Author: kannadanewsnow57

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್‌ವಾಹನದ ಟೈರ್‌ಬ್ಲಾಸ್ಟ್ ಆಗಿ ಚಾಲಕ ಸೇರಿ ಮಂತ್ರಾಲಯದ ಮಠದ ಸಾಂಸ್ಕೃತಿಕ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಾಹನ ಚಾಲಕ ಶಿವು, ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹೈವಧನ ಕಟ್ಟಿ, ಸುಜಯೀಂದ್ರ, ಅಭಿಲಾಶ ಮೃತ ವಿದ್ಯಾರ್ಥಿಗಳು, ವಿದ್ಯಾರ್ಥಿ ಜಯಸಿಂಹ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Read More

ಚಿತ್ರದುರ್ಗ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಉನ್ನತೀಕರಣದ ಹಿನ್ನಲೆಯಲ್ಲಿ ನುರಿತ ವಿಷಯ ತಜ್ಞರಿಂದ ವಿಷಯವಾರು ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ನೀಡಲು ಮತ್ತು ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲು ನೇರ ಫೋನ್ ಇನ್ ಕಾರ್ಯಕ್ರಮ ರೂಪಿಸಲಾಗಿದೆ. ಇದೇ ಜ.24ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಆಕಾಶವಾಣಿಯ ನೇರ ಫೋನ್ ಇನ್ ಕಾರ್ಯಕ್ರಮದ ಚರ್ಚೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್, ಶಿಕ್ಷಣಾಧಿಕಾರಿ ಬಿ.ಸಿ.ಸಿದ್ದಪ್ಪ, ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿ ಎನ್.ಆರ್. ತಿಪ್ಪೇಸ್ವಾಮಿ, ಶಿಕ್ಷಣ ಉಪಯೋಜನ ಸಮನ್ವಯಾಧಿಕಾರಿ ಸಿ. ವೆಂಕಟೇಶ್ ಹಾಗೂ ವಿಷಯ ಪರಿವೀಕ್ಷಕ ಕೆ.ಜಿ.ಪ್ರಶಾಂತ್ ಕೆ.ಜಿ ಭಾಗವಹಿಸುವರು. 2025ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಜಿಲ್ಲೆಯ ಎಲ್ಲಾ ಮಕ್ಕಳನ್ನು ಉತ್ತಮವಾಗಿ ತಯಾರಿ ಮಾಡಲು ಆಕಾಶವಾಣಿ ಮೂಲಕ ಎಸ್‍ಎಸ್‍ಎಲ್‍ಸಿ ಪೂರ್ವಭಾವಿ ಪರೀಕ್ಷಾ ಸಿದ್ಧತೆ, ಪ್ರಾಯೋಜಿತ ನೇರ ಫೋನ್ ಇನ್ ಸರಣಿ ಕಾರ್ಯಕ್ರಮ ಪ್ರತಿ ಬುಧವಾರ ಬೆಳಿಗ್ಗೆ  10 ರಿಂದ 11 ರವರೆಗೆ ಪ್ರಸಾರವಾಗುವುದು. ಈ ಸರಣಿ ಕಾರ್ಯಕ್ರಮವು ಇದೇ ಜನವರಿ 29 ರಿಂದ ಆರಂಭವಾಗಿ ಮಾರ್ಚ್…

Read More

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಬಿಸಿಯೂಟ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪಿಎಂ ಪೋಷಣ್ ನಿರ್ದೇಶಕರು ನೆನಪೋಲೆಯನ್ನು ರಾಜ್ಯ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಪ್ರತಿ ವರ್ಷದಂತ ಪಿ ಎಂ ಪೋಷಣ್ (ಮಧ್ಯಾಹ್ನ ಬಿಸಿಯೂಟ ಯೋಜನ) ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಪ್ರತಿ ಶೈಕ್ಷಣಿಕ ವರ್ಷದ ಕೆಲಸದ ದಿನಗಳನ್ನು ಲೆಕ್ಕಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳನ್ನು(ಕನ್ನಡ ರಾಜ್ಯೋತ್ಸವ) ಶಾಲಾ ಕೆಲಸದ ದಿನಗಳೆಂದು ಪರಿಗಣಿಸಲಾಗಿರುತ್ತದೆ ಹಾಗೂ ಪಿ ಎಂ ಪೋಷಣ್ ಯೋಜನ ಅಡಿಯಲ್ಲಿ ಬಿಸಿಯೂಟ ಯೋಜನೆಯನ್ನು ಅನುಷ್ಠಾನ ಮಾಡಲು (ಯೋಜನಾ ಅನುಮೋದನಾ ಮಂಡಳಿ) ಪಿಎಬಿ ಯಿಂದ ಅನುಮೋದನೆಯನ್ನು ಪಡೆಯಲಾಗಿರುತ್ತದೆ ಎಂದಿದ್ದಾರೆ. ಆದ್ದರಿಂದ ಎಲ್ಲಾ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಬಿಸಿಯೂಟ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಸೂಚಿಸಲಾಗಿರುತ್ತದ. ಆದ್ದರಿಂದ 2025 ಜನವರಿ 26 ಗಣರಾಜ್ಯೋತ್ಸವ…

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 6 ಮಂದಿ ಡಿವೈಎಸ್‌ಪಿ (ಸಿವಿಲ್) ರವರುಗಳ ವರ್ಗಾವಣೆ/ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ. ಉಲ್ಲೇಖಿತ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ, ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ. 1. ಮೋಹನ್ ಕುಮಾರ್ ಆರ್. 2 ಮಹೇಶ್ ಕುಮಾರ್ 3 ಕುಮಾರ್ ಎಸ್ 4 ಕುಮಾರಸ್ವಾಮಿ 5 ಲೋಕೇಶ್ವರಪ್ಪ ಎಸ್ 6 ಪಾಂಡುರಂಗಯ್ಯ ಎಂ ಸಂಬಂಧಪಟ್ಟ ಘಟಕಾಧಿಕಾರಿಗಳು, ಮೇಲ್ಕಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ. ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಸದರಿ ಅಧಿಕಾರಿಗಳು ಬಿಡುಗಡೆಗೊಂಡ ಮತ್ತು ವರದಿ ಮಾಡಿದ ಬಗ್ಗೆ ಈ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು. ಮೇಲ್ಕಂಡ ವರ್ಗಾವಣಾ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದಿರುವ ಡಿವೈಎಸ್‌ಪಿ ವೃಂದದ ಅಧಿಕಾರಿಗಳು ಮುಂದಿನ ಸ್ಥಳ…

Read More

ಬೆಂಗಳೂರು : ರಾಜರಾಜೇಶ್ವರಿ ನಗರ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈ ಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಜನವರಿ 22 ರ ಇಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಪಟ್ಟಣಗೆರೆ, ಕೃಷ್ಣ ಗಾರ್ಡನ್, ಬಿಎಚ್‌ ಇಎಲ್ ಲೇಔಟ್, ಭೂಮಿಕಾ ಲೇಔಟ್, ಬಿಇಎಂಎಲ್ ಒಂದನೇ 2ನೇ ಹಾಗೂ 10ನೇ ಹಂತ, ಮೈಲಸಂದ್ರ, ಉತ್ತರಹಳ್ಳಿ ಮೇನ್ ರೋಡ್, ಕಾನ್ ಕಾರ್ಡ್ ಲೇಔಟ್, ಓಂಕಾರ್ ನಗರ, ಕೋಡಿಪಾಳ್ಯ, ಕೋನಸಂದ್ರ, ಹೆಮ್ಮಿಗೆಪುರ, ಜೆಟ್ಟಿ ಪಾಳ್ಯ, ಚೂಡೇನಪುರ, ಕಾಟ ನಾಯಕನಪುರ, ಬಿಜಿಎಸ್ ಹಾಸ್ಪಿಟಲ್, ಗಾಣಕಲ್, ಶ್ರೀನಿವಾಸ್‌ಪುರ ಕಾಲೋನಿ, ಎಂಎಲ್ ಲೇಔಟ್, ಬಿಡಿಎ ಲೇಔಟ್, ಸಚ್ಚಿದಾನಂದ ನಗರ, ಒಲಂಪಸ್‌ ಹಾಸ್ಪಿಟಲ್, ಹಲಗೇವಡೇರಹಳ್ಳಿ, ದ್ವಾರಕಾನಗರ, ಐಡಿಯಲ್ ಹೋಮ್ಸ್, ಸ್ವಾಮಿ ವಿವೇಕಾ ನಂದ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಜನವರಿ 23, 24 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ. ಜಲಮಂಡಳಿ 4ನೇ ಹಂತ, 2ನೇ ಹಂತದ ಹೆಗ್ಗನಹಳ್ಳಿಯಿಂದ ಜಿಕೆವಿಕೆ ಕಡೆಗೆ ಸಾಗುವ ಕೊಳವೆ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನಲೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜನವರಿ 23ರ ಬೆಳಗ್ಗೆ 5ರಿಂದ ಜನವರಿ 24 ರ ಬೆಳಗ್ಗೆ 5ರವರೆಗೆ 24 ಗಂಟೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ತಿಳಿಸಿದೆ. ಎಲ್ಲೆಲ್ಲಿ ವ್ಯತ್ಯಯ ನಾಗರಭಾವಿ, ಎಸ್.ಎಂ.ವಿ ಲೇಔಟ್ – 1 ರಿಂದ 9 ನೇ ಬ್ಲಾಕ್, ಮಲ್ಲತಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ರಾಜಗೋಪಾಲನಗರ, ಲಕ್ಷ್ಮಿ ದೇವಿನಗರ, ಲೆಗ್ಗೇರೆ, ಪೀಣ್ಯ ಕೈಗಾರಿಕಾ ಪ್ರದೇಶ, ಪೀಣ್ಯ, ಆರ್.ಆರ್. ನಗರ, ಐಡಿಯಲ್ ಹೋಮ್ಸ್, ಕೆಂಚೇನಹಳ್ಳಿ, ಹಲಗೆ ವಡೇರನಹಳ್ಳಿ, ಕೋಡಿಪಾಳ್ಯ, ಚನ್ನಸಂದ್ರ, ಕೆಂಗೇರಿ, ಕೆಂಗೇರಿ ಉಪನಗರ, ನಾಗದೇವನಹಳ್ಳಿ, ಮರಿಯಪ್ಪನ ಪಾಳ್ಯ, ಟಿ.ದಾಸರಹಳ್ಳಿ, ನೆಲಗದರನಹಳ್ಳಿ, ಹೆಚ್.ಎಂ.ಟಿ ಲೇಔಟ್, ಬಗಲಗುಂಟೆ, ಎಂ.ಇ.ಐ ಲೇಔಟ್, ಅಬ್ಬಿಗೇರೆ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು,…

Read More

ಬೆಂಗಳೂರು: ಇಂದು ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಆ ಬಳಿಕ ರಾಜ್ಯಾಧ್ಯಂತ ಉಚಿತ ಆರೋಗ್ಯ ಶಿಬಿರಗಳ ಮೂಲಕ ಪ್ರತಿ ತಿಂಗಳು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಗರ್ಭಿಣಿಯರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಜನವರಿ 22 ರಂದು ರಾಯಚೂರಿನಲ್ಲಿ ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಚಾಲನೆ ನೀಡಲಿದ್ದಾರೆ. ಪ್ರತಿ ತಿಂಗಳ 9 ಮತ್ತು 24ನೇ ತಾರೀಕಿನಂದು ಎರಡು ಬಾರಿ ಉಚಿತವಾಗಿ ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸಲಿದೆ. ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಅಭಿಯಾನವನ್ನು ಕಡ್ಡಾಯವಾಗಿ, ನಿರಂತರವಾಗಿ ನಡೆಸಲು ಸೂಚನೆ ನೀಡಲಾಗಿದೆ. https://twitter.com/KarnatakaVarthe/status/1881695628616704380 https://kannadanewsnow.com/kannada/good-news-for-commuters-one-way-special-train-to-run-from-bengaluru-to-banaras-on-the-occasion-of-kumbh-mela/ https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/

Read More

ದಾವಣಗೆರೆ : ಬ್ಯಾಂಕ್‍ಗಳ ದರೋಡೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಭದ್ರತಾ ಮಾನದಂಡದ ಜೊತೆಗೆ ಸಿಬ್ಬಂದಿಗಳ ಮಾಹಿತಿ ಸಂಗ್ರಹದಲ್ಲಿ ನಿರ್ಲಕ್ಷ್ಯತೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು.   ಅವರು ಮಂಗಳವಾರ ಜಿಲ್ಲಾ ಪೋಲಿಸ್ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಬ್ಯಾಂಕಗಳ ಭದ್ರತೆಗಾಗಿ ಬ್ಯಾಂಕಿನ ಎಲ್ಲಾ ವ್ಯವಸ್ಥಾಪಕರುಗಳಿಗೆ ಆಯೋಜಿಸಲಾಗಿದ್ದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬ್ಯಾಂಕಿನ ವ್ಯವಸ್ಥಾಪಕರುಗಳು ಬ್ಯಾಂಕ್‍ಗೆ ಬೇಕಾದ ಹೈಸೆಕ್ಯೂರಿಟಿ ಸಿಸಿ ಕ್ಯಾಮೆರಾಗಳ ಜೊತೆಗೆ ಅಲರಾಮ್‍ಗಳನ್ನು ಅಳವಡಿಸಿಕೊಳ್ಳಬೇಕು. ಬ್ಯಾಂಕ್‍ನ ಸೆಕ್ಯುರಿಟಿ ಸಿಬ್ಬಂದಿಯ ಮಾಹಿತಿ ಸಂಗ್ರಹದ ಜೊತೆಗೆ ಹತ್ತಿರದ ಪೊಲೀಸ್ ಠಾಣೆಯೊಂದಿಗೆ ಸೆಕ್ಯುರಿಟಿ ಕುರಿತು ಚರ್ಚಿಸಬೇಕಾಗುತ್ತದೆ ಎಂದರು. ಬ್ಯಾಂಕ್‍ನ ಒಳಗೆ  ಸ್ಟ್ರಾಂಗ್ ರೂಂ ಡಿಜಿಲಾಕರ್, ಸ್ಟ್ರೋಕ್ ಡಿಟೆಕ್ಟರ್ಗಗಳು, ಹೀಟ್ ಡಿಟೆಕ್ಟರ್‍ಗಳು, ಬ್ಯಾಂಕುಗಳ ಬಳಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಬಂದಲ್ಲಿ ಅಂತಹವರ ಮಾಹಿತಿಯನ್ನು ಪೆÇಲೀಸ್ ಠಾಣೆಗಳಿಗೆ ನೀಡುವಂತೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಿಳಿಸಿ ಸ್ಟ್ರಾಂಗ್ ರೂಮ್‍ಗೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರತಿದಿನ ಭೇಟಿ ನೀಡುವ ನಮೂನೆಯಲ್ಲಿ ದಾಖಲು ಮಾಡಬೇಕು. ಬ್ಯಾಂಕ್‍ಗಳಿಗೆ ಪ್ರತಿದಿನ…

Read More

ಬೆಂಗಳೂರು : 2024-2025ನೇ ಸಾಲಿನಲ್ಲಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವೃತ್ತಿಪರ ಶಿಕ್ಷಣ ಕೋರ್ಸ್(ಸ್ನಾತಕೋತ್ತರ ಪದವಿ ಒಳಗೊಂಡಂತೆ) ವ್ಯಾಸಂಗ ಪೂರ್ಣಗೊಳಿಸಿದ್ದು, ರಾಷ್ಟ್ರೀಕೃತ ಬ್ಯಾಂಕ್‌ನಿಂದ ಶೈಕ್ಷಣಿಕ ಸಾಲಪಡೆದ ಶಿಕ್ಷಕರ/ಉಪನ್ಯಾಸಕರ ಮಕ್ಕಳಿಗೆ ಧನಸಹಾಯವನ್ನು ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ದಿನಾಂಕ 01.02.2018ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಮಿತಿ ಸಭೆಯ ನಡಾವಳಿಯಲ್ಲಿನ ಕ್ರ.ಸಂ. 15ರಲ್ಲಿ ತೀರ್ಮಾನಿಸಿದಂತೆ ನಿಧಿಗಳ ವತಿಯಿಂದ ಆಜೀವ ಸದಸ್ಯತ್ವ ಹೊಂದಿರುವ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ/ಉಪನ್ಯಾಸಕರ ಮಕ್ಕಳಿಗೆ (1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಮಕ್ಕಳಿಗೆ ಮಾತ್ರ) ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸಂಬಂಧಿಸಿದ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ (ಸ್ನಾತಕೋತ್ತರ ಪದವಿ ಒಳಗೊಂಡಂತೆ) ಉನ್ನತ ವ್ಯಾಸಂಗಕ್ಕೆ ಶಿಕ್ಷಕರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಲ್ಲಿ ಮಾತ್ರ ಅಂತಹ ಶಿಕ್ಷಕರ ಮಕ್ಕಳಿಗೆ ಪ್ರೋತ್ಸಾಹ ನೀಡುವ…

Read More

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸುವ ಬಗ್ಗೆ ಅಧಿಸೂಚನೆ ನೀಡಲಾಗಿದೆ. ಪ್ರಸ್ತುತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರು ದಿನಾಂಕ 20-01-2025 ರ ಪತ್ರದಲ್ಲಿ ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ರಾಜ್ಯದಲ್ಲಿರುವ 12 ಏಕಲವ್ಯ ಮಾದರಿ ವಸತಿ ಶಾಲೆಗಳಿಗೂ ಸಹ 6ನೇ ತರಗತಿಗೆ ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನಿಸಿ, ಪ್ರವೇಶ ಪರೀಕ್ಷೆ ನಡೆಸಿ ಸೀಟು ಹಂಚಿಕೆಯನ್ನು ಮಾಡಲು ಕೋರಿರುತ್ತಾರೆ. ಈ ಹಿನ್ನಲೆಯಲ್ಲಿ ಅರ್ಹ ಅಭ್ಯರ್ಥಿಗಳು ರಾಜ್ಯದಲ್ಲಿರುವ 12 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಆಸಕ್ತಿ ಇದ್ದಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು 25-01-2025 ರಾತ್ರಿ 11.59ರ ವರೆಗೆ ವಸತಿ ಶಾಲೆ /…

Read More