Author: kannadanewsnow57

ಶಿವಮೊಗ್ಗ : ನ.23 ರಂದು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲಾಗುತ್ತಿದೆ. ಚುನಾವಣಾ ಕ್ಷೇತ್ರಗಳಲ್ಲಿನ ಮತದಾನ ಕೇಂದ್ರಗಳು ಬಹುತೇಕ ಶಾಲೆಗಳಾಗಿವೆ. ಮತದಾನದ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸುವುದರಿಂದ ಜನದಟ್ಟಣೆಯಾಗಿ ಮತದಾನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮತದಾನ ಕೇಂದ್ರವಿರುವ ಶಾಲೆಗಳಿಗೆ ನ. 23 ರ ಶನಿವಾರದಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಶಿವಮೊಗ್ಗ ತಾಲೂಕಿನ ದೇವಕಾತಿಕೊಪ್ಪದ ಸ.ಕಿ.ಪ್ರಾ.ಶಾಲೆ ಮತ್ತು ಹೊಳಲೂರು ಅಂಗನವಾಡಿ ಕೇಂದ್ರ ಜನತಾ ಕಾಲೋನಿ. ಭದ್ರಾವತಿ ತಾಲೂಕಿನ ಬಾರಂದೂರು ಸ. ಹಿ.ಪ್ರಾ.ಶಾಲೆ (ಉತ್ತರಭಾಗ). ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿ ಸ.ಹಿ.ಪ್ರಾ.ಶಾಲೆ. ಶಿಕಾರಿಪುರ ತಾಲೂಕಿನ ತರಲಘಟ್ಟ ಸ.ಹಿ.ಪ್ರಾ.ಶಾಲೆ, ಶಿಕಾರಿಪುರದ ಸ.ಉರ್ದು ಹಿ.ಪ್ರಾ.ಶಾಲೆ ಖಾಜಿ ಮೊಹಲ್ಲ ಹಾಗೂ ಶಿರಾಳಕೊಪ್ಪದ ಸ.ಉರ್ದು ಹಿ.ಪ್ರಾ.ಶಾಲೆ ಆಜಾದ್ ವೃತ್ತ. ಸಾಗರ ತಾಲೂಕಿನ ಕುದರೂರು ಸ.ಹಿ.ಪ್ರಾ.ಶಾಲೆ ಕೊ.ಸಂ.1 ಈ ಶಾಲೆಗಳಲ್ಲಿ ನ.23 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ…

Read More

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ ನವೆಂಬರ್.21, 2024ರ ಇಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್.21ರ ಇಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇಂದು ಈ ಏರಿಯಾಗಳಲ್ಲಿ ಪವರ್ ಕಟ್ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್ 21 ರ ಗುರುವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬಿಟಿಎಮ್ ಮೊದಲನೇ ಹಂತ, ಮೆಜಸ್ಟಿಕ್ ಅಪಾಟðಮೆಂಟ್, ಗುರಪ್ಪನಪಾಳ್ಯ, ಅ್ಯಾಕ್ಸಾ, ಜೈ ಬೀಮಾ ನಗರ, ಹಳೆ ಮಡಿವಾಳ, ಬಿಟಿಎಮ್ ಲೇಔಟ್‌ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Read More

ನವದೆಹಲಿ : ನೌಕರನು ನಿವೃತ್ತಿಯ ವಯಸ್ಸನ್ನು ತಲುಪಿದ ನಂತರ ಅಥವಾ ವಿಸ್ತೃತ ಅವಧಿಯ ನಂತರ ನಿವೃತ್ತಿಯಾದರೆ ಅವರ ವಿರುದ್ಧ ಯಾವುದೇ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ನವೀನ್ ಕುಮಾರ್ ಸಿನ್ಹಾ ವಿರುದ್ಧ ಹೊರಡಿಸಲಾದ ವಜಾ ಆದೇಶವನ್ನು ರದ್ದುಗೊಳಿಸಿದ ಜಾರ್ಖಂಡ್ ಹೈಕೋರ್ಟ್ ತೀರ್ಪಿನ ವಿರುದ್ಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಇಲಾಖಾ ಪ್ರಕ್ರಿಯೆಗಳು ಕೇವಲ ಶೋಕಾಸ್ ನೋಟಿಸ್ ವಿಷಯದ ಬಗ್ಗೆ ಪ್ರಾರಂಭವಾಗುವುದಿಲ್ಲ ಆದರೆ ಚಾರ್ಜ್ ಶೀಟ್ ನೀಡಿದಾಗ ಮಾತ್ರ ಪ್ರಾರಂಭವಾಗುತ್ತವೆ, ಏಕೆಂದರೆ ಸಕ್ಷಮ ಪ್ರಾಧಿಕಾರವು ಉದ್ಯೋಗಿಯ ವಿರುದ್ಧ ಮಾಡಿದ ಆರೋಪಗಳು ಈ ದಿನಾಂಕವಾಗಿದೆ. ಪರಿಗಣನೆಗೆ. ಈ ಪ್ರಕರಣದಲ್ಲಿ ಅವರ ನಿವೃತ್ತಿಯ ನಂತರ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಹೈಕೋರ್ಟ್ ಹೇಳಿತ್ತು, ಇದರಲ್ಲಿ ಸೇವಾ ಅವಧಿ ವಿಸ್ತರಣೆಯೂ ಸೇರಿದೆ. ನೌಕರ ನವೀನ್ ಕುಮಾರ್ ಬ್ಯಾಂಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿ ತನ್ನ ಸಂಬಂಧಿಕರ…

Read More

ಬೆಂಗಳೂರು : ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರಿಂದ ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಕಾರ್ಮಿಕ ಕಾರ್ಡುಗಳ ಅಮಾನತು ಮಾಡಲಾಗಿದ್ದು, ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ನಕಲಿ ಕಾರ್ಡುಗಳು ಅಮಾನತು ಮಾಡಲಾಗಿದೆ. 2,46, 951 ನಕಲಿ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಹೌದು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಡ್ ಗೆ ನೋಂದಣಿ ಮಾಡಿಕೊಂಡಿದ್ದು. 2.46 ಲಕ್ಷ ಸಾವಿರ ಕಾರ್ಡ್ ಅಮಾನತು ಮಾಡಲಾಗಿದೆ. ಹಾವೇರಿಯಲ್ಲಿ 1.69 ಲಕ್ಷ ಕಾರ್ಡ್ ಗಳು ಕಾರ್ಮಿಕ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಬಿಪಿಎಲ್ ಬೆನ್ನಲ್ಲೇ ಕಾರ್ಮಿಕ ಕಾರ್ಡ್ ಗಳನ್ನು ಇದೀಗ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಸಂತೋಷ ಲಾಡ್ ಮಾತನಾಡಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಹಾವೇರಿಯಲ್ಲಿ ಸುಮಾರು ಎರಡೂವರೆ ಲಕ್ಷ 3 ಲಕ್ಷ ಕಾರ್ಡ್‌ ಮಾಡಿದ್ದಾರೆ. ಅಲ್ಲಿ ಪರಿಶೀಲಿಸಿದ ನಂತರ ಕಾರ್ಡ್‌ಗಳನ್ನು ರದ್ದು ಪಡಿಸಿದ್ದೇವೆ. ಅದೇ ರೀತಿ ಎಲ್ಲಾ ಜಿಲ್ಲೆಯಲ್ಲೂ…

Read More

ಬೆಳಗಾವಿ : ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ರದ್ದಾಗಿದ್ದರೂ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಬರುವುದಿಲ್ಲ, ಬಿಪಿಎಲ್ ಗೆ ಅರ್ಹವಲ್ಲದ ಕಾರ್ಡ್ ಗಳನ್ನು ಮಾತ್ರ ಎಪಿಎಲ್ ಗೆ ಬದಲಾವಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾಗಿದ್ದರೂ ತೆರಿಗೆ ಪಾವತಿಸಿದರೆ ಗೃಹಲಕ್ಷ್ಮಿ ಹಣ ಬರುವುದಿಲ್ಲ. ತೆರಿಗೆ ಪಾವತಿಸದಿದ್ದರೆ ಮಾತ್ರ ಹಣ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡ್ ಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಯಾವುದೇ ಗೊಂದಲ ಇಲ್ಲ. ಬಿಪಿಎಲ್ ಕಾರ್ಡ್, ಎಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು 2023ರ ಡಿಸೆಂಬರ್ ಮಾಹೆಯಿಂದ 2025ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308-ಎಎ ಮತ್ತು 308-ಎಬಿ ರನ್ವಯ ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ. ಸಾರ್ವತ್ರಿಕ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳು ಮತ್ತು ಸದಸ್ಯ ಸ್ಥಾನಗಳ ಸಂಖ್ಯಾ ವಿವರಗಳನ್ನು ಅನುಬಂಧದಲ್ಲಿ ತೋರಿಸಲಾಗಿದೆ. ಜಿಲ್ಲಾಧಿಕಾರಿಗಳು, ಆಯೋಗವು ಆದೇಶಿಸಿರುವ ಮೇಲ್ಕಂಡ ಚುನಾವಣಾ ವೇಳಾಪಟ್ಟಿಯನ್ನು ಅನುಸರಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವು ನಿಯಮಗಳು, 1993ರ ನಿಯಮ 12ರ ಅಡಿಯಲ್ಲಿ ಚುನಾವಣಾ ಅಧಿಸೂಚನೆಯನ್ನು ಪ್ರಪತ್ರ-2 ರಲ್ಲಿ ಹೊರಡಿಸತಕ್ಕದ್ದು ಹಾಗೂ ಹೊರಡಿಸಲಾದ ಅಧಿಸೂಚನೆಯನ್ನು ಅದೇ ದಿನದಂದು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸತಕ್ಕದ್ದು. ಪ್ರಕಟಿಸಿದ ಅಧಿಸೂಚನೆ ಪ್ರತಿಗಳನ್ನು ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಕಛೇರಿಯ ಸೂಚನಾ ಫಲಕದ ಮೇಲೆ ಹಾಗೂ ಇನ್ನಿತರ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ. https://twitter.com/siddaramaiah/status/1859293490838110658?ref_src=twsrc%5Etfw

Read More

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ಅಗ್ನಿ ಅವಘಡದಲ್ಲಿ ಯುವತಿ ಮೃತಪಟ್ಟ ಬೆನ್ನಲ್ಲೇ ಶೋರೂಂ ಮಾಲೀಕ ನಾಪತ್ತೆಯಾಗಿದ್ದು, ಎಫ್ ಐಆರ್ ದಾಖಲಾಗಿದೆ. ಎಲೆಕ್ಟ್ರೀಕ್ ಬೈಕ್ ಶೋರೂಂ ಅಗ್ನಿ ಅವಘಡ ಸಂಬಂಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಎಲೆಕ್ಟ್ರಿಕ್ ಬೈಕ್ ಶೋರೂಂ ಮಾಲೀಕ ಪುನೀತ್ ಗೌಡ ನಾಪತ್ತೆಯಾಗಿರುವುದು ತಿಳಿದುಬಂದಿದೆ. ದುರಂತದಲ್ಲಿ ಸಜೀವದಹನವಾಗಿದ್ದ ಯುವತಿ ಪ್ರಿಯಾ ಸಹೋದರ ಪ್ರತಾಪ್ ನೀಡಿರುವ ದೂರಿನ ಮೇರೆಗೆ ಶೋ ರೂಂ ಮಾಲೀಕ, ಮ್ಯಾನೇಜರ್ ವಿರುದ್ಧ ಬಿಎನ್ ಎಸ್ ಸೆಕ್ಷನ್ 106ರಡಿ ಪ್ರಕರಣ ದಾಖಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆಯೇ? ಅಥವಾ ಇವಿ ಬೈಕ್ ಬ್ಯಾಟರಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆಯೇ? ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

Read More

ಬೈಕ್ ಚಾಲನೆ ಮಾಡುವಾಗ ತುಂಬ ಜನರು ಮೊಬೈಲ್ ಬಳಸುತ್ತಾರೆ. ಆದರೆ ಕೆಲವೊಂದು ಸಣ್ಣ ಅಜಾಗುರೂಕತೆ ಅಪಘಾತಕ್ಕೆ ಕಾರಣವಾಗಬಹುದು. ಸ್ಕೂಟರ್ ಚಾಲಕರೊಬ್ಬರು ಇದೇ ರೀತಿಯ ಕೆಲಸವನ್ನು ಮಾಡುತ್ತಿರುವ ವೀಡಿಯೊ ವೈರಲ್ ಆಗಿದೆ. ಮೊಬೈಲ್ ನಲ್ಲಿ ಮಾತನಾಡುತ್ತ ಬೈಕ್ ಚಾಲನೆ ಮಾಡುತ್ತಿದ್ದ ಸವಾರ ಎದುರಿನಿಂದ ಬರುತ್ತಿದ್ದ ಕಾರಿಗೆ ಸ್ಕೂಟರ್ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಇದು ವ್ಯಕ್ತಿಯು ತನ್ನ ಫೋನ್‌ನಲ್ಲಿ ನಿರತನಾಗಿದ್ದರಿಂದ ಬಲ ತಿರುವು ತೆಗೆದುಕೊಳ್ಳಲು ತಡಮಾಡಿದ್ದಾನೆ ಎಂದು ತೋರಿಸಿದೆ. https://twitter.com/i/status/1856988671867801801 ವೀಡಿಯೋ ಶೇರ್ ಆದ ಬಳಿಕ ಹಲವರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಹೆಚ್ಚಿನ ಜನರು ವ್ಯಕ್ತಿಯ ಅಸಡ್ಡೆಯನ್ನು ಖಂಡಿಸಿದರು, ಇತರರು ಮೊಬೈಲ್ ಫೋನ್‌ಗಳ ಇಂತಹ ಅಸಡ್ಡೆ ಬಳಕೆ ಸಾಮಾನ್ಯವಾಗಿದೆ ಎಂದು ಹೇಳಿದರು. ಈ ಘಟನೆ ಸ್ಕೂಟರ್ ಸವಾರರಿಗೆ ಪಾಠ ಎಂದು ಹಲವರು ಬಣ್ಣಿಸಿದ್ದಾರೆ.

Read More

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹೇರ್ ಡ್ರೈರ್ ಸ್ಪೋಟಗೊಂಡು ಮಹಿಳೆಯ 2 ಕೈಗಳು ಛಿದ್ರವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಹೇರ್ ಡ್ರೈಯರ್ ಬಳಸುವಾಗ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೋರಿಯರ್ ಓಪನ್ ಮಾಡಿ ಹೇರ್ ಡ್ರೈಯರ್ ಸ್ವೀಚ್ ಆನ್ ಮಾಡಿದ ತಕ್ಷಣ ಬ್ಲಾಸ್ಟ್ ಆಗಿದ್ದು, ಇಳಕಲ್ ನಗರದ ಬಸಮ್ಮ ಎಂಬ ಮಹಿಳೆಯ ಎರಡೂ ಕೈಗಳು ಛಿದ್ರವಾಗಿದೆ. ಸದ್ಯ ಬಸಮ್ಮಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಳಕಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More