Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ಗ್ಲೋಬಲ್ ಟೆಕ್ ಪಾರ್ಕ್, ನಿಮಾನ್ಸ್ ಮತ್ತು ಜಯದೇವ ಉಪಕೇಂದ್ರಗಳಲ್ಲಿ ತುರ್ತ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 16.11.2024 ರಿಂದ 18.11.2024 ವರೆಗೆ ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದಿನಿಂದ ಮೂರು ದಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಎಕೋವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ ಮೆಂಟ್ ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ , ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ, ಹೋಟೆಲ್, ಕಲ್ಯಾಣಿ ಟೆಕ್ ಪಾರ್ಕ್, ಎಕ್ಸೋರ ಟೆಕ್ ಪಾರ್ಕ್, ಒರೆಕಲ್ ಟೆಕ್ ಪಾರ್ಕ್, ಸೆಸ್ನಾ ಟೆಕ್ ಪಾರ್ಕ್, ಕಾಡುಬೀಸನಹಳ್ಳಿ, ಐಬಿಎಮ್, ಅಸ್ಸೆಂಚರ್, ಐಬಿಎಮ್ ‘ಡಿ’ ಬ್ಲಾಕ್, ಐಬಿಎಮ್, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್ ಮೆಂಟ್, ಬಿ.ಜಿ.ರಸ್ತೆ, ಬಿಟಿಎಂ 1ನೇ ಹಂತ, ವಕೀಲ್ ಸ್ಕೋಯರ್ ಬಿಲ್ಡಿಂಗ್, ಮಡಿವಾಳ…
ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸವಗಳಲ್ಲಿ ಉಚಿತ ಪ್ರಯಾಣದ ಕುರಿತು ಸುಳಿವು ನೀಡಿದ್ದರು. ಆದರೆ ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿ, ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ ಪ್ರಯಾಣ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಸದ್ಯ ಯೋಜನೆಯ ಅಡಿ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿದೆ ಎಂದರು. ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ. ನಿನ್ನೆ ನಡೆದ ಸಂವಾದದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಈ ವಿಷಯ ಹೇಳಿದ್ದಾರೆ. ಈ ಕುರಿತಂತೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದಾಗ ಕೇಳುತ್ತೇನೆ.ಆದರೆ ಪುರುಷರಿಗೆ ಉಚಿತ ಪ್ರಯಾಣದ ಬಗ್ಗೆ ಯಾವ ಪ್ರಸ್ತಾವನೆಯೂ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಸಾರಿಗೆ ಇಲಾಖೆ ಸಚಿವ…
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ನೀಡಿದೆ. ಹೌದು, ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ನಗರದಲ್ಲಿರುವ ತಮ್ಮ ಮನೆಗೆ ಬಂದು ಲೋಕಾಯುಕ್ತ ಇನ್‌ಪೆಕ್ಟರ್ ನೀಡಿದ್ದ ನೋಟಿಸ್ ಅನ್ನು ಸಚಿವ ಜಮೀರ್ ಸ್ವೀಕರಿಸಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸಚಿವರಿಗೆ ಪೊಲೀಸರು ಸೂಚಿಸಿದ್ದಾರೆ. ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಇಡಿ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್ ನೀಡಿದ್ದಾರೆ. ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ನವೆಂಬರ್ 15 ರಂದು ನಡೆಯಿತು. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಈ ಪಂದ್ಯದಲ್ಲಿ ತಕಗಳನ್ನು ಬಾರಿಸಿದರು ಮತ್ತು T20I ಪಂದ್ಯದ ಇನ್ನಿಂಗ್ಸ್‌ನಲ್ಲಿ 2 ಶತಕಗಳನ್ನು ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್‌ಗಳೆನಿಸಿದರು. ಆದರೆ, ಇನಿಂಗ್ಸ್ ವೇಳೆ ಸಂಜು ಸ್ಯಾಮ್ಸನ್ ತಮ್ಮ ತೀಕ್ಷ್ಣವಾದ ಹೊಡೆತದಿಂದ ಅಭಿಮಾನಿಯೊಬ್ಬರನ್ನು ಗಾಯಗೊಳಿಸಿದರು. ಮಹಿಳಾ ಅಭಿಮಾನಿ ಸ್ಟ್ಯಾಂಡ್‌ನಲ್ಲಿ ಕಟುವಾಗಿ ಅಳಲು ಪ್ರಾರಂಭಿಸಿದರು, ಇದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. https://twitter.com/i/status/1857456405583983021 ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಸಂಜು 28 ಎಸೆತಗಳಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅರ್ಧಶತಕ ಪೂರೈಸಿದರು. ಅರ್ಧಶತಕ ಪೂರೈಸಿದ ಬಳಿಕ ಮತ್ತೊಂದು ಗಗನಚುಂಬಿ ಸಿಕ್ಸರ್ ಬಾರಿಸಿದರು. ಆದರೆ ಈ ವೇಳೆ ಚೆಂಡು ಕ್ರೀಡಾಂಗಣದಲ್ಲಿ ಕುಳಿತಿದ್ದ ಮಹಿಳಾ ಅಭಿಮಾನಿಯೊಬ್ಬರಿಗೆ ಬಡಿದಿದೆ. ಮಹಿಳಾ ಅಭಿಮಾನಿಯ ಕೆನ್ನೆಗೆ ಗಾಯವಾಯಿತು, ನಂತರ ಅವರು ಸ್ಟ್ಯಾಂಡ್‌ನಲ್ಲಿ ಕಟುವಾಗಿ ಅಳಲು ಪ್ರಾರಂಭಿಸಿದರು.…
ತುಮಕೂರು: ತುಮಕೂರಿನಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು, ಹುಡುಗಿ ವಿಚಾರಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ತುಮಕೂರಿನ ಮರಳೂರು ದಿಣ್ಣೆಯಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿಕೊಂಡು ಕೊಲೆ ಮಾಡಿದ್ದಾರೆ. ಹುಡುಗಿಯ ವಿಚಾರಕ್ಕೆ 20 ವರ್ಷದ ರಿಹಾನ್ ಪಾಷಾನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಾತನಾಡಬೇಕಿದೆ ಬಾ ಎಂದು ಕರೆಸಿಕೊಂಡು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಮರಳೂರು ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತುಮಕೂರಿನ ತಿಲಕ್ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಬೈ : ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ ರೋಹಿತ್ ಪತ್ನಿ ರಿತಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಮತ್ತು ರಿತಿಕಾ ದಂಪತಿಗೆ ಇದು ಎರಡನೇ ಮಗು. ಇದಕ್ಕೂ ಮುನ್ನ ಅವರಿಗೆ ಸಮೈರಾ ಎಂಬ ಮಗಳೂ ಇದ್ದಾಳೆ. ಸಮೈರಾ 30 ಡಿಸೆಂಬರ್ 2018 ರಂದು ಜನಿಸಿದರು. ಮಾಧ್ಯಮ ವರದಿಗಳ ಪ್ರಕಾರ, ರೋಹಿತ್ ಅವರ ಎರಡನೇ ಮಗು ನವೆಂಬರ್ 15 ರಂದು ಅಂದರೆ ಶುಕ್ರವಾರ ಜನಿಸಿತು. ಆದರೆ, ಈ ಬಗ್ಗೆ ರೋಹಿತ್ ಅಥವಾ ರಿತಿಕಾ ತಂಡದಿಂದ ಅಧಿಕೃತ ಮಾಹಿತಿ ಬಂದಿಲ್ಲ. ನವೆಂಬರ್ 22 ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಭಾರತವನ್ನು ಮುನ್ನಡೆಸಲಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಭಾರತ ತಂಡ ಆಸ್ಟ್ರೇಲಿಯಾ ತಲುಪಿದೆ, ಆದರೆ ರೋಹಿತ್ ಭಾರತದಲ್ಲಿಯೇ ಉಳಿದುಕೊಂಡಿದ್ದಾರೆ.
ನವದೆಹಲಿ : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಕಳೆದ 10 ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ನಿರಂತರವಾಗಿ ಅಗ್ಗವಾಗುತ್ತಿವೆ. ಅಚ್ಚರಿಯ ವಿಷಯವೆಂದರೆ ಕೇವಲ 10 ದಿನಗಳಲ್ಲಿ ಚಿನ್ನವು ಅದರ ಮೇಲಿನ ಹಂತದಿಂದ ಶೇಕಡಾ 6 ರಷ್ಟು ಅಗ್ಗವಾಗಿದೆ ಮತ್ತು 4750 ರೂಪಾಯಿಗಳಷ್ಟು ಕಡಿಮೆಯಾಗಿದೆ. ಇದೇ ವೇಳೆ ಬೆಳ್ಳಿ ದಾಖಲೆ ಕುಸಿತ ಕಂಡಿದ್ದು, 10 ದಿನಗಳಲ್ಲಿ 10 ಸಾವಿರ ರೂ. ಬೆಳ್ಳಿ 1 ಲಕ್ಷ ದಾಟಿತ್ತು ಆದರೆ ಈಗ ಪ್ರತಿ ಕೆಜಿಗೆ 90 ಸಾವಿರ ರೂ. 79,700 ತಲುಪಿದ್ದ ಚಿನ್ನ ಈಗ ಸುಮಾರು 74,950 ರೂ.ಗೆ ಮಾರಾಟವಾಗುತ್ತಿದೆ. ನವೆಂಬರ್ 4 ರಂದು ಅಮೆರಿಕದಲ್ಲಿ ಚುನಾವಣೆಗಳು ಮತ್ತು ಡೊನಾಲ್ಡ್ ಟ್ರಂಪ್ ಅವರ ವಿಜಯದ ನಂತರ, ಬಿಟ್‌ಕಾಯಿನ್ ಬೆಲೆಗಳು ನಿರಂತರವಾಗಿ ಏರುತ್ತಿವೆ, ಆದರೆ ಸುರಕ್ಷಿತ ಆಸ್ತಿಯ ಚಿನ್ನ ಮತ್ತು ಬೆಳ್ಳಿಯ ದರಗಳು ನಿರಂತರವಾಗಿ ಕುಸಿಯುತ್ತಿವೆ. ರೂಪಾಯಿಯ ಅನುಕ್ರಮ ಕುಸಿತ ಮತ್ತು ಡಾಲರ್‌ನ ಏರಿಕೆಯೊಂದಿಗೆ ವೇಗವನ್ನು ಕಾಯ್ದುಕೊಳ್ಳುವುದು, ಚಿನ್ನ ಮತ್ತು ಬೆಳ್ಳಿ ತಮ್ಮ ವೇಗವನ್ನು…
ಬಳ್ಳಾರಿ : ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 97 ಜನರಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಜಾಮೀನು ಮಂಜೂರು ಮಾಡಿದ್ದು, ಇಂದು ಜೈಲಿನಿಂದ ಬಿಡುಗಡೆ ಅಗಲಿದ್ದಾರೆ. 97 ಜನರ ಜಾಮೀನಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಕೆಳಹಂತದ ನ್ಯಾಯಾಲಯದಿಂದ ಬಿಡುಗಡೆ ಆದೇಶ ಬಂದಿದ್ದು, ಇಂದು ಬಿಡುಗಡೆ ಆಗಲಿದ್ದಾರೆ. ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಜಾಮೀನಾಗಿ ಅರ್ಜಿ ಸಲ್ಲಿಸಲಾಗಿತ್ತು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಪ್ರಕರಣದ ಎ1 ಆರೋಪಿ ಮಂಜುನಾಥ್ ಹೊರತುಪಡಿಸಿ 97 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಮಂಜುನಾಥ್ ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ. ಈ ಕುರಿತು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ…
ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ 10 ಮಕ್ಕಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಕಾಲೇಜಿನ ಎನ್‌ಐಸಿಯು (ಶಿಶು ವಾರ್ಡ್) ಒಳಗಿನ ಘಟಕದಲ್ಲಿ ರಾತ್ರಿ 10.30 ರಿಂದ 10.45 ರ ನಡುವೆ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.ಪ್ರಾಥಮಿಕ ಮಾಹಿತಿ ಪ್ರಕಾರ 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಈ ವೇಳೆ ವಾರ್ಡ್‌ನಲ್ಲಿದ್ದ ಸಿಬ್ಬಂದಿ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಒಳಗಿನ ಘಟಕದ ಕೆಲವು ಮಕ್ಕಳನ್ನು ಸಹ ರಕ್ಷಿಸಲಾಗಿದೆ, ಇದುವರೆಗೆ 40 ಮಕ್ಕಳನ್ನು ರಕ್ಷಿಸಲಾಗಿದೆ. https://twitter.com/i/status/1857594827334176847 ಝಾನ್ಸಿ ವಿಭಾಗದ ಆಯುಕ್ತ ಬಿಮಲ್ ಕುಮಾರ್ ದುಬೆ ಮಾತನಾಡಿ, ಘಟನೆಯ ಸಮಯದಲ್ಲಿ 54-55 ಮಕ್ಕಳು ವಾರ್ಡ್‌ನಲ್ಲಿ ದಾಖಲಾಗಿದ್ದರು. ಗಾಯಗೊಂಡಿರುವ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಝಾನ್ಸಿ ವಿಭಾಗದ ಡಿಐಜಿ ಕಲಾನಿಧಿ ನೈತಾನಿ ತಿಳಿಸಿದ್ದಾರೆ. https://twitter.com/i/status/1857585411813679273 ಆರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು,…
ಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 14 ನವಂಬರ್ 2024ರಿಂದ 24 ಜನವರಿ 2025 ರವರೆಗೆ, 10 ವಾರಗಳ ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ’ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಒಂದು ದಿನ “ಮಕ್ಕಳ ವಿಶೇಷ ಗ್ರಾಮ ಸಭೆ ನಡೆಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಭಾಗವಹಿಸುವಿಕೆ ಹಕ್ಕು ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿಗಳಿಂದ ಮಕ್ಕಳ ಗ್ರಾಮ ಸಭೆಯನ್ನು ನಡೆಸಲು 2006 ರಲ್ಲಿ ಉಲ್ಲೇಖ(1) ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅಧ್ಯಾಯ || ರ ಪ್ರಕರಣ 3(ಎಚ್)(2)(1) (2015ರ ತಿದ್ದುಪಡಿಯಂತೆ)ರಲ್ಲಿ ನಿರ್ದೇಶಿಸಿರುವಂತೆ ಪ್ರಮುಖವಾದ ನಿಲುವನ್ನು ತೆಗೆದುಕೊಂಡಿದೆ. ಇದು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ 1989, ಭಾರತದ ಸಂವಿಧಾನದಲ್ಲಿ ಮಕ್ಕಳಿಗಿರುವ ಹಕ್ಕುಗಳನ್ನು ಮಾನ್ಯ ಮಾಡುವುದರಲ್ಲಿ ಮಹತ್ತರವಾದ ಹೆಜ್ಜೆಯಾಗಿದೆ. 2006ರಲ್ಲಿ ಉಲ್ಲೇಖ(2)ರ ಸುತೋಲೆಯನ್ನು ಹೊರಡಿಸುವುದರ ಮೂಲಕ ಗ್ರಾಮೀಣಾಭಿವೃದ್ಧಿಯಲ್ಲಿ ಮಕ್ಕಳ ಭಾಗವಹಿಸುವಿಕೆಗೆ ಅವಕಾಶ ನೀಡಲಾಗಿದೆ. 2006 ರಿಂದ…













