Subscribe to Updates
Get the latest creative news from FooBar about art, design and business.
Author: kannadanewsnow57
ಗಾಝಾ : ವಿಶ್ವಸಂಸ್ಥೆಯ ಸರ್ವೋಚ್ಚ ನ್ಯಾಯಾಲಯದಲ್ಲಿ ಇಸ್ರೇಲ್ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಗಾಝಾದ ರಫಾ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಐಸಿಜೆ ಇಸ್ರೇಲ್ ಗೆ ಆದೇಶಿಸಿದೆ. ಐಸಿಜೆ ತನ್ನ ಆದೇಶದಲ್ಲಿ ಪ್ಯಾಲೆಸ್ತೀನ್ ಜನರಿಗೆ “ತಕ್ಷಣದ ಅಪಾಯ” ವನ್ನು ಉಲ್ಲೇಖಿಸಿದೆ. ರಫಾದಲ್ಲಿ ಇಸ್ರೇಲ್ ತನ್ನ ಮಿಲಿಟರಿ ಆಕ್ರಮಣ ಮತ್ತು ಇತರ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಇಸ್ರೇಲ್ನ ರಾಫಾ ಮೇಲಿನ ದಾಳಿಯ ಬಗ್ಗೆ ನ್ಯಾಯಾಧೀಶರು ಆಕ್ರಮಣಕಾರಿ ನಿಲುವನ್ನು ತೆಗೆದುಕೊಂಡಿದ್ದಾರೆ. ಮೇ 7ರಂದು ಇಸ್ರೇಲ್ ರಫಾ ಮೇಲೆ ದಾಳಿ ನಡೆಸಿತ್ತು. ಇದು ಮೇ 18 ರ ಹೊತ್ತಿಗೆ ಸುಮಾರು 800,000 ಫೆಲೆಸ್ತೀನೀಯರನ್ನು ಸ್ಥಳಾಂತರಿಸಿದೆ. ಈ ಅಪಾಯಗಳನ್ನು ಈಗ ಅರಿತುಕೊಳ್ಳಲು ಪ್ರಾರಂಭಿಸಲಾಗಿದೆ ಮತ್ತು ದಾಳಿಗಳು ಮುಂದುವರಿದರೆ ತೀವ್ರಗೊಳ್ಳುತ್ತವೆ ಎಂದು ನ್ಯಾಯಾಧೀಶರು ವಿಶ್ವಸಂಸ್ಥೆಯ ಅಧಿಕಾರಿಗಳನ್ನು ಉಲ್ಲೇಖಿಸಿ ಹೇಳಿದರು. ವಿಚಾರಣೆಯ ಸಮಯದಲ್ಲಿ, ಗಾಜಾ ಪಟ್ಟಿಯ ಜನರ ವಿನಾಶಕಾರಿ ಜೀವನ ಪರಿಸ್ಥಿತಿಗಳು ಹದಗೆಟ್ಟಿವೆ ಎಂದು ನ್ಯಾಯಾಲಯ ವಿಷಾದಿಸಿತು. ದೀರ್ಘಕಾಲದ ಮತ್ತು ವ್ಯಾಪಕವಾದ ಆಹಾರದ ಕೊರತೆಯಿಂದಾಗಿ, ಅಲ್ಲಿನ ಜನರ…
ಕೆಎನ್ ಎನ್ ಡಿಜಿಟಲ್ ಡೆಸ್ಕ್ : ಕೃತಕ ಬುದ್ಧಿಮತ್ತೆಯಿಂದಾಗಿ (AI) “ಬಹುಶಃ ನಮ್ಮಲ್ಲಿ ಯಾರಿಗೂ ಕೆಲಸ ಸಿಗುವುದಿಲ್ಲ” ಎಂದು ಟೆಸ್ಲಾ ಮತ್ತು ಎಕ್ಸ್ ಮಾಲೀಕ ಎಲೋನ್ ಮಸ್ಕ್ ಸಂದರ್ಶನವೊಂದರಲ್ಲಿ ಹೇಳಿದರು. ವಿವಾ ಟೆಕ್ ಈವೆಂಟ್ನಲ್ಲಿ ವೆಬ್ಕ್ಯಾಮ್ ಮೂಲಕ ಮಾತನಾಡಿದ ಎಲೋನ್ ಮಸ್ಕ್, ಕೃತಕ ಬುದ್ಧಿಮತ್ತೆ (ಎಐ) ಅಂತಿಮವಾಗಿ ಎಲ್ಲಾ ಉದ್ಯೋಗಗಳನ್ನು ಸ್ವಾಧೀನಪಡಿಸಿಕೊಳ್ಳುತ್ತದೆ ಮತ್ತು ಬಹುಶಃ ನಮ್ಮಲ್ಲಿ ಯಾರಿಗೂ ಕೆಲಸ ಸಿಗುವುದಿಲ್ಲ. ಭವಿಷ್ಯದಲ್ಲಿ, ಎಐ ಮತ್ತು ರೋಬೋಟ್ ಗಳು ನಿಮಗೆ ಬೇಕಾದ ಯಾವುದೇ ಸರಕು ಮತ್ತು ಸೇವೆಗಳನ್ನು ಒದಗಿಸುತ್ತವೆ ಎಂದು ಹೇಳಿದ್ದಾರೆ. ಕೃತಕ ಬುದ್ಧಿಮತ್ತೆ ಬಗ್ಗೆ ಮಸ್ಕ್ ಕಳವಳ ಮಸ್ಕ್ ಈ ಹಿಂದೆ ಎಐ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು. ಈಗ ಗುರುವಾರ ತಮ್ಮ ಮುಖ್ಯ ಭಾಷಣದಲ್ಲಿ, ಅವರು ತಂತ್ರಜ್ಞಾನವನ್ನು ತಮ್ಮ “ಅತಿದೊಡ್ಡ ಭಯ” ಎಂದು ಬಣ್ಣಿಸಿದರು. ಅವರು ಇಯಾನ್ ಬ್ಯಾಂಕ್ಸ್ ಅವರ “ಕಲ್ಚರ್ ಬುಕ್ ಸೀರೀಸ್” ಅನ್ನು ಉಲ್ಲೇಖಿಸಿದರು, ಇದು ಸುಧಾರಿತ ತಂತ್ರಜ್ಞಾನದಿಂದ ಚಾಲಿತವಾದ ಸಮಾಜದ ಕಾಲ್ಪನಿಕ ಚಿತ್ರಣವಾಗಿದೆ, ಇದು ಅತ್ಯಂತ…
ಬೆಂಗಳೂರು : ಹೊಸ ರೇಷನ್ ಕಾರ್ಡ್ ಗೆ ಶೀಘ್ರವೇ ಅರ್ಜಿ ಹಾಕಲು ಪ್ರಾರಂಭವಾಗಲಿದೆ. ರಾಜ್ಯ ಸರ್ಕಾರ ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿತ್ತು ಹಾಗೂ ತಿದ್ದುಪಡಿ ಕೂಡ ಅವಕಾಶ ಮಾಡಿಕೊಟ್ಟಿತ್ತು. ಆದರೆ ತುಂಬಾ ಸಲ ಅವಕಾಶ ಕೊಟ್ಟಿದ್ದರೂ ಸರ್ವರ್ ಸಮಸ್ಯೆಯಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ತುಂಬಾ ಜನರಿಗೆ ಸಾಧ್ಯವಾಗಿಲ್ಲ ಹೀಗಾಗಿ ಮತ್ತೆ ಈ ಅವಕಾಶ ನೀಡುತ್ತಿದೆ. ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಸರಕಾರವು ಜೂನ್ ತಿಂಗಳಲ್ಲಿ ಅವಕಾಶ ಕಲ್ಪಿಸಿಕೊಡಲಾಗುತ್ತೆ ಎಂಬ ಮಾಹಿತಿ ಕೂಡ ನೀಡಿದ್ದು, ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರು ಈ ಕೆಳಗಡೆ ನೀಡಿದ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ನಂತರ ನಿಮಗೆ ಜೂನ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ…
ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡುಗು ಜಿಲ್ಲೆಗಳ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ರಾಜ್ಯಾದ್ಯಂತ ಮೇ. 29 ರಿಂದ 2024-25 ನೇ ಸಾಲಿನ ಶಾಲೆಗಳು ಆರಂಭವಾಗಲಿದ್ದು, ಒಂದನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರು ಈ ಪ್ರಮುಖ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಮಕ್ಕಳನ್ನು ಈ ಬಾರಿ ಹೊಸದಾಗಿ ಒಂದನೇ ತರಗತಿ ಪ್ರವೇಶಕ್ಕೆ ಹೊರಟಿದ್ದರೆ ನೀವು ಈ ವಿಷಯಗಳ ಬಗ್ಗೆ ತಿಳಿದುಕೊಂಡಿರಲೇ ಬೇಕು. ಒಂದನೇ ತರಗತಿ ಅಡ್ಮಿಷನ್ಗೆ ಮೊದಲನೇಯದಾಗಿ ಮಗುವಿನ ಆಧಾರ್ ಕಾರ್ಡ್ ಹೊಂದಿರಲೇ ಬೇಕಾಗುತ್ತದೆ. ರೇಷನ್ ಕಾರ್ಡ್ ಮತ್ತು ಮಗುವಿನ ಭಾವಚಿತ್ರವನ್ನು ನೀಡಬೇಕಾಗುತ್ತದೆ. 2 ಭಾವಚಿತ್ರವನ್ನು ನೀಡುವುದು ಕಡ್ಡಾಯ. ಇವಿಷ್ಟು ಎಲ್ಲಾ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿದೆ. ಒಂದನೇ ತರಗತಿ ಪ್ರವೇಶಕ್ಕೆ ಈ ದಾಖಲೆಗಳು ಕಡ್ಡಾಯ ಮಗುವಿನ ಆಧಾರ್ ಕಾರ್ಡ್ ಮಗುವಿನ ಜನನ ಪ್ರಮಾಣ ಪತ್ರ ಮಗುವಿನ ಜಾತಿ ಪ್ರಮಾಣ ಪತ್ರ ರೇಷನ್ ಕಾರ್ಡ್ ಪೋಷಕರ ಆಧಾರ್ ಕಾರ್ಡ್ ತಂದೆ ಅಥವಾ ತಾಯಿಯ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಹೆಣ್ಣುಮಗುವಾಗಿದ್ದ ಭಾಗ್ಯಲಕ್ಷ್ಮಿ ಬಾಂಡ್
ಬೆಂಗಳೂರು : ಮಳೆ ಬರುತ್ತಿರುವಾಗ ಒಂದು ಕೈಯಲ್ಲಿ ಛತ್ರಿ , ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಾಲನೆ ಮಾಡಿದ ವಿಡಿಯೋ ಸಂಬಂಧ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ಚಾಲನೆ ಮಾಡುವ ವಿಡಿಯೋ (ಮನರಂಜನೆಗಾಗಿ ಮಾಡಿದ ವಿಡಿಯೋ ಕುರಿತು) BJP Karnataka ದವರು ಟ್ವೀಟ್ ಮಾಡಿ ಮಾಡಿ ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿರುವುದಕ್ಕೆ ಹಾಗೂ ಅವರ ಈ ಸಂತೋಷಕ್ಕೆ ಕಡಿವಾಣ ಹಾಕಬೇಕಾಗಿದೆಯಲ್ಲ ಎಂಬ ನೋವಿನೊಂದಿಗೆ ಈ ವಿವರಣೆ ನೀಡಲಾಗುತ್ತಿದೆ. ಕೆಲವರಿಗೆ ಕಣ್ಣಿರುತ್ತದೆ ಆದರೆ ನೋಡಲು ಸಾಧ್ಯವಾಗದ ಸ್ಥಿತಿ, ತಲೆ ಇರುತ್ತದೆ ಬುದ್ದಿಯನ್ನು ಸರಿಯಾಗಿ ಉಪಯೋಗಿಸಲಾಗದ ಪರಿಸ್ಥಿತಿ, ಇವೆಲ್ಲವೂ ಅನ್ವಯಿಸುವುದು ಬಸನಗೌಡ ಪಾಟೀಲ್ ಯತ್ನಾಳ್ , ಆರ್. ಆಶೋಕ್, ಡಾ. ಅಶ್ವತ್ ನಾರಾಯಣ ಹಾಗೂ ಬಿ.ಜೆ.ಪಿ ಕಣ್ಣು, ತಲೆ ಯಾವುದೂ ಸರಿಯಾಗಿ ಕನೆಕ್ಟ್ ಆಗದೆ ಇರೋ ಪಂಡಿತ ಪುತ್ರರು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ…
ನವದೆಹಲಿ: ಪಿಎಫ್ ಖಾತೆದಾರರು ತಮ್ಮ ಯುಎಎನ್ ಸಂಖ್ಯೆಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, ಪಿಎಫ್ ಮೊತ್ತವನ್ನು ಹಿಂಪಡೆಯುವಾಗ ಸಮಸ್ಯೆಗಳು ಉಂಟಾಗುತ್ತವೆ. ಸಾಮಾಜಿಕ ಭದ್ರತಾ ಸಂಹಿತೆ, 2020 ರ ಸೆಕ್ಷನ್ 142 ರ ಪ್ರಕಾರ, ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರು ಮತ್ತು ಕಾರ್ಮಿಕರು ತಮ್ಮ ಆಧಾರ್ ಖಾತೆಯನ್ನು ಇಪಿಎಫ್ ಖಾತೆಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಲಿಂಕ್ ಪ್ರಕ್ರಿಯೆಯನ್ನು ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಮಾಡಬಹುದು. ಆನ್ ಲೈನ್ ನಲ್ಲಿ ಹೇಗೆ ಲಿಂಕ್ ಮಾಡುವುದು? EPFO ನ ಅಧಿಕೃತ ವೆಬ್ಸೈಟ್ಗೆ ಲಿಂಕ್ ಮಾಡಿ UAN, ಪಾಸ್ ವರ್ಡ್ ಬಳಸಿ ನಿಮ್ಮ ಖಾತೆಗೆ ಲಾಗ್ ಇನ್ ಮಾಡಿ. “Manage” ವಿಭಾಗಕ್ಕೆ ಹೋಗಿ ಮತ್ತು ಡ್ರಾಪ್-ಡೌನ್ ಮೆನುನಿಂದ “KYC” ಆಯ್ಕೆ ಮಾಡಿ. ಡಾಕ್ಯುಮೆಂಟ್ ಪ್ರಕಾರವಾಗಿ “ಆಧಾರ್” ಆಯ್ಕೆ ಮಾಡಿ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ. ವಿವರಗಳನ್ನು ಸಲ್ಲಿಸಲು “ಉಳಿಸು” ಬಟನ್ ಕ್ಲಿಕ್ ಮಾಡಿ. ಆಧಾರ್ ವಿವರಗಳನ್ನು ಇಪಿಎಫ್ಒ ಪರಿಶೀಲಿಸುತ್ತದೆ. ಇದರಿಂದ ಅದು ಸ್ವಯಂಚಾಲಿತವಾಗಿ ಯುಎಎನ್ ಗೆ ಲಿಂಕ್…
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ದೂರು ನೀಡಲು ಎಸ್ ಐಟಿಯಿಂದ ಸಹಾಯವಾಣಿ ತೆರೆಯಲಾಗಿದ್ದು, ಈವರೆಗೆ ಇದಕ್ಕೆ 30 ಜನರು ಕರೆ ಮಾಡಿದ್ದಾರೆ ಎಂದು ಎಸ್ ಐಟಿ ಅಧಿಕಾರಿಗಳು ತಿಳಿಸಿದಾರೆ. ಎಸ್ ಐಟಿ ಸಹಾಯವಾಣಿ ಸಂಖ್ಯೆಗೆ ಯಾರು ಯಾರು ಕರೆ ಮಾಡಿದ್ದಾರೆ? ಅವರು ಏನು ಹೇಳಿದ್ದಾರೆ? ಈ ಕರೆಗಳು ಸಂತ್ರಸ್ತೆಯರಿಂದಲೇ ಬಂದಿವೆಯೇ ಎಂಬುದವರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಈ ನಡುವೆ ಸಹಾಯವಾಣಿ ಮೂಲಕ ದಾಖಲಾಗುವ ಹೇಳಿಕೆಗಳನ್ನೂ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದು, ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇನ್ನು ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದ ನಂತರ ಜರ್ಮನಿಗೆ ಪಲಾಯನ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವಂತೆ ವಿದೇಶಾಂಗ ಸಚಿವಾಲಯಕ್ಕೆ ಮನವಿ ಬಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಖಚಿತಪಡಿಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿರುವ 33…
ಬೆಂಗಳೂರು : ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25ನೇ ಸಾಲಿನ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟಿ ಜಾತಿ ಅಭ್ಯರ್ಥಿಗಳಿಂದ ರಾಷ್ಟೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (NOS)ಗೆ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವಿ. ಪಿಎಚ್‌ಡಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿhttps://overseas.tribal.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 31 ರಂದು ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 8352276124 ಗೆ ಸಂಪರ್ಕಿಸಬಹುದಾಗಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು : ಕೃಷ್ಣಾ ನದಿ ದಡದಲ್ಲಿ ಕುರಿ ಮೇಯಿಸುತ್ತಿದ್ದ ಬಾಲಕನನ್ನು ಮೊಸಳೆಯೊಂದು ಎಳೆದುಕೊಂಡು ಹೋಗಿರುವ ಘಟನೆ ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಬಾಲಕನ್ನು ಗಂಜಳ್ಳಿ ಗ್ರಾಮದ ವಿಶ್ವ (12) ಎಂದು ಗುರುತಿಸಲಾಗಿದ್ದು, ಕುರಿಗಳಿಗೆ ನೀರು ಕುಡಿಸಲು ಕೃಷ್ಣಾನದಿಗೆ ಹೋದಾಗ ಮೊಸಳೆ ದಾಳಿ ಮಾಡಿ ವಿಶ್ವನನ್ನು ಎಳೆದೊಯ್ದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಬೋಟ್ ಹಾಕಿ ಬಾಲಕನಿಗಾಗಿ ಶೋಧ ಕಾರ್ಯ ನಡೆಸಿದೆ.