Subscribe to Updates
Get the latest creative news from FooBar about art, design and business.
Author: kannadanewsnow57
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಧಾಕರ್ ಮುನ್ನಡೆ ಸಾಧಿಸಿದರೆ ರಾಜೀನಾಮೆ ನೀಡುತ್ತೇನೆ: ಶಾಸಕ ಈಶ್ವರ್
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಾ.ಕೆ.ಸುಧಾಕರ್ ಅವರು ಒಂದು ಮತದ ಮುನ್ನಡೆ ಸಾಧಿಸಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್ ಅವರು ಕಾಂಗ್ರೆಸ್ ನ ರಕ್ಷಾ ರಾಮಯ್ಯ ವಿರುದ್ಧ ಸ್ಪರ್ಧಿಸಿದ್ದರು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಈಶ್ವರ್ ಅವರು ಸುಧಾಕರ್ ಅವರನ್ನು ಸೋಲಿಸಿದ್ದರು. “ನಾನು ಈಗಾಗಲೇ ಒಂದು ಸವಾಲನ್ನು ಹಾಕಿದ್ದೇನೆ… ನಾವು 100% ಗೆಲ್ಲುತ್ತೇವೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಒಂದು ಮತವಾದರೂ ಹೆಚ್ಚುವರಿ ಪಡೆದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದರು. ಸುಧಾಕರ್ ಟೀಕೆಗೆ ಪ್ರತಿಕ್ರಿಯಿಸಿದ ಈಶ್ವರ್, ನಕಲಿ ಪ್ರಮಾಣಪತ್ರಗಳೊಂದಿಗೆ ಎಂಬಿಬಿಎಸ್ ಪೂರ್ಣಗೊಳಿಸಿದವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
ಬೆಂಗಳೂರು: ಜೂನ್.3ರಂದು ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3ರಂದು ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಯಾವ ಯಾವ ಜಿಲ್ಲೆಯ ಪದವೀಧರರು ಹಾಗೂ ಶಿಕ್ಷಕರಿಗೆ ಜೂನ್.3ರಂದು ರಜೆ.? ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರವ್ಯಾಪ್ತಿಯ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಪದವೀಧರರು, ಶಾಲಾ ಶಿಕ್ಷಕರಿಗೆ ರಜೆ. ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು…
ಬೆಂಗಳೂರು : 2024-25ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ ಖರೀದಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 42.65 ಲಕ್ಷ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಒಟ್ಟು ರೂ.121.00 ಕೋಟಿಗಳ ವೆಚ್ಚದಲ್ಲಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಪಾದರಕ್ಷೆ ಏತರಿಸಬೇಕಾಗಿದೆ. ಷರತ್ತುಗಳು:- 1. ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಪಾದರಕ್ಷೆಯನ್ನು ಸ್ಥಳೀಯವಾಗಿ ಖರೀದಿಸಿ, ವಿತರಣೆ ಮಾಡುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ)ಗೆ ವಹಿಸುವುದು. 2. ಒಂದು ಜೊತೆ ಕಪ್ಪು ಬಣ್ಣದ ಶೂ ಗಳನ್ನು ಹಾಗೂ ಎರಡು ಜೊತೆ ಬಿಳಿ ಬಣ್ಣದ…
ನವದೆಹಲಿ : ದೇಶದ ಕೃಷಿ ಚಟುವಟಿಕೆಯ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಇಂದು ಕೇರಳದ ಕರಾವಳಿ ಮತ್ತು ಈಶಾನ್ಯ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದು ಭಾರತದ ಕೃಷಿ ಆಧಾರಿತ ಆರ್ಥಿಕತೆಗೆ ನಿರ್ಣಾಯಕವಾದ ನಾಲ್ಕು ತಿಂಗಳ ಮಳೆ ಋತುವಿಗೆ ವೇದಿಕೆಯನ್ನು ಕಲ್ಪಿಸುತ್ತದೆ. “ಈ ವರ್ಷ, ನೈಋತ್ಯ ಮಾನ್ಸೂನ್ ಮೇ 30ರ ಇಂದು ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ” ಎಂದು ಭಾರತ ಹವಾಮಾನ ಇಲಾಖೆ ( India Meteorological Department-IMD) ಬುಧವಾರ ತಿಳಿಸಿದೆ. ಇದು ಬೇಗನೆ ಅಲ್ಲ. ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಮಾನ್ಯ ದಿನಾಂಕ ಜೂನ್.1 ಆಗಿರುವುದರಿಂದ ಇದು ಸಾಮಾನ್ಯ ದಿನಾಂಕಕ್ಕೆ ಹತ್ತಿರದಲ್ಲಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಬುಧವಾರ ಹೇಳಿದ್ದಾರೆ. ಕಳೆದ ವರ್ಷ, ಜೂನ್-ಸೆಪ್ಟೆಂಬರ್ ನೈಋತ್ಯ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿತ್ತು. ಖಾರಿಫ್ ಬೆಳೆಗೆ ಹೆಚ್ಚಿನ ಬಿತ್ತನೆ ಈ ಅವಧಿಯಲ್ಲಿ ನಡೆಯುವುದರಿಂದ ಜೂನ್ ಮತ್ತು ಜುಲೈ ಅನ್ನು ಕೃಷಿಗೆ ಪ್ರಮುಖ ಮಾನ್ಸೂನ್…
ಬೆಂಗಳೂರು : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್, 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ. ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ ಕಂಪನಿಯನ್ನು ಬೆಳೆ ವಿಮೆ…
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ, ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಂತೆ ಅಕ್ಟೋಬರ್.3, 2024ರಿಂದ ದಸರಾ ರಜೆ ಹಾಗೂ ಏಪ್ರಿಲ್.11, 2025ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಿರುವಂತ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುವುದರಿಂದ ರಾಜ್ಯಾಧ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ, ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದಿದೆ. ಸದರಿ ಮಾರ್ಗಸೂಚಿಯಲ್ಲಿ ವಾರ್ಷಿಕ, ಮಾಹೆವಾರು ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳು, ಸಂಭ್ರಮ ಶನಿವಾರ ಆಯೋಜನೆಗೆ ಪೂರಕವಾದ ಪಠ್ಯಾಧಾರಿತ ಚಟುವಟಿಕೆ ಬ್ಯಾಂಕ್ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿಇ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ ಎಂದಿದೆ. 2024-25ನೇ ಸಾಲಿನಲ್ಲಿ ಮೊದಲನೇ ಅವಧಿಗೆ ದಿನಾಂಕ 29-05-2024ರಿಂದ ಶಾಲಾ ಕರ್ತವ್ಯದ ದಿನಗಳು ಆರಂಭಗೊಳ್ಳಲಿವೆ.…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಜರ್ಮನಿಂದ ಬೆಂಗಳೂರಿಗೆ ವಾಪಸ್ ಆಗಲು ಇಂದು ಟಿಕೆಟ್ ಬುಕ್ ಆಗಿದೆ ಎಂದು ವರದಿಯಾಗಿದೆ. ಜರ್ಮನಿಗೆ ತೆರಳಲು ಲುಪ್ತಾನ್ಸಾ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದು, ಇಂದು ಮಧ್ಯಾಹ್ನವೇ ಹೊರಡಲಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ 1.30 ಕ್ಕೆ ಫ್ರಾಂಕ್ ಫರ್ಟ್ ನಿಂದ ವಿಮಾನವು ಹೊರಡಲಿದ್ದು, ರಾತ್ರಿ 12.30 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಈಗಾಗಲೇ ಎಸ್ ಐಟಿ ತಂಡ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದೆ. ಪ್ರಜ್ವಲ್ ವಿಮಾನ ನಿಲ್ದಾಣ ಪ್ರವೇಶಿಸುದ್ದಿಂತ ವಶಕ್ಕೆ ಪಡೆಯಲಿದೆ.
ಕನ್ಯಾಕುಮಾರಿ : ಕಳೆದ ಎರಡು ತಿಂಗಳಿನಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಮೂರು ದಿನಗಳ ಕಾಲ ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಧ್ನಾಯ ಕೈಗೊಳ್ಳಲಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಕನ್ಯಾಕುಮಾರಿಯಲ್ಲಿರುವ ಸ್ವಾಮಿ ವಿವೇಕಾನಂದರ ಗೌರವಾರ್ಥವಾಗಿ ನಿರ್ಮಿಸಲಾದ ಸ್ಮಾರಕವಾದ ರಾಕ್ ಮೆಮೋರಿಯಲ್ ನಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರು ಮಂಗಳವಾರ ತಿಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗವು ಪ್ರಧಾನಿಯವರ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ತಮಿಳುನಾಡು ಕಾಂಗ್ರೆಸ್ ಘಟಕ ಹೇಳಿದೆ. ಇಂತಹ ಕ್ರಮವು ಮತ ಪ್ರಚಾರ ಮುಗಿದ ನಂತರ ಪರೋಕ್ಷ ಪ್ರಚಾರದ ಪ್ರಯತ್ನವಾಗಿದೆ ಎಂದು ಟಿಎನ್ಸಿಸಿ ಮುಖ್ಯಸ್ಥ ಕೆ ಸೆಲ್ವಪೆರುಂತಗೈ ಆರೋಪಿಸಿದ್ದಾರೆ. ಮೇ 30 ರ ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಪ್ರಧಾನಿ ಧ್ಯಾನ ಮಂಟಪದಲ್ಲಿ ಧ್ಯಾನ ಮಾಡಲಿದ್ದಾರೆ, ಅಲ್ಲಿ ಮೋದಿ ಮೆಚ್ಚಿದ ಆಧ್ಯಾತ್ಮಿಕ ಐಕಾನ್ ವಿವೇಕಾನಂದರು ‘ಭಾರತ ಮಾತೆ’…
ನವದೆಹಲಿ:ನೀವು ಅಥವಾ ನಿಮ್ಮ ಮನೆಯಲ್ಲಿ ಯಾರಾದರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಖಾತೆಯನ್ನು ಹೊಂದಿದ್ದರೆ, ರಿವಾರ್ಡ್ ಪಾಯಿಂಟ್ಗಳನ್ನು ರಿಡೀಮ್ ಮಾಡಲು ಸಂಬಂಧಿಸಿದ ಮೋಸದ ಸಂದೇಶಗಳ ಬಗ್ಗೆ ಬ್ಯಾಂಕ್ ಎಚ್ಚರಿಕೆ ನೀಡಿದೆ. ಎಸ್ಎಂಎಸ್ ಅಥವಾ ವಾಟ್ಸಾಪ್ ಮೂಲಕ ಸ್ವೀಕರಿಸಿದ ಯಾವುದೇ ಲಿಂಕ್ಗಳನ್ನು ಕ್ಲಿಕ್ ಮಾಡದಂತೆ ಅಥವಾ ಅಂತಹ ಸಂದೇಶಗಳಿಂದ ಯಾವುದೇ ಅಪ್ಲಿಕೇಶನ್ಗಳು ಅಥವಾ ಫೈಲ್ಗಳನ್ನು ಡೌನ್ಲೋಡ್ ಮಾಡದಂತೆ ಗ್ರಾಹಕರಿಗೆ ಸೂಚಿಸಲಾಗಿದೆ. ಸೈಬರ್ ಅಪರಾಧಿಗಳು ನಕಲಿ ಎಪಿಕೆ ಲಿಂಕ್ಗಳನ್ನು ಒಳಗೊಂಡ ಹೊಸ ತಂತ್ರವನ್ನು ಬಳಸುತ್ತಿದ್ದಾರೆ, ಅದು ಬಳಕೆದಾರರಿಗೆ ರಿವಾರ್ಡ್ ಪಾಯಿಂಟ್ಗಳನ್ನು ರಿಡೀಮ್ ಮಾಡಲು ಸಹಾಯ ಮಾಡುತ್ತದೆ ಎಂದು ಸುಳ್ಳು ಭರವಸೆ ನೀಡುತ್ತದೆ. ಎಪಿಕೆ ಎಂದರೆ ಆಂಡ್ರಾಯ್ಡ್ ಅಪ್ಲಿಕೇಶನ್ ಪ್ಯಾಕೇಜ್, ಇದನ್ನು ಆಂಡ್ರಾಯ್ಡ್ ಸಾಧನಗಳಲ್ಲಿ ಅಪ್ಲಿಕೇಶನ್ಗಳನ್ನು ವಿತರಿಸಲು ಮತ್ತು ಸ್ಥಾಪಿಸಲು ಬಳಸಲಾಗುತ್ತದೆ. ಎಕ್ಸ್ (ಹಿಂದೆ ಟ್ವಿಟರ್) ಪೋಸ್ಟ್ನಲ್ಲಿ, ಎಸ್ಬಿಐ ಎಚ್ಚರಿಸಿದೆ, “ಎಸ್ಬಿಐ ಗ್ರಾಹಕರೇ ಎಚ್ಚರ: ವಂಚಕರ ಬಗ್ಗೆ ಜಾಗರೂಕರಾಗಿರಿ. ಎಸ್ಬಿಐ ರಿವಾರ್ಡ್ ಪಾಯಿಂಟ್ಗಳನ್ನು ರಿಡೀಮ್ ಮಾಡಲು ವಂಚಕರು ಎಸ್ಎಂಎಸ್ ಅಥವಾ ವಾಟ್ಸಾಪ್ ಮೂಲಕ ಎಪಿಕೆಗಳು…