Author: kannadanewsnow57

ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮದಲ್ಲಿ ರೂಪದರ್ಶಿ ಬಿಯಾಂಕಾ ಸೆನ್ಸೋರಿ ಬೆತ್ತಲಾಗಿದ್ದು, ಕೂಡಲೇ ಅವರನ್ನು ಕಾರ್ಯಕ್ರಮದಿಂದ ಹೊರಗೆ ಕಳುಹಿಸಲಾಗಿದೆ. ಬಿಯಾಂಕಾ ಸೆನ್ಸೋರಿ ಮತ್ತೊಮ್ಮೆ 2025 ರ ಗ್ರ್ಯಾಮಿ ಪ್ರಶಸ್ತಿಗಳಲ್ಲಿ ಗಮನ ಸೆಳೆದರು, ಆರಂಭದಲ್ಲಿ ಉದ್ದನೆಯ ಕಪ್ಪು ಕೋಟ್ ಧರಿಸಿದ ಮಾಡೆಲ್ ಎಲ್ಲರ ಎದುರೇ ಅದನ್ನು ತೆಗೆದುಹಾಕಿದಳು. ಪತಿ ರ್ಯಾಪರ್ ಕಾನ್ಯೆ ವೆಸ್ಟ್ ಜೊತೆ ಅವರು ಗ್ರ್ಯಾಮಿ ಅವಾರ್ಡ್’ ಕಾರ್ಯಕ್ರಮಕ್ಕೆ ಬಂದಿದ್ದರು. ರ್ಯಾಪರ್ ಕಾನ್ಯೆ ವೆಸ್ಟ್ ಅತ್ತುತ್ತಮ ರ್ಯಾಪ್ ಸಾಂಗ್ ಗೆ ನಾಮಿನೇಟ್ ಆಗಿದ್ದಾರೆ. ಈ ಹಿಂದೆ ಕಾನ್ಯೆ ವೆಸ್ಟ್ ಎಂದು ಕರೆಯಲ್ಪಡುತ್ತಿದ್ದ ರ್ಯಾಪರ್ ಯೆ, ಗ್ರ್ಯಾಮಿ ಪ್ರಶಸ್ತಿಗಳಲ್ಲಿ ಸುದ್ದಿಯಾಗುವುದು ಹೊಸತೇನಲ್ಲ, ಆದರೆ ಅವರ ಪಾಲುದಾರ ಬಿಯಾಂಕಾ ಈ ಬಾರಿ ಎಲ್ಲರ ಗಮನ ಸೆಳೆದರು. ಖಾಸಗಿ ಅಂಗ ಕಾಣಿಸುವ ವಸ್ತ್ರ ಧರಿಸಿ ಬಂದಿದ್ದರು. ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಟೀಕೆಗೆ ಕಾರಣವಾಗಿದೆ.

Read More

ನವದೆಹಲಿ : ಮೆರಿಕದ ಡಾಲರ್ ವಿರುದ್ಧ ಐತಿಹಾಸಿಕ ಕುಸಿತದೊಂದಿಗೆ ಭಾರತೀಯ ರೂಪಾಯಿ ಹೊಸ ದಾಖಲೆಯನ್ನು ತಲುಪಿದೆ. ಮೊದಲ ಬಾರಿಗೆ ರೂಪಾಯಿ ಮೌಲ್ಯ 87 ರೂ.ಗಳ ಗಡಿ ದಾಟಿದ್ದು, ಕರೆನ್ಸಿ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಅಮೆರಿಕ ಸರ್ಕಾರವು ಸುಂಕಗಳನ್ನು ಹೆಚ್ಚಿಸುವ ಸಾಧ್ಯತೆಯ ಭಯದ ಮಧ್ಯೆ ಈ ಕುಸಿತ ಕಂಡುಬಂದಿದ್ದು, ಇದು ರೂಪಾಯಿ ಮೌಲ್ಯದ ಮೇಲೆ ಮತ್ತಷ್ಟು ಒತ್ತಡ ಹೇರಿದೆ. ಭಾರತದಲ್ಲಿ, ವಹಿವಾಟಿನ ಆರಂಭದಲ್ಲಿ ಡಾಲರ್ ಎದುರು ರೂಪಾಯಿ 87.06 ಕ್ಕೆ ಪ್ರಾರಂಭವಾಯಿತು, 42 ಪೈಸೆ ಕುಸಿತ ಕಂಡಿತು. ಮಾರುಕಟ್ಟೆ ಆರಂಭವಾದಾಗ, ರೂಪಾಯಿ ಮತ್ತಷ್ಟು ದುರ್ಬಲಗೊಂಡು ಕೇವಲ 10 ನಿಮಿಷಗಳಲ್ಲಿ ಪ್ರತಿ ಡಾಲರ್‌ಗೆ 55 ಪೈಸೆ ಕುಸಿದು 87.12 ರೂ.ಗೆ ತಲುಪಿತು. ಈ ಕುಸಿತವು ಭಾರತೀಯ ಕರೆನ್ಸಿಗೆ ಅಭೂತಪೂರ್ವವಾಗಿದ್ದು, ಇದು ಮಾರುಕಟ್ಟೆಗಳ ಗಮನವನ್ನು ಸೆಳೆದಿದೆ. ಕುಸಿತಕ್ಕೆ ಕಾರಣಗಳು ಈ ಕುಸಿತದ ಹಿಂದೆ ಹಲವು ಕಾರಣಗಳನ್ನು ಪರಿಗಣಿಸಲಾಗುತ್ತಿದೆ. ಭಾರತೀಯ ಆಮದುಗಳ ಮೇಲಿನ ಸುಂಕವನ್ನು ಅಮೆರಿಕ ಹೆಚ್ಚಿಸುವ ಸಾಧ್ಯತೆಯು ಮಾರುಕಟ್ಟೆಗಳಲ್ಲಿ ಭೀತಿಯನ್ನು ಸೃಷ್ಟಿಸಿರುವುದು ದೊಡ್ಡ ಕಾರಣ…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಶನಿವಾರ ತಡರಾತ್ರಿ ಪುಂಡರು ಅಟ್ಟಹಾಸ ಮೆರೆದಿದ್ದು, ಸಿಕ್ಕ ಸಿಕ್ಕವರಿಗೆ ಕಲ್ಲು, ರಾಡ್, ಸಿಮೆಂಟ್ ಇಟ್ಟಿಗೆಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬಳ್ಳಾರಿಯ ಬಾಪೂಜಿನಗರದ 7 ನೇ ವಾರ್ಡ್ ನಲ್ಲಿ ಕ್ಷುಲಕ ಕಾರಣಕ್ಕೆ ಮನೆಗೆ ನುಗ್ಗಿದ ಪುಂಡರು ಕಲ್ಲು, ರಾಡ್, ಸಿಮೆಂಟ್ ಇಟ್ಟಿಗೆಗಳಿಂದ ಹಲ್ಲೆ ನಡೆಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಹೆಲ್ಮೆಟ್ ಹಾಕಿಕೊಂಡ ಬಂದ ಪುಂಡರು ಮನೆ ಎದುರಿಗೆ ಇರುವ ಬೈಕ್ ಗಳನ್ನು ಪುಡಿ ಪುಡಿ ಮಾಡಿ ಪರಾರಿಯಾಗಿದ್ದಾರೆ. ಸದ್ಯ ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Read More

ನವದೆಹಲಿ : ‘ಕೆಲಸಕ್ಕೆ ನಗದು’ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿತು ಮತ್ತು ಉದ್ಯೋಗ ಪಡೆಯಲು ಲಂಚ ನೀಡುವುದು ಸಹ ಅಪರಾಧ ಎಂದು ಸ್ಪಷ್ಟಪಡಿಸಿತು. ದೂರುದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶನ ನೀಡಲಾಗಿದೆ. ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ರವೀಂದ್ರ ಅಗರ್ವಾಲ್ ಅವರಿದ್ದ ವಿಭಾಗೀಯ ಪೀಠವು ಈ ವಿಷಯದ ಬಗ್ಗೆ ಕಠಿಣ ನಿಲುವು ತೆಗೆದುಕೊಂಡಿತು. ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್, ಹಲವು ಎಚ್ಚರಿಕೆಗಳ ಹೊರತಾಗಿಯೂ, ನ್ಯಾಯಾಂಗ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಲು ಜನರು ದಲ್ಲಾಳಿಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಹೇಳಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 420 ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಆರೋಪಿಯು ದೂರುದಾರರಿಂದ 5,15,000 ರೂ. ಪಡೆದು, ತನಗೆ ಮತ್ತು ತನ್ನ ಸ್ನೇಹಿತರಿಗೆ ಹೈಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿದ್ದನು. ನಂತರ ಅಂತಹ ಯಾವುದೇ ಕೆಲಸವಿಲ್ಲ ಎಂದು ದೂರುದಾರರಿಗೆ…

Read More

2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೆÇೀಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆ ಅಡಿ ಫಲಾನುಭವಿಗಳಾಗಬಹುದು. ಈ ಯೋಜನೆ ಅಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು 4139 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್‍ಗಳು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಬಹುದು. ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ…

Read More

ಹೈದರಾಬಾದ್ : ತೆಲಂಗಾಣ ಸರ್ಕಾರ ಕೈಗೊಂಡ ಮಹತ್ವಾಕಾಂಕ್ಷೆಯ ಜಾತಿ ಜನಗಣತಿ ಸಮೀಕ್ಷೆ ಪೂರ್ಣಗೊಂಡಿದೆ. ಅಂತಿಮ ವರದಿಯನ್ನು ಯೋಜನಾ ಆಯೋಗದ ಸಚಿವ ಸಂಪುಟ ಉಪಸಮಿತಿಗೆ ಸಲ್ಲಿಸಲಾಯಿತು. ಸಚಿವ ಉತ್ತಮ್ ಕುಮಾರ್ ರೆಡ್ಡಿ ಈ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ರಾಜ್ಯದಲ್ಲಿ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಇನ್ನು ಮುಂದೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಅವರು ಹೇಳಿದರು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಂಬಂಧಿತ ಸಮಸ್ಯೆಗಳನ್ನು ಅಧ್ಯಯನ ಮಾಡಲು ತೆಲಂಗಾಣ ಸರ್ಕಾರ ನಡೆಸಿದ 50 ದಿನಗಳ ಜಾತಿ ಜನಗಣತಿ ಸಮೀಕ್ಷೆ ಪೂರ್ಣಗೊಂಡಿದೆ. ಜಾತಿ ಜನಗಣತಿ ಸಮಿತಿಯು ರಾಜ್ಯಾದ್ಯಂತ 1 ಕೋಟಿ 12 ಲಕ್ಷ 15 ಸಾವಿರ ಕುಟುಂಬಗಳನ್ನು ಸಮೀಕ್ಷೆ ಮಾಡಿತು. ಪ್ರತಿಯೊಂದು ಜಾತಿಯ ಜನಸಂಖ್ಯೆಯ ಬಗ್ಗೆ ಮಾಹಿತಿಯ ಕೊರತೆಯಿಂದಾಗಿ ರಾಜ್ಯ ಸರ್ಕಾರವು ಪ್ರಾರಂಭಿಸಿರುವ ಕಲ್ಯಾಣ ಯೋಜನೆಗಳ ಅನುಷ್ಠಾನವು ಸಮಸ್ಯೆಯಾಗಿ ಪರಿಣಮಿಸಿದೆ. ಜಾತಿ ಜನಗಣತಿ ಪೂರ್ಣಗೊಂಡಿರುವುದರಿಂದ ಆ ಸಮಸ್ಯೆ ಇನ್ನು ಮುಂದೆ ಇರುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಜಾತಿ ಜನಗಣತಿ ಸಮೀಕ್ಷೆಗಾಗಿ ರಾಜ್ಯ…

Read More

ಮುಂಬೈ : ಲೈವ್ ಪ್ರದರ್ಶನದ ವೇಳೆಯೇ ಖ್ಯಾತ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾನುವಾರ ಲೈವ್ ಪ್ರದರ್ಶನದ ಸಮಯದಲ್ಲಿ ಅವರು ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದರು. ತೀವ್ರ ಬೆನ್ನುನೋವಿನ ಹೊರತಾಗಿಯೂ ಅವರು ತಮ್ಮ ಪ್ರದರ್ಶನವನ್ನು ಮುಂದುವರಿಸಿದರು. ನೋವು ಉಲ್ಬಣಿವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನು ನಿಗಮ್ ತಮ್ಮ ಇನ್ಸ್ಟಾಗ್ರಾಮ್ ವೀಡಿಯೊವನ್ನು ಪೋಸ್ಟ್ ಮಾಡಿ, ತಮ್ಮ ನೋವನ್ನು ವಿವರಿಸಿದ್ದಾರೆ. “ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನೋವು ಕಾಣಿಸಿಕೊಂಡಿತು. ಆದರೆ, ಹೇಗೋ ಮ್ಯಾನೇಜ್ ಮಾಡಿದೆ. ಜನರು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ’ ಎಂದು ಅವರು ಹೇಳಿದ್ದಾರೆ. ಅತಿಯಾದ ನೋವು ಕಾಣಿಸಿತ್ತು. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಕಿತ್ತು ಬರುತ್ತಿತ್ತು’ ಎಂದು ಅವರು ಹೇಳಿರೋ ಅವರು ವಿಡಿಯೋ ಕ್ಯಾಪ್ಶನ್​ನಲ್ಲಿ ‘ರಾತ್ರಿ ಸರಸ್ವತಿ…

Read More

ಹಾಸನ : ಹಾಸನದಲ್ಲಿ ಘೋರ ಘಟನೆ ಸಂಭವಿಸಿದ್ದು, ಕೆರೆಗೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಜಿನ್ಹಾಪುರದಲ್ಲಿ ನಿನ್ನೆ ಸಂಜೆ ಕೆಲಸ ಮುಗಿಸಿ ಈಜಲು ತೆರಳಿದ್ದ ಗಣೇಶ್ (29) ರೋಹಿತ್ (28 ) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಕೆಲಸ ಮುಗಿಸಿ ಈಜಲು ಕೆರೆಗೆ ತೆರಳಿದ್ದ ಯುವಕರು ಮೇಲೆ ಬಾರಲು ಸಾಧ್ಯವಾಗದೇ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಮಹಾಕುಂಭಮೇಳದಲ್ಲಿ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಸತೀಶ್ ಜಾರಕಿಹೊಳಿ ಅಭಿಮಾನಿಗಳು ಹರಕೆ ಹೊತ್ತಿದ್ದಾರೆ. ಬೆಳಗಾವಿಯಿಂದ ಪ್ರಯಾಗ್ ರಾಜ್ ಗೆ ತೆರಳಿರುವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಬಳಿಕ ಸತೀಶ್ ಜಾರಕಿಹೊಳಿ ಫೋಟೋ ಹಿಡಿದು ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಹರಕೆ ಹೊತ್ತಿದ್ದಾರೆ.

Read More

ಬೆಂಗಳೂರು : ಮಂಡಿನೋವು ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಸಿದ್ದರಾಮಯ್ಯ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಸಿದ್ದರಾಮಯ್ಯ ಅವರ ತಪಾಸಣೆ ನಡೆಸಿದ ವೈದ್ಯರು, ಸಿಎಂ ಸಿದ್ದರಾಮಯ್ಯಗೆ ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಇದೀಗ ಅದೇ ಜಾಗದಲ್ಲಿ ಒತ್ತಡ ಬಿದ್ದಿರುವುದರಿಂದ ನೋವು ಹೆಚ್ಚಾಗಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ. 2 ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಮಂಡಿ ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯಲು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವ ಹಿನ್ನೆಲೆಯಲ್ಲಿ ಇಂದು ನಿಗದಿ ಪಡಿಸಲಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

Read More