Subscribe to Updates
Get the latest creative news from FooBar about art, design and business.
Author: kannadanewsnow57
ಸರ್ಕಾರದ ನಿಯಮಗಳ ಪ್ರಕಾರ, ಯಾವುದೇ ಉತ್ಪನ್ನದ ಗರಿಷ್ಠ ಚಿಲ್ಲರೆ ಬೆಲೆಯನ್ನು (MRP) ಸ್ಪಷ್ಟವಾಗಿ ಪ್ರದರ್ಶಿಸಬೇಕು ಮತ್ತು ಗ್ರಾಹಕರು ಆ ಬೆಲೆಯನ್ನು ಮಾತ್ರ ಪಾವತಿಸಬೇಕು. ಆದರೆ ಅಂಗಡಿಕಾರರು ಸ್ವಲ್ಪ ಹೆಚ್ಚುವರಿ ಹಣವನ್ನು ಚಾರ್ಜ್ ಮಾಡುತ್ತಾರೆ ಅಥವಾ ಬದಲಾವಣೆಗೆ ಬದಲಾಗಿ ಚಾಕೊಲೇಟ್ಗಳನ್ನು ನೀಡುತ್ತಾರೆ. ಗ್ರಾಹಕರ ಮಾಹಿತಿ ಅಥವಾ ಅರಿವಿನ ಕೊರತೆಯಿಂದಾಗಿ ಈ ಪರಿಸ್ಥಿತಿಯು ಹೆಚ್ಚಾಗಿ ಸಂಭವಿಸುತ್ತದೆ. ಆದರೆ ಈಗ ಗ್ರಾಹಕರು ಈ ರೀತಿಯ ಚೇತರಿಕೆಯನ್ನು ಕಾನೂನುಬದ್ಧವಾಗಿ ವಿರೋಧಿಸಬಹುದು. ಸುಪ್ರೀಂ ಕೋರ್ಟ್‌ನ ನಿಯಮಗಳ ಪ್ರಕಾರ, ಅಂಗಡಿಯವರು ಎಂಆರ್‌ಪಿಗಿಂತ ಹೆಚ್ಚಿನ ಶುಲ್ಕ ವಿಧಿಸುವುದು ಕಾನೂನುಬಾಹಿರವಾಗಿದೆ. ಆದಾಗ್ಯೂ, ರೆಸ್ಟೋರೆಂಟ್‌ಗಳು ಮತ್ತು ಕೆಫೆಗಳು MRP ಜೊತೆಗೆ ಸೇವಾ ಶುಲ್ಕವನ್ನು ವಿಧಿಸಬಹುದು. ಇದಲ್ಲದೆ, ಗ್ರಾಹಕರು ಖರೀದಿಸಿದ ವಸ್ತುವಿನ ಕಡಿಮೆ ತೂಕವನ್ನು ಕಂಡುಕೊಂಡರೆ, ಅವರು ತಮ್ಮ ಬೇಡಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಇರಿಸಬಹುದು. ಎಲ್ಲಿ ದೂರು ನೀಡಬೇಕು? ಅಂಗಡಿಯವನು MRP ಗಿಂತ ಹೆಚ್ಚಿನ ಶುಲ್ಕವನ್ನು ವಿಧಿಸಿದರೆ, ಅದನ್ನು ಗ್ರಾಹಕ ಸಂರಕ್ಷಣಾ ಕಾಯಿದೆಯಡಿಯಲ್ಲಿ “ಮೋಸಗೊಳಿಸುವ ವಿಧಾನದಿಂದ ಅಧಿಕ ಶುಲ್ಕ ವಿಧಿಸುವುದು” ಎಂದು ಪರಿಗಣಿಸಲಾಗುತ್ತದೆ. ಗ್ರಾಹಕರು ಗ್ರಾಹಕ…
ಬೆಂಗಳೂರು : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಪೀಠಾಧ್ಯಕ್ಷ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಚಾಮರಾಜಪೇಟೆಯ ವಾಲ್ಮೀಕಿ ನಗರದ ನಿವಾಸಿ ಸೈಯದ್ ಅಬ್ಬಾಸ್ ಅವರು ನೀಡಿದ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತ ಕಲಂ 299 (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿ ದೂರು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಕಿಸಾನ್ ಸಂಘ ನವೆಂಬರ್ 26 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಳಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರ ಸ್ವಾಮೀಜಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡುವಾಗ ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು. ದೇಶದಲ್ಲಿ ವಕ್ಫ ಮಂಡಳಿಯೇ ಇಲ್ಲದಂತೆ ಮಾಡಿದ್ರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಸ್ವಾಮೀಜಿ ದ್ವೇಷ ಭಾಷಣ ಮಾಡಿದ್ದಾರೆ ಎಂದು…
ಮಂಡ್ಯ : ಮಂಡ್ಯ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಬಾರ್ ಲೈಸೆನ್ಸ್ ಗೆ ಲಂಚಕ್ಕೆ ಬೇಡಿಕೆ ಎಂಬ ಸುದ್ದಿ ನಮ್ಮ ಕನ್ನಡ ನ್ಯೂಸ್ ನೌ ಡಿಜಿಟಲ್ ಮೀಡಿಯಾದಲ್ಲಿ ಬೆಳಿಗ್ಗೆ ಸುದ್ದಿ ಪ್ರಸಾರ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಅಬಕಾರಿ ಇಲಾಖೆಯ ಸಚಿವ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಇದೀಗ ಮಂಡ್ಯ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಗಾಗಿ ಅರ್ಜಿ ಸಲ್ಲಿಸಿದವರ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅರ್ಜಿದಾರರು ಲೋಕಾಯುಕ್ತಕ್ಕೆ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದ್ದರು. ಹೌದು ಮಂಡ್ಯದ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಸಿ ಎಲ್-7 ಲೆಸೆನ್ಸ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಲಕ್ಷ್ಮಮ್ಮ ಎಂಬುವರ ಹೆಸರಿನಲ್ಲಿ…
ಬೆಂಗಳೂರು : ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-11-2024 ರವರೆಗೆ ವಿಸ್ತರಿಸಲಾಗಿದೆ. ಬಿಬಿಎಂಪಿ ಐತಿಹಾಸಿಕ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದೆ. ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದ್ದು, ಆ ವೇಳೆಗೆ ಒಟ್ಟು ₹4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಬಡ್ಡಿ ಮತ್ತು ದಂಡಕ್ಕೆ ವಿನಾಯಿತಿ ನೀಡಲಾಗಿರುವ ಒಟಿಎಸ್ ಯೋಜನೆಯನ್ನು ನಾಗರಿಕರು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಡಿಸೆಂಬರ್ 1 ರಿಂದ ಸುಮಾರು ಎರಡು ಪಟ್ಟು ಹೆಚ್ಚು ಪಾವತಿಸಬೇಕಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಆದರೆ ಆಸ್ತಿ ತೆರಿಗೆ ಬಾಕಿ ಇರುವ ನಾಗರೀಕರು ಇದರ ಲಾಭವನ್ನು ಸರಿಯಾಗಿ ಪಡೆಯುತ್ತಿಲ್ಲ. 250 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ 1,6000ಕ್ಕೂ ಹೆಚ್ಚು ಪರಿಷ್ಕರಣೆ ಪ್ರಕರಣಗಳು ಮತ್ತು 400 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ ಸುಮಾರು 2.4…
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೈಕ್ ಚಕ್ರಕ್ಕೆ ಸೀರೆಯ ಸೆರಗು ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಕೇತನಾಯಕನಹಳ್ಳಿಯಲ್ಲಿ ಬೈಕ್ ಚಕ್ರಕ್ಕೆ ಸೀರೆಯ ಸೆರಗು ಸಿಲುಕಿ ದ್ಯಾವಮ್ಮ(50) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಚಿಂತಾಮಣಿ -ದಿಬ್ಬೂರಹಳ್ಳಿ ರಸ್ತೆಯ ಕೇತನಾಯಕನಹಳ್ಳಿ ಸಮೀಪ ಗ್ರಾಮದ ನಾಗೇಶ್ ಎಂಬುವರ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸೀರೆಯ ಸೆರಗು ಬೈಕ್ ಚಕ್ರಕ್ಕೆ ಸಿಲುಕಿ ದ್ಯಾವಮ್ಮ ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಜಿಗುಂಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಾಗೇಶ್ ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನ ಚಕ್ರಕ್ಕೆ ಸೀರೆಯ ಸೆರಗು ಸಿಲುಕಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ದಿಬ್ಬೂರಹಳ್ಳಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಗೆ ಡೇಟ್ ಫೀಕ್ಸ್ ಮಾಡಲಾಗಿದೆ. ಡಿ.29, 2024ರಂದು ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಖ್ಯೆ : ಪಿಎಸ್ ಸಿ 509 ಇ(1)/2023-24, ದಿನಾಂಕ 26-02-2024 ರಂದು ನಡೆಸಲು ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಮರುಪರೀಕ್ಷೆಯನ್ನು ದಿನಾಂಕ:29-12-2024ರಂದು ನಡೆಸಲು ನಿಗದಿಪಡಿಸಿರುತ್ತದೆ. ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ನ Applicant Login ನಿಂದ ದಿನಾಂಕ:26-11-2024ರಂದು ತಂತ್ರಾಂಶದಲಿನ ದೋಷದಿಂದಾಗಿ ಪ್ರವೇಶ ಪತ್ರವನ್ನು Download ಮಾಡಿಕೊಂಡಿರುತ್ತಾರೆಂದು ತಿಳಿದುಬಂದಿರುತ್ತದೆ, ಆಯೋಗವು ದಿನಾಂಕ:29-12-2024ರ ಪೂರ್ವಭಾವಿ ಮರುಪರೀಕ್ಷೆಯ ಸಂಬಂಧ ಯಾವುದೇ ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ.. ಅಧಿಕೃತವಾಗಿ ಬಿಡುಗಡೆ ಮಾಡಿರುವುದಿಲ್ಲವಾದ ಕಾರಣ ತಾಂತ್ರಿಕ ದೋಷದಿಂದಾಗಿ ಪ್ರಸ್ತುತ Download ಮಾಡಿಕೊಂಡಿರುವ ಪ್ರದೇಶ ಪತ್ರಗಳನ್ನು ಅಸಿಂಧುಗೊಳಿಸಿದೆ. ಮುಂದುವರೆದು, ಎಲಾ., ಅಭ್ಯರ್ಥಿಗಳಿಗೆ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರವನ್ನು Download ಮಾಡಿಕೊಳ್ಳುವ ಕುರಿತು ತಿಳಿಸಲಾಗಿದೆ.…
ನವದೆಹಲಿ : ಸಿಎಂ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಬೇಟಿಯಾಗಲು ಅವಕಾಶ ನೀಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ಸಂಸತ್ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಇದೀಗ ಮತ್ತೆ 11 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಪ್ರಪಂಚದಾದ್ಯಂತ ಪ್ರತಿ ವರ್ಷ ಲಕ್ಷಾಂತರ ಜನರು ಹೃದಯಾಘಾತ ಮತ್ತು ಇತರ ಹೃದಯ ಸಮಸ್ಯೆಗಳಿಂದ ಸಾಯುತ್ತಾರೆ. ಕೆಟ್ಟ ಆಹಾರ ಪದ್ಧತಿ, ಬಿಡುವಿಲ್ಲದ ಜೀವನಶೈಲಿ ಮತ್ತು ಒತ್ತಡವು ಹೃದಯಾಘಾತಕ್ಕೆ ಕಾರಣವಾಗಬಹುದು. ಆದರೆ, ಹೃದಯಾಘಾತವನ್ನು ಮೊದಲೇ ಪತ್ತೆ ಹಚ್ಚಿದರೆ ಜೀವ ಉಳಿಸಬಹುದು ಎನ್ನುತ್ತಾರೆ ತಜ್ಞರು. ಆದ್ದರಿಂದ ಹೃದಯಾಘಾತದ ಲಕ್ಷಣಗಳು ಮತ್ತು ಚಿಹ್ನೆಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಬೇಕು ಎಂದು ಹೇಳಲಾಗುತ್ತದೆ. ಹೃದಯಾಘಾತದ ಮುಖ್ಯ ಲಕ್ಷಣವೆಂದರೆ ಎದೆ ನೋವು. ಆದರೆ ಈ ನೋವು ಹೃದಯಾಘಾತದಿಂದ ಉಂಟಾಗುತ್ತದೆಯೇ? ಅಲ್ಲವೇ ಮುಖ್ಯ ವಿಷಯವೆಂದರೆ ಅದನ್ನು ಗುರುತಿಸಲು ಸಾಧ್ಯವಾಗುತ್ತದೆ. ಎದೆನೋವು ಹೃದಯಾಘಾತದ ಲಕ್ಷಣವಾಗಿರುವುದರಿಂದ ಅದನ್ನು ಲಘುವಾಗಿ ಪರಿಗಣಿಸಬಾರದು ಎನ್ನುತ್ತಾರೆ ತಜ್ಞರು. ರಾತ್ರಿಯಲ್ಲಿ ಎದೆ ನೋವು ಹೃದಯದ ಸಮಸ್ಯೆಗಳ ಸೂಚಕವಾಗಿದೆ ಮತ್ತು ಆರಂಭಿಕ ಪತ್ತೆ ಜೀವಗಳನ್ನು ಉಳಿಸಬಹುದು ಎಂದು ಸಲಹೆ ನೀಡಲಾಗುತ್ತದೆ. ನೈಸರ್ಗಿಕವಾಗಿ ರಾತ್ರಿಯಲ್ಲಿ ಎದೆನೋವಿಗೆ 10 ಪ್ರಮುಖ ಕಾರಣಗಳು ಇಲ್ಲಿವೆ. ಅದನ್ನು ನೋಡೋಣ. ಉಸಿರಾಟದ ತೊಂದರೆ ನೀವು ರಾತ್ರಿಯಲ್ಲಿ ಉಸಿರಾಟದ ತೊಂದರೆ ಅನುಭವಿಸಿದರೆ ಅದು ಹೃದಯ ನೋವಿನ ಪ್ರಮುಖ ಲಕ್ಷಣವಾಗಿದೆ. ಮುಚ್ಚಿಹೋಗಿರುವ ಅಪಧಮನಿಗಳು…
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಿರಿಯಾಜಿಯಲ್ಲಿ ನಡೆದಿದೆ. ಸುಶೀಲಾ (48) ಎಂಬ ಮಹಿಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫಾರ್ಚುನ್ ಮೈಕ್ರೋ ಫೈನಾನ್ಸ್ ಎಂಬ ಸಂಸ್ಥೆಯಿಂದ ಸುಶೀಲ ಸಾಲ ಪಡೆದಿದ್ದರು. ಸಾಲ ಮರುಪಾವತಿಸುವಂತೆ ಸಂಸ್ಥೆ ಕಿರುಕುಳ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











