Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಅನಧಿಕೃತ ಕ್ಲಿನಿಕ್ ಮತ್ತು ಮೆಡಿಕಲ್‌ಗಳು ಕಂಡು ಬಂದ ಕುರಿತು ವರದಿಯಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಹಲವು ನಕಲಿ ಕ್ಲಿನಿಕ್ ಗಳನ್ನು ಸೀಜ್ ಮಾಡಿದ್ದಾರೆ. ಬೇರೆ ರಾಜ್ಯಗಳಿಂದ ನಕಲಿ ವೈದ್ಯಕೀಯ ಪ್ರಮಾಣಪತ್ರ ಪಡೆದು ಬೆಂಗಳೂರಿನಲ್ಲಿ ಬಂದು ಕಾರ್ಯನಿರ್ವಹಿಸುತ್ತಿದ್ದ ನಕಲಿ ಕ್ಲಿನಿಕ್‌ಗಳನ್ನು ಸೀಜ್ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಜನರ ಜೀವದ ಜೊತೆಗೆ ಆಟವಾಡುವ ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನಕಲಿ ವೈದ್ಯರ ತಡೆಗೆ ಕಾನೂನು ತಿದ್ದುಪಡಿ ಮಾಡಿ ಕಠಿಣ ಕಾಯ್ದೆ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಜನರ ಆರೋಗ್ಯ ಸುರಕ್ಷತೆಗೆ ಪ್ರಾಮುಖ್ಯತೆ ನೀಡುವ ನಮ್ಮ ಸರ್ಕಾರ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯುವುದು ನಮ್ಮ ಆದ್ಯತೆಯಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಕೂಡ ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಮುದಾಯ ಕಾಮಗಾರಿಯಲ್ಲಿ ಪಾರದರ್ಶಕತೆ ತರಲು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಾಂಶವನ್ನು ಅಳವಡಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಮುದಾಯ ಕಾಮಗಾರಿಗಳಲ್ಲಿ ಎಷ್ಟು ಮಂದಿ ಭಾಗವಹಿಸಿದ್ದಾರೆ ಎಂಬ ನಿಖರವಾದ ಲೆಕ್ಕವನ್ನು ಹೆಡ್ ಕೌಂಟ್ ವ್ಯವಸ್ಥೆ ಮೂಲಕ ಎಐ ತಂತ್ರಾಂಶವೇ ದಾಖಲಿಸಿಕೊಳ್ಳುತ್ತದೆ. ಇಲಾಖೆಯ ಈ ಪ್ರಯತ್ನದ ಫಲವಾಗಿ ಮನರೇಗಾದ ಕೂಲಿ ಹಣ ಸೋರಿಕೆಯಾಗುವ ಸಮಸ್ಯೆಗೆ ಕಡಿವಾಣ ಬೀಳಲಿದೆ ಎಂದು ಹೇಳಿದ್ದಾರೆ. ಮನರೇಗಾ ಯೋಜನೆ ಮೂಲಕ ಗ್ರಾಮೀಣ ಭಾಗದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಜತೆಗೆ, ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವಲ್ಲಿ ಕರ್ನಾಟಕ ದೇಶದಲ್ಲಿಯೇ ಗಮನ ಸೆಳೆಯುತ್ತಿದೆ. ಅಧಿಕ ಉದ್ಯೋಗ ಸೃಷ್ಟಿ ಹಾಗೂ ಹೆಚ್ಚಿನ ಕೂಲಿ ದರ ಒದಗಿಸುವುದರಲ್ಲಿ ಮುಂಚೂಣಿ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಈಗ ಹಾಜರಾತಿ ಲೋಪಗಳು, ಕೂಲಿ ಹಣ ದುರ್ಬಳಕೆಯ ಸಾಧ್ಯತೆಗಳನ್ನು ತಪ್ಪಿಸಲು ಎಐ ತಂತ್ರಾಂಶ ಜಾರಿ ಮೂಲಕ ನಮ್ಮ ಇಲಾಖೆ ಮಾದರಿ…
ಮುಂಬೈ : ನಿನ್ನೆ ತಡರಾತ್ರಿ ತಮ್ಮ ಮನೆಗೆ ನುಗ್ಗಿದ ದರೋಡೆಕೋರನಿಂದ ನಡೆದ ಗಲಾಟೆಯಲ್ಲಿ ಗಾಯಗಳಾಗಿ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ. ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೇರಿ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. https://twitter.com/ANI/status/1879725407731404839?ref_src=twsrc%5Egoogle%7Ctwcamp%5Eserp%7Ctwgr%5Etweet ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಯೊಬ್ಬ ನುಗ್ಗಿದ್ದು, ಈ ವೇಳೆ ಎಚ್ಚರವಾಗಿ ಸೈಫ್ ಅಲಿ ಖಾನ್ ಹೋಗಿ ನೋಡಿ ವೇಳೆ…
ಬೀದರ್: ಬೀದರ್ ನಲ್ಲಿ ಬೆಳ್ಳಂಬೆಳಗ್ಗೆ ಅಪರಿಚಿತರು SBI ಬ್ಯಾಂಕ್ ನ ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿ 93 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಕಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಬೀದರ್ ನ ಚಿದ್ರಿ ನಿವಾಸಿ ಗಿರಿ ವೆಂಕಟೇಶ (40) ಎಂದು ಗುರುತಿಸಲಾಗಿದೆ. ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಹಣ ಕೊಡದಿದ್ದಾಗ ಕಾರದ ಪುಡಿ ಎರಚಿ, ಬಳಿಕ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ರೌಡಿಶೀಟರ್ ಗಣಿ ಅಲಿಯಾಸ್ ಜಲಕ್ ನನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಾಗಲೂರಿನ ಅಪಾರ್ಟ್ ಮೆಂಟ್ ನಲ್ಲಿ ಗಣಿ ಅಲಿಯಾಸ್ ಜಲಕ್ ನನ್ನು ರೌಡಿಶೀಟರ್ ಬ್ರಿಜೇಶ್ ಎಂಬಾತ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬ್ರೀಜೇಶ್ ಕಂಟ್ರಿಮೇಟ್ ಪಿಸ್ತೂಲ್ ನಿಂದ 2 ಸುತ್ತು ಗುಂಡು ಹಾರಿಸಿ ಜಲಕ್ ಹತ್ಯೆ ಮಾಡಲಾಗಿದ್ದು, ಬಳಿಕ ಯುವಕರನ್ನು ಕರೆಸಿಕೊಂಡು ಶವ ಸಾಗಿಸಿ ತಮಿಳುನಾಡಿನ ನಿರ್ಜನ ಪ್ರದೇಶದಲ್ಲಿ ಶವ ಸುಟ್ಟುಹಾಕಿದ್ದ. ಸಂಪಿಗೆಯಳ್ಳಿಯಲ್ಲಿ ಗಣಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರಿಗೆ ಇದೀಗ ರೌಡಿಶೀಟರ್ ಬ್ರಿಜೇಶ್ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮುಂಬೈ : ನಿನ್ನೆ ತಡರಾತ್ರಿ ತಮ್ಮ ಮನೆಗೆ ನುಗ್ಗಿದ ದರೋಡೆಕೋರನಿಂದ ನಡೆದ ಗಲಾಟೆಯಲ್ಲಿ ಗಾಯಗಳಾಗಿ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೇರಿ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. https://twitter.com/ANI/status/1879725407731404839?ref_src=twsrc%5Egoogle%7Ctwcamp%5Eserp%7Ctwgr%5Etweet ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಯೊಬ್ಬ ನುಗ್ಗಿದ್ದು, ಈ ವೇಳೆ ಎಚ್ಚರವಾಗಿ ಸೈಫ್ ಅಲಿ ಖಾನ್ ಹೋಗಿ ನೋಡಿ ವೇಳೆ ದರೋಡೆಕೋರ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ…
ಬೆಂಗಳೂರು : ಹೆಚ್ಚಿನ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸುವ ಬಗ್ಗೆ ಮನವಿ ಮಾಡಲಾಗಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಕೆಲವು ಸರ್ಕಾರಿ ಕಛೇರಿಗಳಿಗೆ ಭೇಟಿ Prad ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದನ್ನು ಗಮನಿಸಲಾಗಿದ್ದು, ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡುಬಂದಿರುತ್ತದೆ ಮತ್ತು ಈ ಸಂಬಂಧ ಹಲವು ಮಹಿಳಾ ನೌಕರರ ಸಂಘಕ್ಕೆ ಮನವಿಗಳನ್ನು ಸಲ್ಲಿಸಿರುತ್ತಾರೆ. ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗಾಗಿ ವಿಕಾಸಸೌಧದಲ್ಲಿ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇದ್ದು, ಬೆಂಗಳೂರಿನ ಇತರೆ ಇಲಾಖೆಗಳ ಆಡಳಿತ ಕಛೇರಿಗಳಲ್ಲಿ ಈ ಸೌಲಭ್ಯ ಇರುವುದಿಲ್ಲ. ಮಹಿಳಾ ಸಿಬ್ಬಂದಿಗಳು ಅವರ ದೈನಂದಿನ ಜೀವನದಲ್ಲಿ ಈ ಕೆಳಕಂಡ ಕಾರಣಗಳಿಗಾಗಿ ಹಲವು ದೈಹಿಕ ಮತ್ತು ಮಾನಸಿಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. 1. ಮಾಸಿಕ ಋತುಚಕ್ರದ ಸಮಯ. 2. ಗರ್ಭಧರಿಸಿದ ಸಂದರ್ಭ, 3. ಗರ್ಭಪಾತವಾದ ಸಂದರ್ಭ. 4. ಹಸುಗೂಸುಗಳಿಗೆ ಹಾಲುಣಿಸುವ ತಾಯಂದಿರು. 5.…
ಬೀದರ್ : ಬೀದರ್ ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಎಟಿಎಂ ಗಳಿಗೆ ಹಣ ಹಾಕುವ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಗುಂಡಿನ ದಾಳಿಯಲ್ಲಿ ಬೀದರ್ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೀದರ್ ನಗರದ ಶಿವಾಜಿ ಚೌಕ್ ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂಗೆ ಹಣ ಹಾಕುವ ವ್ಯಕ್ತಿಯ ಮೇಲೆ ಗುಂಡುಹಾರಿಸಿದ್ದಾರೆ. 5 ಸುತ್ತು ಗುಂಡು ಹಾರಿಸಿದ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಗಿರಿ ವೆಂಕಟೇಶ್ ಎಂಬುವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ರಸ್ತೆ ದಾಟುತ್ತಿದ್ದ ಓಂಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ಕೆ.ಸಿ. ವಿರೇಂದ್ರ ಪಪ್ಪಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗದಲ್ಲಿ ರಸ್ತೆ ದಾಟುತ್ತಿದ್ದ ಓಂಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳು ಮಾಲಾಧಾರಿ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬಳ್ಳಾರಿ : ಬಳ್ಳಾರಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಮಂಜುನಾಥ್ ಬಲಗಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನಡೆದಿದೆ. 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೋರಣಗಲ್ ನಲ್ಲಿ ಸ್ಥಳ ಮಹಜರಿಗೆ ಹೋಗಿದ್ದ ವೇಳೆ ಪಿಸಿ ರಘು ಮೇಲೆ ಹಲ್ಲೆ ಮಾಡಿ ಆರೋಪಿ ಮಂಜುನಾಥ್ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಆತ್ಮರಕ್ಷಣೆಗಾಗಿ ತೋರಣಗಲ್ ಇನ್ಸ್ ಪೆಕ್ಟರ್ ಡಾಕೇಶ್ ಅವರು ಆರೋಪಿ ಮಂಜುನಾಥ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿ ಮಂಜುನಾಥ್ ಹಾಗೂ ಪಿಸಿ ರಘು ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳ್ಳಾರಿಯ ತೋರಣಗಲ್ ನ ಖಾಸಗಿ ಕಾರ್ಖಾನೆಯೊಂದರಲ್ಲಿ ಉತ್ತರ ಭಾರತದ ದಂಪತಿಗಳು ಕೆಲಸ ಮಾಡುತ್ತಿದ್ದರು. ಇವರಿಗೆ 5 ವರ್ಷದ ಪುತ್ರಿ ಇದ್ದರು. ಆಕೆಯನ್ನು ಪುಸಲಾಯಿಸಿ ಕರೆದೊಯ್ದಿರುವಂತ ಬಿಹಾರ ಮೂಲದ ವ್ಯಕ್ತಿಯೊಬ್ಬ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದಿಂದಾಗಿ ನಿತ್ರಾಣಗೊಂಡಿದ್ದಂತ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆಯ ಮೂಲಕ ಮಗುವಿಗೆ ಚಿಕಿತ್ಸೆ…












