Author: kannadanewsnow57

ನವದೆಹಲಿ : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ರೈತರಿಗೆ ಪ್ರತಿ ವರ್ಷ 6,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಮೊತ್ತವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ, ಇದನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಇಲ್ಲಿಯವರೆಗೆ 18 ಕಂತುಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ ಕಳುಹಿಸಲಾಗಿದೆ. ಪ್ರಸ್ತುತ ರೈತರು 19 ನೇ ಕಂತಿನ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ರೈತರಿಗೆ ಒಂದು ಸಿಹಿ ಸುದ್ದಿ ಇದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 24, 2025 ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತನ್ನು ರೈತರ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಫೆಬ್ರವರಿ 24 ರಿಂದ ರೈತರ ಖಾತೆಗಳಿಗೆ 2,000 ರೂ.ಗಳನ್ನು ಕಳುಹಿಸಲಾಗುವುದು ಎಂದು ಅವರು ಹೇಳಿದರು. ಯೋಜನೆಯ ಉದ್ದೇಶ ಮತ್ತು ಅರ್ಹತೆ…

Read More

ಬಳ್ಳಾರಿ : ಜಿಲ್ಲೆಯಲ್ಲಿನ ಎಲ್ಲಾ ಅನಿಲ ವಿತರಕರು, ಗೃಹ ಬಳಕೆಯ ಭರ್ತಿ ಮಾಡಿದ ಅನಿಲ ಸಿಲಿಂಡರ್‌ಗಳನ್ನು ಗ್ರಾಹಕರಿಗೆ ಸಾಗಾಣಿಕೆ ಮಾಡುವಾಗ 5 ಕಿ.ಮೀ ಒಳಗೆ ಉಚಿತವಾಗಿ ಸರಬರಾಜು ಮಾಡಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆಗಳ ಉಪನಿರ್ದೇಶಕ ಸಕೀನಾ ಅವರು ತಿಳಿಸಿದ್ದಾರೆ. 5 ಕಿ.ಮೀ ನಂತರದ ಪ್ರತಿ ಕಿ.ಮೀ ರೌಂಡ್ ಟ್ರಿಪ್ ಗೆ ಪ್ರತಿ ಸಿಲಿಂಡರ್‌ಗೆ ರೂ.1.60 ತೆಗೆದುಕೊಳ್ಳಬೇಕು. ತಪ್ಪಿದ್ದಲ್ಲಿ ದ್ರವೀಕೃತ ಪೆಟ್ರೋಲಿಯಂ ಅನಿಲ (ಪೂರೈಕೆ ಮತ್ತು ವಿತರಣೆಯ ನಿಯಂತ್ರಣ) ಆದೇಶ 2000 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಲಬುರ್ಗಿ : ಮುಂದಿನ 6-7ತಿಂಗಳಲ್ಲಿ 1,200 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತೇವೆ. ರಾಜ್ಯದಲ್ಲಿ 10 ರಿಂದ 12 ಸಾವಿರ ಪೋಲಿಸ್ ಸಿಬ್ಬಂದಿಗಳ ಕೊರತೆ ಇದೆ. ಅದನ್ನು ಕೂಡ ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಇಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಾನೂನು ಸುವ್ಯವಸ್ಥೆ ಹಾಳಾಗಿದೆ ಅಂತಾರೆ. ಅಂತಹ ಒಂದು ಉದಾಹರಣೆ ಕೊಡಿ? ಸುಮ್ಮನೆ ಜನರಲ್ ಆಗಿ ಆರೋಪಗಳನ್ನು ಮಾಡಬಾರದು. ಅವರ ಕಾಲದಲ್ಲಿ ಎಷ್ಟು ಆಗಿದೆ ಎಂಬುವುದರ ಬಗ್ಗೆ ದಾಖಲೆ ಇದೆ. ಅದನ್ನು ಸಮಯ ಬಂದಾಗ ನಾವು ಬಿಡುಗಡೆ ಮಾಡುತ್ತೇವೆ ಎಂದು ಅವರು ತಿಳಿಸಿದರು. ಇನ್ನು ಮಂಗಳೂರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, 48 ಗಂಟೆಯಲ್ಲಿ ಮಂಗಳೂರು ದರೋಡೆ ಕೇಸ್ ಬೇಧಿಸಿದ್ದೇವೆ. ಬೀದರ್ ದರೋಡೆ ಕೇಸ್ ಕೂಡ ಕೊನೆಯ ಹಂತದಲ್ಲಿದೆ. ಆದಷ್ಟು ಬೇಗ ನಮ್ಮ ಪೊಲೀಸರು ಅವರನ್ನು ಕೂಡ ಅರೆಸ್ಟ್ ಮಾಡುತ್ತಾರೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವ ಜಿ…

Read More

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಕರಡು ಪ್ರವೇಶ ಪತ್ರದ ತಿದ್ದುಪಡಿ ಕುರಿತಂದೆ ಶಾಲಾ ಮುಖ್ಯೋಪಾಧ್ಯಾಯರಿಗೆ ಮಹತ್ವದ ಮಾಹಿತಿಯನ್ನು ನೀಡಿದೆ. ಈ ಸಂಬಂಧ ಮಾಹಿತಿ ಬಿಡುಗಡೆ ಮಾಡಿರುವಂತ ಶಾಲಾ ಶಿಕ್ಷಣ ಇಲಾಖೆಯು, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ನ್ನು ತೆಗೆದುಕೊಂಡಿರುವ ವಿದ್ಯಾರ್ಥಿಗಳ (ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಅಭ್ಯರ್ಥಿಗಳು) ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮತ್ತು ವಿದ್ಯಾರ್ಥಿಗಳ ವಿವರಗಳಲ್ಲಿ ತಿದ್ದುಪಡಿಗಳಿದ್ದಲ್ಲಿ ಆನ್‌ಲೈನ್ ಮೂಲಕ ಅಪ್‌ಡೇಟ್ ಮಾಡಲು ದಿನಾಂಕ: 27-01-2025 ರಿಂದ ಅವಕಾಶ ಕಲ್ಪಿಸಲಾಗಿದೆ. ಮಂಡಲಿಯ ಜಾಲತಾಣದ ಶಾಲಾ ಲಾಗಿನ್‌ಲ್ಲಿ ಲಭ್ಯವಿರುವ ತಂತ್ರಾಂಶವನ್ನು ಬಳಸಿ ಎಲ್ಲಾ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿ, ಅಗತ್ಯವಿದ್ದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳ ತಿದ್ದುಪಡಿಗಳನ್ನು ಅಪ್‌ಡೇಟ್ ಮಾಡಲು ಸೂಚಿಸಿದೆ. ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಅಂತಿಮಗೊಳಿಸಲು…

Read More

ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್ ನಲ್ಲಿನ ತಪ್ಪುಗಳ ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ ಸೇರಿದಂತೆ ಇತರೆ ತಿದ್ದುಪಡಿಗಾಗಿ ಜನವರಿ.31, 2025ರವರೆಗೆ ಮಾತ್ರವೇ ಅವಕಾಶ ನೀಡಲಾಗಿದೆ. ಆ ನಂತರ ಅವಕಾಶವಿಲ್ಲ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿದೆ. ಈ ಕಾರಣಕ್ಕೆ ಓನ್ ಕೇಂದ್ರಗಳ ಬಳಿಯಲ್ಲಿ ಜನರು ಸಾಲುಗಟ್ಟಿಯೂ ಕೆಲವೆಡೆ ನಿಂತಿದ್ದಾರೆ. ಆದರೇ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯವೇನು ಅಂತ ಮುಂದೆ ಓದಿ. ಬೆಂಗಳೂರಿನ ರಾಜಾಜಿನಗರ ಸೇರಿದಂತೆ ರಾಜ್ಯದ ಇತರೆಡೆಗಳಲ್ಲಿ ಜನವರಿ.31 ರೇಷನ್ ಕಾರ್ಡ್ ನಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡೋದಕ್ಕೆ ಕೊನೆಯ ದಿನ. ಅಂದಿನ ಟೋಕನ್ ಇಂದೇ ಕೊಡ್ತೀದ್ದಾರೆ. ತಿದ್ದುಪಡಿ ಮಾಡ್ತಿದ್ದಾರೆ ಎನ್ನುವ ವದಂತಿಯಿಂದಾಗಿ ಜನರು ಕ್ಯೂ ನಿಂತು, ಸರಿ ಪಡಿಸಿಕೊಳ್ಳೋದಕ್ಕೆ ಮುಂದಾಗಿದ್ದಾರೆ. ಆದರೇ ಆಹಾರ ಇಲಾಖೆಯಿಂದ ಪಡಿತರ ಚೀಟಿಯಲ್ಲಿನ ತಪ್ಪುಗಳ ತಿದ್ದುಪಡಿಗೆ ಮಾತ್ರ ಯಾವುದೇ ಕಾಲಮಿತಿಯನ್ನು ನಿಗದಿ ಪಡಿಸಿಲ್ಲ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವಂತ ಆಹಾರ ಇಲಾಖೆಯು, ರೇಷನ್ ಕಾರ್ಡ್ ತಿದ್ದುಪಡಿಗಾಗಿ ಜನವರಿ.31, 2025 ಕೊನೆಯ ದಿನ ಎಂಬುದು ಸುಳ್ಳು. ಇಲಾಖೆಯಿಂದ…

Read More

ಗರ್ಭಿಣಿಯರಲ್ಲಿ ರಕ್ತಹೀನತೆ ಇದ್ದಲ್ಲಿ ನಿರ್ಲಕ್ಷಿಸಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಎಫ್‌ಸಿಎಮ್ ಚುಚ್ಚುಮದ್ದು ಹಾಕಿಸಿ ರಕ್ತಹೀನತೆ ತಡೆಗೆ ಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಸಿರಗುಪ್ಪ ಪಟ್ಟಣದ ಹೊರವಲಯದ ವಲಸೆ ಜನವಿರುವ ಸಿದ್ದಪ್ಪ ನಗರಕ್ಕೆ ಗರ್ಭಿಣಿ ಮಹಿಳೆಯರ ಮನೆ ಭೇಟಿ ಮಾಡಿ ಸ್ಥಳೀಯ ಜನತೆಯೊಂದಿಗೆ ಅವರು ಮಾತನಾಡಿದರು. ಮನೆಯಲ್ಲಿ ಗರ್ಭಿಣಿಯಿದ್ದರೆ ಅವರು ಮನೆಯ ಮಗಳಾಗಿರಲಿ ಅಥವಾ ಸೊಸೆಯಾಗಿರಲಿ ಯಾವುದೇ ಕಾರಣಕ್ಕೂ ರಕ್ತಹೀನತೆಯಾಗದಂತೆ ಕಾಳಜಿ ವಹಿಸಬೇಕು. ಈ ದಿಶೆಯಲ್ಲಿ ದುಬಾರಿಯಾದ ಎಫ್.ಸಿ.ಎಮ್ ಚುಚ್ಚುಮದ್ದನ್ನು ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು. ನಿಮ್ಮ ವೃತ್ತಿಯೊಂದಿಗೆ ಮನೆಯಲ್ಲಿನ ಗರ್ಭಿಣಿಯ ಆರೈಕೆಗೆ ಆದ್ಯತೆ ನೀಡಬೇಕು. ಆರೋಗ್ಯ ಇಲಾಖೆಯಿಂದ ನೀಡುವ ಕಬ್ಬಿಣಾಂಶ ಮಾತ್ರೆಗಳನ್ನು ಊಟವಾದ ಒಂದು ಗಂಟೆಯ ನಂತರ ತಪ್ಪದೇ ನುಂಗಿಸಬೇಕು. ಕಬ್ಬಿಣಾಂಶ ಮಾತ್ರೆ ನುಂಗಿದರೆ, ಭ್ರೂಣ ದಪ್ಪವಾಗುತ್ತದೆ, ಕಪ್ಪು ಬಣ್ಣದ ಮಗು ಹುಟ್ಟುತ್ತದೆ ಎಂಬ ತಪ್ಪು ನಂಬಿಕೆಗಳನ್ನು, ಗಾಳಿಸುದ್ದಿಗಳನ್ನು ನಂಬಬಾರದು. ವೈದ್ಯರ ಸಲಹೆಯಂತೆ…

Read More

ಬೆಂಗಳೂರು : 66/11ಕೆವಿ ಬಿ.ಎಮ್.ಟಿ.ಸಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025 (ಮಂಗಳವಾರ)ರ ಮತ್ತು ಜನವರಿ 29 ರ ನಾಳೆ ರ ಬೆಳಗ್ಗೆ 10:00 ರಿಂದ ಸಂಜೆ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ( Power Cut ) ಉಂಟಾಗಲಿದೆ. ಜನವರಿ 28 ರ ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ, ಶಾಂತಿನಗರ, ಬಿಟಿಎಸ್ ರೋಡ, ರಿಚ್ಮಂಡ ಸರ್ಕಲ್, ರೆಸಿಡೆನೆಸ್ಸಿ ರೋಡ, ಸುಧಾಮನಗರ, ಕೆ.ಎಚ್ ರೋಡ,ವೀಲ್ಸನ್ ಗಾರ್ಡನ್, ಡಬಲ್ ರೋಡ, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಜನವರಿ 29ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಅರೇಹಳ್ಳಿ, ಇಟ್ಟಮಡು, ಎಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿಜಿ ಲೇಔಟ್, ಭುವನೇಶ್ವರಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್…

Read More

ಬೆಂಗಳೂರು: ರಾಜ್ಯದ ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ ನೀಡಲಾಗುತ್ತದೆ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಈ ಮೂಲಕ ಇ-ಖಾತಾ ಇಲ್ಲದ ನಗರ ಪ್ರದೇಶದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ…

Read More

ಬೆಂಗಳೂರು : ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇರ ನೇಮಕಾತಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್)ಹುದ್ದೆಗಳನ್ನು ಗುರುತಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(01) ರ ಪತ್ರದಲ್ಲಿ ಬ್ಯಾಕ್ ಲಾಗ್ ಸಚಿವ ಸಂಪುಟ ಉಪ ಸಮಿತಿ ಸಭೆಯ ನಿರ್ಣಯದಂತೆ, ಸರ್ಕಾರದ ವಿವಿಧ ಇಲಾಖೆಗಳು/ನಿಯಮಗಳು/ಮಂಡಳಿಗಳು /ವಿಶ್ವವಿದ್ಯಾನಿಯಗಳು/ ಸಹಕಾರ ಸಂಸ್ಥೆಗಳು/ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಲು ತನಿಖಾ ತಂಡವನ್ನು ರಚಿಸಿರುತ್ತಾರೆ. ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ಇತರೆ ಇಲಾಖೆಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಕಾಲಕಾಲಕ್ಕೆ, ಹೊರಡಿಸಿರುವ ಮೀಸಲಾತಿ ನಿಯಮಗಳನ್ನಯ ನೇರ ನೇಮಕಾತಿ ಮತ್ತು ಮುಂಬಡ್ತಿಯನ್ನು ಅನುಷ್ಠಾನಗೊಳಿಸಿರುವ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಪರಿಶೀಲಿಸಲು ಸದರಿ ಆಯೋಗದ ತಂಡವನ್ನು ನೇಮಿಸಿರುತ್ತಾರೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ಉಲ್ಲೇಖ(2) ರಲ್ಲಿ ನಡೆದ ಸಭೆಯಲ್ಲಿ ಈ ಕುರಿತು…

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯ ಮಾಜಿ ಸಿಎಂ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ 24 ಗಂಟೆಗಳ ನೀರು ಸರಬರಾಜು, ಉಚಿತ ವಿದ್ಯುತ್ ಸೇರಿ 15 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ದೆಹಲಿ ಚುನಾವಣೆಗೆ ತಯಾರಿ ನಡೆಸುತ್ತಿರುವ ಆಮ್ ಆದ್ಮಿ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ 15 ‘ಕೇಜ್ರಿವಾಲ್ ಭರವಸೆಗಳಲ್ಲಿ’ ಸೇರಿವೆ. “ಇದು ಕೇಜ್ರಿವಾಲ್ ಅವರ ಗ್ಯಾರಂಟಿ, ಮೋದಿಯವರ ‘ನಕಲಿ’ ಗ್ಯಾರಂಟಿ ಅಲ್ಲ” ಎಂದು ಎಎಪಿ ಮುಖ್ಯಸ್ಥರು ದೆಹಲಿಯಲ್ಲಿ ನಡೆದ ರ್ಯಾಲಿಯಲ್ಲಿ ಬಿಜೆಪಿಯನ್ನು ಲೇವಡಿ ಮಾಡಿದರು. https://twitter.com/i/status/1883784952346710294 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಳ್ ಅವರು, ಮೊದಲ ಖಾತರಿಯು ಹೆಚ್ಚಿನ ಉದ್ಯೋಗಾವಕಾಶಗಳ ಭರವಸೆ ನೀಡುತ್ತದೆ. ರಾಷ್ಟ್ರೀಯ ಸರಾಸರಿ ಶೇಕಡಾ 6 ಕ್ಕೆ ಹೋಲಿಸಿದರೆ ರಾಜಧಾನಿಯಲ್ಲಿ ಕಡಿಮೆ ನಿರುದ್ಯೋಗವನ್ನು ಸೂಚಿಸುವ ಅಧಿಕೃತ ಅಂಕಿಅಂಶವನ್ನು ಅರವಿಂದ್ ಕೇಜ್ರಿವಾಲ್ ಒಪ್ಪಿಕೊಂಡಿದ್ದಾರೆ. ಆದಾಗ್ಯೂ, ಒಬ್ಬ ನಿರುದ್ಯೋಗಿ ಕೂಡ ತುಂಬಾ ಹೆಚ್ಚಾಗಿದೆ ಎಂದು ಅವರು ಹೇಳಿದರು. “ದೆಹಲಿಯಲ್ಲಿ ಯಾರೂ ನಿರುದ್ಯೋಗಿಗಳಾಗಿ ಉಳಿಯಬಾರದು ಎಂದು ನಾನು ಬಯಸುತ್ತೇನೆ” ಎಂದು ಅವರು…

Read More