Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಇತ್ತೀಚಿಗೆ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮೈಸೂರಿನಲ್ಲಿ ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.ನಾಗರಾಜ್ , ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ದೀಪಿಕಾಳನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ . ಬಾಲಕಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೃದಯಾಘಾತ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ವಿದ್ಯಾರ್ಥಿಗಳು ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು : ನೋಂದಾಯಿತ ಕಾರ್ಮಿಕರು ಮರಣ ಹೊಂದಿದ ವೇಳೆ ಅಂತ್ಯಕ್ರಿಯೆಗೆ ಮಂಡಳಿಯು ಅವರ ನಾಮ ನಿರ್ದೇಶಿತರಿಗೆ ಸಹಾಯಧನ ನೀಡುತ್ತದೆ. ಈ ಸೌಲಭ್ಯ ಪಡೆಯಲು ಮೃತ ಫಲಾನುಭವಿಯ ವಯಸ್ಸು 60 ವರ್ಷದೊಳಗಿರಬೇಕು. ನೋಂದಾಯಿತ ಕಾರ್ಮಿಕರು ಮರಣಹೊಂದಿದ ವೇಳೆ ಅವರ ಅಂತ್ಯಕ್ರಿಯೆಗೆ ಮಂಡಳಿಯು ಅವರ ನಾಮ ನಿರ್ದೇಶಿತರಿಗೆ ಸಹಾಯಧನವನ್ನು ನೀಡುತ್ತದೆ ಸಲ್ಲಿಸಬೇಕಾದ ದಾಖಲೆಗಳು * ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ * ರೇಷನ್ ಕಾರ್ಡ್ ಪ್ರತಿ * ಬ್ಯಾಂಕ್ ಪಾಸ್ ಬುಕ್ ಪ್ರತಿ * ಮರಣ ಪ್ರಮಾಣ ಪತ್ರ * ಅವಲಂಬಿತರ ಸ್ವಯಂ ದೃಢೀಕೃತ ಆಧಾರ್ ಕಾರ್ಡ್ ಪ್ರತಿ ಗಮನಿಸಿ ಫಲಾನುಭವಿಯು ಮೃತಪಟ್ಟ ದಿನಾಂಕದಿಂದ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಿದಲ್ಲಿ ಮಾತ್ರ ಮೃತ ಫಲಾನುಭವಿಯ ನಾಮ ನಿರ್ದೇಶಿತರು ಈ ಸೌಲಭ್ಯ ಪಡೆದುಕೊಳ್ಳಬಹುದಾಗಿರುತ್ತದೆ
ಡೆಹ್ರಾಡೂನ್: ಭಾರತದಲ್ಲಿಯೇ ಮೊದಲ ಬಾರಿಗೆ ಇಂದಿನಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ. ಈ ಮೂಲಕ ವಿವಾಹ, ವಿಚ್ಛೇದನ, ಆಸ್ತಿಗೆ ಎಲ್ಲಾ ಧರ್ಮಿಯರಿಗೂ ಒಂದೇ ಕಾಯ್ದೆ ಅನ್ವಯವಾಗಲಿದೆ. ಉತ್ತರಾಖಂಡದಲ್ಲಿ ಇಂದಿನಿಂದ ಏಕರೂಪ ನೀತಿ ಸಂಹಿತೆ ಜಾರಿಗೆ ಬರಲಿದೆ. ಜನವರಿ 27 ರಂದು ಮಧ್ಯಾಹ್ನ 12.30 ರ ನಂತರ ಉತ್ತರಾಖಂಡದಲ್ಲಿ ಯುಸಿಸಿ ಜಾರಿಗೆ ಬರಲಿದೆ. ಅದೇ ದಿನ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಯುಸಿಸಿ ಪೋರ್ಟಲ್ ಅನ್ನು ಸಹ ಉದ್ಘಾಟಿಸಲಿದ್ದಾರೆ. ಎಲ್ಲಾ ಧರ್ಮದವರಿಗೆ ಸಂಹಿತೆಯ ಅನ್ವಯ ಸರ್ಕಾರದಲ್ಲಿ ವಿವಾಹ ನೋಂದಣಿ ಕಡ್ಡಾಯವಾಗಿರುತ್ತದೆ. ಆಯಾ ಧರ್ಮದ ಅನುಸಾರ ಬೇರೆ ಬೇರೆ ವಿವಾಹ ನೋಂದಣಿ ಇನ್ನು ಇರುವುದಿಲ್ಲ. ಎಲ್ಲಾ ಧರ್ಮೀಯರಿಗೂ ವಿಚ್ಛೇದನ, ಆಸ್ತಿಗೆ ಒಂದೇ ಕಾನೂನು ಜಾರಿಯಲ್ಲಿರುತ್ತದೆ. ಮದುವೆಯ ರೀತಿಯಲ್ಲಿ ಲಿವ್ ಇನ್ ಸಂಬಂಧಕ್ಕೂ ನೋಂದಣಿ ಕಡ್ಡಾಯವಾಗಿರುತ್ತದೆ. ಇದು ಉತ್ತರಾಖಂಡ ರಾಜ್ಯದ ನಿವಾಸಿಗಳಿಗೆ ಅನ್ವಯವಾಗಿರುತ್ತದೆ. ಅನ್ಯ ರಾಜ್ಯಗಳಲ್ಲಿರುವ ಉತ್ತರಾಖಂಡ ಮೂಲದವರಿಗೂ ಅನ್ವಯವಾಗಲಿದೆ. ಮಗು ಜನಿಸಿದಲ್ಲಿ 7 ದಿನದೊಳಗೆ ನೋಂದಣಿ ಕಡ್ಡಾಯವಾಗಿದೆ. ಉತ್ತರಾಖಂಡ ಯುಸಿಸಿ ನಿಯಮಗಳ…
ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವಿಶ್ವವಿದ್ಯಾಲಯಗಳ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದು, ವಿಶ್ವವಿದ್ಯಾಲಯಗಳ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ ತಿಳಿಸಿದ್ದಾರೆ.
ಬೆಂಗಳೂರು : ಕ್ಯಾನ್ಸರ್ ಗೆದ್ದು ಬೆಂಗಳೂರಿಗೆ ವಾಪಸ್ ಆಗಿರುವ ನಟ ಶಿವರಾಜ್ ಕುಮಾರ್ ಅವರನ್ನು ಇಂದು 12 ಗಂಟೆಗೆ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಲಿದ್ದಾರೆ. ಸದ್ಯ ಕ್ಯಾನ್ಸಲ್ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜಕುಮಾರ್ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ಕಳೆದ 2024 ಡಿಸೇಂಬರ್ 18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಶಿವಣ್ಣ ಹೆಚ್ಚು ಕಮ್ಮಿ ಒಂದು ತಿಂಗಳ ನಂತರ ಬೆಂಗಳೂರಿಗೆ ಮರಳಿ ಬಂದಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.
ನವದೆಹಲಿ : ಬಾಲ್ಯದಲ್ಲಿಯೇ ವಿಚ್ಛೇದನ ಪಡೆದ ಪೋಷಕರ ಹಿರಿಯ ವಯಸ್ಕರಿಗೆ ಪಾರ್ಶ್ವವಾಯು ಬರುವ ಸಾಧ್ಯತೆ ಹೆಚ್ಚು ಎಂದು ಅಧ್ಯಯನವು ಕಂಡುಹಿಡಿದಿದೆ. PLOS One ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು 65 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 13,000 ಕ್ಕೂ ಹೆಚ್ಚು ಜನರನ್ನು ತನಿಖೆ ಮಾಡಿತು. 18 ವರ್ಷ ತುಂಬುವ ಮೊದಲು ವಿಚ್ಛೇದನ ಪಡೆದ ಪೋಷಕರಲ್ಲಿ ಅಖಂಡ ಕುಟುಂಬಗಳಲ್ಲಿ ಬೆಳೆದವರಿಗಿಂತ ಪಾರ್ಶ್ವವಾಯು ಬರುವ ಸಾಧ್ಯತೆ 60% ಹೆಚ್ಚಾಗಿದೆ ಎಂದು ಫಲಿತಾಂಶಗಳು ತೋರಿಸಿವೆ. ವಿಜ್ಞಾನಿಗಳು ಖಿನ್ನತೆ, ಮಧುಮೇಹ ಮತ್ತು ಸಾಮಾಜಿಕ ಪ್ರತ್ಯೇಕತೆಯನ್ನು ಪರಿಗಣಿಸಿದ ನಂತರವೂ ಈ ಹೆಚ್ಚಿನ ಅಪಾಯ ಮುಂದುವರೆದಿದೆ, ಇವೆಲ್ಲವೂ ವ್ಯಕ್ತಿಯ ಪಾರ್ಶ್ವವಾಯು ಬರುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಮೆದುಳಿನ ಒಂದು ಭಾಗಕ್ಕೆ ರಕ್ತ ಪೂರೈಕೆಯನ್ನು ಏನಾದರೂ ನಿರ್ಬಂಧಿಸಿದಾಗ ಅಥವಾ ಮೆದುಳಿನಲ್ಲಿ ರಕ್ತನಾಳ ಒಡೆದಾಗ ಪಾರ್ಶ್ವವಾಯು ಸಂಭವಿಸುತ್ತದೆ. ಎರಡೂ ಸಂದರ್ಭಗಳಲ್ಲಿ, ಮೆದುಳಿನ ಭಾಗಗಳು ಹಾನಿಗೊಳಗಾಗುತ್ತವೆ ಅಥವಾ ಸಾಯುತ್ತವೆ. ಪಾರ್ಶ್ವವಾಯು ಶಾಶ್ವತ ಮಿದುಳಿನ ಹಾನಿ, ದೀರ್ಘಕಾಲೀನ ಅಂಗವೈಕಲ್ಯ ಅಥವಾ ಸಾವಿಗೆ…
ಬೆಂಗಳೂರು : ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ಭೈರತಿ ಸುರೇಶ್ ಗೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಿ ಇಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಸಂಜೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಡಿ ಸಮನ್ಸ್ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ. ಮುಡಾ ಹಗರಣದ ವಿಚಾರಣೆ ನಡೆಸುತ್ತಿರುವ ED ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈ ಮೂಲಕ ಮುಡಾ ಹಗರಣದಲ್ಲಿ ಮತ್ತೊಂದು ತಿರುವು ಸಿಕ್ಕಂತಾಗಿದೆ. ಇಂದು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿಯ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೇ ವಿಚಾರಣೆಗೆ ಹಾಜರಾಗುವಂತೆ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ. ಮುಡಾ ಹಗರಣದ ವಿಚಾರಣೆ ನಡೆಸುತ್ತಿರುವ ED ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈ ಮೂಲಕ ಮುಡಾ ಹಗರಣದಲ್ಲಿ ಮತ್ತೊಂದು ತಿರುವು ಸಿಕ್ಕಂತಾಗಿದೆ. ಇಂದು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿಯ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೇ ವಿಚಾರಣೆಗೆ ಹಾಜರಾಗುವಂತೆ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ. ಇನ್ನು ಇಂದು ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನೇತೃತ್ವದ ತಂಡ ಮೂರು ತಿಂಗಳಿಂದ ಮುಡಾ ಪ್ರಕರಣ ಸಂಬಂಧ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳ ವಿಚಾರಣೆ ನಡೆಸಿದೆ. ಮುಡಾ ಕಚೇರಿಯಲ್ಲಿನ ಸಂಬಂಧಿತ ದಾಖಲೆ, ಸಾಮಾನ್ಯ ಸಭೆ ನಡಾವಳಿ ಪರಿಶೀಲಿಸಿ ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖಾ ವರದಿ ಸಿದ್ದಪಡಿಸಿ ಹೈಕೋರ್ಟ್ ಗೆ ಸಲ್ಲಿಸಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯಕ್ತ ಪೊಲೀಸರು ಹೈಕೋರ್ಟ್ ಗೆ ಇಂದು ತನಿಖೆಯ ವರದಿ ಸಲ್ಲಿಕೆ ಮಾಡಿದ್ದಾರೆ. ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯಕ್ತ ಪೊಲೀಸರು ಇದುವರೆಗೆ ನಡೆಸಿದ ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಮುಡಾ ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ಎಲ್ಲಾ ತನಿಖೆ ಮುಗಿಸಿದ್ದು, ಇದೀಗ ಮುಚ್ಚಿದ ಲಕೋಟೆಯಲ್ಲಿ ಲೋಕಾಯುಕ್ತ ಪೊಲೀಸರು ತನಿಖಾ ವರದಿ ಸಲ್ಲಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನೇತೃತ್ವದ ತಂಡ ಮೂರು ತಿಂಗಳಿಂದ ಮುಡಾ ಪ್ರಕರಣ ಸಂಬಂಧ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳ ವಿಚಾರಣೆ ನಡೆಸಿದೆ. ಮುಡಾ ಕಚೇರಿಯಲ್ಲಿನ ಸಂಬಂಧಿತ ದಾಖಲೆ, ಸಾಮಾನ್ಯ ಸಭೆ ನಡಾವಳಿ ಪರಿಶೀಲಿಸಿ ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖಾ ವರದಿ ಸಿದ್ದಪಡಿಸಿ ಹೈಕೋರ್ಟ್ ಗೆ ಸಲ್ಲಿಸಿದೆ.
ನವದೆಹಲಿ: ಒಂದೆಡೆ, ಸ್ಮಾರ್ಟ್ಫೋನ್ ಸಾಕಷ್ಟು ಅನುಕೂಲಗಳನ್ನು ಹೊಂದಿದ್ದರೆ, ಅದು ಕೆಲವು ಅನಾನುಕೂಲತೆಗಳನ್ನು ಸಹ ಹೊಂದಿದೆ. ಮೊಬೈಲ್ ನಿಂದ ಹೊರಸೂಸುವ ವಿಕಿರಣವು ಮಾರಣಾಂತಿಕ ಎಂದು ಹೇಳಲಾಗುತ್ತದೆ. ಮೊಬೈಲ್ ಟವರ್ ನ ವಿಕಿರಣವು ಆರೋಗ್ಯಕ್ಕೆ ವಿಷಕ್ಕಿಂತ ಕಡಿಮೆಯಿಲ್ಲ. ಮೊಬೈಲ್ ವಿಕಿರಣವು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವಿವರಿಸಿ. ಮೊಬೈಲ್ ವಿಕಿರಣ ಎಷ್ಟು ಇರಬೇಕು ಮತ್ತು ಅದು ನಮ್ಮ ಆರೋಗ್ಯಕ್ಕೆ ಎಷ್ಟು ಎಂದು ತಿಳಿಯಿರಿ. ಅದನ್ನು ಹೇಗೆ ತಪ್ಪಿಸಬಹುದು ಎಂಬುದನ್ನು ಸಹ ತಿಳಿಯಿರಿ. ಮೊಬೈಲ್ ಟವರ್ ವಿಕಿರಣ ಎಂದರೇನು? ಯಾವುದೇ ಸಾಧನಕ್ಕೆ ಪರಸ್ಪರ ಸಂಪರ್ಕಿಸಲು ನೆಟ್ವರ್ಕ್ ಅಗತ್ಯವಿದೆ. ಮೊಬೈಲ್ ಫೋನ್ ಗಳ ವಿಷಯದಲ್ಲೂ ಇದೇ ಆಗಿದೆ. ಮೊಬೈಲ್ ಫೋನ್ ಗಳ ನೆಟ್ ವರ್ಕ್ ಗಾಗಿ, ಟೆಲಿಕಾಂ ಕಂಪನಿಗಳು ಅಗತ್ಯಕ್ಕೆ ಅನುಗುಣವಾಗಿ ವಿವಿಧ ಪ್ರದೇಶಗಳಲ್ಲಿ ಟವರ್ ಗಳನ್ನು ಸ್ಥಾಪಿಸುತ್ತವೆ. ನೆಟ್ವರ್ಕ್ನ ಸಂದರ್ಭದಲ್ಲಿ, ಎರಡು ರೀತಿಯ ವಿಕಿರಣಗಳಿವೆ. ಮೊದಲನೆಯದು ಗೋಪುರದಿಂದ ಹೊರಹೊಮ್ಮುವ ವಿಕಿರಣ ಮತ್ತು ಎರಡನೆಯದು ಮೊಬೈಲ್ ನ ವಿಕಿರಣ. ಗೋಪುರದ…












