Subscribe to Updates
Get the latest creative news from FooBar about art, design and business.
Author: kannadanewsnow57
ಗದಗ: ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಉದ್ಯೋಗ ನೇಮಕಾತಿಯಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಕೃಪಾಂಕ ನೀಡಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುವುದಾಗಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಗಜೇಂದ್ರಗಡದಲ್ಲಿ ನಡೆದ ಗದಗ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಮಾದರಿಯಲ್ಲಿಯೇ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಮಹತ್ವದ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಹಲವಾರು ಕವಿಗಳ ಪುಸ್ತಕಗಳನ್ನು ಇದೇ ವೇಳೆ ಲೋಕಾರ್ಪಣೆಗೊಳಿಸಿದೆವು. ಕನ್ನಡ ನುಡಿಯನ್ನು ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳು ಅಗತ್ಯ ಎಂಬ ಮಾತುಗಳನ್ನು ತಿಳಿಸಿದೆವು.
ಬೆಂಗಳೂರು : ಬೆಂಗಳೂರಿನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗಣೇಶ್, ಶರವಣ ಎಂದು ಗುರುತಿಸಲಾಗಿದೆ. ಇಬ್ಬರು ಕೆ ಆರ್ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಹಿನ್ನೆಲೆ ಕೆ.ಆರ್. ಮಾರ್ಕೆಟ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಸ್ ತೋರಿಸುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಭಾನುವಾರ ರಾತ್ರಿ 11.39ಕ್ಕೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ವಿವಿಧ ತಾಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ,ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸಿರುವ ಬಗ್ಗೆ ಆರ್ಥಿಕ ಇಲಾಖೆಯಿಂದ ಹೊರಡಿಸಿರುವ ಆದೇಶ. ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರಧಾನ ಲೆಕ್ಕ ಶೀರ್ಷಿಕೆ 2202, 2210, 2225, 2401, 2403, 2435 ಮತ್ತು 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ ಕಾರ್ಯಕ್ರಮದಡಿ ರೂ.2819.45ಲಕ್ಷಗಳನ್ನು ಲೆಕ್ಕ ಶೀರ್ಷಿಕ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ…
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜನವರಿ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಜನವರಿ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಮದುವೆ ಪ್ರಮಾಣ ಪತ್ರ ಪೋಷಕರ ಪಡಿತರ ಚೀಟಿ ಅಗತ್ಯ. ಪಡಿತರ ಚೀಟಿಗೆ…
ಹೈದರಾಬಾದ್ : ಖ್ಯಾತ ನಿರ್ಮಾಪಕ ಹಾಗೂ ತೆಲಂಗಾಣ ಫಿಲ್ಮ್ ಫೆಡರೇಶನ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಅಧ್ಯಕ್ಷ ದಿಲ್ ರಾಜು ಅವರಿಗೆ ಬಿಗ್ ಶಾಕ್ ಸಿಕ್ಕಿದೆ. ಹೈದರಾಬಾದ್‌ನ ಜೂಬಿಲಿ ಹಿಲ್ಸ್‌ನಲ್ಲಿರುವ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಗಳು ಮುಂಜಾನೆಯಿಂದ ಏಕಕಾಲದಲ್ಲಿ ಪ್ರಾರಂಭವಾದವು. ಈ ಸಂಕ್ರಾಂತಿಗೆ ಬಿಡುಗಡೆಯಾಗಿರುವ ಗೇಮ್ ಚೇಂಜರ್ ಮತ್ತು ಸಂಕ್ರಾಂತಿ ಅನಕನಂ ಎಂಬ ಎರಡು ದೊಡ್ಡ ಚಿತ್ರಗಳ ನಿರ್ಮಾಪಕರು. ಇವೆರಡೂ ಶ್ರೀವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಬಿಡುಗಡೆಯಾಗಿವೆ. ಮೂರು ದಿನಗಳಲ್ಲಿ ಬಿಡುಗಡೆಯಾಗಿದೆ. ಗೇಮ್ ಚೇಂಜರ್ ಇದೇ ತಿಂಗಳ 10 ರಂದು ಮತ್ತು ಸಂಕ್ರಾಂತಿ ವರ್ಷಾಚರಣೆ 14 ರಂದು ಬಿಡುಗಡೆಯಾಗಿದೆ. ಈ ಎರಡು ಚಿತ್ರಗಳು ಒಂದೇ ಮಟ್ಟದ ಕಲೆಕ್ಷನ್ ಗಳಿಸಿವೆ ಎಂಬ ಅಧಿಕೃತ ಘೋಷಣೆಯಿಂದಾಗಿ ಈ ಎರಡು ಚಿತ್ರಗಳು ಈ ಐಟಿ ದಾಳಿಗಳಿಗೆ ಕಾರಣವಾಗಿವೆ ಎನ್ನಲಾಗುತ್ತಿದೆ. ದಿಲ್ ರಾಜು ಅವರ ಮನೆ, ಕಚೇರಿಗಳ ತಪಾಸಣೆ ವೇಳೆ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದೇ…
ಮಂಡ್ಯ : ರಿಯಲ್ ಎಸ್ಟೇಟ್ ಹಾಗೂ ಚೀಟಿ ವ್ಯವ್ಯಹಾರ ಸಂಬಂಧ ವಂಚನೆ ನಡೆಸಲಾಗಿದೆ ಎಂದು ಆರೋಪಿಸಿ ಐಶ್ವರ್ಯಗೌಡ ಸೇರಿದಂತೆ ನಾಲ್ವರ ವಿರುದ್ಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. 1 ಲಕ್ಷ ರೂ.ಗೆ 10 ಪರ್ಸೆಂಟ್ ಬಡ್ಡಿ ನೀಡುವುದಾಗಿ ಹೇಳಿ 33 ಲಕ್ಷ ರೂ. ಹಣ ಹಾಗೂ 366 ಗ್ರಾಂ ಚಿನ್ನದ ಒಡವೆ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಚಾಮುಂಡೇಶ್ವರಿ ನಗರ ನಿವಾಸಿ ಸೌಭಾಗ್ಯ ಎಂಬುವರು ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಶ್ವರ್ಯಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವರ ವಿರುದ್ಧ ಸೌಭಾಗ್ಯ ದೂರು ನೀಡಿದ್ದಾರೆ. ಈಗಾಗಲೇ ಮಂಡ್ಯ ಪೂರ್ವ ಠಾಣೆಯಲ್ಲಿ ಐಶ್ವರ್ಯಗೌಡ ವಿರುದ್ಧ ಒಂದು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಶ್ರೀಸಾಯಿ ಗೋಲ್ಡ್ ಪ್ಯಾಲೇಸ್ ನ 1 ಕೆಜಿ 249 ಗ್ರಾಂ ಚಿನ್ನ ಕಳ್ಳತನವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನಗರ್ತಪೇಟೆಯ ಕೋನಾರ್ಕ್ ಹಾಲ್ ಮಾರ್ಕಿಂಗ್ ಚಿನ್ನ ನೀಡಿದ್ದ ವೇಳೆ ಚಿನ್ನ ಕಳ್ಳತನವಾಗಿದೆ ಎಂದು ಶ್ರೀಸಾಯಿ ಗೋಲ್ಡ್ ಪ್ಯಾಲೇಸ್ ನ ಮ್ಯಾನೇಜರ್ ಭೀಮರಾಜ್ ದೂರು ನೀಡಿದ್ದಾರೆ. ನಗರ್ತಪೇಟೆಯ ಹಾಲ್ ಮಾರ್ಕಿಂಗ್ ಸೆಂಟರ್ ಗೆ ಚಿನ್ನ ಕೊಟ್ಟಿದ್ದು, ಇದೀಗ ಚಿನ್ನ ಕಳ್ಳತನವಾಗಿದೆ. ನಮ್ಮಲ್ಲಿ ಕೆಲಸ ಮಾಡುತ್ತಿದ್ದವನು ಕಳ್ಳತನ ಮಾಡಿದ್ದಾನೆ ಎಂದು ಭರತ್ ಎಂಬುವರು ಹೇಳಿದ್ದಾರೆ. ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ, ಟ್ರಂಪ್ ಇಂಧನದಿಂದ ವಲಸೆಯವರೆಗಿನ ಸಮಸ್ಯೆಗಳನ್ನು ಒಳಗೊಂಡ ಹಲವಾರು ಕಾರ್ಯಕಾರಿ ಆದೇಶಗಳು ಮತ್ತು ನಿರ್ದೇಶನಗಳಿಗೆ ಸಹಿ ಹಾಕಲು ಯೋಜಿಸಿದ್ದಾರೆ. ಇದರಲ್ಲಿ ಅಮೆರಿಕ-ಮೆಕ್ಸಿಕೋ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸುವುದೂ ಸೇರಿದೆ. ವಾಸ್ತವವಾಗಿ, ಡೊನಾಲ್ಡ್ ಟ್ರಂಪ್ ಸೋಮವಾರ ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣ ಹಲವಾರು ಕಾರ್ಯಕಾರಿ ಆದೇಶಗಳು ಮತ್ತು ನಿರ್ದೇಶನಗಳಿಗೆ ಸಹಿ ಹಾಕಲು ಯೋಜಿಸಿದ್ದಾರೆ. ಟ್ರಂಪ್ ತಮ್ಮ ಭಾಷಣದ ಸಮಯದಲ್ಲಿ ಹಲವಾರು ದೊಡ್ಡ ಘೋಷಣೆಗಳನ್ನು ಸಹ ಮಾಡಿದರು… ರಾಯಿಟರ್ಸ್ ವರದಿಯ ಪ್ರಕಾರ, ಟ್ರಂಪ್ ಆಡಳಿತವು ಮುಂದಿನ ಕೆಲವು ದಿನಗಳಲ್ಲಿ 200 ಕ್ಕೂ ಹೆಚ್ಚು ಹೆಚ್ಚುವರಿ ಸೂಚನೆಗಳು ಮತ್ತು ಆದೇಶಗಳನ್ನು ಹೊರಡಿಸಲು ಸಿದ್ಧತೆ ನಡೆಸುತ್ತಿದೆ. ವಲಸೆ ಅಮೆರಿಕದ ಇತಿಹಾಸದಲ್ಲಿಯೇ ಅತಿ ದೊಡ್ಡ ಗಡೀಪಾರು ಅಭಿಯಾನವನ್ನು ಜಾರಿಗೆ ತರುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಅಕ್ರಮ ವಲಸೆಯನ್ನು ಹತ್ತಿಕ್ಕಲು ಅವರು ಹಲವಾರು ಕಾರ್ಯಕಾರಿ ಆದೇಶಗಳನ್ನು ಯೋಜಿಸುತ್ತಿದ್ದಾರೆ.…
ಬೆಳಗಾವಿ : ಮುಸ್ಲಿಮರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಬಿಜೆಪಿ ವಾಕ್ತಾರೆ ನಾಜೀಯಾ ಇಲಾಹಿ ಖಾನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಸುಳೇಬಾವಿಯಲ್ಲಿ ಜನವರಿ 19 ರಂದು ನಡೆದ ಹಿಂದೂ ಕಾರ್ಯಕರ್ತರ ಸಭೆಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮಾರಿಹಾಳ ಪೊಲೀಸ್ ಠಾಣೆ ಎದುರು ಮುಸ್ಲಿಂ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ನಾಜೀಯಾ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೋಮುಗಲಭೆ ಸೃಷ್ಟಿಗೆ ಪ್ರಚೋದನೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆರೋಪದಡಿ ನಾಜೀಯಾ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಆರೋಗ್ಯ ನಿರಂತರವಾಗಿ ಸುಧಾರಿಸುತ್ತಿದೆ. ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರನ್ನು ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕನ ಬಗ್ಗೆಯೂ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ಸೈಫ್ ನನ್ನು ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕನ ಕಾರ್ಯವನ್ನು ಸಾಮಾಜಿಕ ಸಂಘಟನೆಯೊಂದು ಶ್ಲಾಘಿಸಿದ್ದು, ಅವರಿಗೆ 11 ಸಾವಿರ ರೂಪಾಯಿ ಬಹುಮಾನ ನೀಡಿದೆ. ಸೈಫ್ ನನ್ನು ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕನ ಹೆಸರು ಭಜನ್ ಸಿಂಗ್ ರಾಣಾ. ಅವರ ಕಾರ್ಯವನ್ನು ಮೆಚ್ಚಿ ಒಂದು ಸಾಮಾಜಿಕ ಸಂಘಟನೆಯು ಅವರಿಗೆ 11,000 ರೂಪಾಯಿಗಳ ಚೆಕ್ ನೀಡಿ, ಶಾಲು ಹೊದಿಸಿ ಗೌರವಿಸಿತು. ಭಜನ್ ಸಿಂಗ್ ರಾಣಾ ಉತ್ತರಾಖಂಡದ ನಿವಾಸಿಯಾಗಿದ್ದು, ವರ್ಷಗಳಿಂದ ಮುಂಬೈನಲ್ಲಿ ಆಟೋ ಓಡಿಸುತ್ತಿದ್ದಾರೆ. ಸೈಫ್ ಅಲಿ ಖಾನ್ ಅವರನ್ನು ಆಸ್ಪತ್ರೆಗೆ ಕರೆದೊಯ್ದ ನಂತರ ಅವರು ಬೆಳಕಿಗೆ ಬಂದರು. ದಾಳಿಯ ರಾತ್ರಿಯ ಬಗ್ಗೆ ಮಾತನಾಡುತ್ತಾ, ಭಜನ್ ಸಿಂಗ್ ರಾಣಾ ಅವರು ರಾತ್ರಿಯಲ್ಲಿ ಆಟೋ ಓಡಿಸುತ್ತಾರೆ ಎಂದು ಹೇಳಿದರು. ಸೈಫ್ ಮೇಲೆ…














