Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿಗಾಗಿ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಲವು ವರ್ಷಗಳಿಂದ ವಿವಿಧ ರೀತಿಯ ತೊಡಕುಗಳಿಂದ ನೆನೆಗುದಿಗೆ ಬಿದ್ದಿದ್ದ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತ ಗತಿಯಲ್ಲಿ ಕೈಗೊಂಡು, ಒಂದೇ ದಿನದಲ್ಲಿ ಕೌನ್ಸೆಲಿಂಗ್ ಹಾಗು ಆದೇಶ ಪತ್ರ ಸಹ ಹೊರಡಿಸಿದ್ದು, ಆಯ್ಕೆಯಾದ ಎಲ್ಲಾ ಸಹಾಯಕ ಪ್ರಾಧ್ಯಾಪಕರಿಗೆ ಅಭಿನಂದನೆಗಳನ್ನು ತಿಳಿಸಿ, ವೃತ್ತಿ ಮಾರ್ಗದರ್ಶನ ನೀಡುವ “ಹೊಸಹಾದಿ” ವಿಶೇಷ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಸಚಿವ ಡಾ.ಎಂ.ಸಿ. ಸುಧಾಕರ್ ಅವರು, ಮುಂದಿನ ಮಾಸಾಂತ್ಯದ ವೇಳೆ ಪದವಿ ಕಾಲೇಜುಗಳಿಗೆ 310 ಪ್ರಾಂಶುಪಾಲರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ವಿಶೇಷ ವರ್ಗಾವಣೆ, ಕಲ್ಯಾಣ ಕರ್ನಾಟಕ ಮೀಸಲಾತಿ ಸೇರಿ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಉಂಟಾಗಿದ್ದ ಸಮಸ್ಯೆ ಇತ್ಯರ್ಥಪಡಿಸಿ ನೇಮಕಾತಿ ಆದೇಶ ನೀಡಲಾಗಿದೆ ಎಂದರು.
ನವದೆಹಲಿ : ಮಧ್ಯಪ್ರದೇಶದ ರೇವಾದಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಆಕೆಯ ಅಪ್ರಾಪ್ತ ಸಹೋದರ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸಿದ ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಲೆ ಮಾಡಿದ್ದಾನೆ ಎಂದು ಕಂಡುಹಿಡಿದಿದ್ದಾರೆ. ತನಿಖೆಯ ಸಮಯದಲ್ಲಿ, ಹದಿಹರೆಯದವರ ತಾಯಿ ಮತ್ತು ಇಬ್ಬರು ಅಕ್ಕಂದಿರು ಪ್ರಕರಣವನ್ನು ಮುಚ್ಚಿಹಾಕಲು ಸಹಾಯ ಮಾಡಿದ್ದಾರೆ ಎಂದು ಪೊಲೀಸರು ಕಂಡುಕೊಂಡರು. ಶನಿವಾರ ಪೊಲೀಸರು 50 ಜನರನ್ನು ವಿಚಾರಣೆ ನಡೆಸಿದ ನಂತರ, ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ ನಂತರ ಮತ್ತು ತಾಂತ್ರಿಕ ಪುರಾವೆಗಳ ಆಧಾರದ ಮೇಲೆ ಮತ್ತು ಸಂತ್ರಸ್ತೆಯ 13 ವರ್ಷದ ಸಹೋದರ, ಆಕೆಯ ತಾಯಿ ಮತ್ತು ಆಕೆಯ 17 ಮತ್ತು 18 ವರ್ಷದ ಸಹೋದರಿಯರು ನೀಡಿದ ಮಾಹಿತಿಯ ಆಧಾರದ ಮೇಲೆ ಪ್ರಕರಣವನ್ನು ಭೇದಿಸಲಾಗಿದೆ ಎಂದು ತಿಳಿಸಿದ್ದಾರೆ. ಮತ್ತು ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು. ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್, ಈ…
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಝ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ನಮ್ಮ ಸರ್ಕಾರ ಮುಂದಿನ ಐದು ವರ್ಷಗಳ ಅಧಿಕಾರ ಅವಧಿಯಲ್ಲಿ 2.5 ಲಕ್ಷ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯಿಂದ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ನೂತನವಾಗಿ ನೇಮಕಗೊಂಡ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 2.5 ಲಕ್ಷ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ 20 ವರ್ಷಗಳ ಬಳಿಕ 310 ಮಂದಿ ಪದವಿ ಕಾಲೇಜುಗಳ ಪ್ರಾಂಶುಪಾಲರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಲವು ವರ್ಷಗಳಿಂದ ವಿವಿಧ ರೀತಿಯ ತೊಡಕುಗಳಿಂದ ನೆನೆಗುದಿಗೆ ಬಿದ್ದಿದ್ದ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತ ಗತಿಯಲ್ಲಿ ಕೈಗೊಂಡು, ಒಂದೇ ದಿನದಲ್ಲಿ ಕೌನ್ಸೆಲಿಂಗ್ ಹಾಗು ಆದೇಶ ಪತ್ರ ಸಹ ಹೊರಡಿಸಿದ್ದು,…
ಬೆಂಗಳೂರು: ಇ-ಖಾತಾ ವಿತರಣೆ ವ್ಯವಸ್ಥೆಗೆ ವೇಗ ನೀಡಲು ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿ, ಬೆಂಗಳೂರು ಒನ್ ಕೇಂದ್ರಗಳ ಜೊತೆಗೆ ಖಾಸಗಿ ಸೈಬರ್ ಕೆಫೆಗಳಲ್ಲಿ ಇ-ಖಾತಾ ವಿತರಿಸಲು ಬಿಬಿಎಂಪಿ ಮುಂದಾಗಿದೆ. ಆಸ್ತಿಗಳ ದಾಖಲೆ ನಕಲು ಮಾಡಿ ಮಾರಾಟ ಸೇರಿ ಮತ್ತಿತರ ಅಕ್ರಮ ತಡೆಗೆ ಆಸ್ತಿಗಳಿಗೆ ಇ-ಖಾತಾ ನೀಡಲಾಗುತ್ತಿದೆ. ಅಂತೆಯೇ ಬೆಂಗಳೂರು ವ್ಯಾಪ್ತಿಯಲ್ಲಿ 22 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳಿಗೆ ಇ-ಖಾತಾ ವಿತರಿಸುತ್ತಿದ್ದು, ಇದುವರೆಗೆ ಒಂದು ಲಕ್ಷ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಾರ್ಯ ಪೂರ್ಣಗೊಂಡಿದೆ. ಸದ್ಯ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿ, ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ವಿತರಿಸಲಾಗುತ್ತಿದೆ. ಈ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಮುಟ್ಟಿಲ್ಲ. ಹೀಗಾಗಿ ಖಾಸಗಿ ಸೈಬರ್ ಕೇಂದ್ರಗಳ ಮೂಲಕ ಇ-ಖಾತಾ ವಿತರಿಸಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿಯಿಂದ ಅನುಮತಿ ಪಡೆದ ಸೈಬರ್ ಕೇಂದ್ರಗಳು ಒಂದು ಇ-ಖಾತಾ ದಾಖಲೆ ಅಪ್ಲೋಡ್ ಮತ್ತು ಡೌನ್ಲೋಡ್ ಮಾಡಲು ಆಸ್ತಿ ಮಾಲೀಕರಿಂದ 45 ರೂಪಾಯಿ ಪಡೆಯಲು ಅನುಮತಿಸಲಾಗಿದೆ. ಈ ಪ್ರಕ್ರಿಯೆಗೂ ಮುನ್ನ ಸೈಬರ್ ಕೇಂದ್ರದಲ್ಲಿ ಕೆಲಸ ಮಾಡುವವರಿಗೆ…
ನವದೆಹಲಿ : ಭಾರತೀಯ ಅಂಚೆ ಇಲಾಖೆ ಎಂಟಿಎಸ್ (ಮಲ್ಟಿ-ಟಾಸ್ಕಿಂಗ್ ಸ್ಟಾಫ್), ಜಿಡಿಎಸ್ (ಗ್ರಾಮೀಣ ಡಾಕ್ ಸೇವಕ್) ಮತ್ತು ಜವಾನ ಸೇರಿದಂತೆ ಒಟ್ಟು 18,200 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 28 ರ ನಾಳೆಯೇ ಕೊನೆಯ ದಿನವಾಗಿದೆ. ಶೈಕ್ಷಣಿಕ ಅರ್ಹತೆಗಳು ಎಂಟಿಎಸ್: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಜಿಡಿಎಸ್: ಅಭ್ಯರ್ಥಿಗಳು ಗಣಿತ ಮತ್ತು ಇಂಗ್ಲಿಷ್ನಲ್ಲಿ ಉತ್ತೀರ್ಣ ಅಂಕಗಳೊಂದಿಗೆ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಸ್ಥಳೀಯ ಭಾಷೆಯ ಜ್ಞಾನ ಕಡ್ಡಾಯವಾಗಿದೆ. ಜವಾನ: ಮಾನ್ಯತೆ ಪಡೆದ ಸಂಸ್ಥೆಯಿಂದ 8ನೇ ತರಗತಿ ಉತ್ತೀರ್ಣರಾಗಿರಬೇಕು. ವಯಸ್ಸಿನ ಮಿತಿ ಕನಿಷ್ಠ ವಯಸ್ಸು: 18 ವರ್ಷಗಳು ವಯೋಮಿತಿ: 32 ವರ್ಷ (ಎಸ್ಸಿ/ಎಸ್ಟಿ/ಒಬಿಸಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ). ಆಯ್ಕೆ ಪ್ರಕ್ರಿಯೆಯು ಮೆರಿಟ್ ಆಧಾರಿತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000 ರಿಂದ 29,380 ರೂ. ಸಂಬಳ ನೀಡಲಾಗುತ್ತದೆ.ಆಸಕ್ತ ಅಭ್ಯರ್ಥಿಗಳು www.indiapost.gov.in ಅಧಿಕೃತ ಇಂಡಿಯಾ ಪೋಸ್ಟ್ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ…
ಬೆಂಗಳೂರು: ರಾಜ್ಯದ ಸರ್ಕಾರಿ ಜಾಗಕ್ಕೂ ಭೂ ಪರಿವರ್ತನೆ ನಿಯಮ ಅನ್ವಯವಾಗಲಿದೆ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಖಾಸಗಿ ಶಾಲಾ ಸಂಘಟನೆ ಅವರ್ ಸ್ಕೂಲ್ಸ್ ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪ್ರಾಥಮಿಕ) ಅಧೀನ ಕಾರ್ಯದರ್ಶಿ, ಸರ್ಕಾರಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಭೂಮಿಯನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಎಂದು ಭೂ ಪರಿವರ್ತನೆ ಮಾಡಿಸಬೇಕೆಂಬ ನಿಯಮಕ್ಕೆ ವಿನಾಯಿತಿ ನೀಡಿ ಯಾವುದೇ ಸರ್ಕಾರಿ ಆದೇಶವನ್ನಾಗಲಿ, ಸುತ್ತೋಲೆಯನ್ನಾಗಲಿ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಖಾಸಗಿ ಶಾಲೆಗಳಿಗೆ ಅನ್ವಯಿಸುವಂತೆ ಶಾಲಾ ಜಾಗವನ್ನು ‘ಶೈಕ್ಷಣಿಕ ಉದ್ದೇಶಕ್ಕಾಗಿ’ ಎಂದು ಭೂ ಪರಿವರ್ತನೆ ಮಾಡಿಸಬೇಕೆಂಬ ನಿಯಮ ಸರ್ಕಾರಿ ಶಾಲೆಗಳಿಗೂ ಅನ್ವಯವಾಗಲಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಜಾಗವನ್ನೂ ಶೈಕ್ಷಣಿಕ ಉದ್ದೇಶಕ್ಕಾಗಿ ಎಂದು ಭೂ ಪರಿವರ್ತನೆ ಮಾಡಿಸುವುದು ಕಡ್ಡಾಯ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ನವದೆಹಲಿ : 2025 ರ ಹೊಸ ವರ್ಷದ ಆರಂಭದೊಂದಿಗೆ, ಭಾರತ ಸರ್ಕಾರವು ಖಾಸಗಿ ಮತ್ತು ಸರ್ಕಾರಿ ಉದ್ಯೋಗಿಗಳಿಗೆ ಪಿಂಚಣಿ ನಿಧಿ (ಪಿಎಫ್) ಖಾತೆಗೆ ಸಂಬಂಧಿಸಿದ ಕೆಲವು ಪ್ರಮುಖ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಈ ಹೊಸ ನಿಯಮಗಳು ಉದ್ಯೋಗಿಗಳ ಭವಿಷ್ಯವನ್ನು ಸುರಕ್ಷಿತಗೊಳಿಸುವುದಲ್ಲದೆ, ಅವರ ಪಿಂಚಣಿ ಮತ್ತು ಉಳಿತಾಯಕ್ಕೆ ಸಂಬಂಧಿಸಿದ ಪ್ರಕ್ರಿಯೆಯನ್ನು ಸರಳ ಮತ್ತು ಪಾರದರ್ಶಕವಾಗಿಸುತ್ತದೆ. ಪ್ರತಿಯೊಬ್ಬ ಉದ್ಯೋಗಿಯ ಜೀವನದಲ್ಲಿ ಪಿಎಫ್ (ಪ್ರಾವಿಡೆಂಟ್ ಫಂಡ್) ನ ಪ್ರಾಮುಖ್ಯತೆ ತುಂಬಾ ಹೆಚ್ಚಾಗಿದೆ, ಏಕೆಂದರೆ ಅದು ನಿವೃತ್ತಿಯ ನಂತರ ಅವರ ಆರ್ಥಿಕ ಭದ್ರತೆಯ ಪ್ರಮುಖ ಭಾಗವಾಗುತ್ತದೆ. ಈ ಲೇಖನದಲ್ಲಿ, 2025 ರಿಂದ ಜಾರಿಗೆ ಬರುವ ಈ 5 ಹೊಸ ಪಿಎಫ್ ನಿಯಮಗಳು ನಿಮಗೆ ಹೇಗೆ ಪ್ರಯೋಜನಕಾರಿಯಾಗಬಹುದು ಮತ್ತು ಅವುಗಳ ಪರಿಣಾಮವು ನಿಮ್ಮ ಆರ್ಥಿಕ ಜೀವನದಲ್ಲಿ ಯಾವ ಬದಲಾವಣೆಗಳನ್ನು ತರುತ್ತದೆ ಎಂಬುದನ್ನು ನಾವು ನಿಮಗೆ ತಿಳಿಸುತ್ತೇವೆ. 1. ಏಕ PF ಖಾತೆ ವ್ಯವಸ್ಥೆ ಇಂದಿನಿಂದ ಎಲ್ಲಾ ಉದ್ಯೋಗಿಗಳು ಒಂದೇ ಪಿಎಫ್ ಖಾತೆಯನ್ನು ಮಾತ್ರ ನಿರ್ವಹಿಸಲು ಸೂಚಿಸಲಾಗುತ್ತದೆ, ಅದು…
ಬೆಂಗಳೂರು : ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು. ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7…
ಬೆಂಗಳೂರು : ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು. ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ…
ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು. ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು. ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ…












