Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು. ಸದರಿ ಆದೇಶವು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯೆಂದು ಘೋಷಿಸಲಾಗಿದೆ.
ಬೆಂಗಳೂರು : ನೋಂದಾಯಿತ ಕಾರ್ಮಿಕರ ಮೊದಲ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನ ಪಡೆಯಬಹುದು. ಫಲಾನುಭವಿಯು ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಸಹಾಯಧನ ಪಡೆಯಲು ಹೊಂದಿರ ಬೇಕಾದ ಅರ್ಹತೆಗಳು * ನೋಂದಣಿ ದಿನಾಂಕದಿಂದ ಮದುವೆ ದಿನಾಂಕದವರೆಗೆ ಮಂಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವ ಪೂರೈಸಿರಬೇಕು * ಕಾರ್ಮಿಕರ ಕುಟುಂಬ ಎರಡು ಬಾರಿ ಮಾತ್ರ ಸಹಾಯಧನ ಪಡೆಯಬಹುದು * ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು ಗಮನಿಸಿ ಮದುವೆ ದಿನಾಂಕದಿಂದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಿದಲ್ಲಿ ಮಾತ್ರ ಈ ಸೌಲಭ್ಯವನ್ನು ಪಡೆಯಲು ಸಾಧ್ಯ
ನವದೆಹಲಿ : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ (IRCTC) ವೆಬ್ಸೈಟ್ ಮತ್ತು ಅಪ್ಲಿಕೇಶನ್ ಇಂದು ಡಿಸೆಂಬರ್ 26 ರಂದು ಬೆಳಿಗ್ಗೆಯಿಂದ ಕಾರ್ಯನಿರ್ವಹಿಸುತ್ತಿಲ್ಲ. ಬಳಕೆದಾರರು ತಮ್ಮ ಖಾತೆಗಳಿಗೆ ಲಾಗ್ ಇನ್ ಮಾಡುವಲ್ಲಿ ಸಮಸ್ಯೆಗಳನ್ನು ಎದುರಿಸಿದ್ದರು. ಇದೀಗ ವೆಬ್ ಸೈಟ್ ಸೇವೆ ಮರುಸ್ಥಾಪಿಸಲಾಗಿದೆ. ಸರ್ವರ್ ಸೇವೆಯನ್ನು ಮರುಸ್ಥಾಪಿಸಲಾಗಿದೆ. ಪ್ರಯಾಣಿಕರು ಟಿಕೆಟ್ಗಳನ್ನು ಬುಕ್ ಮಾಡಬಹುದು ಮತ್ತು ಟಿಕೆಟ್ಗಳನ್ನು ರದ್ದುಗೊಳಿಸಬಹುದು. ಬೆಳಿಗ್ಗೆ, IRCTC ತನ್ನ ವೆಬ್ಸೈಟ್ನಲ್ಲಿ ನಿರ್ವಹಣೆ ಚಟುವಟಿಕೆಗಳಿಂದಾಗಿ ಇ-ಟಿಕೆಟಿಂಗ್ ಸೇವೆ ಸ್ಥಗಿತಗೊಂಡಿತ್ತು. ಬೆಳಿಗ್ಗೆ, IRCTC ತಮ್ಮ ಟಿಕೆಟ್ಗಳನ್ನು ರದ್ದುಗೊಳಿಸಲು ಬಯಸುವ ಬಳಕೆದಾರರಿಗೆ IRCTC ಕೆಲವು ಸಂಖ್ಯೆಗಳು ಮತ್ತು ಇಮೇಲ್ ಐಡಿಗಳನ್ನು ನೀಡಿದೆ ಎಂದು ಸಂದೇಶದಲ್ಲಿ ಬರೆದಿದೆ. “ಟಿಕೆಟ್ ರದ್ದತಿ/TDR ಅನ್ನು ಸಲ್ಲಿಸಲು, ದಯವಿಟ್ಟು ಗ್ರಾಹಕ ಸೇವಾ ಸಂಖ್ಯೆಗಳಿಗೆ 14646, 08044647999 ಮತ್ತು 08035734999 ಅಥವಾ ಇಮೇಲ್ etickets@irctc.co.in ಗೆ ಕರೆ ಮಾಡಿ” ಎಂದು IRCTC ಹೇಳಿದೆ. ಡೌನ್ಡೆಕ್ಟರ್ ಪ್ರಕಾರ, IRCTC ವೆಬ್ಸೈಟ್ನಲ್ಲಿ ಈ ಸಮಸ್ಯೆಯು ರಾತ್ರಿ 9.47 ಕ್ಕೆ ಪ್ರಾರಂಭವಾಯಿತು. ಇಲ್ಲಿಯವರೆಗೆ, IRCTC…
ಹುಬ್ಬಳ್ಳಿ : ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮೃತ ಅಯ್ಯಪ್ಪ ಮಾಲಾಧಾರಿಗಳನ್ನ 58 ವರ್ಷದ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದೆ.
ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಪೋಷಕರು ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಮನನವೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಯುವತಿ ಧನುಶ್ರೀಗೆ ಪೋಷಕರು ಹೆಚ್ಚು ಮೊಬೈಲ್ ನೋಡಬೇಡ ಎಂದು ಬುದ್ದಿಮಾತು ಹೇಳಿದಕ್ಕೆ ಮನನೊಂದು ಕಳೆದ 3 ದಿನಗಳ ಹಿಂದೆ ವಿಷ ಸೇವಿಸಿದ್ದರು. ಕೂಡಲೇ ಪೋಷಕರು ಧನುಶ್ರೀಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಮೂರು ದಿನಗಳಿಂದ ವಿದ್ಯಾರ್ಥಿನಿ ಧನುಶ್ರೀಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಧನುಶ್ರೀ ಮೃತಪಟ್ಟಿದ್ದಾಳೆ.
ನವದೆಹಲಿ : ವಿದ್ಯಾರ್ಥಿಗಳುಸಾರ್ವಜನಿಕ ವೈ-ಫೈ ಬಳಸಿ ಇ-ಮೇಲ್ ಖಾತೆ ತೆರೆಯಬಾರದು ಜೊತೆಗೆ ನೆಟ್ ಬ್ಯಾಂಕಿಂಗ್ ಬಳಸಬೇಡಿ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ಯುಎಸ್ಬಿ ಚಾರ್ಜಿಂಗ್ ಪಾಯಿಂಟ್ಗಳಿಂದ ಮೊಬೈಲ್ ಅನ್ನು ಚಾರ್ಜ್ ಮಾಡುವ ಮೂಲಕ ಖಾತೆಯನ್ನು ಹ್ಯಾಕ್ ಮಾಡಬಹುದು. ವಿದ್ಯಾರ್ಥಿಗಳಿಗೆ UGC ಈ ಎಚ್ಚರಿಕೆಯನ್ನು ನೀಡಿದೆ. ಸೈಬರ್ ಅಪರಾಧವನ್ನು ತಡೆಯುವ ಅಭಿಯಾನದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಹ ತೊಡಗಿಸಿಕೊಳ್ಳುತ್ತಿದೆ. ಅದೇ ಸಮಯದಲ್ಲಿ, ಸೈಬರ್ ಅಪರಾಧದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಯುಜಿಸಿ ಎಲ್ಲಾ ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕೇಳಿದೆ. ಮೇಲ್ ಮತ್ತು ಅದಕ್ಕೆ ಲಗತ್ತಿಸಲಾದ ಫೈಲ್ಗಳನ್ನು ಎಚ್ಚರಿಕೆಯಿಂದ ತೆರೆಯಬೇಕು ಎಂದು ಆಯೋಗ ಹೇಳಿದೆ. ವಿದ್ಯಾರ್ಥಿಗಳು ಯಾವುದೇ ಸಾಫ್ಟ್ವೇರ್ ಅನ್ನು ಅಧಿಕೃತ ವೆಬ್ಸೈಟ್ನಿಂದ ಮಾತ್ರ ಡೌನ್ಲೋಡ್ ಮಾಡಬೇಕು. ಕಾಲಕಾಲಕ್ಕೆ ಲ್ಯಾಪ್ಟಾಪ್ ಮತ್ತು ಮೊಬೈಲ್ ಫೋನ್ ಅನ್ನು ನವೀಕರಿಸುತ್ತಿರಿ. UGC NET ಪ್ರವೇಶ ಕಾರ್ಡ್: UGC NET ಪ್ರವೇಶ…
BIG NEWS : ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಬೆನ್ನಲ್ಲೇ ಅಲರ್ಟ್ : MLC `C.T ರವಿ’ಗೆ ಹೆಚ್ಚಿನ ಪೊಲೀಸ್ ಭದ್ರತೆ.!
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಬೆನ್ನಲ್ಲೇ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿಗೆ ಹೆಚ್ಚಿನ ಭದ್ರತೆ ನೀಡಲು ಪೊಲೀಸರು ಮುಂದಾಗಿದ್ದಾರೆ. ನಿನ್ನೆ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ ಬಳಿಕ ಎಚ್ಚೇತ್ತಿರುವ ಪೊಲೀಸ್ ಇದೀಗ ಬಿಜೆಪಿ ಎಂಎಲ್ ಸಿ. ಸಿ.ಟಿ. ರವಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಸಿ.ಟಿ.ರವಿ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.
ಬೆಂಗಳೂರು : ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದ್ದು, ದರ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ನಿರ್ಧರಿಸಲಾಗಿದ್ದು, ಇದೀಗ ನಂದಿನಿ ಹಾಲಿನ ದರ 44 ರೂ.42 ರೂ.ಗೆ ಇಳಿಕೆಯಾಗಲಿದೆ ಎಂದು ಕೆಂಎಫ್ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಕೆಲ ದಿನಗಳ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಕೆಎಂಎಫ್ ಹಾಲಿನ ದರ 2 ರೂ. ಕಡಿತ ಮಾಡಲು ನಿರ್ಧರಿಸಿದೆ.
ಬೆಂಗಳೂರು : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ನಂದಿನಿ ಹಾಲಿನ ಹೆಚ್ಚುವರಿ 50 ಎಂಎಲ್ ಹಾಗೂ 2 ರೂ. ದರ ಕಡಿತ ಮಾಡಲು ನಿರ್ಧರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ. ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ನಿರ್ಧರಿಸಲಾಗಿದ್ದು, ಇದೀಗ ನಂದಿನಿ ಹಾಲಿನ ದರ 44 ರೂ.42 ರೂ.ಗೆ ಇಳಿಕೆಯಾಗಲಿದೆ ಎಂದು ಕೆಂಎಫ್ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಕೆಲ ದಿನಗಳ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಕೆಎಂಎಫ್ ಹಾಲಿನ ದರ 2 ರೂ. ಕಡಿತ ಮಾಡಲು ನಿರ್ಧರಿಸಿದೆ.
ಬೆಳಗಾವಿ : ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯ ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿದ್ದಾರೆ. ಗಾಂಧಿ ಭಾರತ – ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಂಗವಾಗಿ ಇಂದು ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿದ್ದಾರೆ, ಬಳಿಕ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆದಿದ್ದ ಸ್ಥಳದ ಸಭಾಂಗಣದಲ್ಲಿನ ಫೋಟೋ ಗ್ಯಾಲರಿಯನ್ನು ಚರಕ ನೂಲುವ ಮೂಲಕ ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿದ್ದಾರೆ. https://twitter.com/siddaramaiah/status/1872167819552694305?ref_src=twsrc%5Egoogle%7Ctwcamp%5Eserp%7Ctwgr%5Etweet 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಡಿಸೆಂಬರ್ 27ರಂದು ಸುವರ್ಣಸೌಧದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಲಾಗುವುದು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ಸಿಗೆ ಕೈಜೋಡಿಸಬೇಕಾಗಿ ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.