Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು ಈ ಮೂಲಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಬಲ 136 ರಿಂದ 138ಕ್ಕೆ ಹೆಚ್ಚಳವಾಗಿದೆ. ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಬಂದಿದ್ದು, ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವಂತಹ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ 9 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320 ಮತಗಳನ್ನ ಪಡೆದಿದ್ದಾರೆ. ಇಬ್ಬರ ಮಧ್ಯ ಒಟ್ಟು 25,193 ಸಿಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ. ವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾನ್ ಖಾನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಅವರು 88,985 ಮತಗಳನ್ನು ಪಡೆದುಕೊಂಡಿದ್ದರೆ,…
ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆಯನ್ನು 2023ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್‍ಗಳನ್ನು 2022-23 ಹಾಗೂ 2023-24 ನೇ ಸಾಲಿನಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೊಗಿ ಭತ್ಯೆಯನ್ನು ನೀಡುವ ಖಾತರಿ ಯೋಜನೆಯಾಗಿದೆ. ಯಾವುದೇ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಎಲ್ಲಾ ಪದವೀಧರರಿಗೆ, ಸ್ನಾತಕೋತ್ತರ ಪದವಿ, ಬಿಎಡ್ ಪದವೀಧರರಿಗೆ ಪ್ರತಿ ತಿಂಗಳು ರೂ.3 ಸಾವಿರ ಗಳು ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.…
ಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಆಹಾರ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದು, ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ. ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮವನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಉಲ್ಲೇಖ (1)ರ ಸರ್ಕಾರದ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ. ಹಾಗೂ ಈ ಮರುಸ್ತಾಪನೆ ಕ್ರಮವು ಕೇವಲ ಉಲ್ಲೇಖ (2)ರ ಸಭಾ ನಡವಳಿಯಲ್ಲಿ ನೀಡಿರುವ ನಿರ್ದೇಶನದ ಕ್ರಮಕ್ಕೆ ಮಾತ್ರ ಅನ್ವಯವಾಗುವಂತೆ ಈ ಕೆಳಕಂಡಂತೆ ಕ್ರಮ ವಹಿಸಲು ಆದೇಶಿಸಿದೆ. 1. ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್ ನಲ್ಲಿ ಅವಕಾಶ ನೀಡಲಾಗಿರುತ್ತದೆ. 2.…
ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ. ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ…
ಬೆಂಗಳೂರು : ಪ್ರಸ್ತುತ ನಡೆಯುತ್ತಿರುವ ಕೆ.ಪಿ.ಎಸ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ದ್ವಿಭಾಷಾ ಮಾಧ್ಯಮ ತರಗತಿಗಳ ಜೊತೆಗೆ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ. ವಿಷಯಾನ್ವಯವಾಗಿ ಉಲ್ಲೇಖ-1ರನ್ವಯ ಸರ್ಕಾರಿ ಶಾಲೆಗಳ ಬಲವರ್ಧನೆ ಸಂಬಂಧ ಪ್ರಸ್ತುತ ನಡೆಯುತ್ತಿರುವ 286 ಕೆ.ಪಿ.ಎಸ್ ಶಾಲೆಗಳ ಪೈಕಿ ಮಕ್ಕಳ ದಾಖಲಾತಿ ಹೆಚ್ಚಿರುವ ಕೆಲವು ಆಯ್ದ ಶಾಲೆಗಳಲ್ಲಿ 42 ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ಮತ್ತು 51 ಒಂದನೇ ತರಗತಿ ಶಾಲೆಗಳಲ್ಲಿ ಹಾಲಿ ನಡೆಯುತ್ತಿರುವ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಅಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ. ಉಲ್ಲೇಖ-2ರನ್ವಯ ಸರ್ಕಾರವು ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಒಟ್ಟು 286 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ ಈ ಆದೇಶದ ಅನುಬಂಧ-1ರಲ್ಲಿನ 42 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಎಲ್.ಕೆ.ಜಿ ತರಗತಿಗಳನ್ನು ಪ್ರಾರಂಭಿಸಲು ಮತ್ತು ಅನುಬಂಧ. 2ರಲ್ಲಿನ 51 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ 1ನೇ ತರಗತಿಯ ಅಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿ ವಿಭಾಗವನ್ನು…
ಬೆಂಗಳೂರು : ನವಂಬರ್ 24 ರ ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಆಯೋಗದ ನಿರ್ದೇಶನಗಳನ್ನು ಪಾಲಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಚತೆ, ಆಸನ ವ್ಯವಸ್ಥೆ, ಬಂದೋಬಸ್ತ್ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಇಂದು ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪತ್ರಿಕೆ-1 ಮತ್ತು ಪತ್ರಿಕೆ-2 ಪರೀಕ್ಷೆಯು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಈ ಎರಡು ಪತ್ರಿಕೆಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ನಿಯೋಜಿತ ಸಿಬ್ಬಂದಿಗಳು ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳನ್ನು ಸ್ವೀಕರಿಸುವಾಗ, ಪರೀಕ್ಷೆ ಮುಗಿದು ಬಂಡಲ್ ಮಾಡುವಾಗ ಜಾಗರೂಕತೆಯಿಂದ ಕಾಳಜಿ ವಹಿಸಬೇಕು. ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ ಗಳನ್ನು ಅನುಮತಿ ಇರುವುದಿಲ್ಲ. ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಗಳನ್ನು ಧರಿಸುವುದು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ…
ಬೆಂಗಳೂರು : ನವೆಂಬರ್- 26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ. ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.
ಬೆಂಗಳೂರು : ರಾಜ್ಯದ ಎಲ್ಲ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಡೆದಿದ್ದು, ಚುನಾವಣಾ ಅಧಿಕಾರಿಗಳು ಮತದಾರರ ಕರಡು ಯಾದಿಯನ್ನು ಪ್ರಕಟಿಸಿದ್ದಾರೆ. ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ದಿ: 01-01-2025 ರನ್ನು ಅರ್ಹ ದಿನಾಂಕವೆಂದು ಪರಿಗಣಿಸಿ ವಿಧಾನಸಭಾ ಕ್ಷೇತ್ರಗಳ ಮತದಾರರ ಯಾದಿಗಳನ್ನು ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಕೈಗೊಳ್ಳುವ ಬಗ್ಗೆ ಭಾರತ ಚುನಾವಣಾ ಆಯೋಗವು ವೇಳಾ ಪಟ್ಟಿಯನ್ನು ಹೊರಡಿಸಿದೆ. ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಕರಡು ಯಾದಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿಗಳಲ್ಲಿ ಮತ್ತು ಎಲ್ಲ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ www.ceokarnataka.kar.nic.in ದ್ದರಲ್ಲಿ ಪ್ರಕಟಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದರು. ಆಯಾ ವಿಧಾನಸಭಾ ಮತಕ್ಷೇತ್ರದ ನಿಗದಿಪಡಿಸಿದ ಮತಗಟ್ಟೆಗಳಲ್ಲಿ, ಕಚೇರಿ ವೇಳೆಯಲ್ಲಿ ಅಕ್ಟೊಬರ 29 ರಿಂದ ನವೆಂಬರ್ 28 ರ ವರೆಗೆ ಮತದಾರರ ಪರಿಶೀಲನೆಗಾಗಿ ಲಭ್ಯವಿರುತ್ತದೆ. ಈ ಅವಧಿಯಲ್ಲಿ ( ಅ.29 ರಿಂದ ನ.28) ಮತದಾರರು ಮತದಾರರ ಯಾದಿ ಪರಿಶೀಲಿಸಿ,…
ಬೆಂಗಳೂರು : ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಕಂದಾಯ ವೃತ್ತ / ಕೇಂದ್ರ ಸ್ಥಾನಗಳಲ್ಲಿಯೇ ವಾಸ್ತವ್ಯವಿದ್ದು ಸಾರ್ವಜನಿಕರಿಗೆ ಲಭ್ಯವಾಗುವ ಕುರಿತು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಕಂದಾಯ ವೃತ್ತ / ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ವಾಸ್ತವ್ಯವಿದ್ದು ಕರ್ತವ್ಯ ನಿರ್ವಹಿಸುವಂತೆ ಉಲ್ಲೇಖಿತ ಸುತ್ತೋಲೆಗಳಲ್ಲಿ ಸೂಚನೆ ನೀಡಲಾಗಿರುತ್ತದೆ. ಅದಾಗ್ಯೂ, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಅವರುಗಳು ಕರ್ತವ್ಯ ನಿರ್ವಹಿಸುವ ಕಂದಾಯ ವೃತ್ತಗಳಲ್ಲಿ / ಕೇಂದ್ರ ಸ್ಥಾನಗಳಲ್ಲಿ ವಾಸವಿರದೇ ಸಾರ್ವಜನಿಕರಿಗೆ ಕಛೇರಿ ವೇಳೆಯಲ್ಲಿ ಲಭ್ಯವಾಗುತ್ತಿಲ್ಲ ಹಾಗೂ ಇದರಿಂದಾಗಿ ಸಾರ್ವಜನಿಕರು ಬಹಳ ತೊಂದರೆಯನ್ನು ಅನುಭವಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದುದರಿಂದ, ಈಗಾಗಲೇ ಉಲ್ಲೇಖಿತ ಸುತ್ತೋಲೆಗಳಲ್ಲಿ ನೀಡಿರುವ ಸೂಚನೆಗಳನ್ನು ಎಲ್ಲಾ ರಾಜಸ್ವ ನಿರೀಕ್ಷಕರು | ಗ್ರಾಮ ಆಡಳಿತ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಸಂಬಂಧಪಟ್ಟ ತಹಶೀಲ್ದಾರ್‌ಗಳು ಈ ಕುರಿತು ಪರಿಶೀಲನೆ…
ಮಹಾತ್ತೋಭಾರ ಸುಬ್ರಹ್ಮಣ್ಯೇಶ್ವರ ದೇವಸ್ಥಾನವು ಆದಿ ಶಂಕರರ ಕಾಲದಿಂದ ಸ್ಥಾನಿಕ ಸ್ಮಾರ್ತ ಮೊರೋಜ(ಮೋರ-ಮೈಯೂರ ಓಜಜಾಚಾರ್ಯ) ಮನೆತನದ ಆಡಳಿಕೆ ಒಳಪಟ್ಟಿದ್ದ ದೇವಾಲಯವಾಗಿದೆ. ಹಿಂದೆ ಸ್ಮಾರ್ತ ಬ್ರಾಹ್ಮಣರಿಂದ ಪೂಜೆಗೊಳ್ಳುತ್ತಿದ್ದ ಸುಬ್ರಹ್ಮಣ್ಯ ಈಗ ಮಾಧ್ವ ಬ್ರಾಹ್ಮಣರ ಪೂಜಾಧೀನದಲ್ಲಿ ಈ ದೇವಾಲಯವಿದೆ ಸದ್ಯ ಈಗ ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ. ಸುಬ್ರಹ್ಮಣ್ಯ ಗ್ರಾಮವು ಸುಳ್ಯ ತಾಲೂಕುದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು…











