Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯ ಸರ್ಕಾರದಿಂದ ನಿವೃತ್ತ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ 7ನೇ ವೇತನ ಆಯೋಗದ ಅನುಸಾರದಂತೆ ಪಿಂಚಣಿ ಮಂಜೂರಾತಿಗೆ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಯನ್ನು ದಿನಾಂಕ: 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲು ಸರ್ಕಾರದಲ್ಲಿ ನೀತಿ-ನಿರ್ಧಾರವನ್ನು ಕೈಗೊಳ್ಳಲಾಗಿರುತ್ತದೆ ಎಂದಿದ್ದಾರೆ. ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ಕೈಗೊಳ್ಳಲಾದ ನೀತಿ ನಿರ್ಣಯವನ್ನು ಅನುಷ್ಠಾನಗೊಳಿಸಿ ಹೊರಡಿಸಿರುವ ದಿನಾಂಕ: 23.08.2024ರ ಸರ್ಕಾರಿ ಆದೇಶ ಸಂ: ಆಇ 21 ಎಸ್‌ಆರ್ 2024 ಮತ್ತು ದಿನಾಂಕ: 28.08.2024ರ ಸರ್ಕಾರಿ ಆದೇಶ ಸಂ, ಆ-ಪಿಇಎನ್/262/2024ರ ಆದೇಶಗಳು ವಿಸ್ತತವಾಗಿದ್ದು ಸ್ವಯಂ-ವೇದ್ಯವಾಗಿರುತ್ತವೆ. ಸದರಿ ನಿಯಮಗಳ ಅವಕಾಶಗಳನ್ವಯ ನೌಕರರ ಪಿಂಚಣಿಯನ್ನು ಪರಿಷ್ಕರಿಸಿ ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆಗೆ ಸಂಬಂಧಿಸಿದಂತೆ ತಿದ್ದುಪಡಿ ವಿಧೇಯಕದ ಕುರಿತು ರಾಜ್ಯ ಸರ್ಕಾರವು ರಾಜ್ಯಪತ್ರವನ್ನು ಪ್ರಕಟಿಸಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ. ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ…
BIG NEWS : ಬೆಂಗಳೂರಿನ ಜನತೆಗೆ ಬಿಗ್ ಶಾಕ್ : ಶೀಘ್ರವೇ `ಕಾವೇರಿ ನೀರಿನ’ ಬಿಲ್ ಹೆಚ್ಚಳ | Cauvery Water Bill Hike
ಬೆಂಗಳೂರು: “ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ ಬಿ, ಬಿಎಂ ಆರ್ ಡಿ ಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ.ಕೆ. ಶಿವಕುಮಾರ್ ಅವರು, ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “2014 ರಿಂದ ಇಲ್ಲಿಯ ತನಕ ಅಂದರೆ 11 ವರ್ಷಗಳಿಂದ ನಗರದಲ್ಲಿ ನೀರಿನ ಬಿಲ್ ಅನ್ನು ಹೆಚ್ಚಳ ಮಾಡಿಲ್ಲ. ಈ ಕಾರಣಕ್ಕೆ ಬಿಡ್ಬ್ಯೂಎಸ್ಎಸ್ ಬಿಗೆ ವರ್ಷಕ್ಕೆ 1 ಸಾವಿರ ಕೋಟಿ ನಷ್ಟವಾಗುತ್ತಿದೆ. ವಿದ್ಯುತ್ ಬಿಲ್ ಈ ಹಿಂದೆ 35 ಕೋಟಿಯಾಗುತ್ತಿತ್ತು. ಈ ಬಾರಿ 75 ಕೋಟಿಯಾಗಿದೆ. ಇತರೇ ಸೇವೆಗಳು, ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ…
ಪ್ರಯಾಗ್ ರಾಜ್ : ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ ನಡೆದ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ತುರ್ತು ಸಭೆ ಕರೆದಿದ್ದಾರೆ. ದುರಂತದ ಬಗ್ಗೆ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ನಾನ ಮಾಡಲು ಅನೇಕ ಘಾಟ್‌ಗಳನ್ನು ನಿರ್ಮಿಸಲಾಗಿದೆ. ಜನರು ಆಡಳಿತದ ಸೂಚನೆಗಳನ್ನು ಪಾಲಿಸಬೇಕು ಮತ್ತು ವ್ಯವಸ್ಥೆಗಳನ್ನು ಮಾಡುವಲ್ಲಿ ಸಹಕರಿಸಬೇಕು. ಅಲ್ಲದೆ ಯಾವುದೇ ವದಂತಿಗಳಿಗೆ ಗಮನ ಕೊಡಬೇಡಿ ಎಂದು ತಿಳಿಸಿದ್ದಾರೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಕಾಲ್ತುಳಿತ ದುರಂತ ಸಂಭವಿಸಿದ್ದು. ಹಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇಂದಿನ ಮಹಾ ಕುಂಭದಲ್ಲಿ ಅಪಾರ ಸಂಖ್ಯೆಯ ಭಕ್ತರು ಸೇರುತ್ತಿದ್ದಾರೆ. ಮೌನಿ ಅಮಾವಾಸ್ಯೆಯಂದು ಸ್ನಾನ ಮಾಡುವ ಬಗ್ಗೆ ಭಕ್ತರಲ್ಲಿ ಹೆಚ್ಚಿನ ಉತ್ಸಾಹವಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದ ಈ ದಿನದಂದು, ಸಂಗಮದಲ್ಲಿ ಸ್ನಾನ ಮಾಡುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ದೇಶಾದ್ಯಂತದಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಪ್ರಯಾಗ್‌ರಾಜ್‌ಗೆ ಬರುತ್ತಿದ್ದಾರೆ. ಇಂದು 10 ಕೋಟಿ ಭಕ್ತರು ಆಗಮಿಸುವ ಅಂದಾಜಿದೆ. ಮೌನಿ ಅಮಾವಾಸ್ಯೆಯ ದೃಷ್ಟಿಯಿಂದ,…
ಪ್ರಯಾಗ್ ರಾಜ್ : ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ ನಡೆದ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ತುರ್ತು ಸಭೆ ಕರೆದಿದ್ದಾರೆ. ದುರಂತದ ಬಗ್ಗೆ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ನಾನ ಮಾಡಲು ಅನೇಕ ಘಾಟ್‌ಗಳನ್ನು ನಿರ್ಮಿಸಲಾಗಿದೆ. ಜನರು ಆಡಳಿತದ ಸೂಚನೆಗಳನ್ನು ಪಾಲಿಸಬೇಕು ಮತ್ತು ವ್ಯವಸ್ಥೆಗಳನ್ನು ಮಾಡುವಲ್ಲಿ ಸಹಕರಿಸಬೇಕು. ಅಲ್ಲದೆ ಯಾವುದೇ ವದಂತಿಗಳಿಗೆ ಗಮನ ಕೊಡಬೇಡಿ ಎಂದು ತಿಳಿಸಿದ್ದಾರೆ. https://twitter.com/ANI/status/1884448875966259438?ref_src=twsrc%5Egoogle%7Ctwcamp%5Eserp%7Ctwgr%5Etweet ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, 50 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ, ಫೇರ್ ಆಫೀಸರ್ ವಿಜಯ್ ಕಿರಣ್ ಆನಂದ್ ಅವರು ಸಿಎಂ ಯೋಗಿಗೆ ಸಂಪೂರ್ಣ ವಿಷಯದ ಬಗ್ಗೆ ಮಾಹಿತಿ ನೀಡಿದ್ದಾರೆ. ನ್ಯಾಯಯುತ ಆಡಳಿತವು ಕಾಲ್ತುಳಿತಕ್ಕೆ ಕಾರಣಗಳ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ನೀಡಿತು. ಡಿಜಿಪಿ ಪ್ರಶಾಂತ್ ಕುಮಾರ್, ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂಜಯ್ ಪ್ರಸಾದ್ ಅವರು…
ಮುಂಬೈ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮೌನಿ ಅಮವಾಸ್ಯೆಗೆ ಮುನ್ನ ಸಂಗಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದಾಗಿ ಎಲ್ಲೆಡೆ ಅವ್ಯವಸ್ಥೆಯ ವಾತಾವರಣ ನಿರ್ಮಾಣವಾಗಿದೆ. ಈ ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳಲ್ಲಿ ಕೆಲವು ಸಾವುನೋವುಗಳ ವರದಿಗಳಿವೆ, ಆದರೂ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಹಿರಂಗಗೊಂಡಿಲ್ಲ. ಇದೆಲ್ಲದರ ನಡುವೆ, ಬಾಲಿವುಡ್ ನಟಿ ಹೇಮಾ ಮಾಲಿನಿ ಕೂಡ ಮೌನಿ ಅಮವಾಸ್ಯೆಯ ಸಂದರ್ಭದಲ್ಲಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು- ‘ಮಹಾ ಸ್ನಾನದ ಈ ಶುಭ ಸಂದರ್ಭದಲ್ಲಿ, ಗುರು ಸ್ವಾಮಿ ಶ್ರೀ ಅವದೇಶಾನಂದಜಿ ಅವರ ಸನ್ನಿಧಿಯಲ್ಲಿ ಸ್ನಾನ ಮಾಡುವ ಅವಕಾಶ ನನಗೆ ಸಿಕ್ಕಿದೆ, ಇದು ನನ್ನ ಅದೃಷ್ಟ, ನನಗೆ ತುಂಬಾ ಸಂತೋಷವಾಯಿತು.’ ಎಷ್ಟೊಂದು ಕೋಟಿ ಜನರು ಬಂದಿದ್ದಾರೆ. ನನಗೆ ಇಲ್ಲಿ ಸ್ನಾನ ಮಾಡಲು ಸ್ಥಳವೂ ಸಿಕ್ಕಿತು, ಧನ್ಯವಾದಗಳು. ಮೌನಿ ಅಮಾವಾಸ್ಯೆಯ ದಿನದಂದು ಮಹಾ ಕುಂಭದಲ್ಲಿ ಎರಡನೇ ರಾಜ ಸ್ನಾನ ನಡೆಯಬೇಕಿತ್ತು ಆದರೆ ಬೆಳಗಿನ ಜಾವ 1 ಗಂಟೆಗೆ ಕಾಲ್ತುಳಿತ ಸಂಭವಿಸಿದೆ. ಮಹಾ…
JOB ALERT : `ಭಾರತೀಯ ಸೇನೆ’ ಸೇರ ಬಯಸುವವರಿಗೆ ಗುಡ್ ನ್ಯೂಸ್ : ಇಂದಿನಿಂದ `ಏರ್ ಮೆನ್’ ಆಯ್ಕೆಗೆ ‘ನೇಮಕಾತಿ ರ‍್ಯಾಲಿ’
ಭಾರತೀಯ ವಾಯುಪಡೆಯು ಭಾರತದ/ಗೂರ್ಖಾ(ನೇಪಾಳ) ಪುರುಷ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಗೆ ಏರ್‌ಮ್ಯಾನ್ ಆಗಿ ಗ್ರೂಪ್ ‘ವೈ’(ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು ಜ.29 ರಿಂದ ಫೆ.06 ರವರೆಗೆ ನೇಮಕ ರ‍್ಯಾಲಿ ಏರ್ಪಡಿಸಿದೆ. ನೇಮಕಾತಿ ರ‍್ಯಾಲಿಯನ್ನು ಮಹಾರಾಜ ಕಾಲೇಜು ಮೈದಾನ, ಪಿ ಟಿ ಉಷಾ ರಸ್ತೆ, ಶೆಣೈಸ್ ಎರ್ನಾಕುಲಂ, ಕೊಚ್ಚಿ, ಕೇರಳ 682011 ಇಲ್ಲಿ ಏರ್ಪಡಿಸಲಾಗಿದೆ. ಜ.29 ರಿಂದ 30 ರವರೆಗೆ ಗುಂಪು ವೈ/ ವೈದ್ಯಕೀಯ ಸಹಾಯಕರ ಹುದ್ದೆಗೆ, ವಿದ್ಯಾರ್ಹತೆ 10+2 ಅಭ್ಯರ್ಥಿಗಳು ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳು ಹಾಜರಾಗಬಹುದು. ಫೆ.04 ರಿಂದ 05 ರವರೆಗೆ ಗುಂಪು ವೈ/ವೈದ್ಯಕೀಯ ಸಹಾಯಕ ಹುದ್ದೆ, ವಿದ್ಯಾರ್ಹತೆ ಫಾರ್ಮಸಿಯಲ್ಲಿ ಡಿಪ್ಲೊಮಾ/ಬಿಎಸ್‌ಸಿ ಹೊಂದಿರುವ ಅಭ್ಯರ್ಥಿಗಳು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ಎಲ್ಲಾ ಜಿಲ್ಲೆಗಳು ಮತ್ತು ಪುದುಚೇರಿ ಹಾಗೂ ಲಕ್ಷದ್ವೀಪಗಳು ಕೇಂದ್ರಾಡಳಿತ ಪ್ರದೇಶಗಳ ಅಭ್ಯರ್ಥಿಗಳು ಹಾಜರಾಗಬಹುದು. ವೈದ್ಯಕೀಯ ಸಹಾಯಕ ವೃತ್ತಿಗೆ 10+2 ಹೊಂದಿರುವ ಅಭ್ಯರ್ಥಿಗಳು ಅವಿವಾಹಿತರಾಗಿರೇಕು. 2004ರ ಜುಲೈ 03 ಮತ್ತು 2008…
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಮತ್ತೊಮ್ಮೆ ಪುನರುಚ್ಚಿಸಿದ್ದು ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಈ ವಿಚಾರವಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗಟ್ಟಲು ಶೀಘ್ರದಲ್ಲಿ ಹೊಸ ಕಾನೂನು ತರಲು ಸರ್ಕಾರದಿಂದ ಸಿದ್ಧತೆ ನಡೆಸಲಾಗುತ್ತಿದೆ. ಈ ವಿಚಾರವಾಗಿ ಮುಂದಿನ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನು ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಪಾರ್ವತಿ ಅವರಿಗೆ ಇಡೀ ನೋಟಿಸ್ ನೀಡಿದ ವಿಚಾರವಾಗಿ, ಮುಡಾ ಕೇಸ್ ನಲ್ಲಿ ಪತ್ನಿ ಪಾರ್ವತಿಗೆ ನೀಡಿದ್ದ ಸಮನ್ಸ್ ಗೆ ತಡೆ ನೀಡಿದೆ.…
ಪ್ರಯಾಗ್ ರಾಜ್ : ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳದಲ್ಲಿ ಭೀಕರ ಕಾಲ್ತುಳಿತದ ಬೆನ್ನಲ್ಲೇ ಸಂಚಾರ ದಟ್ಟಣೆ ಕಡಿಮೆ ಮಾಡಲು ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, 50 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರವನ್ನು ಬಂದ್ ಮಾಡಲಾಗಿದೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಯೋಗಿ ಆದಿತ್ಯನಾಥ್, ವದಂತಿಗಳಿಗೆ ಗಮನ ಕೊಡಬೇಡಿ ಎಂದು ಅವರು ಜನರಿಗೆ ಮನವಿ ಮಾಡಿದ್ದಾರೆ. ಜನರು ಗಂಗಾ ಮಾತೆಯ ಹತ್ತಿರದ ಘಾಟ್‌ನಲ್ಲಿ ಸ್ನಾನ ಮಾಡಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ನಾನ ಮಾಡಲು ಅನೇಕ ಘಾಟ್‌ಗಳನ್ನು ನಿರ್ಮಿಸಲಾಗಿದೆ. ಜನರು ಆಡಳಿತದ ಸೂಚನೆಗಳನ್ನು ಪಾಲಿಸಬೇಕು ಮತ್ತು ವ್ಯವಸ್ಥೆಗಳನ್ನು ಮಾಡುವಲ್ಲಿ ಸಹಕರಿಸಬೇಕು. ಅಲ್ಲದೆ ಯಾವುದೇ ವದಂತಿಗಳಿಗೆ ಗಮನ ಕೊಡಬೇಡಿ ಎಂದು ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ತಂಗಿಯೇ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಧ್ರುವ (13) ಎಂಬ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕ ಉಡುದಾರದಿಂದ ನೇಣು ಹಾಕಿಕೊಂಡಿದ್ದು, ಈ ವೇಳೆ ಅದು ತುಂಡಾಗಿ ಕೆಳಗೆ ಬಿದ್ದಿದ್ದಾನೆ. ವಿಷಯ ತಿಳಿದ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.









