Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ದೇಶದಲ್ಲಿ ಒಟ್ಟು 58,929 ವಕ್ಫ್ ಆಸ್ತಿಗಳು ಅತಿಕ್ರಮಣಕ್ಕೆ ಗುರಿಯಾಗಿದ್ದು, ಅದರಲ್ಲಿ 869 ಕರ್ನಾಟಕದಲ್ಲಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಬಿಜೆಪಿ ಸದಸ್ಯ ಬಸವರಾಜ ಬೊಮ್ಮಾಯಿ ಅವರ ಪ್ರಶ್ನೆಗೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ. ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಸಚಿವಾಲಯ ಮತ್ತು ಕೇಂದ್ರೀಯ ವಕ್ಫ್ ಕೌನ್ಸಿಲ್ (ಸಿಡಬ್ಲ್ಯೂಸಿ) ಕಾಲಕಾಲಕ್ಕೆ ದೂರುಗಳನ್ನು ಸ್ವೀಕರಿಸಿದೆ. ಇವುಗಳನ್ನು ಸೂಕ್ತ ಕ್ರಮಕ್ಕಾಗಿ ರಾಜ್ಯ ವಕ್ಫ್ ಮಂಡಳಿಗಳು ಮತ್ತು ಸಂಬಂಧಪಟ್ಟ ಸರ್ಕಾರಗಳಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. WAMSI (ಭಾರತದ ವಕ್ಫ್ ಆಸ್ತಿ ನಿರ್ವಹಣಾ ವ್ಯವಸ್ಥೆ) ನಲ್ಲಿ ಲಭ್ಯವಿರುವ ವಿವರಗಳ ಪ್ರಕಾರ, 58,929 ವಕ್ಫ್ ಆಸ್ತಿಗಳು ಅತಿಕ್ರಮಣವನ್ನು ಎದುರಿಸುತ್ತಿವೆ, ಅದರಲ್ಲಿ ಕರ್ನಾಟಕವು ಅಂತಹ 869 ವಕ್ಫ್ ಆಸ್ತಿಗಳನ್ನು ಹೊಂದಿದೆ ಎಂದು ಸಚಿವರು ಹೇಳಿದರು. ವಕ್ಫ್ ಕಾಯಿದೆಯ ಕಲಂ 54 ಮತ್ತು 55ರ ಪ್ರಕಾರ ರಾಜ್ಯ ವಕ್ಫ್ ಮಂಡಳಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ…
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ವೇತನ ಶ್ರೇಣಿಗಳು ಮತ್ತು ಪಿಂಚಣಿ ಪರಿಷ್ಕರಣೆ ಕುರಿತ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ನೀತಿ ನಿರ್ಣಯವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ, ಕ್ರಮವಾಗಿ ಮೇಲೆ (1) ಮತ್ತು (2)ರಲ್ಲಿ ಓದಲಾದ ದಿನಾಂಕ: 23.08.2024 ಮತ್ತು 28.08.2024ರ ಸರ್ಕಾರಿ ಆದೇಶಗಳಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ನು ಮತ್ತು ಪರಿಷ್ಕೃತ ಪಿಂಚಣಿಯನ್ನು ದಿನಾಂಕ: 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಿ ವಿಸ್ತ್ರತವಾದ ಅದೇಶಗಳನ್ನು ಹೊರಡಿಸಲಾಗಿರುತ್ತದೆ. ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರಿಗೆ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸುವ ಬಗ್ಗೆ ಅವಕಾಶಗಳನ್ನು…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಡಿಸೆಂಬರ್ 1 ರಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : 2024 ಅಕ್ಟೋಬರ್-27 ರಂದು KEA ನಡೆಸಿದ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಜಿಲ್ಲಾವಾರು ತಾತ್ಕಾಲಿಕ ಅಂಕಪಟ್ಟಿ (Provisional Score List) ಯನ್ನು KEA ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಿದೆ. ಆಕ್ಷೇಪಣೆಗಳಿದ್ದರೆ ನವೆಂಬರ್-28 ರೊಳಗಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ. ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ, ದಿನಾಂಕ 27.10.2024 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಮಾಹಿತಿಗಾಗಿ ಪ್ರಕಟಿಸಿ, ದಿನಾಂಕ 04.11.2024 ರ ವರೆಗೆ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ದಿನಾಂಕ 04.11.2024 ರ ವರೆಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 27.11.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 28,11.2024 ಸಂಜೆ 4.00…
ಬೆಂಗಳೂರು : ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದೆ. ಆದರೆ, ನಾನಾ ಕಾರಣಗಳಿಂದ ಜಮೀನು ದುರಸ್ಥಿಯಾಗದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಅದರ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ದುರಸ್ಥಿ ಪೋಡಿ ಮಾಡಲು 1-5 ಮತ್ತು 6-10 ಎಂದು ನಿರ್ವಹಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಹೀಗಾಗಿ ದಶಕಗಳಿಂದಲೂ ನಮೂನೆ 1-5 ಹಾಗೂ 6-10 ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿ ಜಮೀನನ್ನು ದುರಸ್ಥಿ ಮಾಡಿಕೊಡಬೇಕು ಎಂಬ ಕೂಗು ರೈತರೂ ಸೇರಿದಂತೆ ಇತರೆ ಸಂಘ ಸಂಸ್ಥೆಗಳಿಂದ ಇತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ನಮೂನೆ 1-5 ಹಾಗೂ 6-10 ಅನ್ನು ಸರಳೀಕರಣಗೊಳಿಸಿ ರೈತರ ಜಮೀನನ್ನು ದುರಸ್ಥಿ ಮಾಡಿಕೊಡಬೇಕು ಎಂಬ ವಿಚಾರದಲ್ಲಿ ಕಟಿಬದ್ಧವಾಗಿತ್ತು. ಅಲ್ಲದೆ, ರೈತರಿಗೆ ಮಂಜೂರಾಗಿದ್ದು, ತಕರಾರಿಲ್ಲದ ಜಮೀನಿನ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸುವ ಹಾಗೂ ತಿದ್ದುಪಡಿಗಳನ್ನು ಸರಳೀಕರಣಗೊಳಿಸುವ ದರಖಾಸ್ತು ಪೋಡಿ ಅಭಿಯಾನಕ್ಕೆ ಚಾಲನೆ ನೀಡುವ ಸಂಬಂಧ…
ಶಿವಮೊಗ್ಗ : ಕೆ.ಎಫ್.ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದ್ದು, ಅಲ್ಲಿಯವರೆಗು ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗನ ಕಾಯಿಲೆ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತು ನಿನ್ನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದು,ಪ್ರತಿ ವರ್ಷ ಜನವರಿ ತಿಂಗಳಿನಿಂದ ಆರಂಭವಾಗಿ ಬೇಸಿಗೆವರೆಗೂ ಈ ಭಾಗದಲ್ಲಿ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಈ ಬಾರಿ ಆರಂಭದಲ್ಲೇ ಹೆಚ್ಚು ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೆ.ಎಫ್.ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದ್ದು, ಅಲ್ಲಿಯವರೆಗು ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕೆಯಾಗಿ ಮಂಗನ ಕಾಯಿಲೆ ಇರುವ ಪ್ರದೇಶಗಳಲ್ಲಿ ಯಾರಿಗೆ ಜ್ವರ ಬಂದರು ಕಡ್ಡಾಯವಾಗಿ ಪರೀಕ್ಷಿಸಿ ಚಿಕಿತ್ಸೆ ಆರಂಭಿಸಬೇಕು. DEPA ತೈಲ ಅಗತ್ಯ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ವೇಳೆ ಒಂದು ಲಕ್ಷ DEPA ತೈಲ ದಾಸ್ತಾನಿದ್ದು,…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಡಿ.31 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಅವರು ಈಗಾಗಲೇ ಡಿಸೆಂಬರ್ 31 ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಂದು ಸಾರಿಗೆ ನೌಕರರು ಬೆಳಗಾವಿ ಚಲೋ ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನೋಟಿಸ್ ನೀಡಲಾಗುವುದು. ಬಳಿಕ ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರ ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದ 6 ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, 6 ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಘೋಷಿಸಿವೆ. ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ : ರಾಷ್ಟ್ರೀಯ ದತ್ತು ಮಾಸಾಚರಣೆ ಪ್ರಯುಕ್ತ ಪೋಷಕತ್ವ ಯೋಜನೆಯಡಿ ಮಗುವನ್ನು ಪಡೆಯಲು ಅರ್ಹ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ 2021, ಸೆಕ್ಷನ್ 44 ಹಾಗೂ ನಿಯಮದಲ್ಲಿ ಉಲ್ಲೇಖಿಸಿದಂತೆ ಮಾರಣಾಂತಿಕ ಕಾಯಿಲೆ, ತೀವ್ರ ಅನಾರೋಗ್ಯ ಸಾವು ಅಥವಾ ಇನ್ನತರೆ ಕಾರಣಗಳಿಂದ ಪೋಷಕರ ಆರೈಕೆಯಿಂದ ವಂಚಿತರಾದ ಮಕ್ಕಳನ್ನು ವಿಸ್ತçತ ಕುಟುಂಬ ಸದಸ್ಯರು ಅಥವಾ ಅಸಂಬAಧಿತ ವ್ಯಕ್ತಿ/ಕುಟುಂಬದಲ್ಲಿ ತಾತ್ಕಾಲಿಕ ಆರೈಕೆ ನೀಡುವ ಹಾಗೂ ಕಾರಣಾಂತರಗಳಿAದ ದತ್ತು ಸ್ವೀಕಾರಕ್ಕೆ ಒಳಪಡಲು ಸಾಧ್ಯವಿಲ್ಲದ ಮಕ್ಕಳಿಗೆ ತಾತ್ಕಾಲಿಕ ಪೋಷಕರನ್ನು ನೀಡುವ ಪರ್ಯಾಯ ವ್ಯವಸ್ಥೆ ಮಕ್ಕಳನ್ನು ಪುನರ್ವಸತಿ ಮಾಡುವುದು ಹಾಗೂ ಮಕ್ಕಳನ್ನು ಸಾಂಸ್ಥಿಕ ಸೇವೆಗೆ ಒಳಪಡಿಸುವುದನ್ನು ತಪ್ಪಿಸುವುದು ಪೋಷಕತ್ವ ಕಾರ್ಯಕ್ರಮದ ಗುರಿಯಾಗಿದೆ. ಸಾಮಾನ್ಯವಾಗಿ ಒಂದು ವರ್ಷದವರೆಗೆ ಅಗತ್ಯ ಪ್ರಕರಣಗಳಲ್ಲಿ ಪ್ರತಿ ವರ್ಷ ನವೀಕರಿಸಿ ಪೋಷಕತ್ವಕ್ಕೆ ಆಯ್ಕೆಯಾದ ಕುಟುಂಬ ಸದಸ್ಯರೊಂದಿಗೆ ಆರೈಕೆ ಮತ್ತು ರಕ್ಷಣೆಯ ಉದ್ದೇಶಕ್ಕಾಗಿ ಕೌಟುಂಬಿಕ ವಾತಾವರಣದಲ್ಲಿ ಪೊಷಕರನ್ನು ಇರಿಸಲಾಗುತ್ತದೆ. ಒಂದೇ ರೀತಿಯ ಸಂಸ್ಕೃತಿ, ಬುಡಕಟ್ಟು ಮತ್ತು ಸಮುದಾಯದ ಸಂಪರ್ಕವನ್ನು…
ಚಿತ್ರದುರ್ಗ : ಜಮೀನು ಸಮತಟ್ಟುಗೊಳಿಸಿ ಕೃಷಿಯೋಗ್ಯ ಭೂಮಿಯನ್ನಾಗಿಸಲು, ಜಮೀನಿನಲ್ಲಿರುವ ಹೆಚ್ಚುವರಿ ಉಪ ಖನಿಜಗಳನ್ನು ತೆರವುಗೊಳಿಸಿ ಸಾಗಾಣಿಕೆ ಮಾಡಲು, ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ-1994ರ ನಿಯಮ-3ಎ ಅಡಿ ನೀಡಿದ ಅನುಮತಿಯನ್ನು ಉಲ್ಲಂಘಿಸಿ, ಅಕ್ರಮವಾಗಿ ಗಣಿಕಾರಿಕೆ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಗಣಿಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಿಯಮ-3ಎ ಅಡಿಯಲ್ಲಿ ಅನುಮತಿ ನೀಡುವಾಗ, ಜಮೀನು ಮಾಲಿಕರಿಗೆ ಷರತ್ತು ನಿಯಮಗಳನ್ನು ವಿಧಿಸಲಾಗಿರುತ್ತದೆ. ಆದರೆ ಕೆಲವು ಭಾಗದಲ್ಲಿ ನಿಯಮ ಉಲ್ಲಂಘಿಸಿ ಜಮೀನುಗಳಿಂದ ಹೆಚ್ಚುವರಿಯಾಗಿ ಉಪ ಖನಿಜಗಳನ್ನು ಗಣಿಗಾರಿಕೆ ಮಾಡಲಾಗಿದೆ. ಇದರಿಂದ ಕೃಷಿ ಭೂಮಿ ಹಾಳಾಗುವುದರ ಜೊತೆಗೆ ಪರಿಸರಕ್ಕೆ ಮಾರಕವಾಗುತ್ತದೆ. ಜೊತೆಗೆ ಸರ್ಕಾರದ ರಾಜಸ್ವ ಸಂಗ್ರಹಣೆಗೂ ಧಕ್ಕೆ ಉಂಟಾಗುತ್ತದೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡುಬಂದರೆ, ಸಂಬಂಧಪಟ್ಟ ತಹಶೀಲ್ದಾರ್, ಉಪವಿಭಾಗಾಧಿಕಾರಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಂದ ವರದಿ ಪಡೆದು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ…
ನವದೆಹಲಿ : ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ಮಧ್ಯಪ್ರವೇಶ ಮಾಡಿ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಬುಧವಾರ ಭೇಟಿ ಮಾಡಿದ ಜಲ ಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಬಗ್ಗೆ ಮನವಿ ಪತ್ರ ಸಲ್ಲಿಸಿದರು. ಪತ್ರದ ಸಾರಾಂಶ ಹೀಗಿದೆ; ದಿನಾಂಕ 09-10-2024ರಂದು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು ತನ್ನ 80ನೇ ಸಭೆಯಲ್ಲಿ ಕರ್ನಾಟಕದ ಅರ್ಜಿ ವಿಚಾರಣೆಯನ್ನು ಮುಂದೂಡಿ ಈ ವಿಚಾರವಾಗಿ ಇರುವ ಕಾನೂನು ಸಮಸ್ಯೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ರಾಜ್ಯವು ದಿನಾಂಕ 10-10-2024 ಹಾಗೂ 16-10-2024 ದಿನಾಂಕದಂದು ಅಗತ್ಯ ಸ್ಪಷ್ಟನೆಯನ್ನು ಪತ್ರದ ಮೂಲಕ ಸಲ್ಲಿಕೆ ಮಾಡಲಾಗಿದೆ. ಕಳಸಾ ನಾಲೆ ಯೋಜನೆಗೆ ಕಾಳಿ ಹಾಗೂ ಸಹ್ಯಾದ್ರಿ ಹುಲಿ ಸಂರಕ್ಷಣಾ ಪ್ರದೇಶದಲ್ಲಿ 10.6852 ಹೆಕ್ಟೇರ್ ಅರಣ್ಯ ಭೂಮಿ…












