Subscribe to Updates
Get the latest creative news from FooBar about art, design and business.
Author: kannadanewsnow57
ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ಯಶಸ್ವಿನಿ ಯೋಜನೆ’ ನೋಂದಣಿ ಗಡುವು ಮಾ.31 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ.!
ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸುವ ಸಲುವಾಗಿ ಅವಧಿಯನ್ನು ದಿನಾಂಕ:01-02-2025 ರಿಂದ ದಿನಾಂಕ:31-03-2025 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಇಲಾಖೆಯ ಕ್ಷೇತ್ರ ಸಿಬ್ಬಂದಿಗಳು / ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇದರಿಂದಾಗಿ ಯಶಸ್ವಿನಿ ನೋಂದಣಿಯಲ್ಲಿ ಹೆಚ್ಚಿನ ಪ್ರಗತಿ ಆಗಿರುವುದಿಲ್ಲವೆಂದು ಹಾಗೂ ನಿಗದಿಪಡಿಸಿರುವ ಗುರಿಯ ಪೈಕಿ ಇಲ್ಲಿಯವರೆಗೆ ಸುಮಾರು 10 ಲಕ್ಷ ಸದಸ್ಯರ ನೋಂದಣಿ ಮಾತ್ರವಾಗಿದ್ದು, ಇನ್ನೂ ಅನೇಕ ಸದಸ್ಯರು ನೋಂದಾಯಿಸಿಕೊಳ್ಳಲು ಆಸಕ್ತರಾಗಿರುವುದರಿಂದ ಯೋಜನೆಯಡಿ ಹೆಚ್ಚಿನ ರೀತಿಯಲ್ಲಿ ಪ್ರಗತಿ ಸಾಧಿಸಲು 2024-25 ನೇ ಸಾಲಿನ ಯಶಸ್ವಿನಿ ಯೋಜನೆಯಡಿ ಸದಸ್ಯರ…
ಭಾರತ ಸರ್ಕಾರದ ಸಂವಹನ ಸಚಿವಾಲಯದ ಅಡಿಯಲ್ಲಿರುವ ಅಂಚೆ ಇಲಾಖೆಯು 2025 ಕ್ಕೆ ಬೃಹತ್ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ದೇಶಾದ್ಯಂತ ವಿವಿಧ ವಲಯಗಳಲ್ಲಿ ಗ್ರಾಮೀಣ ಡಾಕ್ ಸೇವಕರ (ಜಿಡಿಎಸ್) ಹುದ್ದೆಗಳಿಗೆ 65,200 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಭಾರತ ಅಂಚೆ ಇಲಾಖೆ ಸಜ್ಜಾಗಿದೆ. ಆಕರ್ಷಕ ಪ್ರಯೋಜನಗಳೊಂದಿಗೆ ಸ್ಥಿರ ಸರ್ಕಾರಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳಿಗೆ ಈ ನೇಮಕಾತಿ ಉಪಕ್ರಮವು ಅತ್ಯುತ್ತಮ ಅವಕಾಶವನ್ನು ಒದಗಿಸುತ್ತದೆ. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮಾರ್ಚ್ 3, 2025 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 28, 2025 ರವರೆಗೆ ಮುಂದುವರಿಯಲಿದೆ. ಆಸಕ್ತ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದಂತೆ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗಳು ಮತ್ತು ಇತರ ಮಾನದಂಡಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯು ಅರ್ಹತೆ ಆಧಾರಿತವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಹತೆ ಪಡೆಯಲು, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ತಮ್ಮ 10 ನೇ ತರಗತಿ (ಮೆಟ್ರಿಕ್ಯುಲೇಷನ್) ಅನ್ನು ಪೂರ್ಣಗೊಳಿಸಿರಬೇಕು. ಅರ್ಜಿದಾರರ ವಯಸ್ಸಿನ ಮಿತಿ…
ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದ್ದು, ಫ್ರೀಯಾಗಿ ಸಿಗರೇಟ್ ಕೊಡದಿದ್ದಕ್ಕೆ ಬೇಕರಿಯಲ್ಲಿ ಕೆಲಸ ಮಾಡುವ ಯುವಕನಿಗೆ ನಿಂದಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ 9.30 ರ ಸುಮಾರಿಗೆ ಚಿಕ್ಕಬಿದಿರಕಲ್ಲು ಮುಖ್ಯ ರಸ್ತೆಯಲ್ಲಿರುವ ಬೇಕರಿ ಸಿಬ್ಬಂದಿಗೆ ಕುಡಿದು ಬಂದು ಆನಂದ್ ಎಂಬುವನು ಆವಾಜ್ ಹಾಕಿದ್ದಾನೆ ಎನ್ನಲಾಗಿದೆ. ಫ್ರೀಯಾಗಿ ಸಿಗರೇಟ್ ಕೊಡದಿದ್ದಕ್ಕೆ ಬೇಕರಿ ಮುಂದೆ ನಿಂತು ಆನಂದ್ ಧಮ್ಕಿ ಹಾಕಿದ್ದು, ಬೇಕರಿಯಲ್ಲಿರುವ ವಸ್ತುಗಳನ್ನು ಎಸೆದು ಅಂಗಡಿ ಮುಚ್ಚಿಸುತ್ತೇನೆ ಎಂದು ಆವಾಜ್ ಹಾಕಿದ್ದಾನೆ. ಸದ್ಯ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಗ್ರಾಮ ಪಂಚಾಯತ, ತಾಲೂಕ, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸರ್ಕಾರದ ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸುವಾಗ ಪಾಲೀಸಬೇಕಾದ ಶಿಷ್ಠಾಚಾರದ ಕ್ರಮಗಳ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಸರ್ಕಾರಿ ಸಭೆ ಮತ್ತು ಸಮಾರಂಭಗಳಿಗೆ ಜನ ಪ್ರತಿನಿಧಿಗಳನ್ನು ಆಹ್ವಾನಿಸುವಾಗ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ಉಲ್ಲೇಖ(1) ಮತ್ತು (2) ರಲ್ಲಿ ಸಮಗ್ರವಾಗಿ ವಿವರಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು, ಪ್ರಾಧಿಕಾರದ ಅಧ್ಯಕ್ಷರು, ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ಕಾರದ ಆಯಾ ಇಲಾಖೆಯ ಅಧಿಕೃತ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಯ ಸಚಿವರ ಸಮಾಲೋಚನೆಯೊಂದಿಗೆ ನಿಗಧಿಪಡಿಸಿ ಕಾರ್ಯಕ್ರಮವನ್ನು ಏರ್ಪಡಿಸುವಂತೆ ಹಾಗೂ ಕನಿಷ್ಠ 07 ದಿವಸಗಳ ಸಮಯಾವಕಾಶವನ್ನು ಪಡೆದುಕೊಳ್ಳುವಂತೆ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವ ಬಗ್ಗೆ, ಕಾರ್ಯಕ್ರಮಕ್ಕೆ ಆಹ್ವಾನಿಸುವ ಬಗ್ಗೆ ಮತ್ತು ಆಮಂತ್ರಣ ಪತ್ರಿಕೆಗಳನ್ನು ರಾಜ್ಯ ಆದ್ಯತಾ ಸೂಚಿ ಪಟ್ಟಿಯನ್ನು ಆಧರಿಸಿ ಸ್ಥಾನಗಳನ್ನು ನೀಡಿ ಅನುಕ್ರಮದಲ್ಲಿ ಮುದ್ರಿಸಲು ಮತ್ತು ಜಿಲ್ಲೆಯಲ್ಲಿ…
ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ, ವಸಂತ ಪಂಚಮಿಯ ಅಮೃತ ಸ್ನಾನಕ್ಕೆ ಸಿದ್ಧತೆಗಳು ಪೂರ್ಣ ಉತ್ಸಾಹ ಮತ್ತು ಉತ್ಸಾಹದಿಂದ ನಡೆಯುತ್ತಿವೆ. ಅಖಾಡಾದ ಸಂತರು ಮತ್ತು ಭಕ್ತರು ಬೆಳಿಗ್ಗೆ ಐದು ಗಂಟೆಯ ಹೊತ್ತಿಗೆ, ಎಲ್ಲಾ ಅಖಾಡಗಳ ಎಲ್ಲಾ ಸಂತರು ಮತ್ತು ಋಷಿಗಳು ಅಮೃತ ಸ್ನಾನ ಮಾಡಿದರು. ಅಮೃತ ಸ್ನಾನ ಮಾಡಲು ಕೋಟ್ಯಂತರ ಭಕ್ತರು ಪ್ರಯಾಗ್‌ರಾಜ್ ಸಂಗಮಕ್ಕೆ ತಲುಪಿದ್ದಾರೆ. ಅಖಾಡಗಳಲ್ಲಿ ಸಾಧುಗಳು ಮತ್ತು ಸನ್ಯಾಸಿಗಳ ರಥಗಳು, ಆನೆಗಳು, ಕುದುರೆಗಳು ಅಲಂಕರಿಸಲ್ಪಟ್ಟು ಸಿದ್ಧವಾಗಿವೆ. ಅಖಾಡಗಳಲ್ಲಿ ಸಂಪ್ರದಾಯದಂತೆ ಪೂಜೆ ನಡೆಸಲಾಗುತ್ತಿದೆ. ಸಿಎಂ ಯೋಗಿ ಅವರ ಸೂಚನೆಯಂತೆ, ನ್ಯಾಯಯುತ ಆಡಳಿತವು ಎಲ್ಲಾ ವ್ಯವಸ್ಥೆಗಳನ್ನು ಕ್ರಮಬದ್ಧವಾಗಿ ಮಾಡಿದೆ. ಇದರಿಂದ ಮಹಾ ಕುಂಭಮೇಳಕ್ಕೆ ಬರುವ ಭಕ್ತರು ಮತ್ತು ಸಂತರು ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗಿಲ್ಲ. ದೈವಿಕ ಮತ್ತು ಭವ್ಯವಾದ ಮಹಾಕುಂಭದ ಬಸಂತ್ ಪಂಚಮಿಯ ಮೂರನೇ ಅಮೃತ ಸ್ನಾನವು ಅಲೌಕಿಕ ಮತ್ತು ಆಸಕ್ತಿದಾಯಕ ರೀತಿಯಲ್ಲಿ ಪ್ರಾರಂಭವಾಯಿತು. ಸೋಮವಾರ ಬೆಳಿಗ್ಗೆ 4 ಗಂಟೆಯಿಂದ ಅಖಾಡಗಳು ಸಂಗಮ ಸ್ನಾನಕ್ಕೆ…
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು 10 ಪುಟಗಳ ಕರಡು ಶಾಸನ ರವಾನಿಸಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಸಾಲಗಾರರಿಗೆ ಬಲವಂತದ ಕ್ರಮಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಕರಡು ಶಾಸನ ಸಿದ್ದಪಡಿಸಿ ಕಳಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಸುಗ್ರೀವಾಜ್ಞೆ ಕರಡು ಪರಿಶೀಲನೆ ನಡೆಸಲಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಸಿಎಂ ಸಿದ್ದರಾಮಯ್ಯಗೆ ಸಚಿವ ಸಂಪುಟ ಪರಿಮಾಧಿಕಾರ ನೀಡಿದ್ದು, ಸಿಎಂ ಸಿದ್ದರಾಮಯ್ಯ ಪರಿಶೀಲನೆ ಬಳಿಕ ರಾಜ್ಯಪಾಲರಿಗೆ ಸುಗ್ರೀವಾಜ್ಞೆ ರವಾನಿಸಲಾಗುತ್ತದೆ. ಇಂದು ಅಥವಾ ನಾಳೆ ರಾಜ್ಯಪಾಲರ ಅಂಕಿತ ಸಿಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲಗಾರರಿಗೆ ಕಿರುಕುಳ ನೀಡಿದರೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆ ಮತ್ತು 5 ಲಕ್ಷ ರು. ವರೆಗೆ ದಂಡ ವಿಧಿಸುವ ಮತ್ತು ಲೈಸೆನ್ಸ್ ರದ್ದುಗೊಳಿಸುವ, ಸಾಲ ನೀಡುವಾಗ ಯಾವುದೇ ಅಡಮಾನ ಪಡೆಯಬಾರದು. ಕಿರುಕುಳ ನೀಡಿದರೆ ಜಾಮೀನುರಹಿತ…
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಕಾವೇರಿ ನೀರಿನದ ದರ ಏರಿಕೆ ಅನಿವಾರ್ಯ ಅಂತ ಹೇಳಿದ್ದರು. ಈ ಬೆನ್ನಲ್ಲೇ ಶೀಘ್ರವೇ ಬಂಗಳೂರು ಜನರಿಗೆ ಕಾವೇರಿ ನೀರಿನ ದರ ಏರಿಕೆ ಫಿಕ್ಸ್ ಆದಂತೆ ಆಗಿದೆ. ಕಾರಣ ಸರ್ಕಾರಕ್ಕೆ ಜಲಮಂಡಳಿಯಿಂದ ನೀರಿನ ದರ ಏರಿಕೆಯ ಬಗ್ಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಹೌದು ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರಿನ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ನಾಲ್ಕು ಮಾದರಿಯ ಆಯ್ಕೆಗಳನ್ನು ಜಲಮಂಡಳಿ ಸರ್ಕಾರದ ಮುಂದೆ ಇಟ್ಟಿದೆ. ರಾಜ್ಯ ಸರ್ಕಾರ ಈ ಪ್ರಸ್ತಾವನೆ ಸಂಬಂಧ ಯಾವ ನಿರ್ಧಾರವನ್ನು ಹೊರ ಹಾಕಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಜಲಮಂಡಳಿ ಸಭೆಯಲ್ಲಿ ಮಾತನಾಡಿ ಎಲ್ಲಾ ಪ್ರೀಯಾಗಿ ಕೊಟ್ಟರೇ ಸರ್ಕಾರ ನಡೆಸೋದು ಹೇಗೆ ಅಂತ ಪ್ರಶ್ನಿಸಿದ್ದರು. ಅಲ್ಲದೇ ಇನ್ಮೇಲೆ ಕಾವೇರಿ ನೀರನ್ನು ಫ್ರೀಯಾಗಿ ಕೊಡೋಕೆ ಆಗಲ್ಲ. ಒಂದು ಪೈಸೆಯಾದರೂ ಬಿಲ್ ಕಟ್ಟಬೇಕು ಅಂತ ತಿಳಿಸಿದ್ದರು.
ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ. ಅರಣ್ಯ ಹಕ್ಕು ಕಾಯಿದೆ ಅಡಿ ಇನ್ನೂ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿರುವ ಸಚಿವರು, ಕಂದಾಯ ಭೂಮಿ (ಪಟ್ಟಾ ಜಮೀನು) ಮಾಲಿಕತ್ವ ಹೊಂದಿರುವವರೂ ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಕ್ರಮ ವಹಿಸಲು ಸೂಚಿಸಿದ್ದಾರೆ. ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲೀ, ತಮ್ಮ ಕುಟುಂಬದ ಸದಸ್ಯರಿಗಾಗಲೀ 2005ರ ಡಿಸೆಂಬರ್ 13ಕ್ಕೆ…
ನವದೆಹಲಿ : ಖ್ಯಾತ ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಕೇರಳ ನ್ಯಾಯಾಲಯವೊಂದು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಬಾಬಾ ರಾಮದೇವ್ ಅವರ ಸಹಚರ ಮತ್ತು ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಆಚಾರ್ಯ ಬಾಲಕೃಷ್ಣ ವಿರುದ್ಧವೂ ವಾರಂಟ್ ಹೊರಡಿಸಲಾಗಿದೆ. ಪತಂಜಲಿಯ ಆಯುರ್ವೇದ ಉತ್ಪನ್ನಗಳ ಜಾಹೀರಾತುಗಳು ದಾರಿತಪ್ಪಿಸುವವು ಮತ್ತು ಸುಳ್ಳುಗಳನ್ನು ಪ್ರಚಾರ ಮಾಡುತ್ತವೆ ಎಂಬ ಆರೋಪಗಳಿವೆ. ಈ ಸಂಬಂಧ ಕೇರಳ ಡ್ರಗ್ ಇನ್ಸ್‌ಪೆಕ್ಟರ್ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆಯ ಭಾಗವಾಗಿ, ಪಾಲಕ್ಕಾಡ್ ನ್ಯಾಯಾಲಯವು ಈ ಹಿಂದೆ ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ನೋಟಿಸ್ ಕಳುಹಿಸಿತ್ತು. ಈ ತಿಂಗಳ 1 ರಂದು ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಅವರಿಗೆ ಆದೇಶಿಸಲಾಯಿತು. ಆದರೆ, ಶನಿವಾರ ನಡೆದ ವಿಚಾರಣೆಗೆ ಅವರಿಬ್ಬರೂ ಹಾಜರಾಗಲಿಲ್ಲ. ಪರಿಣಾಮವಾಗಿ, ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಯಿತು. ಪ್ರಕರಣವನ್ನು ಫೆಬ್ರವರಿ 15 ರಂದು ವಿಚಾರಣೆ ನಡೆಸುವುದಾಗಿ ಹೇಳಿ ಮುಂದೂಡಲಾಯಿತು. ಏತನ್ಮಧ್ಯೆ, ಸರ್ಕಾರವು ಈ ಹಿಂದೆ…
ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ಕೆಲವೊಂದು ಇಲಾಖೆ/ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಗೆ ಅರ್ಹ ಅವಲಂಬಿತರು ಯಾರು? ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ನಿಯಮ 2ರಲ್ಲಿನ “ಕುಟುಂಬ” (Family) ಅಂದರೆ, ಸರ್ಕಾರಿ ನೌಕರರ ಪತಿ ಅಥವಾ ಪತ್ನಿ b. ತಂದೆ ಮತ್ತು ತಾಯಿ (ಮಲತಾಯಿಯನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ -ಕುಟುಂಬ ಪಿಂಚಣಿ ರೂ. 8,500/- ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರಬಾರದು. C. ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರಬೇಕು ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡತೆ) 3. KASS ಯೋಜನೆಗೆ ಒಳಪಡದ ನೌಕರರ ವರ್ಗ ಸಾರ್ವಜನಿಕ ವಲಯದ (public sector…













