Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ದೆಹಲಿಯ ಮಾಜಿ ಸಚಿವ ಮತ್ತು ಎಎಪಿ ಮುಖಂಡ ಕೈಲಾಶ್ ಗೆಹ್ಲೋಟ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಜಯ್ ಪಾಂಡಾ, ದುಶ್ಯಂತ್ ಗೌತಮ್, ಹರ್ಷ್ ಮಲ್ಹೋತ್ರಾ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಅವರು, ನಾನು ಯಾವುದೇ ಬಾಹ್ಯ ಒತ್ತಡದಿಂದ ಬಿಜೆಪಿಗೆ ಸೇರಲಿಲ್ಲ, ಆದರೆ ಎಎಪಿ ತನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಂಡಿದ್ದರಿಂದ. ನಾನು ಆರಂಭದಲ್ಲಿ ಸಾಮಾನ್ಯ ಜನರ ಸೇವೆಗಾಗಿ ಎಎಪಿಗೆ ಸೇರಿಕೊಂಡೆ, ಆದರೆ ಈಗ, ಪಕ್ಷವು ತನ್ನ ಮೂಲ ಧ್ಯೇಯದಿಂದ ಸಂಪರ್ಕ ಕಡಿದುಕೊಂಡಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ನಾವು ರಾಜ್ಯದಿಂದ ಕೇಂದ್ರಕ್ಕೆ ₹4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು ₹59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ರಾಜ್ಯದಿಂದ ಕೇಂದ್ರಕ್ಕೆ ₹4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು ₹59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ. ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ? ಎಂದು ಪ್ರಶ್ನಿಸಿದ್ದಾರೆ. ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡ್ ತಪ್ಪಿಸುವುದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ 1 ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು.…
ಬೆಂಗಳೂರು : ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡ್ ತಪ್ಪಿಸುವುದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅನ್ನಭಾಗ್ಯ ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ 1 ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು BJP Karnataka ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥಾ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ? ಕೇಂದ್ರ ಸಚಿವ H D Kumaraswamy ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಕುಮಾರಸ್ವಾಮಿ ಅವರು ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ? ನಾವು ರಾಜ್ಯದಿಂದ ಕೇಂದ್ರಕ್ಕೆ ₹4.50 ಲಕ್ಷ…
ಬೆಂಗಳೂರು : ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ವಿ.ಸೋಮಣ್ಣ ಮುಖಾಮುಖಿ ಭೇಟಿಯಾಗಿದ್ದಾರೆ. ಬೆಂಗಳುರಿನ ಖಾಸಗಿ ಹೋಟೆಲ್ ನಲ್ಲಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿಯಾಗಿದ್ದು, ಮುಡಾ ಸೈಟ್ ಬಗ್ಗೆ ಮಾತನಾಡಿದ್ದಾರೆ. ಮುಡಾ ಸೈಟ್ ಬಗ್ಗೆ ಮಾತನಾಡಿದ ಸೋಮಣ್ಣ ಅವರು, ನಾನು ಅವತ್ತೆ ಹೇಳಿದ್ದೆ. ಸೆರೆಂಡರ್ ಮಾಡಿ ಅಂತ, ಅವತ್ತು ಸೆರೆಂಡರ್ ಮಾಡಿದ್ರೆ ಇವತ್ತು ಇಷ್ಟೆಲ್ಲಾ ಅಗುತ್ತಿತ್ತಾ ಎಂದು ಹೇಳಿದ್ರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕಾಯ್ದೆ ಪ್ರಕಾರ ದುಡ್ಡು ಕೊಡಬೇಕಿತ್ತು. ಅವರು ಬರೇ 14 ಸೈಟ್ ಕೊಟ್ಟಿದ್ದಾರೆ ಎಂದು ಉತ್ತರಿಸಿದ್ದಾರೆ.
ಬೆಂಗಳೂರು : ರಾಜ್ಯಾದ್ಯಂತ ರಾಜ್ಯ ಸರ್ಕಾರವು ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗಲಿದೆ ಎಂದು ತಿಳಿದುಬಂದಿದೆ. ಐಟಿ ಹೆಸರಿನಲ್ಲಿ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗುವುದು. ಐಟಿ, ಜಿಎಸ್ ಟಿ ಇರುವ 10 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರಕ್ಆರ ಮುಂದಾಗಿದೆ. `BPL ರೇಷನ್ ಕಾರ್ಡ್’ ಪಡೆಯಲು ಇರುವ ಮಾನದಂಡಗಳೇನು? ಇಲ್ಲಿದೆ ಮಾಹಿತಿ 1. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ; 2. ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು. 3. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000…
ಹೈದರಾಬಾದ್ : ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಆಂಧ್ರಪ್ರದೇಶ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಪ್ರಕಾಶಂ ಜಿಲ್ಲೆಯ ಮಡ್ಡಿಪಾಡುವಿನಲ್ಲಿ ದಾಖಲಾಗಿರುವ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದರು. ಎಪಿ ಹೈಕೋರ್ಟ್ ಸೋಮವಾರ ಈ ಅರ್ಜಿಯನ್ನು ವಜಾಗೊಳಿಸಿದೆ. ಬಂಧನದ ಬಗ್ಗೆ ಆತಂಕವಿದ್ದರೆ ಜಾಮೀನು ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ. ರಾಮ್ ಗೋಪಾಲ್ ವಿರುದ್ಧ ಇದೇ ತಿಂಗಳ 11ರಂದು ಸಾಂಬು ಪ್ರಕಾಶಂ ಜಿಲ್ಲೆಯ ಮಡ್ಡಿಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2024ರ ಮಾರ್ಚ್‌ನಲ್ಲಿ ಚಂದ್ರಬಾಬು, ನಾರಾ ಲೋಕೇಶ್ ಮತ್ತು ಬ್ರಹ್ಮಿಣಿ ಚಿತ್ರದ ಪ್ರಚಾರದ ಭಾಗವಾಗಿ ಅನುಚಿತ ಪೋಸ್ಟ್‌ಗಳನ್ನು ಹಾಕಿದ್ದಾರೆ ಎಂದು ಆರೋಪಿಸಿ ಟಿಡಿಪಿ ಮಂಡಲ ಕಾರ್ಯದರ್ಶಿ ರಾಮಲಿಂಗಂ ದೂರು ದಾಖಲಿಸಿದ್ದರು ಈ ತಿಂಗಳ 13 ರಂದು ವರ್ಮಾ ಅವರಿಗೆ ಹೈದರಾಬಾದ್‌ನಲ್ಲಿ. ಆ ನೋಟಿಸ್‌ನಲ್ಲಿ ಇದೇ 19ರಂದು ತನಿಖೆಗೆ ಹಾಜರಾಗುವಂತೆ ತಿಳಿಸಲಾಗಿತ್ತು.
ಜೋಧಪುರ : ರಾಜಸ್ಥಾನದ ಜೋಧ್‌ಪುರ ಜಿಲ್ಲೆಯಿಂದ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರೂ ಒಟ್ಟಾಗಿ ಜೈಪುರ ಮತ್ತು ಜೋಧ್‌ಪುರ ನಡುವೆ ಓಡುವ ಜೈಪುರ-ಜೋಧ್‌ಪುರ ಇಂಟರ್‌ಸಿಟಿಯ ಮುಂದೆ ಹಾರಿದರು. ಕೌಟುಂಬಿಕ ಕಲಹದಿಂದ ಮಹಿಳೆ ಈ ರೀತಿ ನಡೆದುಕೊಂಡಿರಬಹುದು ಎಂದು ಪೊಲೀಸರು ಭಾವಿಸಿದ್ದಾರೆ. ಕಪ್ರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಲ್ಲಿ 29 ವರ್ಷದ ಪಟ್ಟುದೇವಿ ಅವರ 5 ವರ್ಷದ ಮಗ ಲುವ್ಜೀತ್ ಮತ್ತು 3 ವರ್ಷದ ಮಗಳು ಲಕ್ಷಿತಾ ಅವರೊಂದಿಗೆ ಜೈಪುರ-ಜೋಧ್‌ಪುರ ಇಂಟರ್‌ಸಿಟಿ ರೈಲಿನ ಅಸರ್ನಾಡಾ ಮತ್ತು ಜಿಜಾವಾಲ್ ನಿಲ್ದಾಣದ ನಡುವೆ ಬಂದರು. ತಲೆಗೆ ಪೆಟ್ಟು ಬಿದ್ದಿದ್ದರಿಂದ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಎಷ್ಟು ಭೀಕರವಾಗಿತ್ತೆಂದರೆ ಮೂವರ ದೇಹಗಳ ತುಂಡುಗಳು ಟ್ರ್ಯಾಕ್ ಮೇಲೆ ಹರಡಿಕೊಂಡಿವೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೂವರ ಶವಗಳನ್ನು ಶವಾಗಾರದಲ್ಲಿ ಇರಿಸಲಾಗಿದೆ. ಮಹಿಳೆಯ ಪತಿ ಮಧ್ಯಪ್ರದೇಶದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ.…
ಬೆಂಗಳೂರು : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 2024 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. ನಾಯಕ್ ಅವರು ಆಹಾರ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕುರಿತು ಚರ್ಚಿಸಲು ಕರೆಯಲಾಗಿದ್ದ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿ ಪಡಿಸಿದ್ದು ರಾಜ್ಯ ಸರ್ಕಾರ ಆದೇಶಿಸಿದೆ. ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು. ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಕಾರ್ಯಕ್ಕೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ನೋಂದಣಿಗೆ ಯಾವುದೇ…
ಬೆಂಗಳೂರು : ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಇಲಾಖೆಯು ಸ್ಟಾರ್ಟಪ್ ಗಳು ಹಾಗೂ ಜಾಗತಿಕ ಬಂಡವಾಳದಾರರನ್ನು ಒಂದೇ ವೇದಿಕೆಯಡಿ ತರುವ ಸದುದ್ದೇಶದಿಂದ ನವೆಂಬರ್ 19 ರಿಂದ 21 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ “ಬೆಂಗಳೂರು ಟೆಕ್ ಸಮ್ಮಿಟ್” (ಬಿಟಿಎಸ್ – 2024) ಅನ್ನು ಆಯೋಜಿಸಲಾಗಿದೆ. ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ. ಆಸ್ಟ್ರೇಲಿಯಾ, ಬ್ರಿಟನ್, ಫ್ರಾನ್ಸ್, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್, ಇಸ್ರೇಲ್, ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಉದ್ಘಾಟನೆ ಸಮಾರಂಭದಲ್ಲಿ ಜರ್ಮನಿಯ ಆರ್ಥಿಕ ಇಲಾಖೆಯ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ ನವೋದ್ಯಮಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗೋಷ್ಠಿಗಳು ನಡೆಯಲಿವೆ. ಜಗತ್ತಿನಾದ್ಯಂತ ಪ್ರತಿಷ್ಠಿತ ಕಂಪನಿಗಳು, ಬಂಡವಾಳ ಸಂಸ್ಥೆಗಳು ಸೇರಿ 50 ಕ್ಕೂ ಹೆಚ್ಚು ಜಾಗತಿಕ ಹೂಡಿಕೆದಾರರು, ಜಾಗತಿಕ ನಿಯೋಗದ ಸದಸ್ಯರು ಈ ಸಮ್ಮಿಟ್’ನಲ್ಲಿ ಭಾಗವಹಿಸಲಿದ್ದಾರೆ. ಆಸ್ಟ್ರೇಲಿಯಾ, ಯುನೈಟೆಡ್ ಕಿಂಗ್ ಡಮ್,…
ಬೆಂಗಳೂರು : ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. 1. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ; 2. ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು. 3. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು. 4. ಜೀವನೋಪಾಯಕ್ಕಾಗಿ…











