡಿಸೆಂಬರ್ 3ರಂದು ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Read More

ಬೆಂಗಳೂರು : ಮಾರ್ಚ್ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಡಿಸೆಂಬರ್ 2 ರಿಂದ 12 ರವರೆಎ ಕೊನೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಗಳನ್ವಯ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ದಿನಾಂಕ: 26-11-2024 ರವರೆಗೆ ರೂ 500+700=1200 ದಂಡಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳು ಹಾಗೂ ಮನವಿ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಶೇಷ ದಂಡ ಸಹಿತ ಈ ಕೆಳಕಂಡಂತೆ ವಿಸ್ತರಿಸಿ ಆದೇಶಿಸಲಾಗಿದೆ. ಜಿಲ್ಲಾ ಉಪನಿರ್ದೇಶಕರು ಪ್ರಾಂಶುಪಾಲರಿಂದ ಸ್ವೀಕರಿಸಿದ ಅರ್ಜಿಗಳನ್ನು ಮಂಡಲಿಯ ಜಾಲತಾಣದ PU Exam Portal Login ನಲ್ಲಿ Update ಮಾಡಿರುವುದನ್ನು ಖಾತ್ರಿಪಡಿಸಿಕೊಂಡು,…

Read More