Subscribe to Updates
Get the latest creative news from FooBar about art, design and business.
Author: kannadanewsnow57
ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್-ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬನ್ನಿಹಾಳ ಗ್ರಾಮದಲ್ಲಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಟ್ರ್ಯಾಕ್ಟರ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಇದೀಗ ಮಂಗನ ಕಾಯಿಲೆ ಭೀತಿ ಮತ್ತೆ ಆರಂಭವಾಗಿದ್ದು, ಇದೀಗ ಇಬ್ಬರಲ್ಲಿ ಮಂಗನ ಕಾಯಿಲೆ ರೋಗ ದೃಢವಾಗಿರುವುದು ವರದಿಯಾಗಿದೆ. ಹೌದು, ಕೊಪ್ಪದ ಕೆಸವೆ ಹಾಗೂ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಮಸೀದಿ ಕೆರೆಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಜನವರಿಯಲ್ಲಿ ಒಟ್ಟು 4 ಪ್ರಕರಣಗಳು ದಾಖಲಾಗಿವೆ. ಮಂಗನಕಾಯಿಲೆ ಪ್ರರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಜ್ವರದಿಂದ ಬಳಲುತ್ತಿರುವವರು ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುವ ಸಂದರ್ಭದಲ್ಲಿ ರಕ್ತ ಪರೀಕ್ಷೆ ಮಾಡಲಾಗುತ್ತಿದೆ. ಇದೀಗ ಮಂಗನ ಕಾಯಿಲೆಯಿಂದ ಜನರು ಭಯ ಭೀತರಾಗಿದ್ದಾರೆ.
ಜಲ್ಗಾಂವ್ : ಮಹಾರಾಷ್ಟ್ರದ ಜಲ್ಗಾಂವ್’ನಲ್ಲಿ ಬುಧವಾರ ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ದುರಂತದಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುಷ್ಪಕ್ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ತಗುಲಿದೆ ಎನ್ನುವ ವದಂತಿ ಹಬ್ಬಿದ್ದು, ಇದ್ರಿಂದ ಭಯಭೀತರಾದ ಪ್ರಯಾಣಿಕರು ಹಳಿಗೆ ಹಾರಿ ಓಡುತ್ತಿರುವಾಗ ಕರ್ನಾಟಕ ಎಕ್ಸ್ಪ್ರೇಸ್ ಅವರ ಮೇಲೆ ಹರಿದಿದೆ. ಆದಾಗ್ಯೂ, ಬೆಂಕಿಯ ಬಗ್ಗೆ ವದಂತಿಯನ್ನು ಇನ್ನೂ ದೃಢಪಡಿಸಲಾಗಿಲ್ಲ ಎಂದು ಜಲ್ಗಾಂವ್ ಜಿಲ್ಲಾಧಿಕಾರಿ ಹೇಳಿದ್ದಾರೆ. ರೈಲಿನ ಚೈನ್ ಪುಲ್ಲಿಂಗ್ ನಂತ್ರ ಹಳಿಗಳ ಮೇಲೆ ಹೆಜ್ಜೆ ಹಾಕಿದ ಇತರ ರೈಲಿನ ಪ್ರಯಾಣಿಕರ ಮೇಲೆ ರೈಲು ಹರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು : ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ಜಯನಗರ 3 ನೇ ಹಂತದ ನಕಲು ಬಂಡೆಯಲ್ಲಿ ನಡೆದಿದೆ. ಜನವರಿ 18 ರಂದು ಮನೆ ಬಳಿ ಪ್ರವೀಣ್ ಹಾಗೂ ರವಿ ಆಟವಾಡುತ್ತಿದ್ದರು. ಬಳಿಕ ಮಕ್ಕಳು ನಾಪತ್ತೆಯಾಗಿದ್ದಾರೆ. ವಿದ್ಯಾಶ್ರೀ ಹಾಗೂ ಮಹೇಶ್ ದಂಪತಿಯ ಪುತ್ರ ಪ್ರವೀಣ್ ಜಯನಗರದ ಎಂಇಎಸ್ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ. ಮತ್ತೊಬ್ಬ ಬಾಲಕ ರವಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಕ್ಕಳು ಕಾಣೆಯಾಗಿರುವ ಬಗ್ಗೆ ಪೋಷಕರು ತಿಲಕ್ ನಗರ ಪೊಲೀಸ್ ಠಾಣೆಗೆ ಪ್ರಕರನ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಮಡಿಕೇರಿ : ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ. ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ, 05 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ. ಅರ್ಜಿಯನ್ನು ವೆಬ್ಸೈಟ್ ವಿಳಾಸ https://bcwd.karnataka.gov.in/ ನಲ್ಲಿ ಸಲ್ಲಿಸಬೇಕು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ -1 ಪ್ರವರ್ಗ-2ಎ, 3ಎ.3ಬಿ ರೂ.8 ಲಕ್ಷ ಆಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗಾಗಿ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿ ಪಡೆಯಬಹುದಾಗಿದೆ.
ಬೆಂಗಳೂರು: ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜನೆ ಮಾಡಲು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ವತಿಯಿಂದ ವಿಶೇಷ ಚೇತನರ ಸಬಲೀಕರಣಕ್ಕಾಗಿ ರೂಪಿಸಲಾಗಿರುವ ಕಾರ್ಯಕ್ರಮಗಳ ಅನುಷ್ಠಾನ, ನಗರ ಪುನರ್ವಸತಿ ಕಾರ್ಯಕರ್ತರ ನಿಯೋಜನೆಗೆ ಸಂಬಂಧಿಸದಂತೆ ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಬಿಎಂಪಿಯ ಎಲ್ಲಾ 8 ವಲಯಗಳಗಳಲ್ಲಿ ಬರುವ ವಾರ್ಡ್ ಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತ (ವಿ.ಆರ್.ಡಬ್ಲ್ಯೂ) ರುಗಳ ನೇಮಕ ಮಾಡಿಕೊಳ್ಳಬೇಕು. ನಂತರ ವಿಶೇಷ ಚೇತನ ವರ್ಗದವರನ್ನು ಸರ್ವೆ ಮಾಡಿ ಬಿಬಿಎಂಪಿಯ ಕಲ್ಯಾಣ ಕಾರ್ಯಕ್ರಮಗಳ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸೂಚಿಸಿದರು. ಪಾಲಿಕೆಯ ಕಲ್ಯಾಣ ವಿಭಾಗದಿಂದ ವಿಶೇಷ ಚೇತನರ ಸಬಲೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಯಾವೆಲ್ಲಾ ಯೋಜನೆಗಳಿಗೆ ಎಂಬುರ ಕುರಿತು ಸರಿಯಾದ ಮಾಹಿತಿ ನೀಡಬೇಕು. ಜೊತೆಗೆ ಆ ಯೋಜನೆಗಳೆಲ್ಲವೂ ಅರ್ಹ ಫಲಾನುಭವಿಗಳಿಗೆ…
ಚಿತ್ರದುರ್ಗ : ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿ.ವಿ ಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ. 120 ವರ್ಷಗಳಲ್ಲಿ ಮೂರನೇ ಬಾರಿಗೆ ವಾಣಿವಿಲಾಸ ಸಾಗರ ಜಲಾಶಯ ತುಂಬಿದೆ. ಜ.18ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಗಮಿಸಿ, ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದು, ಸುಮಾರು 20 ರಿಂದ 24 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಜಿಲ್ಲೆಯ ಜನರು ಕುತೂಹಲ ಹಾಗೂ ಕಾತುರರಾಗಿದ್ದು, ಜಿಲ್ಲೆಯ ಪಾಲಿಗೆ ಇದೊಂದು ಸಂಭ್ರಮದ ಕ್ಷಣವಾಗಲಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಆರೋಗ್ಯ ಇಲಾಖೆ ವತಿಯಿಂದ ತಾತ್ಕಾಲಿಕವಾಗಿ ಆರೋಗ್ಯ ಕ್ಲಿನಿಕ್ ತೆರೆದು ಜನರಿಗೆ ಆರೋಗ್ಯ ಸೇವೆ ನೀಡಬೇಕು. ಇದರ ಜೊತೆಗೆ ಆರೋಗ್ಯ ತಂಡ ನಿಯೋಜನೆ ಹಾಗೂ ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.
ನವದೆಹಲಿ : ದೇಶದಲ್ಲಿ ಶಿಕ್ಷಣದ ಮೂಲಭೂತ ಗುಣಮಟ್ಟವನ್ನು ಸುಧಾರಿಸಲು ಕೇಂದ್ರ ಸರ್ಕಾರ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಅಡಿಯಲ್ಲಿ ಸರ್ಕಾರ ದೇಶಾದ್ಯಂತ 100 ಹೊಸ ಮಿಲಿಟರಿ ಶಾಲೆಗಳನ್ನು ತೆರೆಯಲಿದೆ. ಬುಧವಾರ, ಜನವರಿ 22 ರಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೇರಳದ ಅಲಪ್ಪುಳದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯ ವಾರ್ಷಿಕ ದಿನಾಚರಣೆಯ ಸಂದರ್ಭದಲ್ಲಿ ದೇಶಾದ್ಯಂತ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಕೇಂದ್ರ ಸರ್ಕಾರದ ಈ ನಿರ್ಧಾರವು ಭಾರತದಲ್ಲಿ ಮೂಲಭೂತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಮತ್ತು ದೇಶದ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರಯತ್ನಗಳ ಭಾಗವಾಗಿದೆ ಎಂದು ಅವರು ಹೇಳಿದರು. ಸೈನಿಕ್ ಶಾಲೆಯಲ್ಲಿ ಬಾಲಕಿಯರ ಪ್ರವೇಶಕ್ಕೆ ಕೇಂದ್ರ ಸರ್ಕಾರವು ದಾರಿ ಮಾಡಿಕೊಟ್ಟಿದೆ ಎಂದು ಸಿಂಗ್ ಹೇಳಿದರು. ದೇಶದ ದೂರದ ಪ್ರದೇಶಗಳು ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಹಿನ್ನೆಲೆಯ ಸಿಬ್ಬಂದಿಯನ್ನು ಸೇರಿಸಿಕೊಳ್ಳಲು ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಸೈನಿಕ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು. ‘ಪ್ರತಿಯೊಬ್ಬ ಸೈನಿಕನಲ್ಲೂ…
ನವದೆಹಲಿ : ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾರತದ ವೈವಿಧ್ಯತೆಯಲ್ಲಿ ಏಕತೆ ಜೀವಂತವಾಗುತ್ತದೆ, ಸುಂದರವಾಗಿ ವಿನ್ಯಾಸಗೊಳಿಸಲಾದ 31 ಸ್ತಬ್ಧಚಿತ್ರಗಳು ಕರ್ತವ್ಯದ ಹಾದಿಯನ್ನು ಅಲಂಕರಿಸುತ್ತವೆ. ಇವುಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 16 ಸ್ತಬ್ಧಚಿತ್ರಗಳು ಮತ್ತು ಸಚಿವಾಲಯಗಳು ಮತ್ತು ಇಲಾಖೆಗಳಿಂದ 10 ಸ್ತಬ್ಧಚಿತ್ರಗಳು ಸೇರಿವೆ. ಪ್ರತಿಯೊಂದು ಟ್ಯಾಬ್ಲೋ ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಸಾಧನೆಗಳನ್ನು ಚಿತ್ರಿಸುತ್ತದೆ. ಪ್ರಮುಖ ಆಕರ್ಷಣೆಗಳಲ್ಲಿ ಉತ್ತರ ಪ್ರದೇಶದ ಮಹಾ ಕುಂಭ, ಗುಜರಾತ್‌ನ ಏಕತೆ ಮತ್ತು ಕೈಗಾರಿಕಾ ಪ್ರಗತಿಯ ಪ್ರತಿಮೆ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯದ “ಲಖ್ಪತಿ ದೀದಿ” ಮುಂತಾದ ಸ್ತಬ್ಧಚಿತ್ರಗಳು ಸೇರಿವೆ. ಉತ್ತರ ಪ್ರದೇಶ: ಮಹಾ ಕುಂಭ ಮತ್ತು ಆಧ್ಯಾತ್ಮಿಕ ಪರಂಪರೆ ಉತ್ತರ ಪ್ರದೇಶದ ಟ್ಯಾಬ್ಲೋ ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಗಳಲ್ಲಿ ಒಂದಾದ ಮಹಾ ಕುಂಭಮೇಳದ ಆಧ್ಯಾತ್ಮಿಕ ಭವ್ಯತೆಯನ್ನು ಚಿತ್ರಿಸುತ್ತದೆ. ಈ ವಿನ್ಯಾಸವು ಪೌರಾಣಿಕ ಸಮುದ್ರ ಮಂಥನವನ್ನು (ಸಾಗರ ಮಥನ) ಒಳಗೊಂಡಿದೆ, ಇದು ದೈವಿಕ ಅಮೃತ ಮತ್ತು ಜ್ಞಾನದ ಆವಿಷ್ಕಾರವನ್ನು ಸಂಕೇತಿಸುತ್ತದೆ. ಇದು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಪವಿತ್ರ ಸಂಗಮವನ್ನು…
ಬೆಂಗಳೂರು: ಜನವರಿ 26, 2025ರ ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಜನವರಿ.26, 2025ರಂದು ಯಾವ ಸಚಿವರು ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ.? ಗೃಹ ಸಚಿವ ಡಾ.ಜಿ ಪರಮೇಶ್ವರ್ – ತುಮಕೂರು ಕಾನೂನು ಸಚಿವ ಹೆಚ್.ಕೆ ಪಾಟೀಲ್ – ಗದಗ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – ರಾಮನಗರ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ – ವಿಜಯಪುರ ಇಂಧನ ಸಚಿವ ಕೆ.ಜೆ ಜಾರ್ಜ್ – ಚಿಕ್ಕಮಗಳಊರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ – ಮೈಸೂರು ಲೋಕೋಪಯೋಗಿ ಸಚಿವ ಸತೀಶ್…












