Subscribe to Updates
Get the latest creative news from FooBar about art, design and business.
Author: kannadanewsnow57
ತುಮಕೂರು : ದೂರು ನೀಡಲು ಬಂದಂತಹ ಮಹಿಳೆಯ ಜೊತೆಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತುಮಕೂರು ಜಿಲ್ಲೆಯ ಮಧುಗಿರಿ ಠಾಣೆಯ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಇದೀಗ ಡಿವೈಎಸ್ಪಿ ರಾಮಚಂದ್ರಪ್ಪ ಮತ್ತೆ ಅರೆಸ್ಟ್ ಆಗಿದ್ದಾರೆ. ಮತ್ತೊರ್ವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ರಾಮಚಂದ್ರಪ್ಪ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿತ್ತು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಹಿಳೆ ಒಬ್ಬರು, ವ್ಯಕ್ತಿ ಒಬ್ಬ ಹಣ ಪಡೆದು ವಂಚಿಸಿದ್ದ ಕುರಿತು ದೂರು ನೀಡಲು ಬಂದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ವ್ಯಕ್ತಿ ಒಬ್ಬ ನಿವೇಶನಕ್ಕಾಗಿ ತನ್ನಿಂದ ಹಣ ಪಡೆದು ಬಳಿಕ ನಿವೇಶನವನ್ನು ನೀಡದೆ ಮತ್ತು ಹಣವನ್ನು ನೀಡದೆ ವಂಚಿಸಿದ್ದ. ಈ ಕುರಿತು ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ನಾನು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದೆ.ಈ ವೇಳೆ ಮಹಿಳಾ ಆಯೋಗ ತುಮಕೂರು ಜಿಲ್ಲ ಪೊಲೀಸರಿಗೆ ಪತ್ರ ಬರೆದು…
ನವದೆಹಲಿ : ಫೆಬ್ರವರಿ 5, 2025 ರಂದು ನಡೆಯಲಿರುವ ದೆಹಲಿಯ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗವಹಿಸಲಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಗೊತ್ತುಪಡಿಸಿದ ತಾರಾ ಪ್ರಚಾರಕರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ದೆಹಲಿ ವಿಧಾನಸಭಾ ಚುನಾವಣೆಯ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ಸ್ಟಾರ್ ಕ್ಯಾಂಪೇನರ್ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೂ ಸ್ಟಾರ್ ಕ್ಯಾಂಪೇನರ್ ಆಗಿ ಆಯ್ಕೆಯಾಗಿದ್ದಾರೆ. ಹೀಗಿದೆ ಸ್ಟಾರ್ ಕ್ಯಾಂಪೇನರ್ ಗಳ ಪಟ್ಟಿ ಮಲ್ಲಿಕಾರ್ಜುನ ಖರ್ಗೆ ಡಿ.ಕೆ. ಶಿವಕುಮಾರ್ ಅಮರಿಂದರ್ ಸಿಂಗ್ ರಾಜಾ ವೇರಿಂಗ್ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಅಖಿಲೇಶ್ ಪ್ರಸಾದ್ ಸಿಂಗ್ ಸಲ್ಮಾನ್ ಖುರ್ಷಿದ್ ಪ್ರಿಯಾಂಕಾ ಗಾಂಧಿ ವಾದ್ರಾ ಜೆ.ಪಿ. ಅಗರ್ವಾಲ್ ಕೆ.ಸಿ. ವೇಣುಗೋಪಾಲ್ ಪವನ್ ಖೇರಾ ಅಜಯ್ ಮಾಕೆನ್ ಇಮ್ರಾನ್ ಪ್ರತಾಪ್‌ಗಢಿ ಖಾಜಿ ನಿಜಾಮುದ್ದೀನ್ ಕನ್ಹಯ್ಯಾ ಕುಮಾರ್ ದೇವೇಂದರ್ ಯಾದವ್ ಸುಪ್ರಿಯಾ ಶ್ರಿನಾಟೆ ಅಶೋಕ್ ಗೆಹ್ಲೋಟ್ ಮಿಸ್. ಅಲ್ಕಾ ಲಾಂಬಾ ಹರೀಶ್ ರಾವತ್ ಇಮ್ರಾನ್ ಮಸೂದ್ ಮುಕುಲ್ ವಾಸ್ನಿಕ್ ಸಂದೀಪ್ ದೀಕ್ಷಿತ್ ಮಿಸ್…
BREAKING : ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಮತ್ತೊಂದು ಬೆಚ್ಚಬೀಳಿಸುವ ದರೋಡೆ : ಮೈಸೂರಿನಲ್ಲಿ ಕಾರು ಅಡ್ಡಗಟ್ಟಿ ರಾಬರಿ.!
ಮೈಸೂರು : ರಾಜ್ಯದಲ್ಲಿ ಮತ್ತೊಂದು ಭೀಕರ ದರೋಡೆ ನಡೆದಿದ್ದು, ಮೈಸೂರಿನಲ್ಲಿ ಹಾಡು ಹಗಲೇ ಕಾರನ್ನು ಅಡ್ಡಗಟ್ಟಿ ಮುಸುಕು ದಾರಿಗಳು ದರೋಡೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಹಾರೋಹಳ್ಳಿ ಬಳಿ ಈ ಒಂದು ಬೆಚ್ಚಿಬಿಳಿಸುವ ಘಟನೆ ನಡೆದಿದೆ. ಹೌದು ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಮೈಸೂರಿನಲ್ಲಿ ಕಾರು ಅಡ್ಡಗಟ್ಟಿ ಮುಸುಕು ಧಾರಿಗಳು ರಾಬರಿ ನಡೆಸಿದ್ದಾರೆ. ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಸುತ್ತ ಮುತ್ತ ಇನ್ನು ಅನೇಕ ವಾಹನಗಳಿದ್ದರೂ ಕೂಡ ಉಸ್ಕೊ ದಾರಿಗಳು ಲೆಕ್ಕಿಸದೆ ಕಾರಣ ಅಡಗಟ್ಟಿ ದರೋಡೆ ನಡೆಸುತ್ತಿರುವ ದೃಶ್ಯ ನಿಜಕ್ಕೂ ಬೆಚ್ಚಿ ಬೀಳಿಸುವಂತಿದೆ. ಅಕ್ಕಪಕ್ಕದ ವಾಹನಗಳ ಲ್ಲಿರುವ ಜನರು ಕೂಗಾಟ ನಡೆಸುತ್ತಿದ್ದರು ಕೂಡ ಲೆಕ್ಕಿಸದೆ ದರೋಡೆಕೋರರು ಕಾರನ್ನು ಅಡ್ಡಗಟ್ಟಿ ಮಾಡಿ ದರೋಡೆ ನಡೆಸಿದ್ದಾರೆ. ಸದ್ಯ ಹಣ ಕಳೆದುಕೊಂಡ ಕಾರಿನ ವ್ಯಕ್ತಿಯನ್ನು ಪೋಲೀಸರು ವಿಚಾರಣೆ ನಡೆಸುತ್ತಿದ್ದು ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ…
ವಾಷಿಂಗ್ಟನ್ : CDC ಕ್ಯಾಲಿಫೋರ್ನಿಯಾದಲ್ಲಿ H5N1 ನ ಹೊಸ ಪ್ರಕರಣವನ್ನು ದೃಢಪಡಿಸಿದೆ. ಇತ್ತೀಚಿನ ಪ್ರಕರಣವು ಸ್ಯಾನ್ ಫ್ರಾನ್ಸಿಸ್ಕೋದ ಮಗುವಿಗೆ ಸಂಬಂಧಿಸಿದೆ. CDC ಹಕ್ಕಿ ಜ್ವರ ಹರಡುವಿಕೆಯಿಂದ ಕ್ಯಾಲಿಫೋರ್ನಿಯಾ ಹೆಚ್ಚು ಪರಿಣಾಮ ಬೀರಿದೆ ಎಂದು ಡೇಟಾ ತೋರಿಸುತ್ತದೆ. ಒಟ್ಟು 38 ಪ್ರಕರಣಗಳು ವರದಿಯಾಗಿವೆ. ಕ್ಯಾಲಿಫೋರ್ನಿಯಾದಲ್ಲಿ H5N1 ನ ಹೊಸ ಮಾನವ ಪ್ರಕರಣವನ್ನು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು (CDC) ದೃಢಪಡಿಸಿವೆ. ಇದರಿಂದ ದೇಶಾದ್ಯಂತ ಒಟ್ಟು ಪ್ರಕರಣಗಳ ಸಂಖ್ಯೆ 67 ಕ್ಕೆ ತಲುಪಿದೆ. ಸಿಡಿಸಿ ದತ್ತಾಂಶವು ಕ್ಯಾಲಿಫೋರ್ನಿಯಾವು ನಡೆಯುತ್ತಿರುವ ಹಕ್ಕಿ ಜ್ವರ ಏಕಾಏಕಿ ಹೆಚ್ಚು ಹಾನಿಗೊಳಗಾಗಿದೆ ಎಂದು ತೋರಿಸುತ್ತದೆ. ಒಟ್ಟು ಪ್ರಕರಣಗಳಲ್ಲಿ 38 ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ವರದಿಯಾದ ಪ್ರಕರಣವು ಸ್ಯಾನ್ ಫ್ರಾನ್ಸಿಸ್ಕೋದ ಮಗುವಿಗೆ ಸಂಬಂಧಿಸಿದೆ. ಅವರಿಗೆ ಜ್ವರ ಮತ್ತು ಕಾಂಜಂಕ್ಟಿವಿಟಿಸ್ ಇತ್ತು ಆದರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿಲ್ಲ ಮತ್ತು ಈಗ ಗುಣಮುಖರಾಗಿದ್ದಾರೆ. ವರದಿಯಾದ ಹೆಚ್ಚಿನ ಪ್ರಕರಣಗಳು ಅನಾರೋಗ್ಯ ಪೀಡಿತ ಹೈನು ಹಸುಗಳು ಮತ್ತು ಕೋಳಿಗಳಿಂದ ಉಂಟಾದ ಸೋಂಕುಗಳನ್ನು ಒಳಗೊಂಡಿವೆ, ಆದಾಗ್ಯೂ ಅಪಾಯದಲ್ಲಿರುವ…
ಮಂಡ್ಯ :ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸೋಮವಾರ ಬೆಳಿಗ್ಗೆ ಜರುಗಿದೆ. ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು – ಮೈಸೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದ್ದು, ಪ್ರಯಾಣಿಕರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ KA- 10-F0520 ಬಸ್ ರುದ್ರಾಕ್ಷಿಪುರ ಗ್ರಾಮದ ಬಳಿ 8.45 ರ ವೇಳೆ ತೆರಳುತ್ತಿದ್ದಾಗ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯರು ಹಾಗೂ ವಾಹನ ಸವಾರರು ಮದ್ದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ವರದಿ : ಗಿರೀಶ್ ರಾಜ್ ಮಂಡ್ಯ
ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ಒದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25ನೇ ಸಾಲಿಗೆ -ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ಒದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25ನೇ ಸಾಲಿಗೆ -ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 20.12.2024ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡಿರುತ್ತಾರೆ. ಆದ ಕಾರಣ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15.02.2025 ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ bcwdhelpline@gmail.com ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ…
ಮುಂಬೈ : ಚಾಕು ಇರಿತದಿಂದ ಗಾಯಗೊಂಡು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಸೈಫ್ ಅಲಿಖಾನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದು, ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಇಂದು ಸಂಜೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ನಟ ಸೈಫ್ ಅಲಿ ಖಾನ್ ಚೂರಿ ಇರಿತ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಆರೋಪಿ ಮೊಹಮ್ಮದ್ ಶೆಹಜಾದ್ ನನ್ನು ಬಂಧಿಸಿದ್ದು, 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಆರೋಪಿ ಬಾಂಗ್ಲಾದೇಶದವನಾಗಿರುವುದರಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಪಿತೂರಿ ಇರಬಹುದು ಎಂದು ನಂಬಲು ಕಾರಣಗಳಿವೆ, ಆದ್ದರಿಂದ ಈ ಬಗ್ಗೆ ತನಿಖೆ ನಡೆಸುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ. “ಮುಂಬೈ ಪೊಲೀಸರ ಬೇಡಿಕೆಯಿಂದ ನಾವು ತೃಪ್ತರಾಗಿದ್ದೇವೆ. ಆರೋಪಿಯು ಸೆಲೆಬ್ರಿಟಿಯೊಬ್ಬರ ನಿವಾಸಕ್ಕೆ ಪ್ರವೇಶಿಸಿ…
ತುಮಕೂರು: ರಾಜ್ಯದಲ್ಲಿ ಯುವಜನತೆಯಲ್ಲಿ ಹೃದಯಾಘಾತದ ಪ್ರಕರಮಗಳು ಹೆಚ್ಚಾಗುತ್ತಿವೆ. ಇಂದು ಕಾಲೇಜಿನಿಂದ ಮನೆಗೆ ಬರುವಾಗಲೇ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ಸರ್ಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಮೈಥಿಲಿ(19) ಕಾಲೇಜು ಮುಗಿಸಿ ಮನೆಗೆ ಮರಳುತಿದ್ದಾಗಲೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೈಥಿಲಿ ಕಾಲೇಜಿನಿಂದ ಮನೆಗೆ ತೆರಳುತ್ತಿದಾಗ ಹೃದಯಾಘಾತ ಉಂಟಾಗಿದೆ. ಈ ಕಾರಣದಿಂದ ಅಲ್ಲೇ ಕುಸಿದು ಬಿದ್ದಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯೋ ಸಂದರ್ಭದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿಯ ಎಂಎಲ್ಸಿ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿಯಾಗಿದೆ. ಹೌದು ಸಿಐಡಿ ಡಿವೈಎಸ್ಪಿ ಪಿ. ಕೇಶವಮೂರ್ತಿ ಅವರಿಂದ ಯತಿಂದ್ರರಿಗೆ ನೋಟಿಸ್ ನೀಡಲಾಗಿದ್ದು, ಯತೀಂದ್ರ ಸಿದ್ದರಾಮಯ್ಯ ಈ ಒಂದು ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಶಿಕ್ಷಕರ ಕ್ಷೇತ್ರದಿಂದ ಎಂಎಲ್ಸಿ ಆಗಿ ಆಯ್ಕೆಯಾಗಿದ್ದ ಶ್ರೀನಿವಾಸಗೂ ನೋಟಿಸ್ ನೀಡಲಾಗಿದೆ. ಅಲ್ಲದೇ ಕಲಬುರ್ಗಿ ಮೂಲದ ಎಂಎಲ್ಸಿ ಬೇಗಂಗು ಸಿಐಡಿನ ನೋಟಿಸ್ ನೀಡಲಾಗಿದೆ.
ಮಂಡ್ಯ :ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸೋಮವಾರ ಬೆಳಿಗ್ಗೆ ಜರುಗಿದೆ. ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು – ಮೈಸೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದ್ದು, ಪ್ರಯಾಣಿಕರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ KA- 10-F0520 ಬಸ್ ರುದ್ರಾಕ್ಷಿಪುರ ಗ್ರಾಮದ ಬಳಿ 8.45 ರ ವೇಳೆ ತೆರಳುತ್ತಿದ್ದಾಗ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯರು ಹಾಗೂ ವಾಹನ ಸವಾರರು ಮದ್ದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ವರದಿ : ಗಿರೀಶ್ ರಾಜ್ ಮಂಡ್ಯ











